AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ರಾತ್ರಿ ಮಲಗುವ ಮುನ್ನ ನೀರು ಕುಡಿಯುವುದು ಸೂಕ್ತವೇ? ತಜ್ಞರು ಹೇಳುವುದೇನು?

ದಿನಕ್ಕೆ ಕನಿಷ್ಠ ಮೂರು ಲೀಟರ್ ನೀರು ಕುಡಿಯಬೇಕು ಎನ್ನುತ್ತಾರೆ ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ. ಆದರೆ ರಾತ್ರಿ ಮಲಗುವಾಗ ಹೆಚ್ಚು ನೀರು ಕುಡಿದರೆ ಏನಾಗುತ್ತದೆ? ಈ ಕುರಿತು ಆರೋಗ್ಯ ತಜ್ಞರು ಏನು ಹೇಳುತ್ತಾರೆ? ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

Health Tips: ರಾತ್ರಿ ಮಲಗುವ ಮುನ್ನ  ನೀರು ಕುಡಿಯುವುದು ಸೂಕ್ತವೇ? ತಜ್ಞರು ಹೇಳುವುದೇನು?
ಅಕ್ಷತಾ ವರ್ಕಾಡಿ
|

Updated on:Nov 09, 2023 | 5:21 PM

Share

ದೇಹದಲ್ಲಿರುವ ಕಲ್ಮಶಗಳನ್ನು ಹೊರಹಾಕಲು ಮತ್ತು ಆರೋಗ್ಯವಾಗಿರಲು ನೀರು ತುಂಬಾ ಅವಶ್ಯಕವಾಗಿದೆ. ಆದ್ದರಿಂದಲೇ ದಿನಕ್ಕೆ ಕನಿಷ್ಠ ಮೂರು ಲೀಟರ್ ನೀರು ಕುಡಿಯಬೇಕು ಎನ್ನುತ್ತಾರೆ ಆರೋಗ್ಯ ತಜ್ಞರು . ಆದರೆ ರಾತ್ರಿ ಮಲಗುವಾಗ ಹೆಚ್ಚು ನೀರು ಕುಡಿದರೆ ಏನಾಗುತ್ತದೆ? ಈ ಕುರಿತು ಆರೋಗ್ಯ ತಜ್ಞರು ಏನು ಹೇಳುತ್ತಾರೆ? ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ನೀರು ಹೆಚ್ಚು ಕುಡಿದಷ್ಟೂ ಉತ್ತಮ. ಆದರೆ ಕುಡಿಯುವ ಸಮಯದಲ್ಲಿ ಕುಡಿಯಿರಿ. ಆಗ ದೇಹವೂ ತುಂಬಾ ಚೆನ್ನಾಗಿರುತ್ತದೆ. ನೀರು ಕುಡಿಯುವುದರಿಂದ ತ್ವಚೆಯು  ತೇವಾಂಶದಿಂದ ಕೂಡಿರುತ್ತದೆ. ಬೆಳಗ್ಗೆ ಎದ್ದಾಗ ನೀರು ಕುಡಿಯುವುದು ಉತ್ತಮ. ಆದರೆ  ಊಟ ಮಾಡುವಾಗ ನೀರು ಕುಡಿಯಬೇಡಿ.

ರಕ್ತದೊತ್ತಡ – ಮಧುಮೇಹ ಇರುವವರು ರಾತ್ರಿ ಮಲಗುವಾಗ ನೀರು ಕುಡಿಯುವುದು ಉತ್ತಮವೇ?

ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಹೃದಯದ ಸಮಸ್ಯೆಯಿಂದ ಬಳಲುತ್ತಿರುವವರು ರಾತ್ರಿ ಮಲಗುವ ಮುನ್ನ ಅತಿಯಾಗಿ ನೀರು ಕುಡಿಯಬೇಡಿ. ಅತಿಯಾಗಿ ನೀರು ಕುಡಿಯುವುದು ಆಗಾಗ ಮೂತ್ರ ವಿಸರ್ಜನೆಗೆ ಕಾರಣವಾಗಬಹುದು. ಇದು ನಿದ್ದೆಗೆ ಅಡ್ಡಿಯುಂಟು ಮಾಡುತ್ತದೆ.

ಇದನ್ನೂ ಓದಿ:  ಉಳಿದಿರುವ ಆಹಾರವನ್ನು ಮತ್ತೆ ಬಿಸಿ ಮಾಡಿ ತಿನ್ನುವ ಅಭ್ಯಾಸ ನಿಮಗಿದೆಯಾ? ಹಾಗಿದ್ದರೆ ಮಾರಣಾಂತಿಕ ‘ಫ್ರೈಡ್ ರೈಸ್ ಸಿಂಡ್ರೋಮ್’ ಬಗ್ಗೆ ತಿಳಿದುಕೊಳ್ಳಿ

ಖಾಲಿ ಹೊಟ್ಟೆಯಲ್ಲಿ ಕುಡಿಯಬೇಡಿ:

ರಾತ್ರಿ ಮಲಗುವ ಮುನ್ನ ಹೆಚ್ಚು ನೀರು ಕುಡಿಯುವುದರಿಂದ ನಿದ್ರೆಗೆ ತೊಂದರೆಯಾಗುತ್ತದೆ. ಆಗಾಗ್ಗೆ ಮೂತ್ರ ವಿಸರ್ಜನೆ. ಹೊಟ್ಟೆಯಲ್ಲಿ ನೀರು ತುಂಬಿಕೊಂಡು ಮಲಗುವುದರಿಂದ ಉಸಿರಾಟದ ತೊಂದರೆಯುಂಟಾಗಬಹುದು. ಅದರ ಹೊರತಾಗಿ ಎದೆಯುರಿ ಮುಂತಾದ ಸಮಸ್ಯೆಗಳು ಉದ್ಭವಿಸುತ್ತವೆ. ಅದಕ್ಕಾಗಿಯೇ ನೀವು ಮಲಗುವ ಅರ್ಧ ಗಂಟೆ ಮೊದಲು ಒಂದು ಲೋಟ ನೀರು ಕುಡಿಯಬೇಕು. ಮಧ್ಯದಲ್ಲಿ ನಿಮಗೆ ತುಂಬಾ ಬಾಯಾರಿಕೆಯೆನಿಸಿದರೆ ನಂತರ ಕುಡಿಯಿರಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು  ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 5:03 pm, Thu, 9 November 23

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ