AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ರಕ್ತವನ್ನು ಶುದ್ಧೀಕರಿಸುವ ಪರಿಣಾಮಕಾರಿ ಕ್ರಮಗಳು

ರಕ್ತ ಅಶುದ್ಧ ಅಥವಾ ವಿಷಕಾರಿಯಾದರೆ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳು ಎದುರಾಗಬಹುದು. ಹೀಗಾಗಿ ರಕ್ತವನ್ನು ಶುದ್ಧವಾಗಿಡಲು ಉತ್ತಮ ಜೀವನಶೈಲಿ ಕ್ರಮಗಳನ್ನು ಕೈಗೊಳ್ಳಲು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.

TV9 Web
| Updated By: Rakesh Nayak Manchi|

Updated on: Sep 06, 2022 | 6:10 AM

Share
ನಮ್ಮ ದೇಹದಾದ್ಯಂತ ಹಾರ್ಮೋನುಗಳಿಗೆ ಆಮ್ಲಜನಕವನ್ನು ರವಾನಿಸುವಲ್ಲಿ ರಕ್ತವು ಪ್ರಮುಖ ಪಾತ್ರ ವಹಿಸುತ್ತದೆ. ಹೀಗಿದ್ದಾಗ ರಕ್ತ ಅಶುದ್ಧ ಅಥವಾ ವಿಷಕಾರಿಯಾದರೆ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳು ಎದುರಾಗಬಹುದು. ಹೀಗಾಗಿ ರಕ್ತವನ್ನು ಶುದ್ಧವಾಗಿಡಲು ಉತ್ತಮ ಜೀವನಶೈಲಿ ಕ್ರಮಗಳನ್ನು ಕೈಗೊಳ್ಳಲು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಅದರಂತೆ ಕೆಲವು ಆಹಾರಗಳ ಸೇವನೆ ಮಾಡುವ ಮೂಲಕ ರಕ್ತದ ಕಲ್ಮಶವನ್ನು ತೆಗೆದುಹಾಕಲು ನಿಮಗೆ ಸಹಾಯ ಮಾಡುತ್ತದೆ. ಇದರ ಬಗ್ಗೆ ತಿಳಿದುಕೊಳ್ಳೋಣ.

health Tips Healthy Food Effective measures to purify the blood

1 / 5
ರಕ್ತವನ್ನು ಶುದ್ಧವಾಗಿ ಮತ್ತು ತ್ಯಾಜ್ಯದಿಂದ ಮುಕ್ತವಾಗಿಡಲು ಅತ್ಯಂತ ಪರಿಣಾಮಕಾರಿ ಮಾರ್ಗವೆಂದರೆ ಸಾಕಷ್ಟು ನೀರು ಕುಡಿಯುವುದು. ನೀರು ಕುಡಿಯುವುದರಿಂದ ಕಿಡ್ನಿ ಕಾರ್ಯ ಸುಲಭವಾಗುತ್ತದೆ. ನೀರು ನಿಮ್ಮ ರಕ್ತನಾಳಗಳನ್ನು ತೆರೆಯಲು ಸಹಾಯ ಮಾಡುತ್ತದೆ ಇದರಿಂದ ರಕ್ತವು ಉತ್ತಮವಾಗಿ ಪರಿಚಲನೆಯಾಗುತ್ತದೆ.

health Tips Healthy Food Effective measures to purify the blood

2 / 5
health Tips Healthy Food Effective measures to purify the blood

ರಕ್ತ ಶುದ್ಧೀಕರಣಕ್ಕೆ ಪ್ರಯೋಜನಕಾರಿಯಾಗುವ ಆಹಾರಗಳಲ್ಲಿ ಸೇಬು ಕೂಡ ಒಂದು. ಸೇಬುಗಳು ಪೆಕ್ಟಿನ್ ಎಂದು ಕರೆಯಲ್ಪಡುವ ಹೆಚ್ಚಿನ ಪ್ರಮಾಣದ ಕರಗುವ ಫೈಬರ್ ಅನ್ನು ಹೊಂದಿರುತ್ತವೆ. ಕರಗುವ ಫೈಬರ್ ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

3 / 5
health Tips Healthy Food Effective measures to purify the blood

ಕಾಫಿ ಆರೋಗ್ಯಕ್ಕೆ ಅನೇಕ ರೀತಿಯಲ್ಲಿ ಪ್ರಯೋಜನಕಾರಿ ಎಂದು ಅಧ್ಯಯನಗಳಲ್ಲಿ ಕಂಡುಬಂದಿದೆ. ಉತ್ತಮ ಯಕೃತ್ತಿನ ಕಾರ್ಯವನ್ನು ನಿರ್ವಹಿಸುವಲ್ಲಿ ಮಧ್ಯಮ ಪ್ರಮಾಣದ ಕೆಫೀನ್ ಸಹ ಪ್ರಯೋಜನಕಾರಿಯಾಗಿದೆ. ಆದಾಗ್ಯೂ ಕಾಫಿಯನ್ನು ಮಿತವಾಗಿ ಮಾತ್ರ ಸೇವಿಸಬೇಕು ಎಂಬುದನ್ನು ಯಾವಾಗಲೂ ನೆನಪಿನಲ್ಲಿಡಿ. ಇದರ ಅತಿಯಾದ ಸೇವನೆಯು ಹಾನಿಕಾರಕವಾಗಬಹುದು.

4 / 5
health Tips Healthy Food Effective measures to purify the blood

ಪ್ರತಿದಿನ ಖಾಲಿ ಹೊಟ್ಟೆಯಲ್ಲಿ 8-10 ಬೇವಿನ ಎಲೆಗಳನ್ನು ಸೇವಿಸುವುದು ರಕ್ತವನ್ನು ಶುದ್ಧೀಕರಿಸುವುದರ ಜೊತೆಗೆ ದೇಹಕ್ಕೆ ಅನೇಕ ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ. ಬೇವಿನ ಎಲೆಗಳು ರಕ್ತದ ಕಲ್ಮಶಗಳನ್ನು ಕಡಿಮೆ ಮಾಡುವ ಗುಣಗಳನ್ನು ಹೊಂದಿವೆ. ಇದರ ಸೇವನೆಯು ಮೊಡವೆ, ಎಸ್ಜಿಮಾ ಮತ್ತು ದದ್ದುಗಳಂತಹ ಚರ್ಮದ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಇದು ರಕ್ತ ಶುದ್ಧಿಕಾರಿಯಾಗಿ ಕಾರ್ಯನಿರ್ವಹಿಸುತ್ತದೆ. ಗಮನಿಸಬೇಕಾದ ಅಂಶವೆಂದರೆ ಓದುಗರಿಗೆ ಮಾಹಿತಿ ಮತ್ತು ಅರಿವನ್ನು ಹೆಚ್ಚಿಸಲು ಸಂಬಂಧಿಸಿದ ಲೇಖನವನ್ನು ಸಿದ್ಧಪಡಿಸಲಾಗಿದ್ದು, ಹೆಚ್ಚಿನ ವಿವರಗಳಿಗಾಗಿ ವೈದ್ಯರನ್ನು ಸಂಪರ್ಕಿಸುವುದು ಅವಶ್ಯಕ.

5 / 5
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?