AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಮಕಸ್ತೂರಿ ಬೀಜಗಳ ಮಹತ್ವ ತಿಳಿದಿದೆಯೇ, ಇದರಲ್ಲಿದೆ ಹಲವು ಪ್ರಯೋಜನ

ನೈಸರ್ಗಿಕವಾಗಿ ನಾವು ಕೆಲವೊಂದು ಆಹಾರ ಪದಾರ್ಥಗಳಿಂದ ನಮ್ಮಲ್ಲಿರುವ ಸಮಸ್ಯೆಗಳನ್ನು ದೂರಮಾಡಿ ಕೊಳ್ಳಬಹುದು. ಆದರೆ ಅವುಗಳ ಬಗ್ಗೆ ಸರಿಯಾದ ಮಾಹಿತಿ ಇರಬೇಕು ಅಷ್ಟೇ. ಹಿಂದಿನ ಕಾಲದಲ್ಲಿ ಅದರಲ್ಲಿಯೂ ಆಯುರ್ವೇದ ಪದ್ದತಿಯಲ್ಲಿ ಬಳಸಿಕೊಂಡು ಬಂದಿರುವ ಸಬ್ಜ ಬೀಜಗಳು ಅಥವಾ ಕಾಮಕಸ್ತೂರಿ ಬೀಜಗಳಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಇದು ನೈಸರ್ಗಿಕ ಆಹಾರ ಪದಾರ್ಥಗಳಿಗೆ ಒಂದು ಉತ್ತಮ ಉದಾಹರಣೆ ಎಂದರೆ ತಪ್ಪಾಗಲಾರದು. ಹಾಗಾದರೆ ಇದರಿಂದ ಸಿಗುವ ಉಪಯೋಗವೇನು? ಇಲ್ಲಿದೆ ಮಾಹಿತಿ.

ಕಾಮಕಸ್ತೂರಿ ಬೀಜಗಳ ಮಹತ್ವ ತಿಳಿದಿದೆಯೇ, ಇದರಲ್ಲಿದೆ ಹಲವು ಪ್ರಯೋಜನ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on:Jul 29, 2024 | 6:34 PM

Share

ಆರೋಗ್ಯಕರವಾದ ಜೀವನಶೈಲಿಯನ್ನು ಕಾಪಾಡಿಕೊಳ್ಳುವುದು ಸುಲಭದ ಮಾತಲ್ಲ. ಆದರೆ ಮನಸ್ಸು ಮಾಡಿದರೆ ಅದು ಅಸಾಧ್ಯವೂ ಅಲ್ಲ. ಅದರ ಜೊತೆಗೆ ಸಾಧ್ಯವಾದಷ್ಟು ನಮಗೆ ಎದುರಾಗುವ ಆರೋಗ್ಯ ಸಮಸ್ಯೆಗಳನ್ನು ಆರಂಭದಲ್ಲಿಯೇ ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸಬೇಕು. ಇಲ್ಲವಾದಲ್ಲಿ ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ. ನೈಸರ್ಗಿಕವಾಗಿ ನಾವು ಕೆಲವೊಂದು ಆಹಾರ ಪದಾರ್ಥಗಳಿಂದ ನಮ್ಮಲ್ಲಿರುವ ಸಮಸ್ಯೆಗಳನ್ನು ದೂರಮಾಡಿ ಕೊಳ್ಳಬಹುದು. ಆದರೆ ಅವುಗಳ ಬಗ್ಗೆ ಸರಿಯಾದ ಮಾಹಿತಿ ಇರಬೇಕು ಅಷ್ಟೇ. ಹಿಂದಿನ ಕಾಲದಲ್ಲಿ ಅದರಲ್ಲಿಯೂ ಆಯುರ್ವೇದ ಪದ್ದತಿಯಲ್ಲಿ ಬಳಸಿಕೊಂಡು ಬಂದಿರುವ ಸಬ್ಜ ಬೀಜಗಳು ಅಥವಾ ಕಾಮಕಸ್ತೂರಿ ಬೀಜಗಳಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಇದು ನೈಸರ್ಗಿಕ ಆಹಾರ ಪದಾರ್ಥಗಳಿಗೆ ಒಂದು ಉತ್ತಮ ಉದಾಹರಣೆ ಎಂದರೆ ತಪ್ಪಾಗಲಾರದು. ಹಾಗಾದರೆ ಇದರಿಂದ ಸಿಗುವ ಉಪಯೋಗವೇನು? ಇಲ್ಲಿದೆ ಮಾಹಿತಿ.

  • ಅತಿಯಾದ ಗ್ಯಾಸ್ಟಿಕ್ ಸಮಸ್ಯೆ ಇರುವವರು ಇದನ್ನು ನಿಯಮಿತವಾಗಿ ಸೇವನೆ ಮಾಡಿ. ಅಲ್ಲದೆ ಇದು ಎದೆಯುರಿ, ವಾಕರಿಕೆ ಸಮಸ್ಯೆಯನ್ನು ಕೂಡ ತಡೆಯುತ್ತದೆ.
  • ಆಂಟಿ ಆಕ್ಸಿಡೆಂಟ್ ಅಂಶ ಹೆಚ್ಚಾಗಿರುವ ಕಾಮಕಸ್ತೂರಿ ಬೀಜಗಳನ್ನು ಸೇವನೆ ಮಾಡುವುದರಿಂದ ನಿಮ್ಮ ಚರ್ಮದ ಆರೋಗ್ಯ ಹೆಚ್ಚುತ್ತದೆ. ಅಲ್ಲದೆ ಮೊಡವೆಗಳು ಹಾಗೂ ದದ್ದುಗಳು ನಿವಾರಣೆಯಾಗುತ್ತವೆ. ಜೊತೆಗೆ ಚರ್ಮದ ಕಾಂತಿ ದುಪ್ಪಟ್ಟಾಗುತ್ತದೆ.
  • ವಿಪರೀತವಾಗಿ ದೇಹದ ತೂಕ ಹೆಚ್ಚಾಗುತ್ತಿದ್ದರೆ ಅಂತವರು ನಿಯಮಿತವಾಗಿ ಸಬ್ಜಾ ಬೀಜಗಳನ್ನು ಸೇವನೆ ಮಾಡಿ. ಅಥವಾ ನೀವು ಕುಡಿಯುವ ಪಾನೀಯಗಳಲ್ಲಿ ಇದನ್ನು ಬೆರೆಸಿ ಕುಡಿಯಿರಿ. ಇಲ್ಲವಾದಲ್ಲಿ ನಿಮ್ಮ ದೇಹದ ತೂಕ ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳಿಗೆ ದಾರಿಮಾಡಿ ಕೊಡುತ್ತದೆ. ಹೀಗಾಗಿ ನೀವು ನಾರಿನಾಂಶ ಹೆಚ್ಚಾಗಿರುವ ಕಾಮಕಸ್ತೂರಿ ಬೀಜಗಳನ್ನು ಸೇವನೆ ಮಾಡಿ.
  • ಜೀರ್ಣಾಂಗ ವ್ಯವಸ್ಥೆಯ ಅಸಮತೋಲನದಿಂದ ಮತ್ತು ದೇಹದಲ್ಲಿ ಅತಿಯಾದ ಉಷ್ಣಾಂಶ ಕಂಡು ಬಂದಾಗ ಮಲಬದ್ಧತೆ ಸಮಸ್ಯೆ ಉಂಟಾಗುತ್ತದೆ. ಅಂತವರು ಕಾಮಕಸ್ತೂರಿ ಬೀಜಗಳನ್ನು ಸೇವನೆ ಮಾಡಿ. ಏಕೆಂದರೆ ಇದರಲ್ಲಿ ನಾರಿನ ಅಂಶ ಹೆಚ್ಚಾಗಿದ್ದು ನೈಸರ್ಗಿಕ ರೂಪದಲ್ಲಿಯೇ ಕರುಳಿನ ಕಲ್ಮಶಗಳು ಹೊರಗೆ ಬರುತ್ತವೆ.
  • ಈ ಕಾಮಕಸ್ತೂರಿ ಬೀಜಗಳು ನಿಮ್ಮ ಮೂಳೆಗಳ ಮತ್ತು ಮಾಂಸಖಂಡಗಳ ಆರೋಗ್ಯಕ್ಕೂ ಕೂಡ ಇದು ಬಹಳ ಪ್ರಯೋಜನಕಾರಿ ಎಂದು ಹೇಳಬಹುದು.
  • ಈ ಬೀಜಗಳು ನಿಮ್ಮ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ಆರೋಗ್ಯಕರವಾದ ದೇಹ ನಿಮ್ಮದಾಗುವ ಹಾಗೆ ಮಾಡುತ್ತದೆ.
  • ಕಾಮಕಸ್ತೂರಿ ಬೀಜಗಳು ನಿಮ್ಮ ದೇಹದಲ್ಲಿ ಇನ್ಸುಲಿನ್ ಪ್ರಮಾಣ ಅಭಿವೃದ್ಧಿಪಡಿಸಲು ಹಾಗೂ ಮಧುಮೇಹ ಸಮಸ್ಯೆಯನ್ನು ಉತ್ತಮಪಡಿಸಲು ಇದು ಅನುಕೂಲಕರವಾಗಿದೆ.
  • ಸಬ್ಜಾ ಬೀಜಗಳಲ್ಲಿ ನಿಮ್ಮ ದೇಹಕ್ಕೆ ಅಗತ್ಯವಾಗಿ ಬೇಕಾದ ವಿಟಮಿನ್ ಅಂಶಗಳು ಮತ್ತು ಖನಿಜಾಂಶ ಗಳ ಪ್ರಮಾಣ ಸಾಕಷ್ಟಿದೆ. ಅಲ್ಲದೆ ಇದರಲ್ಲಿ ಕ್ಯಾಲ್ಸಿಯಂ ಫಾಸ್ಪರಸ್ ಮತ್ತು ಮೆಗ್ನೀಷಿಯಂ ಅಂಶವೂ ಇದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:43 pm, Mon, 29 July 24

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ