AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

High Blood Pressure: ರಕ್ತದೊತ್ತಡ ಸಮಸ್ಯೆಯೇ? ಈ ಡ್ರೈ ಫ್ರೂಟ್ಸ್ ತಿನ್ನಿ..

ಅಧಿಕ ರಕ್ತದೊತ್ತಡವನ್ನು ನಿಯಂತ್ರಣಕ್ಕೆ ತರಲು ಉತ್ತಮ ಮಾರ್ಗವೆಂದರೆ ಸರಿಯಾದ ಚಿಕಿತ್ಸೆ, ಆರೋಗ್ಯಕರ ಆಹಾರ ಮತ್ತು ಜೀವನಶೈಲಿ ಬದಲಾವಣೆಗಳು. ಆದಾಗ್ಯೂ, ಕೆಲವು ಡ್ರೈ ಫ್ರೂಟ್ಸ್ಗಳನ್ನು ತಿನ್ನುವುದರಿಂದ ರಕ್ತದೊತ್ತಡವನ್ನು ನಿಯಂತ್ರಣಕ್ಕೆ ತರಬಹುದು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.

High Blood Pressure: ರಕ್ತದೊತ್ತಡ ಸಮಸ್ಯೆಯೇ? ಈ ಡ್ರೈ ಫ್ರೂಟ್ಸ್ ತಿನ್ನಿ..
ಅಕ್ಷತಾ ವರ್ಕಾಡಿ
|

Updated on: Jul 16, 2024 | 5:54 PM

Share

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರಲ್ಲಿ ಅಧಿಕ ರಕ್ತದೊತ್ತಡ (ಬಿಪಿ) ಸಮಸ್ಯೆ ಕಂಡುಬರುತ್ತದೆ. ಇದು ಸೈಲೆಂಟ್ ಕಿಲ್ಲರ್ ಆಗಿದ್ದು ಮೊದಲೇ ಚಿಕಿತ್ಸೆ ನೀಡದಿದ್ದರೆ, ಹೃದಯಾಘಾತ, ಪಾರ್ಶ್ವವಾಯು ಮತ್ತು ಮೂತ್ರಪಿಂಡ ವೈಫಲ್ಯದಂತಹ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ರಕ್ತನಾಳಗಳು ಮತ್ತು ಹೃದಯಕ್ಕೆ ರಕ್ತದ ಹರಿವು ತುಂಬಾ ವೇಗವಾಗಿದ್ದಾಗ ಅಧಿಕ ರಕ್ತದೊತ್ತಡ ಸಂಭವಿಸುತ್ತದೆ.

ಅಧಿಕ ರಕ್ತದೊತ್ತಡಕ್ಕೆ ಕಾರಣಗಳು:

ತೀವ್ರ ಒತ್ತಡ, ಧೂಮಪಾನ, ಸ್ಥೂಲಕಾಯತೆ, ಜಡ ಜೀವನಶೈಲಿ, ಸಂಸ್ಕರಿಸಿದ ಕೊಬ್ಬಿನ ಆಹಾರಗಳು, ಮದ್ಯಪಾನ ಮತ್ತು ಅತಿಯಾದ ಉಪ್ಪು ಸೇವನೆಯು ಈ ಕಾಯಿಲೆಗೆ ಪ್ರಮುಖ ಕಾರಣಗಳಾಗಿವೆ. ಅಧಿಕ ರಕ್ತದೊತ್ತಡವನ್ನು ನಿಯಂತ್ರಣಕ್ಕೆ ತರಲು ಉತ್ತಮ ಮಾರ್ಗವೆಂದರೆ ಸರಿಯಾದ ಚಿಕಿತ್ಸೆ, ಆರೋಗ್ಯಕರ ಆಹಾರ ಮತ್ತು ಇತರ ಜೀವನಶೈಲಿ ಬದಲಾವಣೆಗಳು. ಆದಾಗ್ಯೂ, ಕೆಲವು ಡ್ರೈ ಫ್ರೂಟ್ಸ್ಗಳನ್ನು ತಿನ್ನುವುದರಿಂದ ರಕ್ತದೊತ್ತಡವನ್ನು ನಿಯಂತ್ರಣಕ್ಕೆ ತರಬಹುದು.

ವಾಲ್ನಟ್:

ವಾಲ್‌ನಟ್ಸ್‌ನಲ್ಲಿ ಹೃದಯ-ಆರೋಗ್ಯಕರ ಒಮೆಗಾ-3 ಕೊಬ್ಬಿನಾಮ್ಲಗಳು ಅಧಿಕವಾಗಿವೆ. ಇದು ರಕ್ತದೊತ್ತಡವನ್ನು ಕಡಿಮೆ ಮಾಡುವುದು ಮಾತ್ರವಲ್ಲದೆ ಕಿರಿದಾದ ರಕ್ತನಾಳಗಳನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಅಲ್ಲದೆ, ವಾಲ್‌ನಟ್ಸ್‌ನಲ್ಲಿರುವ ಲಿನೋಲೆನಿಕ್ ಆಮ್ಲವು ಅಪಧಮನಿಗಳ ಆರೋಗ್ಯವನ್ನು ಸುಧಾರಿಸುತ್ತದೆ. ಇದು ಉರಿಯೂತವನ್ನು ಸಹ ಕಡಿಮೆ ಮಾಡುತ್ತದೆ.

ಪಿಸ್ತಾ:

ಈ ಪಿಸ್ತಾಗಳು ರುಚಿಕರವಾಗಿರುವುದು ಮಾತ್ರವಲ್ಲದೆ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಹೆಚ್ಚಿನ ಫೈಬರ್ ಮತ್ತು ಕಡಿಮೆ ಕ್ಯಾಲೋರಿಗಳನ್ನು ಹೊಂದಿದೆ. ಅಲ್ಲದೆ, ಇದರಲ್ಲಿರುವ ಪೊಟ್ಯಾಸಿಯಮ್ ಮತ್ತು ಆರೋಗ್ಯಕರ ಕೊಬ್ಬುಗಳು ಅಧಿಕ ರಕ್ತದೊತ್ತಡವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ. ಪಿಸ್ತಾದಲ್ಲಿರುವ ಮೊನೊಸಾಚುರೇಟೆಡ್ ಕೊಬ್ಬು ಉರಿಯೂತವನ್ನು ಕಡಿಮೆ ಮಾಡುತ್ತದೆ ಮತ್ತು ಪ್ರತಿದಿನ ಸೇವಿಸಿದರೆ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ.

ಮತ್ತಷ್ಟು ಓದಿ: ಚರ್ಮದ ಆರೋಗ್ಯದಿಂದ ಹಿಡಿದು ಮಧುಮೇಹದವರೆಗೆ ಎಲ್ಲದಕ್ಕೂ ಕರಿಬೇವಿನ ಎಲೆ!

ಖರ್ಜೂರ:

ಖರ್ಜೂರವು ನೈಸರ್ಗಿಕವಾಗಿ ಅಗತ್ಯವಾದ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ. ಇದರ ಹೆಚ್ಚಿನ ಪೊಟ್ಯಾಸಿಯಮ್ ಅಂಶವು ರಕ್ತನಾಳಗಳಲ್ಲಿನ ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಅಲ್ಲದೆ ಖರ್ಜೂರದಲ್ಲಿರುವ ಹೆಚ್ಚಿನ ಕಬ್ಬಿಣಾಂಶವು ದೇಹದಲ್ಲಿನ ಕೆಂಪು ರಕ್ತಕಣಗಳ ಪ್ರಮಾಣವನ್ನು ಹೆಚ್ಚಿಸಿ ರಕ್ತಹೀನತೆಯನ್ನು ತಡೆಯುತ್ತದೆ.

ಗೋಡಂಬಿ:

ಗೋಡಂಬಿಯಲ್ಲಿರುವ ಮೆಗ್ನೀಸಿಯಮ್ ಅಂಶವು ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡಲು ಮತ್ತು ರಕ್ತದ ಹರಿವನ್ನು ಕ್ರಮಬದ್ಧವಾಗಿಡಲು ಸಹಾಯ ಮಾಡುತ್ತದೆ. ಅಲ್ಲದೆ, ಇದರಲ್ಲಿರುವ ಪೊಟ್ಯಾಸಿಯಮ್ ಅಂಶವು ರಕ್ತದೊತ್ತಡವನ್ನು ಸ್ಥಿರವಾಗಿರಿಸುತ್ತದೆ. ಇದರಲ್ಲಿ ನಾರಿನಂಶವೂ ಹೇರಳವಾಗಿದ್ದು ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ . ಆದ್ದರಿಂದ, ಪ್ರತಿದಿನ 4-5 ಗೋಡಂಬಿ ತಿನ್ನಿರಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!