Health Tips: ಅತಿಯಾಗಿ ನೀರು ಕುಡಿಯೋದು ಡೇಂಜರ್​! ಜೀವಕ್ಕೆ ಅಪಾಯ ತರಬಹುದು ಎಚ್ಚರಿಕೆ ನೀಡಿದ ತಜ್ಞರು

ಪ್ರತಿನಿತ್ಯ ಗರಿಷ್ಠ 3 ಲೀಟರ್ ನೀರು ಕುಡಿಯಿರಿ. ಇದಕ್ಕಿಂತ ಹೆಚ್ಚು ಕುಡಿದರೆ ನೀರಿನ ಅಮಲು ಉಂಟಾಗಬಹುದು. ನೀರಿನ ಅಮಲು ಎಂದರೆ ಹೆಚ್ಚು ನೀರು ಕುಡಿಯುವುದರಿಂದ ಉಂಟಾಗುವ ಸ್ಥಿತಿಯಾಗಿದೆ. ಇದು ದೇಹದಲ್ಲಿನ ಎಲೆಕ್ಟ್ರೋಲೈಟ್ ಸಮತೋಲನವನ್ನು ಅಡ್ಡಿಪಡಿಸುತ್ತದೆ. ಇದರ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ? ಇಲ್ಲಿದೆ ಮಾಹಿತಿ.

Health Tips: ಅತಿಯಾಗಿ ನೀರು ಕುಡಿಯೋದು ಡೇಂಜರ್​! ಜೀವಕ್ಕೆ ಅಪಾಯ ತರಬಹುದು ಎಚ್ಚರಿಕೆ ನೀಡಿದ ತಜ್ಞರು
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: May 29, 2024 | 5:20 PM

ದೇಹದಲ್ಲಿ ನೀರಿನಾಂಶ ಕಡಿಮೆಯಾದರೆ ಅದರಿಂದ ಹಲವು ರೀತಿಯ ಆರೋಗ್ಯ ಸಮಸ್ಯೆಗಳು (Health Problems) ಶುರುವಾಗುತ್ತವೆ. ಹೀಗಾಗಿ, ವೈದ್ಯರೂ ಕೂಡ ಸಾಕಷ್ಟು ಪ್ರಮಾಣದಲ್ಲಿ ನೀರನ್ನು ಕುಡಿಯಲು ಸಲಹೆ ನೀಡುತ್ತಾರೆ. ಚರ್ಮದ ಸಮಸ್ಯೆಗಳಾದ ಮೊಡವೆ, ಒಣ ಚರ್ಮ ಮತ್ತು ಮುಖದ ಮೇಲಿನ ಸುಕ್ಕುಗಳನ್ನು ಕಡಿಮೆ ಮಾಡಲು ಸಾಕಷ್ಟು ನೀರು ಕುಡಿಯಬೇಕು ಆದರೆ, ನಮ್ಮ ದೇಹಕ್ಕೆ ಅಗತ್ಯ ಇರುವುದಕ್ಕಿಂತ ಹೆಚ್ಚು ನೀರು ಕುಡಿದರೆ ಏನಾಗುತ್ತದೆ ಗೊತ್ತಾ?

ನೀವು ದಿನಕ್ಕೆ ಕನಿಷ್ಠ 2- 3 ಲೀಟರ್ ನೀರನ್ನು ಕುಡಿಯಬೇಕು ಎಂದು ತಜ್ಞರು ಹೇಳುತ್ತಾರೆ. ಆದರೆ, ಕೆಲವರು ದಿನಕ್ಕೆ 5-6 ಲೀಟರ್ ನೀರು ಕುಡಿಯುತ್ತಾರೆ. ಪ್ರತಿನಿತ್ಯ ಗರಿಷ್ಠ 3 ಲೀಟರ್ ನೀರು ಕುಡಿಯಿರಿ. ಇದಕ್ಕಿಂತ ಹೆಚ್ಚು ಕುಡಿದರೆ ನೀರಿನ ಅಮಲು ಉಂಟಾಗಬಹುದು. ನೀರಿನ ಅಮಲು ಎಂದರೆ ಹೆಚ್ಚು ನೀರು ಕುಡಿಯುವುದರಿಂದ ಉಂಟಾಗುವ ಸ್ಥಿತಿಯಾಗಿದೆ. ಇದು ದೇಹದಲ್ಲಿನ ಎಲೆಕ್ಟ್ರೋಲೈಟ್ ಸಮತೋಲನವನ್ನು ಅಡ್ಡಿಪಡಿಸುತ್ತದೆ.

ಇನ್ಸೈಡ್ ಎಡಿಷನ್ ಪ್ರಕಾರ, ಇತ್ತೀಚೆಗೆ ನಡೆದ ಘಟನೆಯಲ್ಲಿ, ಒಬ್ಬ ಮಹಿಳೆ ತುಂಬಾ ವೇಗವಾಗಿ ನೀರು ಕುಡಿದ ಬಳಿಕ ಸಾವನ್ನಪ್ಪಿದ್ದಾರೆ. ವರದಿಗಳು ಹೇಳುವ ಪ್ರಕಾರ, ಆ ಮಹಿಳೆಗೆ ನೀರಿನ ಅಮಲು ಉಂಟಾಗಿತ್ತು ಎನ್ನಲಾಗಿದೆ ಹಾಗಾದರೆ. ಸಾಯುವ ಸ್ಥಿತಿಗೆ ಬರುವಷ್ಟು ಇದು ಅಪಾಯಕಾರಿಯೇ? ನೀರಿನ ಅಮಲು ಎಂದರೇನು? ಸಂಪೂರ್ಣ ಮಾಹಿತಿ ಇಲ್ಲಿದೆ. ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೇ ಹೆಚ್ಚು ನೀರು ಕುಡಿಯುವುದು ಒಳ್ಳೆಯದಲ್ಲ. ಇದರಿಂದ ರಕ್ತದಲ್ಲಿನ ಸೋಡಿಯಂ ಅಪಾಯಕಾರಿ ಮಟ್ಟವನ್ನು ತಲುಪುತ್ತದೆ. ಇದು ಕೆಲವೊಮ್ಮೆ ಸೌಮ್ಯ ರೋಗಲಕ್ಷಣಗಳಿಗೆ ಕಾರಣವಾಗಬಹುದು ಮತ್ತು ತೀವ್ರತರವಾದ ಪ್ರಕರಣಗಳಲ್ಲಿ ಸಾವಿಗೂ ಕಾರಣವಾಗಬಹುದು.

ಲಕ್ಷಣಗಳೇನು?

*ತಲೆನೋವು

*ವಾಕರಿಕೆ ಅಥವಾ ವಾಂತಿ

*ಆಯಾಸ

*ಸ್ನಾಯು ಸೆಳೆತ

ಇದನ್ನೂ ಓದಿ: ಊಟದ ಬಳಿಕ ನಡೆಯುವುದು ದೇಹಕ್ಕೆ ಎಷ್ಟು ಮುಖ್ಯ ಗೊತ್ತಾ?

ತಡೆಗಟ್ಟುವುದು ಹೇಗೆ?

ದೇಹದ ಅವಶ್ಯಕತೆಗಳಿಗೆ ಅನುಗುಣವಾಗಿ ನೀರಿನ ಸೇವನೆ ಮಾಡಿ. ಒತ್ತಾಯಕ್ಕೆ ನೀರನ್ನು ಕುಡಿಯುವುದನ್ನು ತಪ್ಪಿಸಿ. ಬಾಯಾರಿಕೆ ಆದಾಗ ನೀರು ಕುಡಿಯುವುದು ನೈಸರ್ಗಿಕ ಸೂಚಕ. ಹಾಗಾಗಿ ನಿಮಗೆ ಸಾಕು ಎನ್ನುವವರೆಗೆ ನೀರನ್ನು ಕುಡಿಯಿರಿ.

ಮೂತ್ರದ ಬಣ್ಣವನ್ನು ಪರಿಶೀಲಿಸಿಕೊಳ್ಳಿ!

ಮೂತ್ರದ ಬಣ್ಣವು ನಿಮ್ಮ ದೇಹಕ್ಕೆ ನೀರಿನ ಅಗತ್ಯ ಇದೆಯೋ, ಇಲ್ಲವೋ ಎಂಬುದನ್ನು ಸೂಚಿಸುತ್ತದೆ. ಮೂತ್ರದ ಬಣ್ಣವು ತಿಳಿ ಹಳದಿ ಆಗಿದ್ದರೆ ನೀವು ಹೆಚ್ಚು ನೀರು ಕುಡಿಯಬೇಕು. ಮೂತ್ರದ ಬಣ್ಣವು ಗಾಢ ಹಳದಿಯಾಗಿದ್ದರೆ ಅದು ನಿಮ್ಮ ದೇಹವು ಅತಿಯಾಗಿ ಹೈಡ್ರೇಟ್ ಆಗಿದೆ ಎಂಬುದರ ಸಂಕೇತವಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?