AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರ್ಯಕಾಂತಿ ಬೀಜಗಳ ಸೇವನೆ ಎಷ್ಟೆಲ್ಲಾ ಆರೋಗ್ಯ ಸಮಸ್ಯೆ ನಿವಾರಣೆ ಮಾಡುತ್ತೆ ನೋಡಿ

ಸೂರ್ಯಕಾಂತಿ ಬೀಜಗಳು ಸಾಕಷ್ಟು ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಅವು ದೇಹಕ್ಕೆ ಶಕ್ತಿಯನ್ನು ಒದಗಿಸುವುದಲ್ಲದೆ ಅನೇಕ ರೀತಿಯ ರೋಗಗಳನ್ನು ತಡೆಗಟ್ಟಲು ಸಹಾಯ ಮಾಡುತ್ತವೆ. ಸೂರ್ಯಕಾಂತಿ ಬೀಜಗಳು ಪ್ರೋಟೀನ್, ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳಂತಹ ಪ್ರಮುಖ ಪೋಷಕಾಂಶಗಳ ಗಣಿಯಾಗಿದೆ. ನಿಮ್ಮ ದೈನಂದಿನ ಆಹಾರದಲ್ಲಿ ಸೂರ್ಯಕಾಂತಿ ಬೀಜಗಳನ್ನು ಸೇವನೆ ಮಾಡುವುದರಿಂದ ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳು ನಿಮಗೆ ಬರುವುದಿಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಇದರ ಸೇವನೆಯಿಂದ ಸಿಗುವ ಪ್ರಯೋಜನಗಳೇನು? ಯಾವ ರೀತಿಯ ಆರೋಗ್ಯ ಸಮಸ್ಯೆಗಳ ನಿವಾರಣೆಗೆ ಇದು ಒಳ್ಳೆಯದು ಎಂದು ತಿಳಿದುಕೊಳ್ಳಿ.

ಸೂರ್ಯಕಾಂತಿ ಬೀಜಗಳ ಸೇವನೆ ಎಷ್ಟೆಲ್ಲಾ ಆರೋಗ್ಯ ಸಮಸ್ಯೆ ನಿವಾರಣೆ ಮಾಡುತ್ತೆ ನೋಡಿ
Sunflower Seeds
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷತಾ ವರ್ಕಾಡಿ|

Updated on: Feb 15, 2025 | 12:41 PM

Share

ಇತ್ತೀಚಿನ ದಿನಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಹಾಗಾಗಿ ಹಣ್ಣು, ತರಕಾರಿಗಳ ಜೊತೆಗೆ ಸಾಧ್ಯವಾದಷ್ಟು ಬೀಜಗಳ ಸೇವನೆ ಮಾಡುವುದು ಬಹಳ ಒಳ್ಳೆಯದು. ಅದರಲ್ಲಿಯೂ ಇವುಗಳಲ್ಲಿ ಸಮೃದ್ಧ ಪ್ರಮಾಣದ ಪೌಷ್ಟಿಕ ಸತ್ವಗಳು ಅಡಗಿವೆ. ಅವು ದೇಹಕ್ಕೆ ಶಕ್ತಿಯನ್ನು ಒದಗಿಸುವುದಲ್ಲದೆ ಅನೇಕ ರೀತಿಯ ರೋಗಗಳನ್ನು ತಡೆಗಟ್ಟಲು ಸಹಾಯ ಮಾಡುತ್ತವೆ. ಸೂರ್ಯಕಾಂತಿ ಬೀಜಗಳು ಪ್ರೋಟೀನ್, ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳಂತಹ ಪ್ರಮುಖ ಪೋಷಕಾಂಶಗಳ ಗಣಿಯಾಗಿದೆ. ನಿಮ್ಮ ದೈನಂದಿನ ಆಹಾರದಲ್ಲಿ ಸೂರ್ಯಕಾಂತಿ ಬೀಜಗಳನ್ನು ಸೇವನೆ ಮಾಡುವುದರಿಂದ ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳು ನಿಮಗೆ ಬರುವುದಿಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಇದರ ಸೇವನೆಯಿಂದ ಸಿಗುವ ಪ್ರಯೋಜನಗಳೇನು? ಯಾವ ರೀತಿಯ ಆರೋಗ್ಯ ಸಮಸ್ಯೆಗಳ ನಿವಾರಣೆಗೆ ಇದು ಒಳ್ಳೆಯದು ಎಂದು ತಿಳಿದುಕೊಳ್ಳಿ.

  1. ಸೂರ್ಯಕಾಂತಿ ಬೀಜಗಳಲ್ಲಿ ವಿಟಮಿನ್ ಬಿ 6, ಇ, ಮೆಗ್ನೀಸಿಯಮ್, ತಾಮ್ರ ಮುಂತಾದ ಅನೇಕ ಪೋಷಕಾಂಶಗಳಿದ್ದು ಇದು ಆರೋಗ್ಯಕ್ಕೆ ಬಹಳ ಒಳ್ಳೆಯದು.
  2. ಈ ಬೀಜಗಳಲ್ಲಿನ ವಿಟಮಿನ್ ಇ ಮತ್ತು ಸಿ ಹೃದ್ರೋಗಗಳಿಂದ ನಿಮ್ಮನ್ನು ರಕ್ಷಿಸಲು ಸಹಾಯ ಮಾಡುತ್ತದೆ. ಇದರಲ್ಲಿರುವ ವಿಟಮಿನ್ ಇ ಪ್ರಬಲ ಉತ್ಕರ್ಷಣ ನಿರೋಧಕವಾಗಿ ಕಾರ್ಯನಿರ್ವಹಿಸುತ್ತದೆ.
  3. ಸೂರ್ಯಕಾಂತಿ ಬೀಜಗಳಲ್ಲಿ ಮೊನೊ ಮತ್ತು ಪಾಲಿಅನ್ ಸ್ಯಾಚುರೇಟೆಡ್ ಕೊಬ್ಬುಗಳನ್ನು ಹೊಂದಿರುತ್ತವೆ. ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿವೆ.
  4. ಸೂರ್ಯಕಾಂತಿ ಬೀಜಗಳು ಮೆಗ್ನೀಸಿಯಮ್ ಅನ್ನು ಸಹ ಹೊಂದಿರುತ್ತವೆ. ಇದು ಮೂಳೆಗಳನ್ನು ಬಲಪಡಿಸುತ್ತದೆ.
  5. ಸೂರ್ಯಕಾಂತಿ ಬೀಜಗಳು ಒತ್ತಡ ಮತ್ತು ಮೈಗ್ರೇನ್ ನಂತಹ ಸಮಸ್ಯೆಗಳಿಂದ ಪರಿಹಾರ ನೀಡುತ್ತವೆ. ಇದು ಮೆದುಳನ್ನು ಶಾಂತಗೊಳಿಸುವಲ್ಲಿ ಪರಿಣಾಮಕಾರಿಯಾಗಿದೆ.
  6. ಅಲ್ಲದೆ ಈ ಬೀಜಗಳು ರಕ್ತದೊತ್ತಡವನ್ನು ಕ್ರಮಬದ್ಧವಾಗಿ ಇಡುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಅಧಿಕ ರಕ್ತದೊತ್ತಡ ಹೊಂದಿರುವವರು ಸೂರ್ಯಕಾಂತಿ ಬೀಜಗಳನ್ನು ನಿಯಮಿತವಾಗಿ ಸೇವಿಸುವ ಮೂಲಕ ರಕ್ತದೊತ್ತಡವನ್ನು ನಿಯಂತ್ರಿಸಬಹುದು.
  7. ಸೂರ್ಯಕಾಂತಿ ಬೀಜಗಳಲ್ಲಿ ಉತ್ಕರ್ಷಣ ನಿರೋಧಕಗಳು, ವಿಟಮಿನ್ ಇ, ಸೆಲೆನಿಯಂ ಮತ್ತು ತಾಮ್ರವಿದೆ. ಕ್ಯಾನ್ಸರ್ ತಡೆಗಟ್ಟುವಲ್ಲಿ ಅವು ಪರಿಣಾಮಕಾರಿ ಎಂದು ಹೇಳಲಾಗುತ್ತದೆ.
  8. ಸೂರ್ಯಕಾಂತಿ ಬೀಜಗಳಲ್ಲಿ ವಿಟಮಿನ್ ಇ ಸಮೃದ್ಧವಾಗಿದೆ. ಇದು ಚರ್ಮಕ್ಕೆ ನೈಸರ್ಗಿಕ ಹೊಳಪನ್ನು ನೀಡುತ್ತದೆ. ಹಾನಿಕಾರಕ ಯುವಿ ಕಿರಣಗಳಿಂದ ಚರ್ಮವನ್ನು ರಕ್ಷಿಸುತ್ತದೆ.
  9. ಸೂರ್ಯಕಾಂತಿ ಬೀಜಗಳು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳಿಂದ ಸಮೃದ್ಧವಾಗಿವೆ. ಇವುಗಳಲ್ಲಿ ಸೆಲೆನಿಯಂ ಮತ್ತು ವಿಟಮಿನ್ ಇ ನಂತಹ ಶಕ್ತಿಯುತ ಉತ್ಕರ್ಷಣ ನಿರೋಧಕಗಳು ಸೇರಿವೆ, ಇದು ದೇಹದಲ್ಲಿನ ಫ್ರೀ ರಾಡಿಕಲ್ಗಳಿಂದ ಉಂಟಾಗುವ ಜೀವಕೋಶಗಳ ನಾಶವನ್ನು ತಡೆಯುತ್ತದೆ. ಫ್ರೀ ರಾಡಿಕಲ್ ಗಳು ಕ್ಯಾನ್ಸರ್ ನಂತಹ ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು. ಆದ್ದರಿಂದ ಸೂರ್ಯಕಾಂತಿ ಬೀಜಗಳು ಕ್ಯಾನ್ಸರ್ ನಂತಹ ರೋಗಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ.

(ಸೂಚನೆ: ಇಲ್ಲಿರುವ ವಿಷಯಗಳು ಮಾಹಿತಿಗಾಗಿ ಮಾತ್ರ. ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳಿದ್ದ ಸಂದರ್ಭದಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಸೂಕ್ತ.)

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ