Health Tips: ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಎಲೆ ತಿನ್ನಿ, ಆರೋಗ್ಯದಲ್ಲಾಗುವ ಬದಲಾವಣೆಯನ್ನು ನೀವೇ ನೋಡಿ!
ತುಳಸಿಯಲ್ಲಿ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಕೆ ನಂತಹ ಅನೇಕ ರೀತಿಯ ಜೀವಸತ್ವಗಳಿವೆ. ಅವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ ಮತ್ತು ಚರ್ಮದ ಆರೋಗ್ಯವನ್ನು ಕಾಪಾಡುತ್ತವೆ. ಅಲ್ಲದೆ ತುಳಸಿಯಲ್ಲಿ ಕ್ಯಾಲ್ಸಿಯಂ, ಮೆಗ್ನೀಸಿಯಮ್, ರಂಜಕ, ಕಬ್ಬಿಣ ಮತ್ತು ಪೊಟ್ಯಾಸಿಯಮ್ನಂತಹ ಖನಿಜಗಳು ಸಮೃದ್ಧವಾಗಿವೆ. ಮೂಳೆಯ ಆರೋಗ್ಯ, ರಕ್ತ ಪರಿಚಲನೆ ಮತ್ತು ನರಗಳ ಆರೋಗ್ಯಕ್ಕೆ ಅವು ತುಂಬಾ ಉಪಯುಕ್ತವಾಗಿವೆ ಎಂದು ಆಯುರ್ವೇದ ತಜ್ಞರು ಹೇಳುತ್ತಾರೆ. ಹಾಗಾದರೆ ಮುಂಜಾನೆ ತುಳಸಿ ಎಲೆಗಳನ್ನು ಸೇವನೆ ಮಾಡುವುದರಿಂದ ಸಿಗುವ ಪ್ರಯೋಜನಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ.
ಸಾಂದರ್ಭಿಕ ಚಿತ್ರ
ತುಳಸಿಯ ಆರೋಗ್ಯ ಪ್ರಯೋಜನಗಳ ಬಗ್ಗೆ ಯಾರಿಗೆ ತಾನೇ ತಿಳಿದಿಲ್ಲ ಹೇಳಿ. ಇದರಲ್ಲಿ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಕೆ ನಂತಹ ಅನೇಕ ರೀತಿಯ ಜೀವಸತ್ವಗಳಿವೆ. ಅವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ ಮತ್ತು ಚರ್ಮದ ಆರೋಗ್ಯವನ್ನು ಕಾಪಾಡುತ್ತವೆ. ಅಲ್ಲದೆ ತುಳಸಿಯಲ್ಲಿ ಕ್ಯಾಲ್ಸಿಯಂ, ಮೆಗ್ನೀಸಿಯಮ್, ರಂಜಕ, ಕಬ್ಬಿಣ ಮತ್ತು ಪೊಟ್ಯಾಸಿಯಮ್ನಂತಹ ಖನಿಜಗಳು ಸಮೃದ್ಧವಾಗಿವೆ. ಮೂಳೆಯ ಆರೋಗ್ಯ, ರಕ್ತ ಪರಿಚಲನೆ ಮತ್ತು ನರಗಳ ಆರೋಗ್ಯಕ್ಕೆ ಅವು ತುಂಬಾ ಉಪಯುಕ್ತವಾಗಿವೆ ಎಂದು ಆಯುರ್ವೇದ ತಜ್ಞರು ಹೇಳುತ್ತಾರೆ. ಹಾಗಾದರೆ ಮುಂಜಾನೆ ತುಳಸಿ ಎಲೆಗಳನ್ನು ಸೇವನೆ ಮಾಡುವುದರಿಂದ ಸಿಗುವ ಪ್ರಯೋಜನಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ.
- ತುಳಸಿಯಲ್ಲಿ ಆಂಟಿಆಕ್ಸಿಡೆಂಟ್, ಬ್ಯಾಕ್ಟೀರಿಯಾ ವಿರೋಧಿ ಮತ್ತು ಉರಿಯೂತ ನಿವಾರಕ ಗುಣಗಳಿವೆ. ಮುಂಜಾನೆ ಸಮಯದಲ್ಲಿ ಈ ಎಲೆಗಳನ್ನು ಸೇವನೆ ಮಾಡುವುದರಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ದೇಹವನ್ನು ರೋಗಗಳಿಂದ ರಕ್ಷಿಸುತ್ತದೆ.
- ಕಾಲೋಚಿತ ರೋಗಗಳನ್ನು ನಿವಾರಿಸುವಲ್ಲಿ ತುಳಸಿಗಿಂತ ಮೊತ್ತೊಂದು ಉತ್ತಮ ಆಯ್ಕೆ ಇಲ್ಲ.
- ಮಳೆಗಾಲದಲ್ಲಿ ತುಳಸಿ ಎಲೆಗಳನ್ನು ತಿನ್ನುವುದರಿಂದ ಉಸಿರಾಟದ ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ. ಶೀತ, ಕೆಮ್ಮು, ಗಂಟಲು ನೋವಿನಂತಹ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.
- ತುಳಸಿ ಎಲೆಗಳನ್ನು ಜಗಿಯುವುದರಿಂದ ಅದರ ಪೋಷಕಾಂಶಗಳು ಜೀರ್ಣಕ್ರಿಯೆಯನ್ನು ಹೆಚ್ಚುತ್ತದೆ. ಇದು ಅಜೀರ್ಣತೆ ಮತ್ತು ಮಲಬದ್ಧತೆಯಂತಹ ಸಮಸ್ಯೆಗಳನ್ನು ಸಹ ಕಡಿಮೆ ಮಾಡುತ್ತದೆ. ಹಸಿವನ್ನು ನಿಯಂತ್ರಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ.
- ಮುಂಜಾನೆ ತುಳಸಿ ಎಲೆಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಮಧುಮೇಹಿಗಳಿಗೆ ತುಂಬಾ ಒಳ್ಳೆಯದು.
- ತುಳಸಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
- ಈ ಎಲೆಗಳು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ಹೃದಯರಕ್ತನಾಳದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.
- ತುಳಸಿ ಎಲೆಗಳನ್ನು ತಿನ್ನುವುದು ಮನಸ್ಸು ಒತ್ತಡ ಮುಕ್ತವಾಗುತ್ತದೆ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ.
- ಈ ಎಲೆಗಳು ಹಲ್ಲುಗಳು ಮತ್ತು ಒಸಡುಗಳ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
- ತುಳಸಿ ಎಲೆಗಳ ರಸ ಅಥವಾ ಕಷಾಯದಿಂದ ಬಾಯಿ ಮುಕ್ಕಳಿಸುವುದರಿಂದ ಬಾಯಿಯ ದುರ್ವಾಸನೆಯನ್ನು ಕಡಿಮೆ ಮಾಡಿಕೊಳ್ಳಬಹುದು.
ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ