Pomegranate Juice: ಪ್ರತಿನಿತ್ಯ ಒಂದು ಗ್ಲಾಸ್​ ದಾಳಿಂಬೆ ರಸವನ್ನು ಕುಡಿಯಿರಿ; ಆರೋಗ್ಯಕ್ಕೆ ಉತ್ತಮ

ಹಣ್ಣಿನ ರಸದಲ್ಲಿ ಜೀವಸತ್ವಗಳು, ಖನಿಜಗಳು ಸಮೃದ್ಧವಾಗಿರುವುದರಿಂದ ನಮ್ಮ ಆರೋಗ್ಯಕ್ಕೂ ಸಹ ಅನೇಕ ಪ್ರಯೋಜನಗಳನ್ನು ನೀಡುತ್ತದೆ. ದಾಳಿಂಬೆ ರಸ ಸೇವನೆಯಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ತಿಳಿಯಿರಿ.

Pomegranate Juice: ಪ್ರತಿನಿತ್ಯ ಒಂದು ಗ್ಲಾಸ್​ ದಾಳಿಂಬೆ ರಸವನ್ನು ಕುಡಿಯಿರಿ; ಆರೋಗ್ಯಕ್ಕೆ ಉತ್ತಮ
ದಾಳಿಂಬೆ ಹಣ್ಣಿನ ಜ್ಯೂಸ್​
Follow us
TV9 Web
| Updated By: preethi shettigar

Updated on: Sep 11, 2021 | 9:25 AM

ಸಾಮಾನ್ಯವಾಗಿ ಹಣ್ಣಿನ ಜ್ಯೂಸ್ ಎಲ್ಲರಿಗೂ ಇಷ್ಟವಾಗುತ್ತದೆ. ಬಾಯಾರಿಕೆಯಾದಾಗ ಹಣ್ಣಿನ ಜ್ಯೂಸ್ ಮಾಡಿ ಸವಿಯುತ್ತೇವೆ. ಹಣ್ಣಿನ ಜ್ಯೂಸ್ ಅಥವಾ ತರಕಾರಿ ಜ್ಯೂಸ್​ಗಳಲ್ಲಿ ಯಾವುದೇ ಆಗಿರಲಿ, ಅವು ನಮ್ಮನ್ನು ತಕ್ಷಣವೇ ರೀಫ್ರೆಶ್ ಮಾಡುತ್ತದೆ. ಹಣ್ಣಿನ ರಸದಲ್ಲಿ ಜೀವಸತ್ವಗಳು, ಖನಿಜಗಳು ಸಮೃದ್ಧವಾಗಿರುವುದರಿಂದ ನಮ್ಮ ಆರೋಗ್ಯಕ್ಕೂ ಸಹ ಅನೇಕ ಪ್ರಯೋಜನಗಳನ್ನು ನೀಡುತ್ತದೆ. ದಾಳಿಂಬೆ ರಸದಲ್ಲಿ ಉತ್ಕರ್ಷಣ ನಿರೋಧಕಗಳು, ವಿಟಮಿನ್ ಸಿ, ಉರಿಯೂತ ನಿವಾರಕ ಮತ್ತು ವೈರಸ್ ವಿರೋಧಿ ಗುಣಗಳಿರುತ್ತವೆ. ಪ್ರತಿನಿತ್ಯ ಒಂದು ಲೋಟ ದಾಳಿಂಬೆ ಜ್ಯೂಸ್ ಕುಡಿಯುವುದರಿಂದ ನಿಮ್ಮ ಆರೋಗ್ಯಕ್ಕೆ ಹಲವು ರೀತಿಯ ಪ್ರಯೋಜನಗಳಿವೆ. ಹಾಗಿರುವಾಗ ದಾಳಿಂಬೆ ರಸ ಸೇವನೆಯ ಆರೋಗ್ಯ ಪ್ರಯೋಜನಗಳ ಕುರಿತಾಗಿ ತಿಳಿಯೋಣ.

ದಾಳಿಂಬೆ ಜ್ಯೂಸ್ ಆರೋಗ್ಯ ಪ್ರಯೋಜನಗಳು

ದಾಳಿಂಬೆ ಹೆಚ್ಚಿನ ಪ್ರಮಾಣದ ಉತ್ಕರ್ಷಣ ನಿರೋಧಕಗಳನ್ನು ಹೊಂದಿದೆ. ಉತ್ಕರ್ಷಣ ನಿರೋಧಕಗಳು ದೇಹದಲ್ಲಿನ ಫ್ರೀ ರಾಡಿಕಲ್​ಗಳನ್ನು ತೆಗೆದುಹಾಕಲು ಸಹಾಯಕವಾಗಿದೆ. ಪ್ರತಿನಿತ್ಯ ದಾಳಿಂಬೆ ರಸವನ್ನು ಕುಡಿಯುವುದರಿಂದ ಕ್ಯಾನ್ಸರ್ ಅಪಾಯವನ್ನು ತಡೆಗಟ್ಟಬಹುದು.

ದಾಳಿಂಬೆ ರಸದಲ್ಲಿರುವ ಆ್ಯಂಟಿಆ್ಯಕ್ಸಿಡೆಂಟ್​ಗಳು ರಕ್ತವನ್ನು ತೆಳುವಾಗಿಸಲು ಸಹಾಯಕವಾಗಿದೆ. ಹೃದಯದಲ್ಲಿ ಅಥವಾ ದೇಹದ ಯಾವುದೇ ಭಾಗದಲ್ಲಿ ರಕ್ತ ಹೆಪ್ಪುಗಟ್ಟುವ ಸಮಸ್ಯೆ ಇರುವವರಿಗೆ ಇದು ತುಂಬಾ ಪ್ರಯೋಜನಕಾರಿ. ದಾಳಿಂಬೆ ರಸವನ್ನು ಸೇವಿಸುವುದರಿಂದ ರಕ್ತ ಹೆಪ್ಪುಗಟ್ಟುವುದನ್ನು ತಡೆಯಬಹುದಾಗಿದೆ. ದಾಳಿಂಬೆ ರಸವು ಫ್ಲೇವನಾಲ್​ಗಳನ್ನು ಹೊಂದಿದ್ದು, ಅದು ಮೂಳೆಗಳನ್ನು ಹಾನಿ ಮಾಡುವ ಕೀಲುಗಳಲ್ಲಿ ಉರಿಯೂತವನ್ನು ತಡೆಯಲು ಸಹಾಯ ಮಾಡುತ್ತದೆ. ದಾಳಿಂಬೆ ರಸವು ಹೃದಯ ಆರೋಗ್ಯಕ್ಕೆ ತುಂಬಾ ಪ್ರಯೋಜನವನ್ನು ನೀಡುತ್ತದೆ.

ಪ್ರತಿದಿನ ದಾಳಿಂಬೆ ರಸವನ್ನು ಕುಡಿಯುವುದರಿಂದ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಯಾವುದೇ ಹೃದಯ ಸಮಬಂಧಿ ಸಮಸ್ಯೆಗಳನ್ನು ತಡೆಯಲು ಸಹಾಯಕವಾಗಿದೆ. ಜತೆಗೆ ಇದರಲ್ಲಿರುವ ಆ್ಯಂಟಿವೈರಲ್ ಗುಣಗಳಿಂದಾಗಿ ವೈರಸ್ ವಿರುದ್ಧ ಹೋರಾಡಲು ಸಹಾಯಕವಾಗಿದೆ. ಇದರಲ್ಲಿರುವ ವಿಟಮಿನ್ ಸಿ, ವಿಟಮಿನ್ ಇ ಅಂಶಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಪೋಷಕಾಂಶಗಳನ್ನು ನೀಡುತ್ತದೆ.

ದಾಳಿಂಬೆ ರಸ ಸೇವನೆಯು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಇರದಲ್ಲಿನ ಫೈಬರ್ ನಿಮ್ಮ ಜೀರ್ಣಾಂಗ ವ್ಯವಸ್ಥೆಗೆ ಬಹಳ ಸಹಾಯಕ. ಫೈಬರ್ ನಿಮ್ಮ ಜೀರ್ಣ ಕ್ರಿಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಮಲಬದ್ಧತೆ, ಅಜೀರ್ಣದಂತಹ ಯಾವುದೇ ಸಮಸ್ಯೆಗೆ ದಾಳಿಂಬೆ ರಸ ಸೇವನೆ ಉತ್ತಮ ಪರಿಹಾರ.

ಇದನ್ನೂ ಓದಿ:

Health Tips: ನೀವು ಕೆಚಪ್ ಪ್ರಿಯರಾ?; ಅತಿಯಾಗಿ ಕೆಚಪ್ ಸೇವಿಸಿದರೆ ಆಗುವ 7 ಶಾಕಿಂಗ್ ಅಡ್ಡ ಪರಿಣಾಮಗಳಿವು!

Health Tips: ಒಣ ಬಾದಾಮಿಗಿಂತ ನೀರಲ್ಲಿ ನೆನೆಸಿದ ಬಾದಾಮಿ ಸೇವನೆಯು ಆರೋಗ್ಯಕ್ಕೆ ಉತ್ತಮ

(Health benefits of Pomegranate juice check in Kannada)

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ