
ಆರೋಗ್ಯಕರವಾದ ಜೀವನಶೈಲಿಯನ್ನು ಕಾಪಾಡಿಕೊಳ್ಳುವುದು ಸುಲಭದ ಮಾತಲ್ಲ. ಆದರೆ ಮನಸ್ಸು ಮಾಡಿದರೆ ಅದು ಅಸಾಧ್ಯವೂ ಅಲ್ಲ. ಅದರ ಜೊತೆಗೆ ಸಾಧ್ಯವಾದಷ್ಟು ನಮಗೆ ಎದುರಾಗುವ ಆರೋಗ್ಯ ಸಮಸ್ಯೆಗಳನ್ನು ಆರಂಭದಲ್ಲಿಯೇ ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸಬೇಕು. ಇಲ್ಲವಾದಲ್ಲಿ ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ. ನೈಸರ್ಗಿಕವಾಗಿ ನಾವು ಕೆಲವೊಂದು ಆಹಾರ ಪದಾರ್ಥಗಳಿಂದ ನಮ್ಮಲ್ಲಿರುವ ಸಮಸ್ಯೆಗಳನ್ನು ದೂರಮಾಡಿ ಕೊಳ್ಳಬಹುದು. ಆದರೆ ಅವುಗಳ ಬಗ್ಗೆ ಸರಿಯಾದ ಮಾಹಿತಿ ಇರಬೇಕು ಅಷ್ಟೇ. ಹಿಂದಿನ ಕಾಲದಲ್ಲಿ ಅದರಲ್ಲಿಯೂ ಆಯುರ್ವೇದ ಪದ್ದತಿಯಲ್ಲಿ ಬಳಸಿಕೊಂಡು ಬಂದಿರುವ ಸಬ್ಜ ಬೀಜಗಳು ಅಥವಾ ಕಾಮಕಸ್ತೂರಿ ಬೀಜಗಳಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಇದು ನೈಸರ್ಗಿಕ ಆಹಾರ ಪದಾರ್ಥಗಳಿಗೆ ಒಂದು ಉತ್ತಮ ಉದಾಹರಣೆ ಎಂದರೆ ತಪ್ಪಾಗಲಾರದು. ಹಾಗಾದರೆ ಇದರಿಂದ ಸಿಗುವ ಉಪಯೋಗವೇನು? ಇಲ್ಲಿದೆ ಮಾಹಿತಿ.
ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:43 pm, Mon, 29 July 24