Health Tips: ಮೊಳಕೆ ಬಂದ ಕಾಳು ಮತ್ತು ಬೆಲ್ಲವನ್ನು ಒಟ್ಟಿಗೆ ಸೇವಿಸಿದರೆ ಏನಾಗುತ್ತದೆ ಗೊತ್ತಾ? ಇಲ್ಲಿದೆ ಮಾಹಿತಿ

ಮೊಳಕೆ ಬರಿಸಿದ ಕಡಲೆ ಮತ್ತು ಬೆಲ್ಲ ಈ ಎರಡು ಆಹಾರಗಳನ್ನು ಒಟ್ಟಿಗೆ ಸೇವಿಸಿದ್ದೆ ಆದರೆ ನೀವು ಗಂಭೀರ ಕಾಯಿಲೆಗಳಿಂದ ತಪ್ಪಿಸಿಕೊಳ್ಳಬಹುದು ಎಂದು ತಜ್ಞರು ಹೇಳುತ್ತಾರೆ.

Health Tips: ಮೊಳಕೆ ಬಂದ ಕಾಳು ಮತ್ತು ಬೆಲ್ಲವನ್ನು ಒಟ್ಟಿಗೆ ಸೇವಿಸಿದರೆ ಏನಾಗುತ್ತದೆ ಗೊತ್ತಾ? ಇಲ್ಲಿದೆ ಮಾಹಿತಿ
ಮೊಳಕೆ ಬಂದ ಕಡಲೆ ಕಾಳು ಮತ್ತು ಬೆಲ್ಲ (ಸಂಗ್ರಹ ಚಿತ್ರ)
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Aug 13, 2022 | 7:00 AM

ಬೇಳೆ ಕಾಳುಗಳನ್ನು ಸೇವಿಸುವುದರಿಂದ ಅನೇಕ ಆರೋಗ್ಯ (Health)  ಪ್ರಯೋಜನಗಳಿವೆ. ಅವುಗಳಲ್ಲಿ ದ್ವಿದಳ ಧಾನ್ಯಗಳು ಸಹ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ. ಅದೇ ರೀತಿಯಾಗಿ ಬೆಲ್ಲವು ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಮತ್ತೊಂದೆಡೆ, ಬೀನ್ಸ್ ಪ್ರೋಟೀನ್, ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್ನಂತಹ ಪೋಷಕಾಂಶಗಳನ್ನು ಹೊಂದಿರುತ್ತದೆ. ಆದರೆ ಬೆಲ್ಲದಲ್ಲಿ ಕಬ್ಬಿಣ, ಮೆಗ್ನೀಷಿಯಂ ಇತ್ಯಾದಿಗಳು ಹೇರಳವಾಗಿವೆ. ಈ ಎರಡು ಆಹಾರಗಳನ್ನು ಒಟ್ಟಿಗೆ ಸೇವಿಸಿದ್ದೆ ಆದರೆ ನೀವು ಗಂಭೀರ ಕಾಯಿಲೆಗಳಿಂದ ತಪ್ಪಿಸಿಕೊಳ್ಳಬಹುದು ಎಂದು ತಜ್ಞರು ಹೇಳುತ್ತಾರೆ. ಮೊಳಕೆ ಬರಿಸಿದ ಕಡಲೆ ಮತ್ತು ಬೆಲ್ಲ ತಿನ್ನುವುದರಿಂದಾಗುವ ಪ್ರಯೋಜನಗಳನ್ನು ತಿಳಿಯೋಣ.

ಇದನ್ನೂ ಓದಿ: Tulsi Side Effects: ತುಳಸಿ ಸೇವನೆ ಬಂಜೆತನಕ್ಕೆ ಕಾರಣವಾಗಬಹುದೇ? ಪ್ರಯೋಜನಗಳು ಹಾಗೂ ಅಪಾಯವೇನು?

ಪ್ರಯೋಜನಗಳು ಹೀಗಿವೆ:

ರಕ್ತಹೀನತೆಯನ್ನು ಹೋಗಲಾಡಿಸುತ್ತದೆ:

ನೀವು ರಕ್ತದ ಕೊರತೆಯಿಂದ ಬಳಲುತ್ತಿದ್ದರೆ (ರಕ್ತಹೀನತೆ) ಮೊಳಕೆಯೊಡೆದ ಬೀನ್ಸ್ ಮತ್ತು ಬೆಲ್ಲವನ್ನು ತಿನ್ನಬಹುದು. ಏಕೆಂದರೆ ಇವೆರಡೂ ಕಬ್ಬಿಣದ ಉತ್ತಮ ಮೂಲಗಳಾಗಿವೆ. ಈ ಕಾರಣದಿಂದಾಗಿ, ರಕ್ತದಲ್ಲಿನ ಆಮ್ಲಜನಕ ಮತ್ತು ಕೆಂಪು ರಕ್ತ ಕಣಗಳು ಹೆಚ್ಚಾಗುತ್ತವೆ. ಇದು ದೇಹದಿಂದ ರಕ್ತಹೀನತೆಯನ್ನು ನಿವಾರಿಸುತ್ತದೆ.

ಮೂಳೆಗಳು ಮತ್ತು ಹಲ್ಲುಗಳು ಬಲಗೊಳ್ಳುತ್ತವೆ:

ಮೊಳಕೆಯೊಡೆದ ಕಾಳುಗಳು ಮತ್ತು ಬೆಲ್ಲವನ್ನು ಪ್ರತಿದಿನ ಸೇವಿಸುವುದರಿಂದ ನಿಮ್ಮ ಮೂಳೆಗಳು ಮತ್ತು ಹಲ್ಲುಗಳು ಬಲಗೊಳ್ಳುತ್ತವೆ. ಏಕೆಂದರೆ ಅವು ಕ್ಯಾಲ್ಸಿಯಂನಿಂದ ಸಮೃದ್ಧವಾಗಿದ್ದು, ಇದು ನಿಮ್ಮ ಮೂಳೆಗಳನ್ನು ಗಟ್ಟಿಗೊಳಿಸುತ್ತದೆ.

ಇದನ್ನೂ ಓದಿ: ಆರೋಗ್ಯವನ್ನು ಕಾಪಾಡುವ ಭಾರತೀಯ ಈ ಆಹಾರ ಪದಾರ್ಥಗಳು ವಿಶ್ವದ ಮೂಲೆ ಮೂಲೆಯಲ್ಲೂ ಫೇಮಸ್

ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ:

ಮೊಳಕೆಯೊಡೆದ ಕಡಲೆ ಮತ್ತು ಬೆಲ್ಲವು ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್‌ನಂತಹ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಅಷ್ಟೇ ಅಲ್ಲ, ಮೊಳಕೆ ಬರಿಸಿದ ಕಡಲೆ ಮತ್ತು ಬೆಲ್ಲವನ್ನು ಸೇವಿಸುವುದರಿಂದ ಹೃದಯಾಘಾತದ ಅಪಾಯ ಕಡಿಮೆಯಾಗುತ್ತದೆ ಎನ್ನುತ್ತಾರೆ ತಜ್ಞರು.

ಹೊಟ್ಟೆಗೆ ಒಳ್ಳೆಯದು:

ಮೊಳಕೆಯೊಡೆದ ಕಡಲೆಯು ಫೈಬರ್ ಅಂಶವನ್ನು ಹೊಂದಿದ್ದು, ಇದರಿಂದಾಗಿ ಜೀರ್ಣಕ್ರಿಯೆಯು ಸರಿಯಾಗಿ ನಿರ್ವಹಿಸಲ್ಪಡುತ್ತದೆ. ದೇಹದ ಚಯಾಪಚಯವು ಹೆಚ್ಚಾಗುತ್ತದೆ ಮತ್ತು ಹೊಟ್ಟೆ ಸಂಬಂಧಿ ಅನೇಕ ಸಮಸ್ಯೆಗಳನ್ನು ತೆಗೆದುಹಾಕಲಾಗುತ್ತದೆ.

ಮತ್ತಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ