Health News: ಕೋಪ ಹೃದಯ ಸಂಬಂಧಿ ಕಾಯಿಲೆಗಳನ್ನು ಹೆಚ್ಚಿಸಬಹುದು; ಸಂಶೋಧನೆ

ಹೆಚ್ಚು ಕೋಪವು ನಮ್ಮ ರಕ್ತನಾಳಗಳನ್ನು ಆರೋಗ್ಯಕರವಾಗಿಡುವ ಎಂಡೋಥೀಲಿಯಲ್ ಕೋಶಗಳ ಮೇಲೆ ಪರಿಣಾಮ ಬೀರುತ್ತದೆ ಮತ್ತು ಹೃದಯದ ಆರೋಗ್ಯವನ್ನು ದುರ್ಬಲಗೊಳಿಸುತ್ತದೆ ಎಂದು ಸಂಶೋಧನೆ ಬಹಿರಂಗಪಡಿಸಿದೆ.

Health News: ಕೋಪ ಹೃದಯ ಸಂಬಂಧಿ ಕಾಯಿಲೆಗಳನ್ನು ಹೆಚ್ಚಿಸಬಹುದು; ಸಂಶೋಧನೆ
Follow us
ಅಕ್ಷತಾ ವರ್ಕಾಡಿ
|

Updated on: May 03, 2024 | 6:08 PM

ಕೊಲಂಬಿಯಾ ವಿಶ್ವವಿದ್ಯಾಲಯದ ವೈದ್ಯಕೀಯ ಕೇಂದ್ರದ ಸಂಶೋಧಕರು ನಡೆಸಿದ ಹೊಸ ಅಧ್ಯಯನದ ಪ್ರಕಾರ, ಕೆಲವು ನಿಮಿಷಗಳ ಕೋಪವು ನಿಮ್ಮ ಹೃದಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ತಿಳಿದುಬಂದಿದೆ. ಪುನರಾವರ್ತಿತ ಕೋಪವು ನಮ್ಮ ರಕ್ತನಾಳಗಳನ್ನು ಆರೋಗ್ಯಕರವಾಗಿಡುವ ಎಂಡೋಥೀಲಿಯಲ್ ಕೋಶಗಳ ಮೇಲೆ ಪರಿಣಾಮ ಬೀರುತ್ತದೆ ಮತ್ತು ಹೃದಯದ ಆರೋಗ್ಯವನ್ನು ದುರ್ಬಲಗೊಳಿಸುತ್ತದೆ ಎಂದು ಸಂಶೋಧನೆ ಬಹಿರಂಗಪಡಿಸಿದೆ.

ಜನರು ಪ್ರತಿದಿನವೂ ಕೋಪ, ಆತಂಕ ಮತ್ತು ಖಿನ್ನತೆಯಂತಹ ನಕಾರಾತ್ಮಕ ಭಾವನೆಗಳನ್ನು ಅನುಭವಿಸುವುದು ಸಹಜ ಎಂದು ಅಧ್ಯಯನದ ಲೇಖಕರು ಹೇಳಿದ್ದಾರೆ. ಈ ಭಾವನೆಗಳು ಹೃದಯ ಸಮಸ್ಯೆಗಳ ಅಪಾಯವನ್ನು ಹೆಚ್ಚಿಸಬಹುದು ಎಂಬ ಅಂಶದ ಬಗ್ಗೆ ಕೆಲವು ಸಂಶೋಧನೆಗಳಿವೆ. ಕುತೂಹಲಕಾರಿಯಾಗಿ, ಈ ಭಾವನೆಗಳ ಬಗ್ಗೆ ಹೆಚ್ಚು ತಿಳಿದಿಲ್ಲ. ಕೆಲವು ಸಂದರ್ಭಗಳಲ್ಲಿ ಒಬ್ಬ ವ್ಯಕ್ತಿಯು ಕೋಪಗೊಂಡಾಗ, ಇದು ರಕ್ತನಾಳಗಳ ಮೇಲೆ ಪರಿಣಾಮ ಬೀರುತ್ತವೆ. ಆದ್ದರಿಂದ ಕೋಪವು ಹೃದಯದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆಯೇ ಎಂದು ನೋಡಲು ಅಧ್ಯಯನವನ್ನು ವಿನ್ಯಾಸಗೊಳಿಸಲಾಗಿದೆ ಎಂದು ಸಂಶೋಧಕರು ಹೇಳಿದ್ದಾರೆ.

ಇದನ್ನೂ ಓದಿ: ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಈ ಹಣ್ಣುಗಳನ್ನು ಸೇವಿಸಿ

“ಕೋಪ, ಆತಂಕ ಮತ್ತು ಖಿನ್ನತೆ ಸೇರಿದಂತೆ ನಕಾರಾತ್ಮಕ ಭಾವನೆಗಳನ್ನು ಅನುಭವಿಸುವುದು ಸಾಮಾನ್ಯವಾಗಿದೆ ಮತ್ತು ಹೃದಯರಕ್ತನಾಳದ ಕಾಯಿಲೆಯ ಘಟನೆಗಳ ಅಪಾಯದೊಂದಿಗೆ ಸಂಬಂಧಿಸಿದೆ” ಎಂದು ಅಧ್ಯಯನವು ಹೇಳುತ್ತದೆ.

ಅಧ್ಯಯನವು 280 ಆರೋಗ್ಯವಂತ ವಯಸ್ಕರನ್ನು ಒಳಗೊಂಡಿತ್ತು, ಅವರು ಕೋಪ-ಪ್ರಚೋದಕ ಘಟನೆ, ದುಃಖದ ಘಟನೆ ಅಥವಾ ಆತಂಕ-ಪ್ರಚೋದಿಸುವ ಘಟನೆಯನ್ನು ನೆನಪಿಸಿಕೊಳ್ಳಲು ಹೇಳಿ ಸುಮಾರು ಎಂಟು ನಿಮಿಷಗಳ ಕಾಲ ತಟಸ್ಥವಾಗಿರಲು ಹೇಳಲಾಯಿತು. ಈ ವೇಳೆ ಕೋಪ ಹೃದಯದ ಆರೋಗ್ಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ ಎಂಬುದನ್ನು ಸಂಶೋಧಕರು ಕಂಡುಕೊಂಡಿದ್ದಾರೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ