AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ರಾಗಿ ರೊಟ್ಟಿ ತಿನ್ನುವುದರಿಂದ ದೇಹಕ್ಕೆ ಆಗುವ ಪ್ರಯೋಜನಗಳು

ರಾಗಿ ರೊಟ್ಟಿ ಮತ್ತು ನಾಟಿ ಕೋಳಿ ಸಾರು ಅಂದರೆ ಹೆಚ್ಚಿನವರಿಗೆ ಬಲು ಇಷ್ಟ. ರಾಗಿಯಲ್ಲಿ ಹಲವಾರು ರೀತಿಯ ಪೋಷಕಾಂಶಗಳು ಇರುವುದರಿಂದ ಆರೋಗ್ಯದ ದೃಷ್ಟಿಯಲ್ಲಿ ಇದರ ಸೇವನೆಯು ಉತ್ತಮವಾಗಿದೆ.

Health Tips: ರಾಗಿ ರೊಟ್ಟಿ ತಿನ್ನುವುದರಿಂದ ದೇಹಕ್ಕೆ ಆಗುವ ಪ್ರಯೋಜನಗಳು
ರಾಗಿ ರೊಟ್ಟಿ ತಿನ್ನುವುದರಿಂದ ದೇಹಕ್ಕೆ ಆಗುವ ಪ್ರಯೋಜನಗಳು
TV9 Web
| Edited By: |

Updated on: Sep 21, 2022 | 6:38 AM

Share

ರಾಗಿ ರೊಟ್ಟಿ ಮತ್ತು ನಾಟಿ ಕೋಳಿ ಸಾರು ಅಂದರೆ ಹೆಚ್ಚಿನವರಿಗೆ ಬಲು ಇಷ್ಟ. ರಾಗಿಯಲ್ಲಿ ಹಲವಾರು ರೀತಿಯ ಪೋಷಕಾಂಶಗಳು ಇರುವುದರಿಂದ ಆರೋಗ್ಯದ ದೃಷ್ಟಿಯಲ್ಲಿ ಇದರ ಸೇವನೆಯು ಉತ್ತಮವಾಗಿದೆ. ರಾಗಿಯನ್ನು ಮುದ್ದೆ ರೀತಿಯಲ್ಲಾದರೂ ಸೇವನೆ ಮಾಡಬಹುದು ಅಥವಾ ದೋಸೆ, ರೊಟ್ಟಿ ವಿಧಾನದಲ್ಲೂ ಸೇವನೆ ಮಾಡಬಹುದಾಗಿದೆ. ಇದನ್ನು ನಿತ್ಯ ತಿನ್ನವುದರಿಂದ ಅದರಿಂದ ಸಿಗುವ ಆರೋಗ್ಯದ ಲಾಭವನ್ನು ಪಡೆದುಕೊಳ್ಳಬಹುದು. ಇತರ ಸಿರಿಧಾನ್ಯಗಳಿಗೆ ಹೋಲಿಸಿದರೆ ರಾಗಿಯಲ್ಲಿ ಹಾಲಿಗಿಂತ ಹೆಚ್ಚು ಕ್ಯಾಲ್ಸಿಯಂ ಇದೆ. ಒಂದು ಸಂಶೋಧನೆಯ ಪ್ರಕಾರ, 100 ಗ್ರಾಂ ರಾಗಿಯಲ್ಲಿ 344 ಮಿಲಿಗ್ರಾಂ ಕ್ಯಾಲ್ಸಿಯಂ ಇದೆ. ಮೂಳೆಗಳು ಮತ್ತು ಹಲ್ಲುಗಳಿಗೆ ಕ್ಯಾಲ್ಸಿಯಂ ಬಹಳ ಮುಖ್ಯ. ಹಾಲನ್ನು ಕುಡಿಯಲು ಇಷ್ಟವಿಲ್ಲದಿದ್ದರೆ ರಾಗಿ ಹಿಟ್ಟಿನ ರೊಟ್ಟಿಯನ್ನು ಖಂಡಿತವಾಗಿ ಸೇವಿಸಿ. ಕ್ಯಾಲ್ಸಿಯಂ ಸಮೃದ್ಧವಾಗಿರುವ ಕಾರಣ ರಾಗಿಯ ಸೇವನೆಯು ಗರ್ಭಿಣಿಯರು ಮತ್ತು ಮಕ್ಕಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ವಿಶೇಷವಾಗಿ ವಯಸ್ಸಾದವರು ಇದನ್ನು ಸೇವಿಸಬೇಕು. ಹಾಗಿದ್ದರೆ ಇಂದು ರಾಗಿ ರೊಟ್ಟಿ ಸೇನವೆ ಮಾಡುವುದರಿಂದ ದೇಹದ ಆರೋಗ್ಯಕ್ಕೆ ಯಾವೆಲ್ಲಾ ಪ್ರಯೋಜನಗಳು ಸಿಗಲಿದೆ ಎಂಬುದನ್ನು ತಿಳಿಯೋಣ.

ಜೀರ್ಣಕ್ರಿಯೆ ಸುಧಾರಣೆ, ಸಕ್ಕರೆ ನಿಯಂತ್ರಣ

ರಾಗಿಯು ಫೈಬರ್​ನಲ್ಲಿ ಸಮೃದ್ಧವಾಗಿದ್ದು, ಗ್ಲೈಸೆಮಿಕ್ ಇಂಡೆಕ್ಸ್ ಆಹಾರದ ಕಡುಬಯಕೆಗಳನ್ನು ಕಡಿಮೆ ಮಾಡುತ್ತದೆ. ಇದು ಜೀರ್ಣಕ್ರಿಯೆಯ ವೇಗವನ್ನು ನಿರ್ವಹಿಸುತ್ತದೆ. ರಾಗಿಯು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಮಧುಮೇಹ ರೋಗಿಗಳಿಗೆ ರಾಗಿ ಹಿಟ್ಟಿನಿಂದ ಮಾಡಿದ ರೊಟ್ಟಿಯನ್ನು ತಿನ್ನಲು ಸಲಹೆ ನೀಡಲಾಗುತ್ತದೆ. ಬೆಳಿಗ್ಗೆ ಅಥವಾ ಮಧ್ಯಾಹ್ನದ ಊಟದಲ್ಲಿ ನಿಮ್ಮ ಆಹಾರದಲ್ಲಿ ರಾಗಿಯನ್ನು ಸೇರಿಸಿ.

ತ್ವೆಚೆಯ ಆರೋಗ್ಯಕ್ಕೆ ಪ್ರಯೋಜನ

ರಾಗಿಯು ತ್ವಚೆಯನ್ನು ದೀರ್ಘಕಾಲ ಯೌವನವಾಗಿರಿಸಲು ಅದ್ಭುತವಾಗಿ ಕೆಲಸ ಮಾಡುತ್ತದೆ. ಇದರಲ್ಲಿರುವ ಮೆಥಿಯೋನಿನ್ ಮತ್ತು ಲೈಸಿನ್‌ನಂತಹ ಅಗತ್ಯ ಅಮೈನೋ ಆಮ್ಲ ಅಂಶಗಳು ಚರ್ಮದ ಅಂಗಾಂಶವನ್ನು ಸುಕ್ಕುಗಳು ಮತ್ತು ವಯಸ್ಸಾದ ಚಿಹ್ನೆಗಳಿಂದ ರಕ್ಷಿಸುತ್ತವೆ. ಇದಲ್ಲದೆ ರಾಗಿಯು ದೇಹದಲ್ಲಿನ ವಿಟಮಿನ್ ಡಿ ಕೊರತೆಯನ್ನು ಸಹ ಪೂರೈಸುತ್ತದೆ.

ದೇಹದ ಒಟ್ಟಾರೆ ಆರೋಗ್ಯಕ್ಕೆ ರಾಗಿ ರೊಟ್ಟಿ

ಪ್ರೋಟೀನ್, ಕ್ಯಾಲ್ಸಿಯಂ ಮತ್ತು ವಿಟಮಿನ್‌ಗಳಂತಹ ಅನೇಕ ಪೋಷಕಾಂಶಗಳು ಇದರಲ್ಲಿ ಕಂಡುಬರುತ್ತವೆ. ಇದು ದೇಹವನ್ನು ಆರೋಗ್ಯಕರವಾಗಿಡಲು ಕೆಲಸ ಮಾಡುವುದಲ್ಲದೆ ಮೂಳೆಗಳನ್ನು ಬಲಗೊಳ್ಳುತ್ತವೆ. ವಯಸ್ಸಾದವರು ಅದರ ರೊಟ್ಟಿಯನ್ನು ತಿನ್ನಬೇಕು. ಇದು ಕೀಲು ನೋವಿನಿಂದ ಪರಿಹಾರವನ್ನು ನೀಡುತ್ತದೆ. ಮಾತ್ರವಲ್ಲದೆ ಉರಿಯೂತವನ್ನು ಕಡಿಮೆ ಮಾಡಲಿದ್ದು, ಸಂಧಿವಾತ ರೋಗಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಕ್ಯಾಲ್ಸಿಯಂ ಸಮೃದ್ಧವಾಗಿರುವ ರಾಗಿಯಲ್ಲಿ ರಂಜಕವೂ ಕಂಡುಬರುತ್ತದೆ. ಇದು ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡಲಿದೆ.

ಮತ್ತಷ್ಟು ಆರೋಗ್ಯ ಸುದ್ದಿಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?