Health Tips: ಈ ಐದು ಬೀಜಗಳನ್ನು ಸೇವಿಸುವುದರಿಂದ ಆಗುವ ಆರೋಗ್ಯಕರ ಪ್ರಯೋಜನಗಳು
ಚಿಯಾ ಬೀಜಗಳು, ಕುಂಬಳಕಾಯಿ ಬೀಜಗಳು ಮತ್ತು ಅಗಸೆ ಬೀಜಗಳಂತಹ ಅನೇಕ ರೀತಿಯ ಬೀಜಗಳನ್ನು ಸೇವಿಸುವುದರಿಂದ ತೂಕ ನಷ್ಟದಿಂದ ಹಿಡಿದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವವರೆಗೆ ಅನೇಕ ಆರೋಗ್ಯ ಪ್ರಯೋಜನಗಳನ್ನು ಒದಗಿಸುತ್ತದೆ.
ಹಣ್ಣುಗಳು ಮತ್ತು ತರಕಾರಿಗಳ ಕೆಲವು ಬೀಜಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಅದರಂತೆ ಉತ್ತಮ ಪೌಷ್ಟಿಕಾಂಶ ಹೊಂದಿರುವ ಹಾಗೂ ಪೋಷಕಾಂಶಗಳನ್ನು ದೇಹಕ್ಕೆ ಒದಗಿಸುವ ಚಿಯಾ ಬೀಜಗಳು, ಕುಂಬಳಕಾಯಿ ಬೀಜಗಳು ಮತ್ತು ಅಗಸೆ ಬೀಜಗಳನ್ನು ಸೇವಿಸುವುದರಿಂದ ತೂಕ ನಷ್ಟದಿಂದ ಹಿಡಿದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವವರೆಗೆ ಅನೇಕ ಆರೋಗ್ಯ ಪ್ರಯೋಜನಗಳನ್ನು ಒದಗಿಸುತ್ತದೆ. ನೀವು ಅವುಗಳನ್ನು ಸ್ಮೂಥಿಗಳು, ಸೂಪ್‌ಗಳು ಮತ್ತು ಶೇಕ್‌ಗಳಂತಹ ಹಲವು ವಿಧಗಳಲ್ಲಿ ಸೇವಿಸಬಹುದು. ಅವುಗಳು ಅನೇಕ ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ನಿಮ್ಮನ್ನು ರಕ್ಷಿಸಲು ಸಹಾಯ ಮಾಡುತ್ತದೆ.
ಚಿಯಾ ಬೀಜಗಳು: ಇತ್ತೀಚಿನ ದಿನಗಳಲ್ಲಿ ಚಿಯಾ ಬೀಜಗಳನ್ನು ಹೆಚ್ಚಾಗಿ ಸೇವನೆ ಮಾಡುತ್ತಾರೆ. ನೀವು ಅವುಗಳನ್ನು ನಿಮ್ಮ ಆಹಾರದಲ್ಲಿ ಹಲವು ವಿಧಗಳಲ್ಲಿ ಸೇರಿಸಿಕೊಳ್ಳಬಹುದು. ಓಟ್ಸ್ನೊಂದಿಗೆ ಬೆರೆಸಿ ನೀರಿನಲ್ಲಿ ನೆನೆಸಿ ಸೇವಿಸಬಹುದು. ಈ ಬೀಜಗಳು ಪಾಲಿಫಿನಾಲ್‌ಗಳನ್ನು ಹೊಂದಿದ್ದು, ಒಮೆಗಾ -3 ಕೊಬ್ಬನ್ನು ಹೊಂದಿರುತ್ತವೆ. ಇದು ಹೃದಯ ಸಂಬಂಧಿ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಕುಂಬಳಕಾಯಿ ಬೀಜಗಳು: ಇದರ ಸೇವನೆಯು ಹೃದಯಕ್ಕೆ ತುಂಬಾ ಪ್ರಯೋಜನಕಾರಿ. ಈ ಬೀಜಗಳು ಫಾಸ್ಫರಸ್, ಮೊನೊಸಾಚುರೇಟೆಡ್ ಮತ್ತು ಒಮೆಗಾ -6 ಕೊಬ್ಬಿನಾಮ್ಲಗಳನ್ನು ಹೊಂದಿರುತ್ತವೆ. ಅವುಗಳನ್ನು ಸೇವಿಸುವುದರಿಂದ ಹೃದಯವು ಆರೋಗ್ಯವಾಗಿರುತ್ತದೆ. ಈ ಬೀಜಗಳು ಫೈಟೊಸ್ಟೆರಾಲ್‌ಗಳನ್ನು ಸಹ ಹೊಂದಿರುತ್ತವೆ. ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಅಗಸೆ ಬೀಜಗಳು: ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುವ ಈ ಬೀಜಗಳಲ್ಲಿ ಪೊಟ್ಯಾಸಿಯಮ್ ಅಂಶ ಅಡಕವಾಗಿದೆ. ಇದು ಹೃದಯವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ಹೆಚ್ಚಿನ ಪ್ರಮಾಣದ ಪ್ರೋಟೀನ್ ಮತ್ತು ಫೈಬರ್ ಅನ್ನು ಹೊಂದಿರುವುದರಿಂದ ಅಗಸೆ ಬೀಜಗಳ ಸೇವನೆಯಿಂದ ಜೀರ್ಣಾಂಗ ವ್ಯವಸ್ಥೆಯನ್ನು ಸರಿಯಾಗಿ ನಡೆಯುವಂತೆ ಮಾಡುತ್ತವೆ.
ಸೆಣಬಿನ ಬೀಜಗಳು: ಪ್ರೋಟೀನ್‌ನ ಅತ್ಯುತ್ತಮ ಮೂಲವಾಗಿರುವ ಸೆಣಬಿನ ಬೀಜಗಳು ಅಮೈನೋ ಆಮ್ಲಗಳನ್ನು ಹೊಂದಿರುತ್ತದೆ. ಇದು ದೇಹಕ್ಕೆ ಅನೇಕ ಪ್ರಯೋಜನಗಳನ್ನು ನೀಡುತ್ತದೆ. ಈ ಬೀಜಗಳು ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿಯೋ ಅದರ ಎಣ್ಣೆಯೂ ಸಹ ಪ್ರಯೋಜನಕಾರಿಯಾಗಿದೆ. ಇದು ಹೃದಯವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ.
ಸೂರ್ಯಕಾಂತಿ ಬೀಜಗಳು: ಔಷಧೀಯ ಗುಣಗಳನ್ನು ಹೊಂದಿರುವ ಈ ಬೀಜಗಳಲ್ಲಿ ಕ್ಯಾಲ್ಸಿಯಂ, ಕಬ್ಬಿಣ ಮತ್ತು ಸತುವಿನಂತಹ ಪೋಷಕಾಂಶಗಳಿವೆ. ಇದು ಆರೋಗ್ಯಕರ ಮೂಳೆಗಳನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಈ ಬೀಜಗಳು ಸ್ತನ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುವ ಪೋಷಕಾಂಶಗಳನ್ನು ಹೊಂದಿರುತ್ತವೆ.
ಮತ್ತಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
(ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಕೇವಲ ನಿಮ್ಮ ಜ್ಞಾನಕ್ಕಾಗಿ ಮಾತ್ರ. ಹೀಗಾಗಿ ತಜ್ಞರನ್ನು ಸಂಪರ್ಕಿಸಿದ ನಂತರವೇ ಇದನ್ನು ಅನುಸರಿಸಿ)