AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fennel Water: ಸೋಂಪು ಕಾಳು ನೆನೆಸಿಟ್ಟ ನೀರು ಕುಡಿಯಿರಿ; ಪ್ರಯೋಜನ ಸಾಕಷ್ಟಿವೆ

ಸೋಂಪು ಅನೇಕ ಪ್ರಯೋಜನಗಳನ್ನು ಹೊಂದಿದೆ. ಸೋಂಪು ಕಾಳು ತಿನ್ನುವುದರಿಂದ ಆಹಾರ ಬೇಗ ಜೀರ್ಣವಾಗುತ್ತದೆ. ಆದ್ದರಿಂದ ಸೋಂಪು ಕಾಳು ನೆನೆಸಿಟ್ಟ ನೀರು ಕುಡಿಯುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

Fennel Water: ಸೋಂಪು ಕಾಳು ನೆನೆಸಿಟ್ಟ ನೀರು ಕುಡಿಯಿರಿ; ಪ್ರಯೋಜನ ಸಾಕಷ್ಟಿವೆ
Fennel water
ಅಕ್ಷತಾ ವರ್ಕಾಡಿ
|

Updated on: Aug 09, 2024 | 7:55 PM

Share

ಸೋಂಪಿಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಅದರ ಬಗ್ಗೆ ಬಹುತೇಕ ಎಲ್ಲರಿಗೂ ತಿಳಿದಿದೆ. ಇದು ಭಾರತದಾದ್ಯಂತ ಅಡಿಗೆಮನೆಗಳಲ್ಲಿ ಅನಿವಾರ್ಯ ಅಂಶವಾಗಿದೆ. ಮಾಂಸಾಹಾರದ ನಂತರ ಸೋಂಪು ತಿನ್ನುವ ಅಭ್ಯಾಸ ಅನೇಕರಿಗೆ ಇದೆ. ಏಕೆಂದರೆ ಸೋಂಪು ಅನೇಕ ಪ್ರಯೋಜನಗಳನ್ನು ಹೊಂದಿದೆ. ಸೋಂಪು ಕಾಳು ತಿನ್ನುವುದರಿಂದ ಆಹಾರ ಬೇಗ ಜೀರ್ಣವಾಗುತ್ತದೆ. ಇದು ಹೊಟ್ಟೆಯ ಸಮಸ್ಯೆಗಳನ್ನು ನಿವಾರಿಸುತ್ತದೆ ಮತ್ತು ದೇಹವನ್ನು ತಂಪಾಗಿಸುತ್ತದೆ. ಹೀಗಿರುವಾಗ ಸೋಂಪು ನೀರನ್ನು ಕುಡಿಯುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಜೀರ್ಣಕ್ರಿಯೆ:

ಸೋಂಪು ನೀರನ್ನು ಕುಡಿಯುವುದರಿಂದ ಆಹಾರವನ್ನು ಬೇಗನೆ ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಜೀರ್ಣಕ್ರಿಯೆ ಸುಧಾರಿಸುತ್ತದೆ ಮತ್ತು ಗ್ಯಾಸ್ ಮತ್ತು ಅಸಿಡಿಟಿಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ.

ರೋಗನಿರೋಧಕ ಶಕ್ತಿ:

ಸೋಂಪನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತಿಂದರೆ ದೇಹದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಇದು ನಿಮ್ಮ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಮಳೆಗಾಲದಲ್ಲಿ ಇದು ನಿಮಗೆ ತುಂಬಾ ಉಪಯುಕ್ತವಾಗಿರುತ್ತದೆ.

ಮೂಳೆಗಳನ್ನು ಬಲಪಡಿಸುತ್ತದೆ:

ಸೋಂಪಿನಲ್ಲಿ ಕ್ಯಾಲ್ಸಿಯಂ ಕೂಡ ಅಧಿಕವಾಗಿದೆ. ಹಾಗಾಗಿ ಇದನ್ನು ಸೇವಿಸುವುದರಿಂದ ಮೂಳೆಗಳು ಕೂಡ ಬಲಿಷ್ಠವಾಗಿರುತ್ತವೆ. ಇದು ಮೂಳೆ ದುರ್ಬಲಗೊಳ್ಳುವಿಕೆ ಮತ್ತು ಆಸ್ಟಿಯೊಪೊರೋಸಿಸ್‌ನಂತಹ ಭವಿಷ್ಯದ ಸಮಸ್ಯೆಗಳನ್ನು ತಡೆಯುತ್ತದೆ.

ರಕ್ತಹೀನತೆಯನ್ನು ಕಡಿಮೆ ಮಾಡುತ್ತದೆ:

ಸೋಂಪಿನಲ್ಲಿ ಕಬ್ಬಿಣದ ಅಂಶ ಹೆಚ್ಚಾಗಿರುತ್ತದೆ. ರಕ್ತಹೀನತೆಯಿಂದ ಬಳಲುತ್ತಿರುವವರು ಸೋಂಪು ತಿಂದರೆ ದೇಹದಲ್ಲಿ ಕಬ್ಬಿಣಾಂಶ ಹೆಚ್ಚುತ್ತದೆ. ಆದ್ದರಿಂದ ಇದು ರಕ್ತಹೀನತೆಯ ಸಮಸ್ಯೆಯನ್ನು ತಪ್ಪಿಸುತ್ತದೆ. ಇದನ್ನು ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರೂ ತೆಗೆದುಕೊಳ್ಳಬಹುದು.

ಕಣ್ಣುಗಳಿಗೆ ಪ್ರಯೋಜನಗಳು:

ಸೋಂಪು ವಿಟಮಿನ್ ಎ ಯಲ್ಲಿ ಸಮೃದ್ಧವಾಗಿದೆ, ಇದು ದೃಷ್ಟಿ ಸುಧಾರಿಸುತ್ತದೆ. ಇದರ ನೀರನ್ನು ಪ್ರತಿದಿನ ಕುಡಿಯುವುದರಿಂದ ಕಣ್ಣಿನ ಸಮಸ್ಯೆಗಳು ನಿವಾರಣೆಯಾಗುತ್ತವೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ