ಆರೋಗ್ಯದ ವಿಷಯಕ್ಕೆ ಬಂದಾಗ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡುವುದು ಅಗತ್ಯವಾಗಿದೆ. ಇದು ಯಾವುದೇ ಕಾಯಿಲೆಯನ್ನು ಪ್ರಾರಂಭಿಕ ಹಂತದಲ್ಲೇ ಪತ್ತೆ ಹಚ್ಚಿ ಚಿಕಿತ್ಸೆ ನೀಡಲು ಸಹಾಯಕವಾಗಿದೆ. ವಿಶೇಷವಾಗಿ 50 ವರ್ಷಕ್ಕಿಂತ ಮೇಲ್ಪಟ್ಟ ಜನರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅತ್ಯಂತ ಅವಶ್ಯಕವಾಗಿದೆ. ಜೀವನಶೈಲಿಯ ಅಂಶಗಳಾದ ತಂಬಾಕು ಮತ್ತು ಆಲ್ಕೋಹಾಲ್ ಬಳಕೆ, ಆಹಾರ ಮತ್ತು ಕಳಪೆ ದೈಹಿಕ ಚಟುವಟಿಕೆಗಳು ಕ್ಯಾನ್ಸರ್, ಮಧುಮೇಹ, ಸ್ಥೂಲಕಾಯತೆ ಮತ್ತು ಹೃದಯರಕ್ತನಾಳದ ಕಾಯಿಲೆಗಳಂತಹ ಅಸಂಖ್ಯಾತ ದೀರ್ಘಕಾಲದ ಆರೋಗ್ಯ ಪರಿಸ್ಥಿತಿಗಳೊಂದಿಗೆ ನಿಕಟ ಸಂಬಂಧ ಹೊಂದಿವೆ.
ರಕ್ತದೊತ್ತಡ ಪರೀಕ್ಷೆ:
ಡಾ.ಜಾನಕಿರಾಮ್ ಬೊಬ್ಬಿಲ್ಲಪತಿಯವರ ಪ್ರಕಾರ, 50 ವರ್ಷ ಮೇಲ್ಪಟ್ಟ ವಯಸ್ಕ ಪುರುಷರಿಗೆ, ಅಧಿಕ ರಕ್ತದೊತ್ತಡ ಅಪಾಯಕಾರಿಯಾಗಿದೆ ಏಕೆಂದರೆ ಇದು ಹೃದಯಾಘಾತ ಮತ್ತು ಪಾರ್ಶ್ವವಾಯು ಮತ್ತು ಮೂತ್ರಪಿಂಡದಂತಹ ಮಾರಣಾಂತಿಕ ರೋಗಗಳಿಗೆ ಕಾರಣವಾಗಬಹುದು ಎಂದು ಹೇಳುತ್ತಾರೆ.
ಮೂತ್ರಪಿಂಡದ ಕಾರ್ಯ ಪರೀಕ್ಷೆ:
ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಹೊಂದಿರುವ ಪ್ರತಿಯೊಬ್ಬ ವ್ಯಕ್ತಿಯು ಗಂಭೀರ ಮೂತ್ರಪಿಂಡದ ಕಾಯಿಲೆಗಳಿಗೆ ಕಾರಣವಾಗಬಹುದು. ಆದ್ದರಿಂದ ಮೂತ್ರಪಿಂಡದ ಕಾರ್ಯ ಪರೀಕ್ಷೆಗಳನ್ನು ಮಾಡುವುದು ಅತ್ಯಂತ ಅಗತ್ಯವಾಗಿದೆ ಎಂದು ತಜ್ಞರು ಹೇಳುತ್ತಾರೆ.
ಇದನ್ನೂ ಓದಿ: ಹವಾಮಾನ ಬದಲಾವಣೆಯು ಹೊಟ್ಟೆ ಉಬ್ಬರಕ್ಕೆ ಕಾರಣವಾಗಬಹುದು; ಪೌಷ್ಟಿಕತಜ್ಞರ ಸಲಹೆಗಳು ಇಲ್ಲಿವೆ
ಬ್ಲಡ್ ಶುಗರ್ ಸ್ಕ್ರೀನಿಂಗ್:
45 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರೂ ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಪರೀಕ್ಷಿಸುವುದು ಅಗತ್ಯವಾಗಿದೆ. ತೂಕ ನಷ್ಟ, ಚಿಕ್ಕ ಗಾಯ ಗುಣವಾಗಲು ಸಾಕಷ್ಟು ಸಮಯ ತೆಗೆದುಕೊಳ್ಳುವುದು ಅಥವಾ ಗುಣವಾಗದೇ ಇರುವುದು, ಆಗಾಗ ಬಾಯಾರಿಕೆ ಇಂತಹ ಲಕ್ಷಣಗಳು ನಿಮ್ಮಲ್ಲಿ ಕಂಡುಬಂದರೆ ಬ್ಲಡ್ ಶುಗರ್ ಸ್ಕ್ರೀನಿಂಗ್ ಪರೀಕ್ಷೆ ಅತ್ಯಂತ ಅಗತ್ಯ ಎಂದು ಡಾ.ಜಾನಕಿರಾಮ್ ಹೇಳುತ್ತಾರೆ.
ವಯಸ್ಸು ಹೆಚ್ಚಾಗುತ್ತಿದ್ದಂತೆ ಮೂಳೆಗಳು ದುರ್ಬಲಗೊಳ್ಳುತ್ತಾ ಹೋಗುತ್ತವೆ. ಇದು ಮೊಣಕಾಲಿನ ಕೀಳು ನೋವು, ಬೆನ್ನು ನೋವಿಗೆ ಕಾರಣವಾಗುತ್ತದೆ. ಆದ್ದರಿಂದ ಮೂಳೆಗಳ ಆರೋಗ್ಯದ ದೃಷ್ಟಿಯಿಂದ ವೈದ್ಯರಲ್ಲಿ ಅಗತ್ಯ ಸಲಹೆಗಳನ್ನು ತೆಗೆದುಕೊಳ್ಳುವುದು ಅವಶ್ಯಕ ಎಂದು ಡಾ.ಜಾನಕಿರಾಮ್ ಹೇಳುತ್ತಾರೆ.
ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: