AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ನಿದ್ರೆಯಿಂದ ಖಿನ್ನತೆ ಹೆಚ್ಚಾಗುತ್ತಾ?; ನಿದ್ರೆಗೂ ಮಾನಸಿಕ ಆರೋಗ್ಯಕ್ಕೂ ಇರುವ ನಂಟೇನು?

Sleeping Benefits: ಅಪರೂಪಕ್ಕೊಮ್ಮೆ ಸರಿಯಾಗಿ ನಿದ್ರೆ ಆಗದಿದ್ದರೆ ಆ ಬಗ್ಗೆ ಚಿಂತಿಸಬೇಕಾದ ಅಗತ್ಯವಿಲ್ಲ. ಆದರೆ, ನಿದ್ರಾಹೀನತೆಯೇ ದೊಡ್ಡ ಸಮಸ್ಯೆಯಾದಾಗ ಹಲವಾರು ಆರೋಗ್ಯ ಸಂಬಂಧಿ ಸಮಸ್ಯೆಗಳು ಎದುರಾಗುತ್ತವೆ.

Health Tips: ನಿದ್ರೆಯಿಂದ ಖಿನ್ನತೆ ಹೆಚ್ಚಾಗುತ್ತಾ?; ನಿದ್ರೆಗೂ ಮಾನಸಿಕ ಆರೋಗ್ಯಕ್ಕೂ ಇರುವ ನಂಟೇನು?
ಸಂಗ್ರಹ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Nov 26, 2021 | 5:08 PM

Share

ನವದೆಹಲಿ: ರಾತ್ರಿಯ ನಿದ್ರೆ ಎಷ್ಟು ಮುಖ್ಯ ಎಂಬುದು ಬಹುತೇಕರಿಗೆ ತಿಳಿದಿಲ್ಲ. ಒಳ್ಳೆಯ ನಿದ್ರೆಯಿಂದ ದೇಹಕ್ಕೆ ವಿಶ್ರಾಂತಿ ಸಿಗುವುದು ಮಾತ್ರವಲ್ಲದೆ ತೂಕವನ್ನು ಇಳಿಸಲು ಕೂಡ ಸಹಾಯವಾಗುತ್ತದೆ. ಮಾನಸಿಕ ಮತ್ತು ದೈಹಿಕ ಆಯಾಸದಿಂದ ಮುಕ್ತಿ ಪಡೆಯಲು, ನವ ಚೈತನ್ಯವನ್ನು ಪಡೆಯಲು ನಿದ್ರೆ ಸಹಾಯ ಮಾಡುತ್ತದೆ. ಆದರೂ ಕೆಲವು ಕಾರಣಗಳಿಂದಾಗಿ ನೀವು ಸಾಕಷ್ಟು ಪ್ರಮಾಣದ ನಿದ್ರೆ ಮಾಡಲು ಸಾಧ್ಯವಾಗದಿದ್ದರೆ ಅದು ಒತ್ತಡ, ಕಿರಿಕಿರಿಗೆ ಕಾರಣವಾಗುತ್ತದೆ. ಅದರಿಂದ ದೈನಂದಿನ ಕಾರ್ಯಗಳನ್ನು ನಡೆಸಲು ಸಾಧ್ಯವಾಗದೇ ಇರಬಹುದು. ಅಪರೂಪಕ್ಕೊಮ್ಮೆ ಸರಿಯಾಗಿ ನಿದ್ರೆ ಆಗದಿದ್ದರೆ ಆ ಬಗ್ಗೆ ಚಿಂತಿಸಬೇಕಾದ ಅಗತ್ಯವಿಲ್ಲ. ಆದರೆ, ನಿದ್ರಾಹೀನತೆಯೇ ದೊಡ್ಡ ಸಮಸ್ಯೆಯಾದಾಗ ಹಲವಾರು ಆರೋಗ್ಯ ಸಂಬಂಧಿ ಸಮಸ್ಯೆಗಳು ಎದುರಾಗುತ್ತವೆ.

ನಿದ್ರೆ ಸಮಸ್ಯೆಯಿಂದ ಬಳಲುವ ರೋಗಿಗಳಿಗೆ ನಿದ್ರೆ ಮಾಡುವಾಗ ಉಸಿರಾಟದ ತೊಂದರೆ ಉಂಟಾಗುವ ಸಾಧ್ಯತೆಗಳಿರುತ್ತವೆ. ಗಂಟಲು ಮತ್ತು ನಾಲಿಗೆಯ ಹಿಂದೆ ಇರುವ ಮೇಲ್ಭಾಗದ ಶ್ವಾಸನಾಳದಲ್ಲಿ ಮೃದು ಅಂಗಾಂಶಗಳಲ್ಲಿನ ಕುಸಿತದಿಂದ ಈ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಇದಕ್ಕೆ ಸರಿಯಾದ ಸಮಯದಲ್ಲಿ ಚಿಕಿತ್ಸೆ ನೀಡದಿದ್ದರೆ ಆರೋಗ್ಯದ ಮೇಲೆ ಗಂಭೀರ ಪರಿಣಾಮಗಳನ್ನು ಉಂಟುಮಾಡಬಹುದು. ಹಾರ್ವರ್ಡ್ ಹೆಲ್ತ್ ಪ್ರಕಾರ, ಈ ಅಂಗಾಂಶಗಳು ನಿಮ್ಮ ನಿದ್ರೆಯ ಸಮಯದಲ್ಲಿ ವಿಶ್ರಾಂತಿ ಪಡೆಯುವ ಸಾಧ್ಯತೆಯಿದೆ. ಇದರಿಂದ ಉಸಿರಾಟದ ತೊಂದರೆ ಮತ್ತು ಅಸಮರ್ಪಕ ನಿದ್ರೆಯ ಸಮಸ್ಯೆ ಎದುರಾಗುತ್ತದೆ.

ಸೌದಿ ಮೂಲದ ಪೈಲಟ್‌ಗಳನ್ನು ಆಧರಿಸಿದ ಅಧ್ಯಯನವು ಆಯಾಸ ಮತ್ತು ಖಿನ್ನತೆಯು ನಿದ್ರಾ ಹೀನತೆಯ ಪರಿಣಾಮಗಳಾಗಿವೆ. ಇದಕ್ಕೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡಬೇಕು ಎಂದು ತಿಳಿಸಿದೆ. ನಿದ್ರೆಯ ಸಮಸ್ಯೆ ಹೊಂದಿರುವ ರೋಗಿಗಳು ದುರ್ಬಲ ಮಾನಸಿಕ ಆರೋಗ್ಯವನ್ನು ಸಹ ಎದುರಿಸುತ್ತಾರೆ. ಹಾಗೇ, ಅದು ಅವರ ದೈನಂದಿನ ಕಾರ್ಯಕ್ಷಮತೆಯ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಏಕಾಗ್ರತೆ ಸಮಸ್ಯೆ, ಕಿರಿಕಿರಿ ಹೆಚ್ಚಾಗುತ್ತದೆ.

ಸ್ಲೀಪ್ ಅಪ್ನಿಯ ಎಂಬ ಈ ಸಮಸ್ಯೆಯಿಂದ ರಕ್ತದ ಆಮ್ಲಜನಕದಲ್ಲಿ ಹಠಾತ್ ಕುಸಿತ ಉಂಟಾಗುತ್ತದೆ. ಹೃದಯದ ಆರೋಗ್ಯದ ಮೇಲೆ ಪರಿಣಾಮ ಬೀರುವ ರಕ್ತದೊತ್ತಡದ ಮಟ್ಟದಲ್ಲಿ ಏರಿಕೆಯಾಗಬಹುದು. ಮೇಯೊ ಕ್ಲಿನಿಕ್ ಪ್ರಕಾರ, ಸ್ಲೀಪ್ ಅಪ್ನಿಯ ರೋಗಿಗಳಿಗೆ ಅಧಿಕ ರಕ್ತದೊತ್ತಡ ಉಂಟಾಗುತ್ತದೆ. ಅಧ್ಯಯನಗಳ ಪ್ರಕಾರ, ಸ್ಲೀಪ್ ಅಪ್ನಿಯಾ ಹೊಂದಿರುವ ರೋಗಿಗಳು ನಿದ್ರಿಸಲು ಬಹಳ ಪರದಾಡುತ್ತಾರೆ. ಇದು ನಿದ್ರಾಹೀನತೆಯ ಮುಂದಿನ ಲಕ್ಷಣಗಳಾಗಿವೆ.

ನಿದ್ರೆ ಮಾಡುವಾಗ ಹೊಟ್ಟೆಯ ಮೇಲೆ ಭಾರ ಹಾಕಿ ಮಲಗುವ ಬದಲು ಬೆನ್ನಿನ ಮೇಲೆ ಭಾರ ಹಾಕಿ ಮಲಗುವುದರಿಂದ ನಿದ್ರೆಯ ಸಮಸ್ಯೆಯನ್ನು ನಿಯಂತ್ರಿಸಬಹುದು. ನಾವು ಮಲಗಿರುವಾಗ ಉಸಿರಾಟ ಮತ್ತು ಬೆವರುವಿಕೆಯಿಂದ ತೂಕವನ್ನು ಕಳೆದುಕೊಳ್ಳುತ್ತೇವೆ. ಹೀಗಾಗಿ, ನಿದ್ರೆಯ ಕೊರತೆಯು ತೂಕ ಹೆಚ್ಚಾಗಲು ಕಾರಣವಾಗಬಹುದು. ನಿದ್ರೆಯ ಸಮಸ್ಯೆಯು ನಾವು ತಿನ್ನುವ ಆಹಾರ, ಹೆಚ್ಚಿನ ಹಸಿವು ಮತ್ತು ಕ್ಯಾಲೋರಿ ಸೇವನೆ, ಕಡಿಮೆ ದೈಹಿಕ ಚಟುವಟಿಕೆ, ತೂಕ ಹೆಚ್ಚಳದೊಂದಿಗೆ ಸಂಬಂಧಿಸಿದೆ ಎಂದು ಅಧ್ಯಯನಗಳು ತಿಳಿಸಿವೆ.

ಚೆನ್ನಾಗಿ ನಿದ್ರೆ ಮಾಡುವುದರಿಂದ ಕ್ಯಾಲೋರಿ ಸೇವನೆಯ ಹೆಚ್ಚಳವನ್ನು ತಡೆಯಬಹುದು. ಸರಿಯಾದ ಎಂಟು ಗಂಟೆಗಳ ನಿದ್ರೆಯನ್ನು ಪಡೆಯುವುದು ಕ್ಯಾಲೋರಿ ಸೇವನೆ ಮತ್ತು ಹಸಿವು ಹೆಚ್ಚಾಗುವುದನ್ನು ತಡೆಯಲು ಸಹಾಯ ಮಾಡುತ್ತದೆ. ಇದು ಸಾಮಾನ್ಯವಾಗಿ ನೀವು ನಿದ್ರೆಯಿಂದ ವಂಚಿತರಾದಾಗ ಸಂಭವಿಸುತ್ತದೆ. ಬೇಗ ಮಲಗುವುದರಿಂದ ತಡರಾತ್ರಿ ತಿಂಡಿಯನ್ನು ತಿನ್ನುವ ಅಭ್ಯಾಸವನ್ನು ತಡೆಯಬಹುದು. ಇದರಿಂದ ತೂಕ ಕಡಿಮೆಯಾಗುತ್ತದೆ. ನೀವು ಜಾಸ್ತಿ ಹೊತ್ತು ಎಚ್ಚರವಾಗಿದ್ದಷ್ಟೂ ಏನಾದರೂ ತಿನ್ನಬೇಕೆಂಬ ಆಸೆ ಹೆಚ್ಚಾಗುತ್ತದೆ. ಇದರಿಂದ ತೂಕ ಹೆಚ್ಚಾಗುತ್ತದೆ. ದೈಹಿಕ ಚಟುವಟಿಕೆಯನ್ನು ಹೆಚ್ಚಿಸಿದರೆ ನಿದ್ರೆ ತಂತಾನೇ ಬರುತ್ತದೆ. ನಿಯಮಿತ ವ್ಯಾಯಾಮ ಮಾಡುವುದರಿಂದ ನಿದ್ರಾಹೀನತೆ ಕಡಿಮೆಯಾಗುತ್ತದೆ. ಸಂಜೆ ದೈಹಿಕ ವ್ಯಾಯಾಮ ಮಾಡುವುದರಿಂದ ನಿಮ್ಮ ಚಯಾಪಚಯ ದರವನ್ನು 16 ಗಂಟೆಗಳವರೆಗೆ ಹೆಚ್ಚಿಸಬಹುದು.

ಇದನ್ನೂ ಓದಿ: Weight Loss: ನಿದ್ರೆ ಮಾಡುವಾಗ ತೂಕ ಜಾಸ್ತಿ ಆಗುತ್ತಾ? ಕಡಿಮೆಯಾಗುತ್ತಾ?; ಅಚ್ಚರಿಯ ಸಂಗತಿ ಇಲ್ಲಿದೆ

Good Sleep: ನಿಮಗೆ ಒಳ್ಳೆಯ ನಿದ್ರೆ ಬೇಕೆ? ಮಲಗುವ ಮುನ್ನ ಹೀಗೆ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ