AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯದ ಆರೋಗ್ಯದಿಂದ ಚರ್ಮದ ಕಾಂತಿಯವರೆಗೆ; ಗೆಣಸಿನ ಪ್ರಯೋಜನಗಳಿವು

ಗೆಣಸು ಗರ್ಭಿಣಿಯರಿಗೆ ಬಹಳ ಅವಶ್ಯಕವಾದ ವಿಟಮಿನ್ ಬಿ ಸೇರಿದಂತೆ ಪೋಲಿಕ್ ಆಸಿಡ್ ಅನ್ನು ಹೊಂದಿದೆ. ಇದರಲ್ಲಿ ವಿಟಮಿನ್‌, ಮಿನರಲ್ಸ್‌, ಪ್ರೊಟೀನ್‌ ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ಆರೋಗ್ಯಕರವಾಗಿದೆ. ಗೆಣಸಿನಲ್ಲಿ ಬೀಟಾ-ಕ್ಯಾರೋಟಿನ್ ಹೇರಳವಾಗಿದೆ. ಇದು ಯುವಿ ಹಾನಿಯಿಂದ ಚರ್ಮವನ್ನು ರಕ್ಷಿಸುತ್ತದೆ.

ಹೃದಯದ ಆರೋಗ್ಯದಿಂದ ಚರ್ಮದ ಕಾಂತಿಯವರೆಗೆ; ಗೆಣಸಿನ ಪ್ರಯೋಜನಗಳಿವು
ಗೆಣಸುImage Credit source: pexels.com
ಸುಷ್ಮಾ ಚಕ್ರೆ
|

Updated on: Sep 11, 2023 | 7:23 PM

Share

ಸಿಹಿ ಗೆಣಸನ್ನು ಅಡುಗೆಗೆ ಬಳಸಬಹುದು, ಹಾಗೇ ಹಸಿಯಾಗಿಯೂ ತಿನ್ನಬಹುದು. ಜೀವಸತ್ವಗಳು ಮತ್ತು ಫೈಬರ್‌ನಿಂದ ಸಮೃದ್ಧವಾಗಿರುವ ಗೆಣಸು ನಿಮ್ಮ ಚರ್ಮ, ಹೃದಯ ಮತ್ತು ಒಟ್ಟಾರೆ ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿಯಾಗಿದೆ. ಪಿಷ್ಟ, ಫೈಬರ್, ಪ್ರೋಟೀನ್‌, ಖನಿಜಗಳಾದ ಮ್ಯಾಂಗನೀಸ್, ತಾಮ್ರ, ಪೊಟ್ಯಾಸಿಯಮ್, ಕಬ್ಬಿಣ, ವಿಟಮಿನ್‌ಗಳಾದ ಬಿ ಕಾಂಪ್ಲೆಕ್ಸ್, ವಿಟಮಿನ್ ಸಿ, ವಿಟಮಿನ್ ಇ, ವಿಟಮಿನ್ ಎ ಇರುವ ಗೆಣಸಿನ ಪ್ರಯೋಜನಗಳ ಬಗ್ಗೆ ಇಲ್ಲಿದೆ ಮಾಹಿತಿ.

ಗೆಣಸು ಗೋಧಿ ಅಥವಾ ಅಕ್ಕಿಗಿಂತ ಹೆಚ್ಚಿನ ಮಟ್ಟದ ಕಾರ್ಬೋಹೈಡ್ರೇಟ್‌ಗಳು, ಪ್ರೋಟೀನ್‌ಗಳು, ಪ್ರೊ-ವಿಟಮಿನ್ ಎ, ವಿಟಮಿನ್ ಸಿ ಮತ್ತು ಖನಿಜಗಳನ್ನು ನೀಡುತ್ತವೆ. ಗೆಣಸನ್ನು ನಿಯಮಿತವಾಗಿ ಸೇವಿಸುವುದರಿಂದಾಗುವ ಕೆಲವು ಪ್ರಯೋಜನಗಳು ಇಲ್ಲಿವೆ…

ಇದನ್ನೂ ಓದಿ: ದೇಹಕ್ಕೆ ಮಿನರಲ್ಸ್ ಯಾಕೆ ಅಗತ್ಯ? ಇಲ್ಲಿದೆ ಪೂರ್ತಿ ಮಾಹಿತಿ

– ಗೆಣಸು ಫೈಬರ್ ಭರಿತ ಆಹಾರವಾಗಿದ್ದು, ನಿಯಮಿತ ಕರುಳಿನ ಚಲನೆಯನ್ನು ಉತ್ತೇಜಿಸುತ್ತದೆ. ಇದು ದೇಹಕ್ಕೆ ಬೇಕಾದ ವಿಟಮಿನ್ ಬಿ6, ಕ್ಯಾಲ್ಸಿಯಂ, ಕಬ್ಬಿಣ, ಸೋಡಿಯಂ, ಝಿಂಕ್, ಮೆಗ್ನೀಸಿಯಂ ಮೊದಲಾದ ಅಂಶಗಳನ್ನು ಒದಗಿಸುತ್ತದೆ. ಇದರಲ್ಲಿ ಉತ್ತಮ ಪ್ರಮಾಣದ ನಾರಿನಂಶ, ವಿಟಮಿನ್ ಸಿ ಮತ್ತು ವಿಟಮಿನ್ ಎ ಅಂಶಗಳಿವೆ.

– ಗೆಣಸುಗಳಲ್ಲಿ ಸ್ವಾಭಾವಿಕ ಸಕ್ಕರೆ ಅಂಶ ಇರುವುದರಿಂದ ಅದು ರಕ್ತದ ಸಕ್ಕರೆ ಅಂಶವನ್ನು ಕಡಿಮೆ ಮಾಡಿ, ಇನ್ಸುಲಿನ್ ಪ್ರಮಾಣವನ್ನು ಸ್ಥಿರವಾಗಿಡುತ್ತದೆ.

– ಗೆಣಸು ಗರ್ಭಿಣಿಯರಿಗೆ ಬಹಳ ಅವಶ್ಯಕವಾದ ವಿಟಮಿನ್ ಬಿ ಸೇರಿದಂತೆ ಪೋಲಿಕ್ ಆಸಿಡ್ ಅನ್ನು ಹೊಂದಿದೆ. ಇದರಲ್ಲಿ ವಿಟಮಿನ್‌, ಮಿನರಲ್ಸ್‌, ಪ್ರೊಟೀನ್‌ ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ಆರೋಗ್ಯಕರವಾಗಿದೆ.

– ಗೆಣಸಿನ ಸೇವನೆಯಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಅಸ್ತಮಾ ಸಮಸ್ಯೆ ನಿವಾರಣೆಯಾಗುತ್ತದೆ, ಮಲಬದ್ಧತೆ ನಿವಾರಣೆಯಾಗುತ್ತದೆ.

ಇದನ್ನೂ ಓದಿ:  Nail Care: ಉಗುರಿನ ಮೇಲೆ ಬಿಳಿ ಚುಕ್ಕೆ ಉಂಟಾಗಲು ಕಾರಣವೇನು?

– ಗೆಣಸಿನಲ್ಲಿರುವ ವಿಟಮಿನ್ ಸಿ ಜೀವಸತ್ವವು ಮೂಳೆ ಮತ್ತು ಹಲ್ಲಿನ ಆರೋಗ್ಯದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದರಲ್ಲಿರುವ ಬೀಟಾ- ಕೆರೊಟಿನ್ ಸ್ತನ ಮತ್ತು ಶ್ವಾಸಕೋಶದ ಕ್ಯಾನ್ಸರ್‌ನಿಂದ ನಮ್ಮನ್ನು ಕಾಪಾಡುತ್ತದೆ.

– ಗೆಣಸು ಶೀತ ಮತ್ತು ಜ್ವರದ ಸೊಂಕು ಹರಡುವುದನ್ನು ತಡೆಗಟ್ಟುತ್ತದೆ. ಇದರಲ್ಲಿರುವ ಪೊಟ್ಯಾಸಿಯಮ್‌ ನಮ್ಮ ಹೃದಯದ ಬಡಿತವನ್ನು ನಿಯಂತ್ರಿಸುವಲ್ಲಿ ಸಹಾಯ ಮಾಡುತ್ತದೆ.

– ಗೆಣಸಿನಲ್ಲಿ ಬೀಟಾ-ಕ್ಯಾರೋಟಿನ್ ಹೇರಳವಾಗಿದೆ. ಇದು ಯುವಿ (ಸೂರ್ಯನ ನೇರಳಾತೀತ ಕಿರಣ) ಹಾನಿಯಿಂದ ಚರ್ಮವನ್ನು ರಕ್ಷಿಸುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್