Health Tips: ಆಯುರ್ವೇದ ಔಷಧಿಗಳಲ್ಲಿ ಬಳಕೆಯಾಗುವ ಈ ರೋಸ್ಮರಿ, ನಮ್ಮ ಆರೋಗ್ಯ ಹೇಗೆ ಕಾಪಾಡುತ್ತದೆ?

| Updated By: ಅಕ್ಷಯ್​ ಪಲ್ಲಮಜಲು​​

Updated on: Jul 27, 2024 | 5:39 PM

ರೋಸ್ಮರಿಯನ್ನು ಹಲವು ರೀತಿಯ ಆಯುರ್ವೇದ ಔಷಧಿಗಳಲ್ಲಿ ಬಳಕೆ ಮಾಡಲಾಗುತ್ತದೆ. ಅಲ್ಲದೆ ಇದರ ಕಾಂಡ, ಎಲೆ, ಪುಡಿ ಮತ್ತು ಬೀಜಗಳು ಮಾರುಕಟ್ಟೆಯಲ್ಲಿ ಲಭ್ಯವಿದ್ದು, ಮನೆಮದ್ದುಗಳಲ್ಲಿಯೂ ಬಳಸಲಾಗುತ್ತದೆ. ಅಲ್ಲದೆ ರೋಸ್ಮರಿ ಎಲೆಗಳ ಸೇವನೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ವಿಶೇಷವಾಗಿ ಇತ್ತೀಚಿನ ದಿನಗಳಲ್ಲಿ, ಮಧುಮೇಹ, ಮಲಬದ್ಧತೆ ಮತ್ತು ಕೂದಲು ಉದುರುವ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಸಮಸ್ಯೆಗಳಿಂದ ಪರಿಹಾರ ಪಡೆಯಲು ಈ ರೋಸ್ಮರಿ ಬಹಳ ಉಪಯುಕ್ತವಾಗಿದೆ. ರೋಸ್ಮರಿ ನೋಡಲು ಚಿಕ್ಕದಾಗಿದ್ದರೂ ಕೂಡ ಇದರಲ್ಲಿರುವ ಔಷಧೀಯ ಗುಣಗಳು ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಒಳಗೊಂಡಿದೆ.

Health Tips: ಆಯುರ್ವೇದ ಔಷಧಿಗಳಲ್ಲಿ ಬಳಕೆಯಾಗುವ ಈ ರೋಸ್ಮರಿ, ನಮ್ಮ ಆರೋಗ್ಯ ಹೇಗೆ ಕಾಪಾಡುತ್ತದೆ?
ರೋಸ್ಮರಿ
Follow us on

ರೋಸ್ಮರಿಯ ಬಗ್ಗೆ ನೀವು ಕೇಳಿರಬಹುದು. ಇದನ್ನು ಹಲವು ರೀತಿಯ ಆಯುರ್ವೇದ ಔಷಧಿಗಳಲ್ಲಿ ಬಳಕೆ ಮಾಡಲಾಗುತ್ತದೆ. ಅಲ್ಲದೆ ಇದರ ಕಾಂಡ, ಎಲೆ, ಪುಡಿ ಮತ್ತು ಬೀಜಗಳು ಮಾರುಕಟ್ಟೆಯಲ್ಲಿ ಲಭ್ಯವಿದ್ದು, ಮನೆಮದ್ದುಗಳಲ್ಲಿಯೂ ಬಳಸುತ್ತಾರೆ. ಅಲ್ಲದೆ ರೋಸ್ಮರಿ ಎಲೆಗಳ ಸೇವನೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ವಿಶೇಷವಾಗಿ ಇತ್ತೀಚಿನ ದಿನಗಳಲ್ಲಿ, ಮಧುಮೇಹ, ಮಲಬದ್ಧತೆ ಮತ್ತು ಕೂದಲು ಉದುರುವ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಸಮಸ್ಯೆಗಳಿಂದ ಪರಿಹಾರ ಪಡೆಯಲು ಈ ರೋಸ್ಮರಿ ಬಹಳ ಉಪಯುಕ್ತವಾಗಿದೆ. ರೋಸ್ಮರಿ ನೋಡಲು ಚಿಕ್ಕದಾಗಿದ್ದರೂ ಕೂಡ ಇದರಲ್ಲಿರುವ ಔಷಧೀಯ ಗುಣಗಳು ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಒಳಗೊಂಡಿದೆ.

ಆರೋಗ್ಯ ಪ್ರಯೋಜನಗಳೇನು?

  • ರೋಸ್ಮರಿ ಎಲೆಗಳಿಂದ ತಯಾರಿಸಿದ ಎಣ್ಣೆಯನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಜ್ಞಾಪಕ ಶಕ್ತಿ ಸುಧಾರಿಸುತ್ತದೆ. ಇದು ಸಂಶೋಧನೆಯಲ್ಲಿಯೂ ಕಂಡು ಬಂದಿದೆ.
  • ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ರಕ್ತನಾಳಗಳಲ್ಲಿರುವ ಸಮಸ್ಯೆಗಳನ್ನು ಪರಿಹರಿಸುವ ಶಕ್ತಿಯನ್ನು ಹೊಂದಿದೆ. ಅಲ್ಲದೆ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ.
  • ಜೀರ್ಣಾಂಗ ವ್ಯವಸ್ಥೆಯಲ್ಲಿ ಕಂಡು ಬರುವ ಸಮಸ್ಯೆಗಳನ್ನು ಸುಧಾರಿಸಲು ರೋಸ್ಮರಿ ಎಲೆಗಳು ತುಂಬಾ ಸಹಾಯಕವಾಗಿವೆ. ಅಜೀರ್ಣ, ಗ್ಯಾಸ್ ಮತ್ತು ಉಬ್ಬರದಂತಹ ಸಮಸ್ಯೆಗಳನ್ನು ಪರಿಹರಿಸಲು ಸಹ ಇದು ಉಪಯುಕ್ತವಾಗಿದೆ.
  • ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ದೇಹವನ್ನು ಆರೋಗ್ಯಕರವಾಗಿರಿಸುವುದಲ್ಲದೆ ಅನಾರೋಗ್ಯಕ್ಕೆ ಒಳಗಾಗುವುದನ್ನು ತಡೆಯುತ್ತದೆ. ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಗಟ್ಟುವಲ್ಲಿ ಇದು ತುಂಬಾ ಪ್ರಯೋಜನಕಾರಿಯಾಗಿದೆ.
  • ರೋಸ್ಮರಿ ಎಣ್ಣೆಯ ಬಳಕೆಯು ಕೀಲು ನೋವು, ಸ್ನಾಯು ಸಮಸ್ಯೆಗಳು ಮತ್ತು ತಲೆನೋವಿನಿಂದ ಪರಿಹಾರವನ್ನು ನೀಡುತ್ತದೆ. ಅಲ್ಲದೆ ರೋಸ್ಮರಿ ಸಸ್ಯದ ಒಣಗಿದ ಭಾಗಗಳನ್ನು ದೇಹದಲ್ಲಿನ ವಿವಿಧ ರೀತಿಯ ನೋವನ್ನು ನಿವಾರಿಸಲು ಅನೇಕ ರೀತಿಯಲ್ಲಿ ಬಳಸಲಾಗುತ್ತದೆ.
  • ರೋಸ್ಮರಿಯು ಕೂದಲಿನ ಬೇರುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದು ಮೆದುಳಿನ ಕಾರ್ಯವನ್ನು ಉತ್ತೇಜಿಸುತ್ತದೆ. ಯೋಚಿಸುವ, ಅರ್ಥಮಾಡಿಕೊಳ್ಳುವ ಮತ್ತು ನೆನಪಿಟ್ಟುಕೊಳ್ಳುವ ನಿಮ್ಮ ಸಾಮರ್ಥ್ಯವನ್ನು ಸುಧಾರಿಸುತ್ತದೆ.
  • ರೋಸ್ಮರಿಯ ಪರಿಮಳವನ್ನು ತೆಗೆದುಕೊಳ್ಳುವುದರಿಂದ ಒತ್ತಡ ಮತ್ತು ಆತಂಕ ಕಡಿಮೆ ಮಾಡಬಹುದು. ಇದರ ಪರಿಮಳವು ಒತ್ತಡದ ಹಾರ್ಮೋನ್ ಕಾರ್ಟಿಸೋಲ್ ಮಟ್ಟವನ್ನು ಕಡಿಮೆ ಮಾಡುತ್ತದೆ.
  • ಆದರೆ ರೋಸ್ಮರಿಯನ್ನು ಬಳಸುವ ಮೊದಲು ವೈದ್ಯರ ಸಲಹೆ ಪಡೆದುಕೊಳ್ಳಬೇಕು. ಅಲ್ಲದೆ ಇದನ್ನು ಮಿತವಾಗಿ ಮಾತ್ರ ಬಳಸಬೇಕು. ಅತಿಯಾದ ಬಳಕೆ ಚರ್ಮದ ಅಲರ್ಜಿ, ತಲೆನೋವು ಮತ್ತು ಹೊಟ್ಟೆ ನೋವಿಗೆ ಕಾರಣವಾಗಬಹುದು.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ