AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜೆ ಬೇರಿನ ಉಪಯೋಗ ತಿಳಿದರೆ ಆಶ್ಚರ್ಯ ಪಡೋದು ಖಂಡಿತ

ಆಯುರ್ವೇದ ಪದ್ಧತಿಯಲ್ಲಿನ ಅನೇಕ ಗಿಡಮೂಲಿಕೆಗಳಲ್ಲಿ ಬಜೆ ಬೇರು ಒಂದು. ಈ ಮೂಲಿಕೆ ಸಾಮಾನ್ಯವಾಗಿ ಚಿಕ್ಕಮಕ್ಕಳಿರುವ ಮನೆಗಳಲ್ಲಿ ಹೆಚ್ಚು ಬಳಕೆಯಾಗುತ್ತದೆ. ಜೊತೆಗೆ ಎಲ್ಲಾ ವಯಸ್ಸಿನವರ ಆರೋಗ್ಯಕ್ಕೂ ಇದು ಬಹಳ ಹಿತಕರ. ಹಾಗಾಗಿ, ಬಜೆ ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಕರ ವರೆಗೂ ಬಳಸಬಹುದಾದ ಆರೋಗ್ಯಯುತ ಮೂಲಿಕೆಯಾಗಿದೆ. ಸ್ಚಲ್ಪ ಖಾರ, ಆಹ್ಲಾದವೆನಿಸುವ ಪರಿಮಳವನ್ನು ಹೊಂದಿರುವ ಬಜೆ ಬೇರು, ಹಳ್ಳಿ ಮನೆಗಳಲ್ಲಿ ಕಂಡು ಬರುವುದು ಸಾಮಾನ್ಯ. ಹಾಗಾದರೆ ಈ ಬಜೆ ಬೇರನ್ನು ಯಾವೆಲ್ಲಾ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಬಳಸಿಕೊಳ್ಳಬಹುದು ಎಂಬುದನ್ನು ತಿಳಿದುಕೊಳ್ಳಿ.

ಬಜೆ ಬೇರಿನ ಉಪಯೋಗ ತಿಳಿದರೆ ಆಶ್ಚರ್ಯ ಪಡೋದು ಖಂಡಿತ
ಬಜೆ ಬೇರು
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jan 27, 2025 | 3:45 PM

Share

ಬಜೆ ಬೇರಿನ ಹೆಸರನ್ನು ನೀವು ಕೇಳಿರಬಹುದು. ಸಾಮಾನ್ಯವಾಗಿ ಹಳ್ಳಿಗಳಲ್ಲಿ ಇದನ್ನು ಹೆಚ್ಚಾಗಿ ಬಳಕೆ ಮಾಡುತ್ತಾರೆ. ಆಯುರ್ವೇದ ಪದ್ಧತಿಯಲ್ಲಿನ ಅನೇಕ ಗಿಡಮೂಲಿಕೆಗಳಲ್ಲಿ ಇದು ಒಂದು. ಬಜೆ ಎಂದು ಕರೆಯುವ ಈ ಮೂಲಿಕೆ ಸಾಮಾನ್ಯವಾಗಿ ಚಿಕ್ಕಮಕ್ಕಳಿರುವ ಮನೆಗಳಲ್ಲಿ ಹೆಚ್ಚು ಬಳಕೆಯಾಗುತ್ತದೆ. ಜೊತೆಗೆ ಎಲ್ಲಾ ವಯಸ್ಸಿನವರ ಆರೋಗ್ಯಕ್ಕೂ ಇದು ಬಹಳ ಹಿತಕರ. ಹಾಗಾಗಿ, ಬಜೆ ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಕರ ವರೆಗೂ ಬಳಸಬಹುದಾದ ಆರೋಗ್ಯಯುತ ಮೂಲಿಕೆಯಾಗಿದೆ. ಸ್ಚಲ್ಪ ಖಾರ, ಆಹ್ಲಾದವೆನಿಸುವ ಪರಿಮಳವನ್ನು ಹೊಂದಿರುವ ಬಜೆ ಬೇರು, ಹಳ್ಳಿ ಮನೆಗಳಲ್ಲಿ ಕಂಡು ಬರುವುದು ಸಾಮಾನ್ಯ. ಹಾಗಾದರೆ ಈ ಬಜೆ ಬೇರನ್ನು ಯಾವೆಲ್ಲಾ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಬಳಸಿಕೊಳ್ಳಬಹುದು ಎಂಬುದನ್ನು ತಿಳಿದುಕೊಳ್ಳಿ.

  • ಸಾಮಾನ್ಯವಾಗಿ ಚಿಕ್ಕ ಮಕ್ಕಳಿಗೆ ಹಲ್ಲು ಹುಟ್ಟುವ ಸಮಯದಲ್ಲಿ ಜ್ವರ ಬರುತ್ತಿದ್ದರೆ ಬಜೆಯ ಬೇರನ್ನು ತೇಯ್ದು ಹಾಲಿನೊಂದಿಗೆ ಬೆರೆಸಿ ಅದನ್ನು ಸೇವನೆ ಮಾಡಲು ಕೊಡಬೇಕು. ತುಂಬಾ ಚಿಕ್ಕವರಾದರೆ ನಾಲಗೆಯ ಮೇಲಿಟ್ಟು ಅವರು ಅದನ್ನು ತಿನ್ನುವಂತೆ ನೋಡಿಕೊಳ್ಳಬೇಕು.
  • ಮಕ್ಕಳಿಗೆ ಮಾತ್ರವಲ್ಲ ದೊಡ್ಡವರೂ ಕೂಡ ಬಜೆ ಬೇರನ್ನು ಸೇವನೆ ಮಾಡುವುದರಿಂದ ನೆನಪಿನ ಶಕ್ತಿ ಜೊತೆಗೆ ದೇಹದಲ್ಲಿ ಚುರುಕುತನ ಮೂಡುತ್ತದೆ. ಜೊತೆಗೆ ಸ್ಮರಣಶಕ್ತಿ, ಬುದ್ಧಿ ಚುರುಕಾಗಲೂ ಕೂಡ ಇದನ್ನು ಬಳಕೆ ಮಾಡಲಾಗುತ್ತದೆ. ಈ ಬಜೆ ಬೇರನ್ನು ಲಿಂಬು ರಸದಲ್ಲಿ ತೇಯ್ದು ಸೇವನೆ ಮಾಡಲಾಗುತ್ತದೆ.
  • ಮಕ್ಕಳಿಗೆ ಮಾತು ಬರಲು ತಡವಾಗಿದ್ದಲ್ಲಿ ಅಥವಾ ಸ್ಪಷ್ಟ ಉಚ್ಚಾರಣೆ ಇಲ್ಲದಿದ್ದರೆ ಪ್ರತಿದಿನ ಬಜೆಯ ಬೇರನ್ನು ತೇಯ್ದು ಜೇನಿನೊಂದಿಗೆ ಬೆರೆಸಿ ಖಾಲಿ ಹೊಟ್ಟೆಯಲ್ಲಿ ಅದನ್ನು ತಿನ್ನಿಸಬೇಕು.
  • ಒಂದು ವರ್ಷದೊಳಗಿನ ಮಕ್ಕಳಿಗೆ ಪ್ರತಿದಿನ ಬಜೆ ಬೇರನ್ನು ಸುಟ್ಟು ಭಸ್ಮ ತಯಾರಿಸಿ ಎರಡು ಚಿಟಿಕೆಯಷ್ಟು ಜೇನುತುಪ್ಪ ಬೆರೆಸಿ ತಿನ್ನಿಸಬೇಕು. ಇದರಿಂದ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಪದೇ ಪದೇ ಆರೋಗ್ಯ ಸಮಸ್ಯೆಗಳು ಬರುವುದಿಲ್ಲ.
  • ಈ ಗಿಡಮೂಲಿಕೆಯನ್ನು ಗ್ಯಾಸ್ಟ್ರಿಕ್‌, ಬೇಧಿಯಂತಹ ಆರೋಗ್ಯ ಸಮಸ್ಯೆಗಳಿಗೆ ಬಳಸಬಹುದಾಗಿದೆ. ಇದು ನಿಮ್ಮ ಜೀರ್ಣಶಕ್ತಿಯನ್ನು ಸುಧಾರಿಸಿ, ತಿಂದ ಆಹಾರ ಸುಲಭದಲ್ಲಿ ಜೀರ್ಣವಾಗುವಂತೆ ಮಾಡುತ್ತದೆ. ಹೀಗಾಗಿ ಬಜೆ ಬೇರನ್ನು ಚೂರ್ಣ, ಮಾತ್ರೆ ಅಥವಾ ಪುಡಿಯ ರೂಪದಲ್ಲಿ ಅಧಿಕವಾಗಿ ಬಳಸಲಾಗುತ್ತದೆ.
  • ಸಾಮಾನ್ಯವಾಗಿ ಬಜೆ ಬೇರನ್ನು ಆಯುರ್ವೇದದ ಪಂಚಕರ್ಮ ಚಿಕಿತ್ಸೆಯಲ್ಲಿ ಬಳಸಲಾಗುತ್ತದೆ. ಜೊತೆಗೆ ಆತಂಕ, ಖಿನ್ನತೆಯಿಂದ ಬಳಲುತ್ತಿರುವವರಿಗೆ ಈ ಬೇರನ್ನು ಔಷಧಿಯಾಗಿ ಬಳಸಲಾಗುತ್ತದೆ. ಅಲ್ಲದೆ ಇದರ ಪರಿಮಳದಿಂದ ಖಿನ್ನತೆ ದೂರವಾಗುತ್ತದೆ.
  • ಬಜೆ ಬೇರು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದ್ದು ಇದನ್ನು ತೇಯ್ದು ನೋವಿರುವ ಜಾಗಕ್ಕೆ ಹಚ್ಚಿದರೆ ನೋವು ಮತ್ತು ಊತ ಕಡಿಮೆಯಾಗುತ್ತದೆ. ಜೊತೆಗೆ ದೇಹದಲ್ಲಿನ ವಾತ ದೋಷವನ್ನು ಸಮತೋಲನಗೊಳಿಸುವ ಗುಣದಿಂದಾಗಿ ಸಂಧಿವಾತಕ್ಕೆ ಸಂಬಂಧಿಸಿದ ನೋವು ಮತ್ತು ಊತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ