AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿದಿನ ಬೆಳಿಗ್ಗೆ ಬೆರಳೆಣಿಕೆಯಷ್ಟು ನೆನೆಸಿದ ಕಡಲೆಕಾಯಿಯನ್ನು ಸೇವಿಸಿದರೆ ಏನಾಗುತ್ತೆ ನೋಡಿ

ನೆನೆಸಿದ ಕಡಲೆಕಾಯಿಯಲ್ಲಿ ಪೋಷಕಾಂಶಗಳು ಸಮೃದ್ಧವಾಗಿವೆ. ಅದಕ್ಕಾಗಿಯೇ ವಯಸ್ಕರು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನಬೇಕು ಎಂದು ಹೇಳುತ್ತಾರೆ. ಇದರ ಸೇವನೆಯಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ನೆನೆಸಿದ ಕಡಲೆಕಾಯಿಯಲ್ಲಿ ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳು ಸಮೃದ್ಧವಾಗಿದ್ದು ಜೀರ್ಣಾಂಗ ವ್ಯವಸ್ಥೆ ಉತ್ತಮವಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ.

ಪ್ರತಿದಿನ ಬೆಳಿಗ್ಗೆ ಬೆರಳೆಣಿಕೆಯಷ್ಟು ನೆನೆಸಿದ ಕಡಲೆಕಾಯಿಯನ್ನು ಸೇವಿಸಿದರೆ ಏನಾಗುತ್ತೆ ನೋಡಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on:Feb 08, 2025 | 4:48 PM

Share

ನಿಮಗೆ ತಿಳಿದಿರಬಹುದು, ಕಡಲೆಕಾಯಿ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬ ಮಾತಿದೆ. ಆದರೆ ಇದರಲ್ಲಿ ಆರೋಗ್ಯ ಪ್ರಯೋಜನಗಳು ಸಾಕಷ್ಟಿದೆ. ಅದರಲ್ಲಿಯೂ ಕಡಲೆಕಾಯಿಗಳನ್ನು ನೆನೆಸಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಅನೇಕ ರೀತಿಯ ಪ್ರಯೋಜನಗಳಿವೆ. ನೆನಿಸಿದ ಕಡಲೆ ಕಾಳುಗಳಲ್ಲಿ ಉತ್ತಮ ಪ್ರಮಾಣದ ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳಿವೆ. ಅವು ದೇಹವನ್ನು ಶಕ್ತಿಯುತವಾಗಿ ಮತ್ತು ಆರೋಗ್ಯಕರವಾಗಿರಿಸುತ್ತವೆ. ನೆನೆಸಿದ ಕಡಲೆ ಕಾಳುಗಳನ್ನು ತಿನ್ನುವುದು ದೇಹಕ್ಕೆ ಸಂಪೂರ್ಣ ಪೋಷಣೆ ನೀಡುತ್ತದೆ. ಅದಕ್ಕಾಗಿಯೇ ಅವುಗಳನ್ನು ಸೂಪರ್ ಫುಡ್ ಎಂದು ಕರೆಯಲಾಗುತ್ತದೆ.

  1. ನೆನೆಸಿದ ಕಡಲೆಕಾಯಿಯಲ್ಲಿ ಫೈಬರ್ ಸಮೃದ್ಧವಾಗಿದೆ. ಇದು ಜೀರ್ಣಾಂಗ ವ್ಯವಸ್ಥೆ ಉತ್ತಮವಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ.
  2. ಕಡಲೆಕಾಯಿಯನ್ನು ನೆನೆಸಿ ಸೇವನೆ ಮಾಡುವುದರಿಂದ ಮಲಬದ್ಧತೆಯ ಸಮಸ್ಯೆಯನ್ನು ಕಡಿಮೆ ಮಾಡುವುದರ ಜೊತೆಗೆ ಹೊಟ್ಟೆಯನ್ನು ಶುದ್ಧೀಕರಿಸುತ್ತದೆ.
  3. ನೆನೆಸಿದ ಕಡಲೆಕಾಯಿಯಲ್ಲಿ ಕಾರ್ಬೋಹೈಡ್ರೇಟ್ ಗಳು ಮತ್ತು ಪ್ರೋಟೀನ್ ಗಳು ಸಮೃದ್ಧವಾಗಿದ್ದು ಇದು ದಿನವಿಡೀ ದೇಹವನ್ನು ಶಕ್ತಿಯುತವಾಗಿರಿಸುತ್ತದೆ.
  4. ವ್ಯಾಯಾಮ ಮಾಡುವವರಿಗೆ ಅಥವಾ ದೈಹಿಕ ಕೆಲಸ ಮಾಡುವವರಿಗೆ ನೆನೆಸಿದ ಕಡಲೆಕಾಯಿ ಸೇವನೆ ವಿಶೇಷ ಪ್ರಯೋಜನಗಳನ್ನು ನೀಡುತ್ತದೆ.
  5. ಕಡಲೆಕಾಯಿ ಕಡಿಮೆ ಗ್ಲೈಸೆಮಿಕ್ ಸೂಚ್ಯಂಕವನ್ನು ಹೊಂದಿದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
  6. ನೆನೆಸಿದ ಕಡಲೆಕಾಯಿ ಮಧುಮೇಹ ರೋಗಿಗಳಿಗೆ ಉತ್ತಮ ಆಹಾರವೆಂದು ಪರಿಗಣಿಸಲಾಗಿದ್ದು, ಇದರಲ್ಲಿ ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ರಂಜಕ ಸಮೃದ್ಧವಾಗಿರುತ್ತದೆ.
  7. ನೆನೆಸಿದ ಕಡಲೆಕಾಯಿ ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತವೆ. ನಿಯಮಿತವಾಗಿ ಸೇವನೆ ಮಾಡುವುದರಿಂದ ಮೂಳೆಗಳ ದೌರ್ಬಲ್ಯದಿಂದ ಮುಕ್ತಿ ಪಡೆಯಬಹುದಾಗಿದೆ.

ಆದರೆ ನೆನೆಸಿದ ಕಡಲೆಕಾಯಿ ಸೇವನೆ ಅಲರ್ಜಿ, ಹೊಟ್ಟೆನೋವಿಗೆ ಕಾರಣವಾಗಬಹುದು. ಹಾಗಾಗಿ ಅತಿಯಾಗಿ ಸೇವನೆ ಮಾಡಬೇಡಿ. ಇತಿ ಮಿತಿಯಲ್ಲಿದ್ದರೆ ಎಲ್ಲಾ ಆಹಾರವೂ ಅಮೃತಕ್ಕೆ ಸಮ ಎಂಬ ಮಾತಿದೆ. ಹಾಗಾಗಿ ಸೇವನೆ ಮಾಡುವ ಮೊದಲು ಎಚ್ಚರವಿರಲಿ. ಜೊತೆಗೆ ಖಾಲಿ ಹೊಟ್ಟೆಯಲ್ಲಿ ನೆನೆಸಿದ ಕಡಲೆಕಾಯಿ ಸೇವನೆ ಮಾಡುವುದು ಕೆಲವರಿಗೆ ಗ್ಯಾಸ್ಟ್ರಿಕ್ ಸಮಸ್ಯೆಗೆ ಕಾರಣವಾಗಬಹುದು. ಹೀಗಾಗಿ ಸೇವನೆ ಮಾಡುವ ಮೊದಲು ವೈದ್ಯರ ಸಲಹೆ ಪಡೆದುಕೊಳ್ಳಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:59 pm, Sat, 8 February 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ