AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Blood Cancer: ಹಚ್ಚೆ ರಕ್ತದ ಕ್ಯಾನ್ಸರ್​​ಗೆ ಕಾರಣವಾಗುತ್ತದೆಯೇ? ಅಧ್ಯಯನ ಹೇಳುವುದೇನು?

ಟ್ಯಾಟೂ ವಿಚಾರದಲ್ಲಿ ಮುನ್ನೆಚ್ಚರಿಕೆ ವಹಿಸಬೇಕು . ಶುಚಿತ್ವದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವ ಮತ್ತು ಗುಣಮಟ್ಟದ ಶಾಯಿಯನ್ನು ಬಳಸುವ ವೃತ್ತಿಪರ ಟ್ಯಾಟೂ ಕಲಾವಿದರ ಹತ್ತಿರ ಮಾತ್ರ ಹಚ್ಚೆ ಹಾಕಿಸಿಕೊಳ್ಳಬೇಕು. ಕಡಿಮೆ ಬೆಲೆಗೆ ಸಿಗುವ ಟ್ಯಾಟೂ ಹಾಕಿಸಿಕೊಳ್ಳುವುದು ಒಳ್ಳೆಯದಲ್ಲ ಎಂದು ತಜ್ಞರು ಎಚ್ಚರಿಸುತ್ತಾರೆ.

Blood Cancer: ಹಚ್ಚೆ ರಕ್ತದ ಕ್ಯಾನ್ಸರ್​​ಗೆ ಕಾರಣವಾಗುತ್ತದೆಯೇ? ಅಧ್ಯಯನ ಹೇಳುವುದೇನು?
ಅಕ್ಷತಾ ವರ್ಕಾಡಿ
|

Updated on: Jun 23, 2024 | 10:45 AM

Share

ದೇಹದ ವಿವಿಧ ಭಾಗಗಳಲ್ಲಿ ಹಚ್ಚೆ(Tattoo) ಹಾಕಿಸಿಕೊಳ್ಳುವುದು ಇತ್ತೀಚಿನ ವರ್ಷಗಳಲ್ಲಿ ಫ್ಯಾಶನ್ ಹಾಕಿಬಿಟ್ಟಿದೆ. ಆದರೆ ಟ್ಯಾಟೂ ಆರೋಗ್ಯಕ್ಕೆ ಒಳ್ಳೆಯದೇ? ಇದು ಅಡ್ಡ ಪರಿಣಾಮಗಳನ್ನು ಹೊಂದಿದೆಯೇ? ಇದೆಲ್ಲ ಅನಾದಿ ಕಾಲದಿಂದಲೂ ಚರ್ಚೆಯಾಗುತ್ತಿದೆ. ಈ ಕ್ರಮದಲ್ಲಿ ಇತ್ತೀಚಿನ ಅಧ್ಯಯನವೊಂದರಲ್ಲಿ ಸಂವೇದನಾಶೀಲ ವಿಷಯಗಳು ಬೆಳಕಿಗೆ ಬಂದಿವೆ. ಈ ಅಧ್ಯಯನವು ಹಚ್ಚೆ ಮತ್ತು ಲಿಂಫೋಮಾ, ರಕ್ತದ ಕ್ಯಾನ್ಸರ್ ನಡುವಿನ ಸಂಬಂಧದ ಸಾಧ್ಯತೆಯಿದೆ ಎಂದು ತೋರಿಸಿದೆ.

ಸ್ವೀಡನ್ ನ ಲಿಂಡ್ ವಿಶ್ವವಿದ್ಯಾಲಯದ ಸಂಶೋಧಕರು ನಡೆಸಿದ ಈ ಅಧ್ಯಯನದಲ್ಲಿ ಹಲವು ಸಂವೇದನಾಶೀಲ ವಿಷಯಗಳು ಬಹಿರಂಗವಾಗಿವೆ. ಈ ಅಧ್ಯಯನಕ್ಕಾಗಿ 2007 ಮತ್ತು 2017 ರ ನಡುವೆ ಲಿಂಫೋಮಾ ರೋಗನಿರ್ಣಯ ಮಾಡಿದ 20 ರಿಂದ 60 ವರ್ಷ ವಯಸ್ಸಿನ ಜನರ ಡೇಟಾವನ್ನು ಸಂಗ್ರಹಿಸಲಾಗಿದೆ .

ಟ್ಯಾಟೂ ಇಲ್ಲದವರಿಗೆ ಹೋಲಿಸಿದರೆ ಟ್ಯಾಟೂ ಹೊಂದಿರುವ ಜನರು ಲಿಂಫೋಮಾವನ್ನು ಅಭಿವೃದ್ಧಿಪಡಿಸುವ ಶೇಕಡಾ 21ರಷ್ಟು ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ ಎಂದು ಅಧ್ಯಯನವು ಕಂಡುಹಿಡಿದಿದೆ. ಕಳೆದ ಎರಡು ವರ್ಷಗಳಲ್ಲಿ ಹಚ್ಚೆ ಹಾಕಿಸಿಕೊಂಡವರು ಲಿಂಫೋಮಾವನ್ನು ಅಭಿವೃದ್ಧಿಪಡಿಸುವ ಶೇಕಡಾ 81ರಷ್ಟು ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ ಎಂದು ಅಧ್ಯಯನವು ಕಂಡುಹಿಡಿದಿದೆ. ಆದಾಗ್ಯೂ, ಟ್ಯಾಟೂ ಶಾಯಿಯಲ್ಲಿರುವ ಯಾವ ರಾಸಾಯನಿಕಗಳು ಲಿಂಫೋಮಾದ ಅಪಾಯವನ್ನು ಹೆಚ್ಚಿಸುತ್ತವೆ ಎಂಬುದನ್ನು ಅರ್ಥಮಾಡಿಕೊಳ್ಳಲು ಹೆಚ್ಚಿನ ಅಧ್ಯಯನದ ಅಗತ್ಯವಿದೆ ಎಂದು ಸಂಶೋಧಕರು ಹೇಳುತ್ತಾರೆ. ಅಲ್ಲದೆ, ಈ ಅಧ್ಯಯನವು ಟ್ಯಾಟೂಗಳು ನೇರವಾಗಿ ಕ್ಯಾನ್ಸರ್ಗೆ ಕಾರಣವೆಂದು ಸಾಬೀತುಪಡಿಸುವುದಿಲ್ಲ, ಆದರೆ ಎರಡರ ನಡುವೆ ಲಿಂಕ್ ಇರಬಹುದೆಂದು ಮಾತ್ರ ಸೂಚಿಸಿದೆ.

ಇದನ್ನೂ ಓದಿ: ಈ ಧಾನ್ಯ ಸೌಂದರ್ಯದೊಂದಿಗೆ ಆರೋಗ್ಯವನ್ನು ಹೆಚ್ಚಿಸುತ್ತೆ!

ಆದರೆ ಟ್ಯಾಟೂಗಳು ಕ್ಯಾನ್ಸರ್‌ಗೆ ಕಾರಣ ಎಂದು ಹೇಳಲು ಇನ್ನೂ ಯಾವುದೇ ಬಲವಾದ ಪುರಾವೆಗಳಿಲ್ಲ ಎಂದು ಸಂಶೋಧಕರು ಹೇಳುತ್ತಾರೆ. ಲಿಂಫೋಮಾ ಅಪರೂಪದ ಕ್ಯಾನ್ಸರ್ ಎಂದು ತಜ್ಞರು ಹೇಳುತ್ತಾರೆ. ಆದರೆ ಟ್ಯಾಟೂ ವಿಚಾರದಲ್ಲಿ ಮುನ್ನೆಚ್ಚರಿಕೆ ವಹಿಸಬೇಕು . ಶುಚಿತ್ವದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವ ಮತ್ತು ಗುಣಮಟ್ಟದ ಶಾಯಿಯನ್ನು ಬಳಸುವ ವೃತ್ತಿಪರ ಟ್ಯಾಟೂ ಕಲಾವಿದರ ಹತ್ತಿರ ಮಾತ್ರ ಹಚ್ಚೆ ಹಾಕಿಸಿಕೊಳ್ಳಬೇಕು. ಕಡಿಮೆ ಬೆಲೆಗೆ ಸಿಗುವ ಟ್ಯಾಟೂ ಹಾಕಿಸಿಕೊಳ್ಳುವುದು ಒಳ್ಳೆಯದಲ್ಲ ಎಂದು ತಜ್ಞರು ಎಚ್ಚರಿಸುತ್ತಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!