Ash Gourd: ಬೂದುಗುಂಬಳಕಾಯಿ ಸಿಹಿ ತಿಂಡಿ ಮಾಡಲು ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು

| Updated By: ಅಕ್ಷಯ್​ ಪಲ್ಲಮಜಲು​​

Updated on: Aug 26, 2024 | 3:38 PM

ಬೂದುಗುಂಬಳಕಾಯಿಯಿಂದ ಅನೇಕ ರೀತಿಯ ಭಕ್ಷ್ಯಗಳನ್ನು ತಯಾರಿಸುತ್ತೇವೆ. ಇವುಗಳಿಂದ ಕೆಲವರು ಹಲ್ವಾ, ಪೇಡಾ ಇನ್ನಿತರ ಸಿಹಿ ತಿಂಡಿಗಳನ್ನು ತಯಾರಿಸುತ್ತಾರೆ. ಇವು ಸಾಮಾನ್ಯವಾಗಿ ಕೆಲವೇ ಕೆಲವು ಪದಾರ್ಥಗಳನ್ನು ಮಾಡಲು ಬಳಕೆಯಾಗುತ್ತದೆಯಾದರೂ, ಕುಂಬಳಕಾಯಿಯಲ್ಲಿ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳಿವೆ. ಆದರೆ ಇದರಲ್ಲಿ ಬಹಳಷ್ಟು ಪೋಷಕಾಂಶಗಳು ಸಮೃದ್ಧವಾಗಿದೆ ಎಂದು ಅನೇಕ ಜನರಿಗೆ ತಿಳಿದಿಲ್ಲ. ಹಾಗಾದರೆ ಇದರ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಯಾವ ರೀತಿಯ ಪ್ರಯೋಜನಗಳಿವೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

Ash Gourd: ಬೂದುಗುಂಬಳಕಾಯಿ ಸಿಹಿ ತಿಂಡಿ ಮಾಡಲು ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು
ಬೂದುಗುಂಬಳಕಾಯಿ
Follow us on

ಬೂದುಗುಂಬಳಕಾಯಿಯ ಬಗ್ಗೆ ಗೊತ್ತಿಲ್ಲದವರು ಯಾರೂ ಇಲ್ಲ. ಸಾಮಾನ್ಯವಾಗಿ ಇದರಿಂದ ಅನೇಕ ರೀತಿಯ ಭಕ್ಷ್ಯಗಳನ್ನು ತಯಾರಿಸುತ್ತೇವೆ. ಇವುಗಳಿಂದ ಕೆಲವರು ಹಲ್ವಾ, ಪೇಡಾ ಇನ್ನಿತರ ಸಿಹಿ ತಿಂಡಿಗಳನ್ನು ತಯಾರಿಸುತ್ತಾರೆ. ಇವು ಸಾಮಾನ್ಯವಾಗಿ ಕೆಲವೇ ಕೆಲವು ಪದಾರ್ಥಗಳನ್ನು ಮಾಡಲು ಬಳಕೆಯಾಗುತ್ತದೆಯಾದರೂ, ಕುಂಬಳಕಾಯಿಯಲ್ಲಿ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳಿವೆ. ಆದರೆ ಇದರಲ್ಲಿ ಬಹಳಷ್ಟು ಪೋಷಕಾಂಶಗಳು ಸಮೃದ್ಧವಾಗಿದೆ ಎಂದು ಅನೇಕ ಜನರಿಗೆ ತಿಳಿದಿಲ್ಲ. ಹಾಗಾದರೆ ಇದರ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಯಾವ ರೀತಿಯ ಪ್ರಯೋಜನಗಳಿವೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಈ ತರಕಾರಿ ಎಲ್ಲಾ ಋತುಗಳಲ್ಲಿಯೂ ಲಭ್ಯವಿದ್ದು ಇದರ ಬೆಲೆ ಕೂಡ ಅಗ್ಗವಾಗಿದೆ. ಕುಂಬಳಕಾಯಿಯಲ್ಲಿ ವಿಟಮಿನ್ ಸಿ, ಕ್ಯಾಲ್ಸಿಯಂ, ಮೆಗ್ನೀಸಿಯಮ್, ರಂಜಕ, ಕಬ್ಬಿಣ, ಪೊಟ್ಯಾಸಿಯಮ್ ಮತ್ತು ಸತುವಿನಂತಹ ವಿವಿಧ ಜೀವಸತ್ವಗಳು, ಪೋಷಕಾಂಶಗಳು ಮತ್ತು ಖನಿಜಗಳಿವೆ. ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ ಮತ್ತು ಅನೇಕ ರೋಗಗಳ ವಿರುದ್ಧ ಹೋರಾಡುತ್ತವೆ. ಅದಕ್ಕಾಗಿಯೇ ಆರೋಗ್ಯ ತಜ್ಞರು ಕುಂಬಳಕಾಯಿಗಳನ್ನು ನಿಯಮಿತವಾಗಿ ನಿಮ್ಮ ಆಹಾರದಲ್ಲಿ ಸೇವನೆ ಮಾಡಿ ಎಂದು ಹೇಳುತ್ತಾರೆ.

ಇದನ್ನೂ ಓದಿ: ಬೆಣ್ಣೆ ಸೇವನೆ ಮಾಡುವುದರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನವಿದೆ ನೋಡಿ

ಬೂದುಗುಂಬಳಕಾಯಿ ಸೇವನೆ ಮಾಡುವುದರಿಂದ ಮೆದುಳಿನ ಕಾರ್ಯವನ್ನು ಹೆಚ್ಚಿಸುತ್ತವೆ. ಹೊಟ್ಟೆಯಲ್ಲಿ ಹುಣ್ಣುಗಳಾಗಿದ್ದರೆ ಇದನ್ನು ನಿಯಮಿತವಾಗಿ ತಿನ್ನುವುದರಿಂದ ಸಮಸ್ಯೆಯನ್ನು ತ್ವರಿತವಾಗಿ ಗುಣಪಡಿಸಬಹುದು. ಅಲ್ಲದೆ ಕುಂಬಳಕಾಯಿ ಸೇವನೆ ಮಾಡುವುದರಿಂದ ದೇಹ ತಂಪಾಗಿರುತ್ತದೆ. ಜೊತೆಗೆ ನಿದ್ರಾಹೀನತೆಯ ಸಮಸ್ಯೆಯನ್ನು ನಿವಾರಣೆ ಮಾಡುತ್ತದೆ. ಇದರಿಂದ ಮಾಡುವ ಜ್ಯೂಸ್ ಕೂಡ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಇದನ್ನು ಸೇವನೆ ಮಾಡುವ ಮೊದಲು ನಿಮ್ಮ ವೈದ್ಯರನ್ನು ಸಂಪರ್ಕಿಸಿ. ಅಲ್ಲದೆ ಇದನ್ನು ನಿಯಮಿತವಾಗಿ ಸೇವನೆ ಮಾಡಿ. ಈ ಬಳ್ಳಿಯನ್ನು ಮನೆಗಳಲ್ಲಿ ನೀವು ಕೂಡ ಬೆಳೆಸಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ