AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Body Temperature: ದೇಹದ ಉಷ್ಣತೆಯನ್ನು ಕಡಿಮೆ ಮಾಡಲು ಇವುಗಳನ್ನು ಸೇವಿಸಿ

ಹೆಚ್ಚಿನ ದೇಹದ ಉಷ್ಣತೆಯಿಂದ ಅನೇಕ ಜನರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಾರೆ. ಇದರ ನಿವಾರಣೆಗೆ ಔಷಧಗಳನ್ನು ಬಳಸುತ್ತಾರೆ. ಆದರೆ ಹೆಚ್ಚಿನ ದೇಹದ ಉಷ್ಣತೆಯ ಸಮಸ್ಯೆಯನ್ನು ಪರಿಹರಿಸಲು ಹಣ್ಣುಗಳನ್ನು ಸೇವಿಸಿದರೂ ಉತ್ತಮ ಎನ್ನುತ್ತಾರೆ ತಜ್ಞರು.

Body Temperature: ದೇಹದ ಉಷ್ಣತೆಯನ್ನು ಕಡಿಮೆ ಮಾಡಲು ಇವುಗಳನ್ನು ಸೇವಿಸಿ
ದೇಹದ ಉಷ್ಣತೆಯನ್ನು ಕಡಿಮೆ ಮಾಡುವ ಹಣ್ಣುಗಳು
TV9 Web
| Updated By: Rakesh Nayak Manchi|

Updated on: Sep 07, 2022 | 6:59 AM

Share

ಹೆಚ್ಚಿನ ದೇಹದ ಉಷ್ಣತೆಯಿಂದ ಅನೇಕ ಜನರು ಪಾದಗಳಲ್ಲಿ ಬಿರುಕುಗಳು, ಮೂಗಿನ ರಕ್ತಸ್ರಾವಗಳು ಮತ್ತು ತುಟಿಗಳಲ್ಲಿ ಬಿರುಕುಗಳು, ಬಾಯಿ ಹುಣ್ಣು ಸೇರಿದಂತೆ ಅನೇಕ ರೀತಿಯ ಸಮಸ್ಯೆಗಳನ್ನು ಅನುಭವಿಸುತ್ತಾರೆ. ಈ ಉಷ್ಣತೆಯನ್ನು ಕಡಿಮೆ ಮಾಡಲು ಅನೇಕ ಪ್ರಯತ್ನಗಳನ್ನು ಮಾಡಲಾಗುತ್ತದೆ. ತಿಳಿದೂ ತಿಳಿಯದೆಯೂ ಕೆಲವರು ಔಷಧಗಳನ್ನು ಬಳಸುತ್ತಾರೆ. ಈ ಸಂದರ್ಭದಲ್ಲಿ ಹೆಚ್ಚಿನ ದೇಹದ ಉಷ್ಣತೆಯ ಸಮಸ್ಯೆಯನ್ನು ಪರಿಹರಿಸುವ ಐದು ಪ್ರಮುಖ ಹಣ್ಣುಗಳ ಬಗ್ಗೆ ತಜ್ಞರು ಮಾತನಾಡುತ್ತಿದ್ದಾರೆ. ಇವುಗಳನ್ನು ತಿನ್ನುವುದರಿಂದ ದೇಹದ ಉಷ್ಣತೆಯನ್ನು ಕಡಿಮೆ ಮಾಡಬಹುದು ಎಂದು ಹೇಳಲಾಗುತ್ತದೆ. ಆ ಐದು ಹಣ್ಣಗಳು ಯಾವುದು? ಅವುಗಳ ಉಪಯೋಗವೇನು ಎಂಬೂದನ್ನು ನೋಡೋಣ.

ಕಲ್ಲಂಗಡಿ ಹಣ್ಣು: ಸಾಮಾನ್ಯವಾಗಿ ಈ ಹಣ್ಣು ಬೇಸಿಗೆ ಕಾಲದಲ್ಲಿ ಹೆಚ್ಚು ಲಭ್ಯವಿರುತ್ತದೆ. ಕಲ್ಲಂಗಡಿ ಹಣ್ಣಿನಲ್ಲಿ ವಿಟಮಿನ್ ಸಿ, ಫೈಬರ್ ಮತ್ತು ಲೈಕೋಪೀನ್ ನಂತಹ ಅಂಶಗಳು ಇದ್ದು, ಕ್ಯಾನ್ಸರ್ ತಡೆಗಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದು ಉತ್ಕರ್ಷಣ ನಿರೋಧಕಗಳನ್ನು ಸಹ ಒಳಗೊಂಡಿದೆ. ಕಲ್ಲಂಗಡಿ ಸಿಟ್ರುಲಿನ್ ಮತ್ತು ಅರ್ಜಿನೈನ್ ನಂತಹ ಅಮೈನೋ ಆಮ್ಲಗಳನ್ನು ಸಹ ಹೊಂದಿದೆ. ಇವು ನೈಟ್ರಿಕ್ ಆಕ್ಸೈಡ್ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ. ಇದು ದೇಹದಲ್ಲಿ ರಕ್ತದ ಹರಿವನ್ನು ಹೆಚ್ಚಿಸುತ್ತದೆ. ಇದು ದೇಹದ ಉಷ್ಣತೆಯನ್ನು ನಿಯಂತ್ರಣದಲ್ಲಿಡುತ್ತದೆ.

ಸ್ಟ್ರಾಬೆರಿ: ಈ ಹಣ್ಣು ತುಂಬಾ ಆರೋಗ್ಯಕರವಾಗಿದ್ದು, ಇದು ಕಿತ್ತಳೆಗಿಂತ ಹೆಚ್ಚು ವಿಟಮಿನ್ ಸಿ ಅನ್ನು ಹೊಂದಿರುತ್ತದೆ. ಇದರಲ್ಲಿ ಫೈಬರ್ ಕೂಡ ಸಮೃದ್ಧವಾಗಿದೆ. ಇದು ಸ್ವತಂತ್ರ ರಾಡಿಕಲ್ ಹಾನಿಯಿಂದ ರಕ್ಷಿಸುವ ಉತ್ಕರ್ಷಣ ನಿರೋಧಕಗಳನ್ನು ಹೊಂದಿದ್ದು, ಚರ್ಮವನ್ನು ತಾಜಾವಾಗಿರಿಸುವಲ್ಲಿ ಸಹಕರಿಸುತ್ತದೆ. ದೇಹದಲ್ಲಿ ಉಷ್ಣತೆಯನ್ನೂ ನಿಯಂತ್ರಿಸುತ್ತದೆ.

ನಿಂಬೆ: ನಿಂಬೆಹಣ್ಣುಗಳು ವ್ಯಕ್ತಿಯನ್ನು ರಿಫ್ರೆಶ್ ಮಾಡುತ್ತದೆ. ಬೇಸಿಗೆಯಲ್ಲಿ ಇದನ್ನು ಸೇವಿಸುವುದರಿಂದ ಅಪಾರವಾದ ಪ್ರಯೋಜನಗಳಿವೆ. ಆದರೆ, ನಿಂಬೆ ರಸವನ್ನು ಸಾಮಾನ್ಯ ದಿನಗಳಲ್ಲಿಯೂ ಸೇವಿಸಬಹುದು. ಬೆಚ್ಚಗಿನ ನೀರು ಮತ್ತು ಜೇನುತುಪ್ಪದಲ್ಲಿ ನಿಂಬೆ ರಸವನ್ನು ಮಿಶ್ರಣ ಮಾಡಿ ಸೇವಿಸಿ. ಶೀತ, ಜ್ವರ, ಆಹಾರ ವಿಷ ಇತ್ಯಾದಿಗಳನ್ನು ಕಡಿಮೆ ಮಾಡಲು ನಿಂಬೆ ಸಹಾಯ ಮಾಡುತ್ತದೆ.

ಬಾಳೆಹಣ್ಣು: ಈ ಹಣ್ಣಿನಲ್ಲಿ ಪೊಟ್ಯಾಸಿಯಮ್ ಮತ್ತು ವಿಟಮಿನ್ ಬಿ 6 ಸಮೃದ್ಧವಾಗಿದ್ದು, ಮಲಬದ್ಧತೆಯನ್ನು ತಡೆಯಲು ಸಹಾಯ ಮಾಡುವ ಪೆಕ್ಟಿನ್ ಅನ್ನು ಹೊಂದಿದೆ. ಉತ್ತಮ ಜೀರ್ಣಕ್ರಿಯೆಗೆ ಇದು ಉತ್ತಮ ಹಣ್ಣು ಕೂಡ ಹೌದು. ಬಾಳೆಹಣ್ಣುಗಳು ಮೆಗ್ನೀಸಿಯಮ್ ಮತ್ತು ತಾಮ್ರದಿಂದಲೂ ಸಮೃದ್ಧವಾಗಿದ್ದು, ಇವು ಸ್ನಾಯುಗಳನ್ನು ವಿಶ್ರಾಂತಿ ಮಾಡಲು ಮತ್ತು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇವು ದೇಹದ ಉಷ್ಣತೆಯನ್ನು ಕಡಿಮೆ ಮಾಡುವಲ್ಲಿಯೂ ಪರಿಣಾಮಕಾರಿಯಾಗಿದೆ.

ಸೌತೆಕಾಯಿ: ಬೇಸಿಗೆಯಲ್ಲಿ ಸೌತೆಕಾಯಿ ಸೇವನೆ ಮಾಡಿದರೆ ದೇಹದ ಉಷ್ಣತೆ ಹೆಚ್ಚಾಗುವುದನ್ನು ತಡೆಯಬಹುದು. ಇದರಲ್ಲಿ ಕಡಿಮೆ ಕ್ಯಾಲೋರಿ ಇದ್ದು, ಅದೇ ರೀತಿ ನೀರಿನ ಅಂಶವೂ ಹೆಚ್ಚಿದೆ. ನಿರ್ಜಲೀಕರಣಗೊಂಡಾಗ ಸೌತೆಕಾಯಿಯನ್ನು ಸೇವಿಸುವುದರಿಂದ ಹೈಡ್ರೇಟ್ ಆಗುತ್ತದೆ. ಸೌತೆಕಾಯಿಯಿಂದಲೂ ಹೆಚ್ಚಿನ ಆರೋಗ್ಯ ಪ್ರಯೋಜನಗಳಿವೆ ಎಂದು ತಜ್ಞರು ಹೇಳುತ್ತಾರೆ.

ಮತ್ತಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?