Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips for Women: 40 ವರ್ಷ ದಾಟಿದ ಮಹಿಳೆಯರು ತಿನ್ನಲೇಬೇಕಾದ 8 ಆಹಾರಗಳಿವು

Food for Women Health: ಆರೋಗ್ಯಕರ ಆಹಾರ ಮತ್ತು ಉತ್ತಮ ವ್ಯಾಯಾಮದಿಂದ, ನೀವು ನಲವತ್ತರ ಹರೆಯಲ್ಲೂ ನಿಮ್ಮ ಯೌವನದ ಕಾಂತಿ ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಮಹಿಳೆಯರು ಸೇವಿಸಲೇಬೇಕಾದ ಕೆಲವು ಆಹಾರಗಳ ಬಗ್ಗೆ ಇಲ್ಲಿದೆ ಮಾಹಿತಿ.

Health Tips for Women: 40 ವರ್ಷ ದಾಟಿದ ಮಹಿಳೆಯರು ತಿನ್ನಲೇಬೇಕಾದ 8 ಆಹಾರಗಳಿವು
ಮಹಿಳೆಯರ ಆರೋಗ್ಯಕ್ಕೆ ಸಲಹೆಗಳು
Follow us
TV9 Web
| Updated By: ಸುಷ್ಮಾ ಚಕ್ರೆ

Updated on: May 02, 2022 | 9:22 PM

ನಾಲಿಗೆ ಚಪಲ ಪ್ರತಿಯೊಬ್ಬರಿಗೂ ಇರುತ್ತದೆ. ಹೊಟ್ಟೆಗೆ ಕಷ್ಟವಾಗುತ್ತದೆ ಎಂದು ಗೊತ್ತಿದ್ದರೂ ನಮಗೆ ಇಷ್ಟವಾಗುವ ಆಹಾರವನ್ನು ಸೇವಿಸಬೇಕೆಂಬ ಆಸೆಯನ್ನು ಕಂಟ್ರೋಲ್ ಮಾಡುವುದು ಕಷ್ಟ. ಆದರೆ, 40 ವರ್ಷ ದಾಟಿದ ನಂತರ ಆಹಾರದಲ್ಲಿ ನಿಯಂತ್ರಣ (Food Control) ಮಾಡಲೇಬೇಕು. ನಲವತ್ತು ವರ್ಷ ದಾಟಿದ ನಂತರ ಕೂದಲು ಉದುರುವುದು, ಮೂಳೆಗಳ ಬಲಹೀನತೆ, ಕಣ್ಣುಗಳ ಕೆಳಗೆ ಕಪ್ಪು ಕಲೆಗಳು, ಹಲ್ಲುನೋವು, ಬೆನ್ನು ನೋವು ಮುಂತಾದ ಹಲವಾರು ಸಮಸ್ಯೆಗಳು ಎದುರಾಗುತ್ತವೆ. ಆರೋಗ್ಯಕರ ಆಹಾರ ಮತ್ತು ಉತ್ತಮ ವ್ಯಾಯಾಮದಿಂದ, ನೀವು ನಲವತ್ತರ ಹರೆಯದಲ್ಲೂ ನಿಮ್ಮ ಯೌವನದ ಕಾಂತಿ ಮತ್ತು ಆರೋಗ್ಯವನ್ನು (Health) ಕಾಪಾಡಿಕೊಳ್ಳಬಹುದು. ಮಹಿಳೆಯರು ಸೇವಿಸಲೇಬೇಕಾದ ಕೆಲವು ಆಹಾರಗಳ ಬಗ್ಗೆ ಇಲ್ಲಿದೆ ಮಾಹಿತಿ.

ಕ್ಯಾಲ್ಷಿಯಂ ಹೆಚ್ಚಿರುವ ಆಹಾರ ಸೇವಿಸಿ: ಮಹಿಳೆಯರು ಹೆಚ್ಚಾಗಿ ಕ್ಯಾಲ್ಸಿಯಂ-ಭರಿತ ಆಹಾರಗಳನ್ನು ಪ್ರತಿದಿನ ಸೇವಿಸಬೇಕು. ಹಾಲಿನಲ್ಲಿ ಹೆಚ್ಚು ಪ್ರಮಾಣದ ಕ್ಯಾಲ್ಸಿಯಂ ಅಂಶ ಇರುವುದರಿಂದ ಮಹಿಳೆಯರು ತಮ್ಮ ದೈನಂದಿನ ಆಹಾರದಲ್ಲಿ ಹಾಲನ್ನು ಸೇರಿಸುವುದು ತುಂಬಾ ಒಳ್ಳೆಯದು.

ಟೊಮ್ಯಾಟೋ ಬಳಸಿ: ಸ್ತನ ಕ್ಯಾನ್ಸರ್‌ನಿಂದ ಮಹಿಳೆಯರನ್ನು ರಕ್ಷಿಸಲು ಸಹಾಯ ಮಾಡುವ ಪೋಷಕಾಂಶವಾದ ಲೈಕೋಪೀನ್‌ನಲ್ಲಿ ಸಮೃದ್ಧವಾಗಿರುವ ಟೊಮ್ಯಾಟೊಗಳನ್ನು ಮಹಿಳೆಯರು ತಿನ್ನುವುದು ಅಗತ್ಯ. 40 ವರ್ಷ ದಾಟಿದ ಬಳಿಕ ಆದಷ್ಟೂ ಹಸಿ ತರಕಾರಿ, ಹಣ್ಣುಗಳನ್ನು ಹೆಚ್ಚು ಸೇವಿಸಿ.

ಬೇಳೆ-ಕಾಳುಗಳನ್ನು ಸೇವಿಸಿ: ಮಹಿಳೆಯರು ತಮ್ಮ ಆಹಾರದಲ್ಲಿ ಬೇಳೆ-ಕಾಳುಗಳನ್ನು ಸೇರಿಸಿಕೊಳ್ಳಲು ಕಾಳಜಿ ವಹಿಸಬೇಕು. ವಿಶೇಷವಾಗಿ ಬೀನ್ಸ್ ಅನ್ನು ಹೆಚ್ಚೆಚ್ಚು ಸೇವಿಸಬೇಕು. ಏಕೆಂದರೆ ಬೀನ್ಸ್​ನಲ್ಲಿ ಪ್ರೋಟೀನ್ ಮತ್ತು ಫೈಬರ್​ ಅಂಶ ಸಮೃದ್ಧವಾಗಿದೆ. ಅವುಗಳಲ್ಲಿ ಕೊಬ್ಬಿನಂಶವೂ ಕಡಿಮೆಯಿದೆ.

ಮೊಸರು ಸೇವಿಸಿ: ಮಹಿಳೆಯರು ಪ್ರತಿದಿನ ಮೊಸರು ಸೇವಿಸಬೇಕು. ಏಕೆಂದರೆ ಮೊಸರು ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಅಪಾಯವನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡುತ್ತದೆ. ಜೊತೆಗೆ ಇದು ಆರೋಗ್ಯಕರ ಕರುಳನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಮೀನು ಸೇವಿಸಿ: ಮೀನಿನಲ್ಲಿ ಒಮೆಗಾ-3 ಕೊಬ್ಬಿನಾಮ್ಲಗಳಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಮೀನು ತಿನ್ನುವುದರಿಂದ ಚರ್ಮದ ಸಮಸ್ಯೆಗಳು, ಹೃದ್ರೋಗ ಮತ್ತು ಪಾರ್ಶ್ವವಾಯುವನ್ನು ತಡೆಯಬಹುದು.

ಬ್ರೊಕೊಲಿ ಬಳಸಿ: ಬ್ರೊಕೊಲಿ ಮಹಿಳೆಯರಿಗೆ ಬಹಳ ಉತ್ತಮ ಆಹಾರವಾಗಿದೆ. ಬ್ರೊಕೊಲಿ, ಹೂಕೋಸು ಮತ್ತು ಬ್ರಸೆಲ್ಸ್ ಮೊಗ್ಗುಗಳಂತಹ ಕ್ರೂಸಿಫೆರಸ್ ತರಕಾರಿಗಳು ಕ್ಯಾನ್ಸರ್ ವಿರುದ್ಧ ಹೋರಾಡಲು ನಮ್ಮ ದೇಹಕ್ಕೆ ಸಹಾಯ ಮಾಡುತ್ತವೆ.

ಬೆರಿ ಹಣ್ಣುಗಳು: ಈ ಸೂಪರ್‌ಫ್ರೂಟ್‌ಗೆ ಯಾವುದೇ ಪರಿಚಯದ ಅಗತ್ಯವಿಲ್ಲ. ಅಮೆರಿಕಾದಲ್ಲಿ ಬೆರ್ರಿ ಹಣ್ಣುಗಳು ತುಂಬಾ ಸಾಮಾನ್ಯವಾಗಿದ್ದು, ಇದರಲ್ಲಿ ಸಾಕಷ್ಟು ಆರೋಗ್ಯಕರ ಅಂಶಗಳಿವೆ. ಹೀಗಾಗಿ, ಹೆಚ್ಚು ಬೆರಿ ಹಣ್ಣುಗಳನ್ನು ಸೇವಿಸಿ.

ಆರೋಗ್ಯಕ್ಕೆ ಸಂಬಂಧಿಸಿದ ಹೆಚ್ಚಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಾದಾಮಿ: ಬಾದಾಮಿಯು ಬೈಬಲ್​ನ ಕಾಲದಿಂದಲೂ ಇದೆ. ಇದು ಹೃದಯದ ಆರೋಗ್ಯಕ್ಕೆ ಬಹಳ ಮುಖ್ಯವಾದುದಾಗಿದೆ. ಕರುಳಿನ ಅಸ್ವಸ್ಥತೆಗಳು ಮತ್ತು ಅತಿಸಾರದಂತಹ ಹೊಟ್ಟೆ ಸಮಸ್ಯೆಗಳನ್ನು ಬಾದಾಮಿ ಕಡಿಮೆ ಮಾಡುತ್ತದೆ. ಅಲ್ಲದೆ, ಕ್ಯಾಲ್ಸಿಯಂ ಹೀರಿಕೊಳ್ಳುವಿಕೆಯನ್ನು ಹೆಚ್ಚಿಸುತ್ತದೆ. ನಿಮ್ಮ ದೇಹದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಪ್ರತಿದಿನ ಬೆರಳೆಣಿಕೆಯಷ್ಟು ಬಾದಾಮಿ ತಿನ್ನಿರಿ. ಬಾದಾಮಿ ಬೀಜಗಳಲ್ಲಿ ವಿಟಮಿನ್ ಇ ಅಧಿಕವಾಗಿದ್ದು, ಹೃದ್ರೋಗದ ಅಪಾಯ ಕಡಿಮೆಯಾಗುತ್ತದೆ.

ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ