ಈರುಳ್ಳಿಯಲ್ಲಿ ಅನೇಕ ಆರೋಗ್ಯಕಾರಿ ಗುಣಗಳಿವೆ, ಇದು ಅತ್ಯುತ್ತಮ ಆರೋಗ್ಯ ಪ್ರಯೋಜನಗಳನ್ನು ಒದಗಿಸುತ್ತದೆ. ಈರುಳ್ಳಿಯನ್ನು ಎಲ್ಲಾ ಭಕ್ಷ್ಯಗಳಲ್ಲಿ ಬಳಸಲಾಗುತ್ತದೆ. ಬಿರಿಯಾನಿ, ಫ್ರೈಡ್ ರೈಸ್, ನಾನ್ ವೆಜ್ ಖಾದ್ಯಗಳಲ್ಲಿ ಈರುಳ್ಳಿಯನ್ನು ಬಳಸುತ್ತಾರೆ.
ಈರುಳ್ಳಿಯನ್ನು ಆಹಾರದಲ್ಲಿ ಸೇರಿಸುವುದರಿಂದ, ದೇಹದ ಪ್ರಮುಖ ಭಾಗಗಳಿಗೆ ಆಮ್ಲಜನಕವನ್ನು ಪೂರೈಸುತ್ತದೆ.
ಜೀವಕೋಶಗಳ ಬೆಳವಣಿಗೆಗೆ ಕೊಡುಗೆ ನೀಡುವುದರ ಜೊತೆಗೆ, ಇದು ಕೆಂಪು ರಕ್ತ ಕಣಗಳನ್ನು ಹೆಚ್ಚಿಸುತ್ತದೆ.
ರಕ್ತಹೀನತೆಯಿಂದ ಬಳಲುತ್ತಿರುವವರು ತಮ್ಮ ಆಹಾರದಲ್ಲಿ ಈರುಳ್ಳಿಯನ್ನು ಯಾವುದಾದರೂ ರೀತಿಯಲ್ಲಿ ಸೇರಿಸಿಕೊಳ್ಳಬೇಕು ಎಂದು ತಜ್ಞರು ಸಲಹೆ ನೀಡುತ್ತಾರೆ.
ದೇಹದಲ್ಲಿ ಸಂಗ್ರಹವಾಗಿರುವ ಅನಗತ್ಯ ಕೊಬ್ಬನ್ನು ಕಡಿಮೆ ಮಾಡಲು ಈರುಳ್ಳಿ ಉಪಯುಕ್ತವಾಗಿದೆ. ಹೃದಯ ಸಂಬಂಧಿ ಕಾಯಿಲೆಗಳ ವಿರುದ್ಧ ಹೋರಾಡುತ್ತದೆ ಮತ್ತು ಹೃದಯಾಘಾತವನ್ನು ತಡೆಯುತ್ತದೆ.
ದೇಹದಲ್ಲಿ ನೈಟ್ರಿಕ್ ಆಮ್ಲದ ಬಿಡುಗಡೆಯನ್ನು ಉತ್ತೇಜಿಸುತ್ತದೆ ಮತ್ತು ಅಧಿಕ ರಕ್ತದೊತ್ತಡದ ಮಟ್ಟವನ್ನು ಸಮತೋಲನಗೊಳಿಸುತ್ತದೆ. ಈರುಳ್ಳಿಯಲ್ಲಿರುವ ಕ್ಯಾಲ್ಸಿಯಂ ಮೂಳೆಗಳನ್ನು ಬಲಪಡಿಸುತ್ತದೆ. ಈರುಳ್ಳಿಯ ತಿರುಳನ್ನು ಮುಖಕ್ಕೆ ಹಚ್ಚುವುದರಿಂದ ಮೊಡವೆಗಳು ಮತ್ತು ಕಲೆಗಳು ಸಂಪೂರ್ಣವಾಗಿ ನಿವಾರಣೆಯಾಗಿ ಹೊಳೆಯುವ ಸೌಂದರ್ಯ ನಿಮ್ಮದಾಗುತ್ತದೆ.
ಹಸಿ ಈರುಳ್ಳಿ ಚೂರುಗಳನ್ನು ಜಗಿಯುವುದರಿಂದ ಬಾಯಿಯಲ್ಲಿರುವ ಹಾನಿಕಾರಕ ಬ್ಯಾಕ್ಟೀರಿಯಾಗಳು ನಾಶವಾಗುತ್ತವೆ. ಅವುಗಳಲ್ಲಿರುವ ವಿಶಿಷ್ಟ ರಾಸಾಯನಿಕಗಳು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುತ್ತದೆ.
ಸಾಮಾನ್ಯವಾಗಿ ಕೆಂಪು ಈರುಳ್ಳಿ ಮತ್ತು ಬಿಳಿ ಈರುಳ್ಳಿ ಮಾರುಕಟ್ಟೆಯಲ್ಲಿ ಲಭ್ಯವಿದೆ. ಆದರೆ ರೆಡ್ ಆನಿಯನ್ಗಿಂತ ವೈಟ್ ಆನಿಯನ್ನಲ್ಲಿ ಹೆಚ್ಚು ಔಷಧೀಯ ಗುಣಗಳಿವೆ ಎನ್ನುತ್ತಾರೆ ತಜ್ಞರು. ಬಿಳಿ ಈರುಳ್ಳಿ ತಿನ್ನುವುದರಿಂದ ಕೆಂಪು ಈರುಳ್ಳಿಗಿಂತ ಹೆಚ್ಚಿನ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.
ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.
ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ