AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಮಳೆಗಾಲದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಇಲ್ಲಿದೆ ಆಯುರ್ವೇದ ಸಲಹೆಗಳು

ಮಾನ್ಸೂನ್ ಸಮಯದಲ್ಲಿ ರೋಗಗಳು ಬರದಂತೆ ತಡೆಯಲು ನಮಗೆ ಹೆಚ್ಚಿನ ರೋಗನಿರೋಧಕ ಶಕ್ತಿಯ ಅಗತ್ಯವಿರುತ್ತದೆ ಹಾಗಾಗಿ ನಿಮ್ಮ ದೇಹವನ್ನು ಆರೋಗ್ಯಕರವಾಗಿಡಲು ಇಲ್ಲಿವೆ ಆಯುರ್ವೇದ ಸಲಹೆಗಳು.

Health Tips: ಮಳೆಗಾಲದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಇಲ್ಲಿದೆ ಆಯುರ್ವೇದ ಸಲಹೆಗಳು
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jul 04, 2023 | 1:57 PM

Share

ಭಾರತದಲ್ಲಿ ಮಾನ್ಸೂನ್ ಪ್ರಾರಂಭವಾಗಿದೆ, ಈ ಋತುವಿನಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದು ಮತ್ತು ದೇಹದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅವಶ್ಯಕ. ಮಾನ್ಸೂನ್ ಆಗಮನದಿಂದ ಖಂಡಿತವಾಗಿಯೂ ಶಾಖದಿಂದ ಪರಿಹಾರ ಸಿಕ್ಕಿರುವುದು ನಿಜವಾದರೂ ಈ ಋತುವಿನಲ್ಲಿ ಶೀತ, ಜ್ವರ ಮತ್ತು ಇತರ ಕಾಲೋಚಿತ ರೋಗಗಳು ಸೇರಿದಂತೆ ಅನೇಕ ರೋಗಗಳನ್ನು ಆಹ್ವಾನಿಸುತ್ತದೆ ಎಂಬುದನ್ನು ಮರೆಯ ಬಾರದು. ಹಾಗಾಗಿ ರೋಗಗಳು ಬರದಂತೆ ತಡೆಯಲು ನಮಗೆ ಹೆಚ್ಚಿನ ರೋಗನಿರೋಧಕ ಶಕ್ತಿಯ ಅಗತ್ಯವಿರುತ್ತದೆ ಹಾಗಾಗಿ ಮಾನ್ಸೂನ್ ಸಮಯದಲ್ಲಿ ನಿಮ್ಮ ದೇಹವನ್ನು ಆರೋಗ್ಯಕರವಾಗಿಡಲು ನೀವು ಈ ಆಯುರ್ವೇದ ಸಲಹೆಗಳನ್ನು ಬಳಸಬಹುದು.

ನಿಮ್ಮನ್ನು ಹೈಡ್ರೇಟ್ ಆಗಿರಿಸಿಕೊಳ್ಳಿ:

ಮಳೆಗಾಲದಲ್ಲಿ ನಿಮ್ಮ ದೇಹವನ್ನು ಯಾವಾಗಲೂ ಹೈಡ್ರೇಟ್ ಆಗಿಡುವುದು ಮೊದಲ ಮತ್ತು ಪ್ರಮುಖ ವಿಷಯವಾಗಿದೆ. ದೇಹದಿಂದ ವಿಷವನ್ನು ಹೊರಹಾಕಲು ಮತ್ತು ನಿರ್ಜಲೀಕರಣವನ್ನು ತಪ್ಪಿಸಲು ಸಾಧ್ಯವಾದಷ್ಟು ದ್ರವ ಪದಾರ್ಥ ಮತ್ತು ಜ್ಯೂಸ್ ಗಳನ್ನೂ ಕುಡಿಯಿರಿ. ಆದರೆ ನೆನಪಿಡಿ, ಆರೋಗ್ಯಕರ ಪಾನೀಯಗಳನ್ನು ಮಾತ್ರ ಸೇವಿಸಿ ಮತ್ತು ತಂಪು ಪಾನೀಯಗಳು ಅಥವಾ ಆಲ್ಕೋಹಾಲ್ ನಿಂದ ದೂರವಿರಿ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು, ಶುಂಠಿ ಚಹಾ ಅಥವಾ ತುಳಸಿ ಚಹಾವನ್ನು ತುಂಬಾ ಒಳ್ಳೆಯದು.

ತಾಜಾ ಹಣ್ಣು ಮತ್ತು ತರಕಾರಿಗಳನ್ನು ಸೇವಿಸಿ:

ನಿಮ್ಮ ಆಹಾರದಲ್ಲಿ ಹೆಚ್ಚು ತಾಜಾ ಹಣ್ಣುಗಳು ಮತ್ತು ತರಕಾರಿಗಳನ್ನು ಸೇರಿಸುವುದು ಬಹಳ ಮುಖ್ಯ. ಮಳೆಗಾಲದಲ್ಲಿ ಮಾವಿನಹಣ್ಣು, ಸೌತೆಕಾಯಿ, ಪಾಲಕ್ ನಂತಹ ಕಾಲೋಚಿತವಾಗಿ ಸಿಗುವ ಹಣ್ಣು ತರಕಾರಿಗಳನ್ನು ತಿನ್ನಬೇಕು. ಇದಲ್ಲದೆ, ವಿಟಮಿನ್ ಸಿ ಸಮೃದ್ಧ ಉತ್ಪನ್ನಗಳಾದ ನಿಂಬೆ, ಕಿತ್ತಳೆ ಮತ್ತು ಇತರ ಹಣ್ಣುಗಳನ್ನು ಸೇವಿಸಬೇಕು, ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ನಿಮ್ಮ ಆಹಾರದಲ್ಲಿ ಮಸಾಲೆಗಳ ಅಂಶವಿರಲಿ:

ಪ್ರತಿ ದಿನ ಮನೆಯಲ್ಲಿ ಮಸಾಲೆಗಳಿಂದ ಸಮೃದ್ಧವಾಗಿರುವ ಆಹಾರ ತಯಾರಿಸಿ, ಬಿಸಿ ಇರುವಾಗಲೇ ತಿನ್ನಿರಿ. ಹೀಗೆ ಮಾಡುವುದರಿಂದ ಮಳೆಗಾಲದಲ್ಲಿ ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಸಹಾಯವಾಗಲಿದೆ. ಅರಿಶಿನ, ಜೀರಿಗೆ, ಕೊತ್ತಂಬರಿ, ಕರಿಮೆಣಸು, ದಾಲ್ಚಿನ್ನಿ ಇವೆಲ್ಲವೂ ಉರಿಯೂತ ನಿವಾರಕ ಮತ್ತು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನು ಹೊಂದಿವೆ, ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ.

ಇದನ್ನೂ  ಓದಿ: Health Tips for 2023: ನಿಮ್ಮನ್ನು ಆರೋಗ್ಯಕರವಾಗಿರಿಸಿಕೊಳ್ಳಲು ಈ ಸಿಂಪಲ್ ಟಿಪ್ಸ್ ಪಾಲಿಸಿ

ಜಂಕ್ ಫುಡ್ ನಿಂದ ದೂರವಿರಿ:

ಮಾನ್ಸೂನ್ ನಲ್ಲಿ ಫಾಸ್ಟ್ ಅಥವಾ ಜಂಕ್ ಫುಡ್ ತಿನ್ನಬೇಡಿ. ಇದಲ್ಲದೆ, ಹುರಿದ ಆಹಾರ ಮತ್ತು ಸಂಸ್ಕರಿಸಿದ ಆಹಾರಗಳನ್ನು ಸಹ ತಪ್ಪಿಸಬೇಕು ಏಕೆಂದರೆ ಅವು ನಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತವೆ, ಇವೆಲ್ಲವೂ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳನ್ನು ಆಹ್ವಾನಿಸುತ್ತದೆ. ತಕ್ಷಣ ಬೇಯಿಸಿದ ಪೌಷ್ಟಿಕ ಆಹಾರವನ್ನು ಯಾವಾಗಲೂ ಸೇವಿಸುವುದು ಒಳ್ಳೆಯದು.

ಆಯಿಲ್ ಮಸಾಜ್ ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ:

ಅಂತಿಮವಾಗಿ, ರಕ್ತ ಪರಿಚಲನೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮಳೆಗಾಲದಲ್ಲಿ ಆಯಿಲ್ ಮಸಾಜ್ ತುಂಬಾ ಪರಿಣಾಮಕಾರಿ ಎಂದು ಸಂಶೋಧನೆಗಳಿಂದ ತಿಳಿದು ಬಂದಿದೆ. ನಿಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು, ನೀವು ಎಳ್ಳೆಣ್ಣೆ ಅಥವಾ ತೆಂಗಿನ ಎಣ್ಣೆಯನ್ನು ಬಳಸಬೇಕು. ಇವು ದೇಹಕ್ಕೆ ಮತ್ತು ಚರ್ಮಕ್ಕೆ, ಎರಡಕ್ಕೂ ಒಳ್ಳೆಯದಾಗಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!