Health Tips: ಅನಾನಸ್ ಹಣ್ಣಿನ ಸೇವನೆಯಿಂದ ಕ್ಯಾನ್ಸರ್ ತಡೆಗಟ್ಟಬಹುದು!

| Updated By: ಅಕ್ಷತಾ ವರ್ಕಾಡಿ

Updated on: Jun 01, 2024 | 4:43 PM

ಅನಾನಸ್ ಹಣ್ಣಿನಲ್ಲಿ ವಿಟಮಿನ್ ಸಿ, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದೆ. ಇದೆಲ್ಲದರ ಹೊರತಾಗಿ ಇದು ಕ್ಯಾನ್ಸರ್ ವಿರುದ್ಧ ಹೋರಾಡಲು ಮತ್ತು ನಿಮ್ಮ ಚರ್ಮದ ಕಾಂತಿಯನ್ನು ಹೆಚ್ಚಿಸಲು ಉಪಯುಕ್ತವಾಗಿದೆ ಎಂದು ಸಂಶೋಧನೆಗಳು ಬಹಿರಂಗ ಪಡಿಸಿದೆ. ಇದರ ಪ್ರಯೋಜನಗಳ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ.

Health Tips: ಅನಾನಸ್ ಹಣ್ಣಿನ ಸೇವನೆಯಿಂದ ಕ್ಯಾನ್ಸರ್ ತಡೆಗಟ್ಟಬಹುದು!
Pineapple
Follow us on

ಅನಾನಸ್ ಹಣ್ಣು, ಜೀರ್ಣಕ್ರಿಯೆಗೆ ಸಹಾಯ ಮಾಡುವುದರಿಂದ ಹಿಡಿದು ರೋಗನಿರೋಧಕ ಶಕ್ತಿಯನ್ನು ಸುಧಾರಿಸುವವರೆಗೆ, ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಅಲ್ಲದೆ ಈ ಹಣ್ಣಿನಲ್ಲಿ ವಿಟಮಿನ್ ಸಿ, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದೆ. ಇದೆಲ್ಲದರ ಹೊರತಾಗಿ ಇದು ಕ್ಯಾನ್ಸರ್ ವಿರುದ್ಧ ಹೋರಾಡಲು ಮತ್ತು ನಿಮ್ಮ ಚರ್ಮದ ಕಾಂತಿಯನ್ನು ಹೆಚ್ಚಿಸಲು ಉಪಯುಕ್ತವಾಗಿದೆ ಎಂದು ಸಂಶೋಧನೆಗಳು ಬಹಿರಂಗ ಪಡಿಸಿದೆ. ಇದರ ಪ್ರಯೋಜನಗಳ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ.

ಅನಾನಸ್  ಹಣ್ಣಿನ ಪ್ರಯೋಜನಗಳೇನು?

1. ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿದೆ:

ಅನಾನಸ್ ನ ಹಣ್ಣಿನಲ್ಲಿ, ದೇಹದ ದೈನಂದಿನ ಕಾರ್ಯನಿರ್ವಹಣೆಗೆ ಅಗತ್ಯವಾದ ಜೀವಸತ್ವಗಳು ಮತ್ತು ಖನಿಜಗಳು ಸಮೃದ್ಧವಾಗಿದೆ. ಇಂಟರ್ನ್ಯಾಷನಲ್ ಜನರಲ್ ಆಫ್ ನ್ಯೂಟ್ರಿಷನ್ ಅಂಡ್ ಫುಡ್ ಸೈನ್ಸಸ್ನಲ್ಲಿ ಪ್ರಕಟವಾದ ಸಂಶೋಧನೆಯ ಪ್ರಕಾರ, ಅನಾನಸ್ ಸಾಕಷ್ಟು ಪ್ರಮಾಣದ ಫೈಬರ್, ಪೊಟ್ಯಾಸಿಯಮ್ ಮತ್ತು ಕ್ಯಾಲ್ಸಿಯಂ ಅನ್ನು ಸಹ ಹೊಂದಿರುತ್ತದೆ. ಹಾಗಾಗಿ ಇದರ ಸೇವನೆ ಮಾಡುವುದು ತುಂಬಾ ಉತ್ತಮ.

2. ಅನಾನಸ್ ನಲ್ಲಿ ಆಂಟಿಆಕ್ಸಿಡೆಂಟ್ ಹೇರಳವಾಗಿವೆ:

ಆ್ಯಂಟಿಆಕ್ಸಿಡೆಂಟ್​ಗಳು ನಮ್ಮ ದೇಹವನ್ನು ಆರೋಗ್ಯವಾಗಿಡುವಲ್ಲಿ ಅತ್ಯಂತ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಜೀವಕೋಶಗಳ ಹಾನಿಯ ವಿರುದ್ಧ ಹೋರಾಡುತ್ತವೆ ಮತ್ತು ಗಂಭೀರ ರೋಗಗಳಿಂದ ರಕ್ಷಿಸುತ್ತವೆ. ಆದ್ದರಿಂದ ನಿಮ್ಮ ಆಹಾರವನ್ನು ಹೆಚ್ಚು ಆರೋಗ್ಯಕರವಾಗಿಸಲು ಈ ಹಣ್ಣಿನ ಸೇವನೆ ಮಾಡಬಹುದು.

3. ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ:

ಅನಾನಸ್ ಹಣ್ಣಿನ ಮತ್ತೊಂದು ಪ್ರಯೋಜನವೆಂದರೆ ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಜೊತೆಗೆ ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ.

4. ಫೈಬರ್ ನಿಂದ ಸಮೃದ್ಧವಾಗಿದೆ:

ಅನಾನಸ್ ಫೈಬರ್ ನ ಸಮೃದ್ಧ ಮೂಲವಾಗಿದೆ. ಇದು ಮಲಬದ್ಧತೆಯನ್ನು ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ದೀರ್ಘಕಾಲದಿಂದ ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಅನಾನಸ್ ಹಣ್ಣು ಉತ್ತಮ ಔಷಧವಾಗಿದೆ.

5. ಕ್ಯಾನ್ಸರ್ ತಡೆಗಟ್ಟಬಹುದು:

ಅನಾನಸ್ ಸೇವನೆಯು ಕ್ಯಾನ್ಸರ್ ಅನ್ನು ತಡೆಯಬಹುದು, ಏಕೆಂದರೆ ಆಕ್ಸಿಡೇಟಿವ್ ಒತ್ತಡದಿಂದಾಗಿ ಅನೇಕ ಕ್ಯಾನ್ಸರ್ ಗಳು ಬರುತ್ತವೆ. ಅನಾನಸ್ ನಲ್ಲಿ ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡುವ ಗುಣವಿದ್ದು ಆ ಮೂಲಕ ಕ್ಯಾನ್ಸರ್ ನ ಅಪಾಯವನ್ನು ಕಡಿಮೆ ಮಾಡುತ್ತದೆ. ಹಾಗಾಗಿಯೇ ಇದನ್ನು ಕ್ಯಾನ್ಸರ್ ಚಿಕಿತ್ಸೆಗೆ ಸಹ ಬಳಸಲಾಗುತ್ತದೆ ಎಂದು ಅಧ್ಯಯನವು ಹೇಳುತ್ತದೆ.

ಇದನ್ನೂ ಓದಿ: ಸ್ಮೈಲಿಂಗ್ ಡಿಪ್ರೆಶನ್ ಎಂದರೇನು? ಯಾರು ಅಪಾಯದಲ್ಲಿದ್ದಾರೆ ತಿಳಿದುಕೊಳ್ಳಿ

6. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ:

ಅನಾನಸ್ ಹಣ್ಣು ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡುವ ಮೂಲಕ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

7. ನೋವು ನಿವಾರಕ ಗುಣಗಳನ್ನು ಒಳಗೊಂಡಿದೆ:

ಅನಾನಸ್ ಉರಿಯೂತ ನಿವಾರಕ ಗುಣಗಳನ್ನು ಹೊಂದಿರುವುದರಿಂದ ನೋವಿನಿಂದ ಮುಕ್ತಿ ಸಿಗುತ್ತದೆ. ಫುಡ್ಸ್ ನಲ್ಲಿ ಪ್ರಕಟವಾದ ಅಧ್ಯಯನವು, ಸಂಧಿವಾತದಿಂದ ಉಂಟಾಗುವ ನೋವನ್ನು ಗುಣಪಡಿಸಲು ಅನಾನಸ್ ಒಳ್ಳೆಯದು ಎಂದು ಹೇಳಲಾಗುತ್ತದೆ. ಜೊತೆಗೆ ಇದು ಬೆನ್ನು ನೋವನ್ನು ನಿವಾರಣೆ ಮಾಡುತ್ತದೆ. ಜೊತೆಗೆ ಇದು ಮುಟ್ಟಿನ ನೋವನ್ನು ಕಡಿಮೆ ಮಾಡುತ್ತದೆ ಆದರೆ ಇದನ್ನು ಋತುಚಕ್ರದ ಮೊದಲ ಮೂರು ದಿನಗಳಲ್ಲಿ ಸೇವಿಸಬೇಕು.

8. ಆರೋಗ್ಯಕರ ಚರ್ಮ ನಿಮ್ಮದಾಗುತ್ತದೆ:

ಅನಾನಸ್ ನಿಮ್ಮ ಚರ್ಮವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ, ಅದರಲ್ಲಿರುವ ವಿಟಮಿನ್ ಸಿ ಸುಕ್ಕುಗಳನ್ನು ಕಡಿಮೆ ಮಾಡುತ್ತದೆ. ಜೊತೆಗೆ ಚರ್ಮಕ್ಕೆ ಹಾನಿಯಾಗುವುದನ್ನು ತಡೆಯುತ್ತದೆ. ಇದರ ಸೇವನೆಯಿಂದ ಮುಖದ ಕಾಂತಿ ಹೆಚ್ಚುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: