AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Benefits of Green Peas: ಅವರೆಕಾಳು ಸೇವನೆಯಿಂದ ಆರೋಗ್ಯ ಪ್ರಯೋಜನಗಳು ಎಷ್ಟಿವೆ ಗೊತ್ತಾ?

ಅವರೆಕಾಳು ಪಲ್ಯದ ಜತೆಗೆ ಸಾಂಬಾರು ಪದಾರ್ಥಗಳಲ್ಲಿ ಬಳಸಬಹುದು. ವಿಧದ ಪದಾರ್ಥಗಳನ್ನು ಮಾಡಿ ರುಚಿಕರವಾದ ಆಹಾರ ಸೇವಿಸುವುದರ ಜತೆಗೆ ದೇಹಕ್ಕೆ ಪೌಷ್ಟಿಕಾಂಶಗಳನ್ನು ಪಡೆದುಕೊಳ್ಳಬಹುದಾಗಿದೆ.

Benefits of Green Peas: ಅವರೆಕಾಳು ಸೇವನೆಯಿಂದ ಆರೋಗ್ಯ ಪ್ರಯೋಜನಗಳು ಎಷ್ಟಿವೆ ಗೊತ್ತಾ?
ಸಾಂದರ್ಭಿಕ ಚಿತ್ರ
TV9 Web
| Updated By: Digi Tech Desk|

Updated on:Sep 15, 2021 | 4:25 PM

Share

ನೈಸರ್ಗಿಕವಾಗಿ ಸಿಗುವ ಸಿಹಿ ಅಂಶ ಹೊಂದಿರುವ ಅವರೆಕಾಳು ಅಗತ್ಯವಾದ ವಿಟಮಿನ್ ಮತ್ತು ವಿಟಮಿನ್ ಕೆ, ಸಿ ಮತ್ತು ಮ್ಯಾಂಗನೀಸ್, ಫೈಬರ್​ಗಳಿಂದ ಕೂಡಿದೆ. ಅತಿಯಾಗಿ ನಾರಿನಾಂಶ ಹೊಂದಿರುವ ಅವರೆಕಾಳು ಪೌಷ್ಟಿಕಾಂಶಗಳನ್ನು ದೇಹಕ್ಕೆ ನೀಡುತ್ತದೆ. ಅವರೆಕಾಳು ಪಲ್ಯದ ಜತೆಗೆ ಸಾಂಬಾರು ಪದಾರ್ಥಗಳಲ್ಲಿ ಬಳಸಬಹುದು. ವಿಧದ ಪದಾರ್ಥಗಳನ್ನು ಮಾಡಿ ರುಚಿಕರವಾದ ಆಹಾರ ಸೇವಿಸುವುದರ ಜತೆಗೆ ದೇಹಕ್ಕೆ ಪೌಷ್ಟಿಕಾಂಶಗಳನ್ನು ಪಡೆದುಕೊಳ್ಳಬಹುದಾಗಿದೆ.

ಜೀರ್ಣಕ್ರಿಯೆ ಅವರೆಕಾಳು ಸೇವನೆಯು ನಿಮ್ಮ ಜೀರ್ಣಕ್ರಿಯೆಗೆ ಉತ್ತಮ ಪ್ರಯೋಜನವನ್ನು ನೀಡುತ್ತದೆ. ಇದರಲ್ಲಿರುವ ಫೈಬರ್ ಅಂಶ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಇದರಿಂದ ಕರುಳು ಆರೋಗ್ಯವೂ ಸುಧಾರಿಸುತ್ತದೆ. ಸಲಾಡ್, ಕರಿಗಳ ತಯಾರಿಕೆಯಲ್ಲಿ ಇವುಗಳಲ್ಲಿ ಬಳಸಬಹುದು. ಇದರಿಂದ ಆರೋಗ್ಯ ಪ್ರಯೋಜನ ಸುಧಾರಿಸುತ್ತದೆ.

ಕಬ್ಬಿಣದ ಉತ್ತಮ ಮೂಲ ಅವರೆಕಾಳು ಸೇವನೆ ಕಬ್ಬಿಣದ ಉತ್ತಮ ಮೂಲವಾಗಿದೆ. ಕಬ್ಬಿಣದ ಕೊರತೆಯು ರಕ್ತಹೀನತೆಗೆ ಪ್ರಮುಖ ಕಾರಣವಾಗಬಹುದು. ನೀವು ಸಾಕಷ್ಟು ಕಬ್ಬಿಣಾಂಶವನ್ನು ಹೊಂದಿಲ್ಲದಿದ್ದರೆ ನಿಮ್ಮ ದೇಹವು ಸಾಕಷ್ಟು ಆರೋಗ್ಯಕರ ಆಮ್ಲಜನಕ ಸಾಗಿಸುವ ಕೆಂಪು ರಕ್ತಕಣಗಳನ್ನು ಉತ್ಪಾದಿಸುವುದಿಲ್ಲ. ಇದರಿಂದಾಗಿ ಹಿಮೋಗ್ಲೋಬಿನ್ ಕೊರತೆ ಉಂಟಾಗುತ್ತದೆ. ಜತೆಗೆ ನಿಮ್ಮ ದೇಹಕ್ಕೆ ಶಕ್ತಿ ತುಂಬುತ್ತದೆ.

ಕಣ್ಣಿನ ಆರೋಗ್ಯಕ್ಕೆ ಒಳ್ಳೆಯದು ಅವರೆಕಾಳು ಸೇವನೆ ನಿಮ್ಮ ಕಣ್ಣಿನ ಆರೋಗ್ಯವನ್ನು ಸುಧಾರಿಸುತ್ತದೆ. ಇದರಲ್ಲಿರುವ ಲುಟೀನ್ ವೃದ್ಧಾಪ್ಯದಲ್ಲಿ ಕಣ್ಣಿನ ಪೊರೆ ಮತ್ತು ದೃಷ್ಟಿ ಕಳೆದುಕೊಳ್ಳುವ ಅಪಾಯವನ್ನು ಕಡಿಮೆ ಮಾಡುತ್ತದೆ. ಅವರೆಕಾಳು ಸೇವನೆಯಿಂದ ದೃಷ್ಟಿಯನ್ನು ಹೆಚ್ಚಿಸಿಕೊಳ್ಳಬಹುದಾಗಿದೆ.

ಹೃದಯಕ್ಕೆ ಒಳ್ಳೆಯದು ಅವರೆಕಾಳಿನಲ್ಲಿರುವ ಕರಗದ ಫೈಬರ್ ಅಂಶವು ಹೃದ್ರೋಗ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಜತೆಗೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯಕವಾಗಿದೆ.

ತೂಕನಷ್ಟ ಬೀನ್ಸ್, ಜೋಳ ಈ ರೀತಿಯ ಹೆಚ್ಚು ಭಾರವಾದ ದ್ವಿದಳ ಧಾನ್ಯಗಳಿಗೆ ಹೋಲಿಸಿದರೆ ಬಟಾಣಿ ಕಡಿಮೆ ಕೊಬ್ಬನ್ನು ಹೊಂದಿದೆ. ಜತೆಗೆ ಕ್ಯಾಲೊರಿಗಳ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಹೆಚ್ಚಿನ ಫೈಬರ್ ಅಂಶವು ತೂಕ ಇಳಿಸುವಲ್ಲಿ ಸಹಾಯ ಮಾಡುತ್ತದೆ.

ಚರ್ಮಕ್ಕೆ ಒಳ್ಳೆಯದು ಅವರೆಕಾಳಿನಲ್ಲಿರುವ ವಿಟಮಿನ್ ಸಿ ಅಂಶದ ಅತ್ಯುತ್ತಮ ಮೂಲವಾಗಿದೆ. ಇದು ಕಾಲಜನ್ ಉತ್ಪಾದನೆಯಲ್ಲಿ ಮಹತ್ವದ ಪಾತ್ರ ಹೊಂದಿದೆ. ಕಾಲಜನ್ ಚರ್ಮದ ಆರೋಗ್ಯವನ್ನು ಸುಧಾರಿಸುವುದರ ಜತೆಗೆ ಚರ್ಮ ಹೊಳೆಯುವಂತೆ ಮಾಡಲು ಸಹಾಯಕವಾಗಿದೆ.

ಇದನ್ನೂ ಓದಿ:

Health Tips: ಗರ್ಭಿಣಿಯರು ಆರೋಗ್ಯ ಸುಧಾರಣೆಗೆ ಸೇವಿಸಬೇಕಾದ ಪೋಷಕಾಂಶಗಳು

Health Tips: ರಾತ್ರಿ ಎಡಭಾಗಕ್ಕೆ ತಿರುಗಿ ಮಲಗುವ ಅಭ್ಯಾಸ ಇದೆಯೇ? ಆರೋಗ್ಯಕರ ಬದಲಾವಣೆಯ ಬಗ್ಗೆ ಗಮನಿಸಿ

(Health benefits of peas check in Kannada)

Published On - 1:07 pm, Wed, 15 September 21

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ