Cloves Health Benefits: ಲೈಂಗಿಕ ಶಕ್ತಿ ಕಡಿಮೆಯಾಗಿದ್ದರೆ ಈ ಮಸಾಲೆಯನ್ನು ಪ್ರತಿದಿನ ಸೇವನೆ ಮಾಡಿ

ಅಡುಗೆಮನೆಯಲ್ಲಿ ಬಳಸುವ ಮಸಾಲೆಗಳಲ್ಲಿ ಲವಂಗವೂ ಒಂದು. ಇದರಲ್ಲಿ ಅನೇಕ ರೀತಿಯ ಔಷಧೀಯ ಗುಣಗಳಿವೆ. ಜೀವಸತ್ವಗಳು ಮತ್ತು ಖನಿಜಗಳಿಂದ ತುಂಬಿರುವ ಶಕ್ತಿಯುತ ಗಿಡಮೂಲಿಕೆ ಎಂದು ಇದನ್ನು ಪರಿಗಣಿಸಲಾಗಿದೆ. ನಿಮಗೆ ತಿಳಿದಿರುವಂತೆ ಶೀತ, ಸೋಂಕಿನಂತಹ ಸಮಸ್ಯೆಗಳನ್ನು ಗುಣಪಡಿಸಲು ಇದನ್ನು ಬಳಸಲಾಗುತ್ತದೆ. ಆದರೆ ಈ ಲವಂಗಗಳು ಸಣ್ಣ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಮಾತ್ರ ಸೀಮಿತವಾಗಿಲ್ಲ. ಪುರುಷರ ಲೈಂಗಿಕ ಆರೋಗ್ಯಕ್ಕೂ ಲವಂಗವು ತುಂಬಾ ಪರಿಣಾಮಕಾರಿಯಾಗಿದೆ. ಹಾಗಾದರೆ ಇದನ್ನು ಯಾವ ರೀತಿ ಬಳಸಬೇಕು? ಇದರಿಂದ ಸಿಗುವ ಇನ್ನಿತರ ಆರೋಗ್ಯ ಪ್ರಯೋಜನಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

Cloves Health Benefits: ಲೈಂಗಿಕ ಶಕ್ತಿ ಕಡಿಮೆಯಾಗಿದ್ದರೆ ಈ ಮಸಾಲೆಯನ್ನು ಪ್ರತಿದಿನ ಸೇವನೆ ಮಾಡಿ
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 01, 2024 | 4:32 PM

ಭಾರತೀಯ ಅಡುಗೆಮನೆಯಲ್ಲಿ ಬಳಸುವ ಮಸಾಲೆಗಳಲ್ಲಿ ಲವಂಗವೂ ಒಂದು. ಇದರಲ್ಲಿ ಅನೇಕ ರೀತಿಯ ಔಷಧೀಯ ಗುಣಗಳಿವೆ. ಜೀವಸತ್ವಗಳು ಮತ್ತು ಖನಿಜಗಳಿಂದ ತುಂಬಿರುವ ಶಕ್ತಿಯುತ ಗಿಡಮೂಲಿಕೆ ಎಂದು ಇದನ್ನು ಪರಿಗಣಿಸಲಾಗಿದೆ. ನಿಮಗೆ ತಿಳಿದಿರುವಂತೆ ಶೀತ, ಸೋಂಕಿನಂತಹ ಸಮಸ್ಯೆಗಳನ್ನು ಗುಣಪಡಿಸಲು ಇದನ್ನು ಬಳಸಲಾಗುತ್ತದೆ. ಆದರೆ ಈ ಲವಂಗಗಳು ಸಣ್ಣ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಮಾತ್ರ ಸೀಮಿತವಾಗಿಲ್ಲ. ಪುರುಷರ ಲೈಂಗಿಕ ಆರೋಗ್ಯಕ್ಕೂ ಲವಂಗವು ತುಂಬಾ ಪರಿಣಾಮಕಾರಿಯಾಗಿದೆ. ಹಾಗಾದರೆ ಇದನ್ನು ಯಾವ ರೀತಿ ಬಳಸಬೇಕು? ಇದರಿಂದ ಸಿಗುವ ಇನ್ನಿತರ ಆರೋಗ್ಯ ಪ್ರಯೋಜನಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

ಲವಂಗ ಪುರುಷರ ಲೈಂಗಿಕ ಸಮಸ್ಯೆಗಳಿಗೆ ರಾಮಬಾಣವಾಗಿದೆ. ನೀವು ಕೂಡ ಇಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ, ಪ್ರತಿದಿನ ಮಲಗುವ ಮೊದಲು 2 ಲವಂಗ ಜಗಿದು ತಿನ್ನುವುದರಿಂದ ಅದ್ಭುತ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು ಎಂದು ತಜ್ಞರು ಹೇಳುತ್ತಾರೆ. ಈ ಎಲ್ಲಾ ಕಾರಣಗಳಿಂದ ಲವಂಗವು ಪುರುಷರಿಗೆ ವರದಾನವೆಂದು ಹೇಳಲಾಗುತ್ತದೆ. ಇವುಗಳನ್ನು ಸೇವನೆ ಮಾಡುವ ಮೂಲಕ, ನಿಮಗೆ ಪದೇ ಪದೇ ವೈದ್ಯರ ಬಳಿಗೆ ಹೋಗುವ ಅಗತ್ಯವಿರುವುದಿಲ್ಲ. ಅಲ್ಲದೆ ನಾನಾ ರೀತಿಯ ಔಷಧಗಳನ್ನು ಸೇವನೆ ಮಾಡುವ ಅವಶ್ಯಕತೆ ಬರುವುದಿಲ್ಲ.

ಲವಂಗದ ವಿಶೇಷತೆ ಏನು?

ಇದರಲ್ಲಿ ವಿಟಮಿನ್ ಕೆ, ಸತು, ತಾಮ್ರ, ಮೆಗ್ನೀಸಿಯಮ್, ಪ್ರೋಟೀನ್, ಕಬ್ಬಿಣ, ಕಾರ್ಬೋಹೈಡ್ರೇಟ್ಗಳು, ಕ್ಯಾಲ್ಸಿಯಂ ಮತ್ತು ಸೋಡಿಯಂ ಉತ್ತಮ ಪ್ರಮಾಣದಲ್ಲಿವೆ. ಅಲ್ಲದೆ ಲವಂಗದಲ್ಲಿ ವಿಟಮಿನ್ ಬಿ1, ವಿಟಮಿನ್ ಬಿ2, ವಿಟಮಿನ್ ಬಿ4, ವಿಟಮಿನ್ ಬಿ6 ಮತ್ತು ವಿಟಮಿನ್ ಬಿ9 ಕೂಡ ಇದೆ. ಈ ಪೋಷಕಾಂಶಗಳಿಂದಾಗಿ ಇದು ಪುರುಷರ ಲೈಂಗಿಕ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಆಯುರ್ವೇದ ತಜ್ಞರು ಹೇಳುತ್ತಾರೆ.

ಇದನ್ನೂ ಓದಿ: ಶಿವನ ಪೂಜೆಗೆ ಮಾತ್ರವಲ್ಲ ಆರೋಗ್ಯ ಕಾಪಾಡಿಕೊಳ್ಳಲು ಉತ್ತಮ ಈ ಎಲೆ

ಯಾವ ಸಮಸ್ಯೆಗಳಿಗೆ ಲವಂಗ ಸೇವನೆ ಮಾಡಬೇಕು?

ವೀರ್ಯಾಣುಗಳ ಸಂಖ್ಯೆ ಕಡಿಮೆಯಾದಾಗ: ಲವಂಗವನ್ನು ತಿನ್ನುವುದರಿಂದ ವೀರ್ಯಾಣುಗಳ ಸಂಖ್ಯೆ ಹೆಚ್ಚಾಗುತ್ತದೆ. ವಿಟಮಿನ್ ಗಳು, ಪ್ರೋಟೀನ್ ಗಳು ಮತ್ತು ಕಾರ್ಬೋಹೈಡ್ರೇಟ್ ಗಳಿಂದ ಸಮೃದ್ಧವಾಗಿರುವ ಲವಂಗವು ವೀರ್ಯಾಣುಗಳ ಸಂಖ್ಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಲೈಂಗಿಕ ಶಕ್ತಿ ಕಡಿಮೆಯಾದಾಗ: ಲವಂಗದಲ್ಲಿ ಪೋಷಕಾಂಶಗಳು ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ, ಇದು ಶಕ್ತಿ ಮತ್ತು ತ್ರಾಣವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಹಾಗಾಗಿ ಲವಂಗದ ಬಳಕೆ ಮಾಡುವುದರಿಂದ ಲೈಂಗಿಕ ಕಾರ್ಯಕ್ಷಮತೆ ಸುಧಾರಿಸುತ್ತದೆ.

ನಿಮಿರುವಿಕೆಗೆ: ಲವಂಗದಲ್ಲಿರುವ ಯೂಜೆನಾಲ್ ಜನನಾಂಗದ ಪ್ರದೇಶದಲ್ಲಿ ರಕ್ತ ಪರಿಚಲನೆಯನ್ನು ಹೆಚ್ಚಿಸುವ ಗುಣಗಳನ್ನು ಹೊಂದಿದೆ. ಈ ಕಾರಣದಿಂದಾಗಿ ನಿಮಿರುವಿಕೆ ಸಮಸ್ಯೆ ಇರುವವರು ಇದನ್ನು ಸೇವನೆ ಮಾಡಬಹುದು. ಇದಲ್ಲದೆ, ಲವಂಗದ ಸೇವನೆಯು ಕಾಮಾಸಕ್ತಿಯನ್ನು ಹೆಚ್ಚಿಸುತ್ತದೆ, ಇದು ಸಂತೋಷದ ಲೈಂಗಿಕ ಜೀವನಕ್ಕೆ ಮುಖ್ಯವಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ