ಹೃದಯದ ಆರೋಗ್ಯ ಕಾಪಾಡಲು ಎಷ್ಟು ಹೊತ್ತು ವ್ಯಾಯಾಮ ಮಾಡುವುದು ಒಳ್ಳೆಯದು?

| Updated By: ಅಕ್ಷಯ್​ ಪಲ್ಲಮಜಲು​​

Updated on: Aug 12, 2024 | 12:48 PM

ಇತ್ತೀಚಿನ ದಿನಗಳಲ್ಲಿ ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳುವುವವರ ಸಂಖ್ಯೆ ಹೆಚ್ಚಾಗಿದೆ. ಅದರಲ್ಲಿಯೂ ವ್ಯಾಯಾಮ ಮಾಡಲು ಜಿಮ್ ಗಳಿಗೆ ಹೋಗುವವರ ಎಣಿಕೆಯೂ ಹೆಚ್ಚುತ್ತಿದೆ. ಆದರೆ ಹೃದಯದ ಆರೋಗ್ಯ ಕಾಪಾಡಲು ಎಷ್ಟು ಹೊತ್ತು ವ್ಯಾಯಾಮ ಮಾಡುವುದು ಒಳ್ಳೆಯದು? ಈ ಬಗ್ಗೆ ವೈದ್ಯರ ಅಭಿಪ್ರಾಯವೇನು? ಇಲ್ಲಿದೆ ಮಾಹಿತಿ.

ಹೃದಯದ ಆರೋಗ್ಯ ಕಾಪಾಡಲು ಎಷ್ಟು ಹೊತ್ತು ವ್ಯಾಯಾಮ ಮಾಡುವುದು ಒಳ್ಳೆಯದು?
ಸಾಂದರ್ಭಿಕ ಚಿತ್ರ
Follow us on

ಹೃದಯದ ಆರೈಕೆ ಸರಿಯಾಗಿದ್ದರೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳು ಕಾಡದು. ಇಂದಿನ ಆಧುನಿಕ ಯುಗದಲ್ಲಿ ಜನರಿಗೆ ಹೃದಯಕ್ಕೆ ಸಂಬಂಧಿಸಿದ ರೋಗಗಳು ಕಾಡುವುದು ಸಾಮಾನ್ಯವಾಗಿದೆ. ಇದಕ್ಕೆ ಹಲವಾರು ರೀತಿಯ ಕಾರಣಗಳು ಇರಬಹುದು. ಆದರೆ ಹೃದಯದ ಆರೋಗ್ಯವನ್ನು ಸರಿಯಾಗಿ ಕಾಪಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ. ಹಾಗಾಗಿ ಪ್ರತಿನಿತ್ಯ ತಪ್ಪದೆ ವ್ಯಾಯಾಮ ಮಾಡುವುದು ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ. ಇದಕ್ಕೆ ಪೂರಕವೆಂಬಂತೆ ಇತ್ತೀಚಿನ ದಿನಗಳಲ್ಲಿ ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳುವುವವರ ಸಂಖ್ಯೆ ಹೆಚ್ಚಾಗಿದೆ. ಅದರಲ್ಲಿಯೂ ವ್ಯಾಯಾಮ ಮಾಡಲು ಜಿಮ್ ಗಳಿಗೆ ಹೋಗುವವರ ಎಣಿಕೆಯೂ ಹೆಚ್ಚುತ್ತಿದೆ. ಆದರೆ ಹೃದಯದ ಆರೋಗ್ಯ ಕಾಪಾಡಲು ಎಷ್ಟು ಹೊತ್ತು ವ್ಯಾಯಾಮ ಮಾಡುವುದು ಒಳ್ಳೆಯದು? ಈ ಬಗ್ಗೆ ವೈದ್ಯರ ಅಭಿಪ್ರಾಯವೇನು? ಇಲ್ಲಿದೆ ಮಾಹಿತಿ.

ಊಟವಾದ ಮೇಲೆ ಸ್ನಾನ, ವ್ಯಾಯಾಮ ಮಾಡುವುದು ನಿಷಿದ್ಧವಾಗಿದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ವ್ಯಾಯಾಮ, ಯೋಗ ಅಥವಾ ಪ್ರಾಣಾಯಾಮ ಮಾಡುವುದು ಒಳ್ಳೆಯದು. ಬೇಕಾದರೆ ನೀವು ಸ್ವಲ್ಪ ನೀರು ಅಥವಾ ಹಾಲನ್ನು ಕುಡಿದು ವ್ಯಾಯಾಮ ಮಾಡಬಹುದು. ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಬಯಸುವವರು, ಪ್ರತಿದಿನ 40- 45 ನಿಮಿಷ ವ್ಯಾಯಾಮ ಮಾಡಿದರೆ ದೇಹಕ್ಕೆ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ. ಅದರಲ್ಲಿಯೂ ನಿಮ್ಮ ಹಣೆ ಮತ್ತು ಕಂಕುಳಲ್ಲಿ ಬೆವರು ಬಂದಾಗ ವ್ಯಾಯಾಮ ಮಾಡುವುದನ್ನು ನಿಲ್ಲಿಸಬೇಕು. ಇದನ್ನು ಆಯುರ್ವೇದದಲ್ಲಿಯೂ ಕೂಡ ಹೇಳಲಾಗಿದೆ.

ಇದನ್ನೂ ಓದಿ: ವಿಟಮಿನ್ ಬಿ ಕಾಂಪ್ಲೆಕ್ಸ್ ಎಂದರೇನು, ದೇಹಕ್ಕೆ ಏಕೆ ಮುಖ್ಯ?

ವೈದ್ಯರ ಸಲಹೆ ಪಡೆಯಿರಿ

ಅತಿಯಾದ ವ್ಯಾಯಾಮ ಒಳ್ಳೆಯದಲ್ಲ. ಅಥವಾ ಹೊಟ್ಟೆ ತುಂಬಾ ತಿಂದು ವ್ಯಾಯಾಮ ಮಾಡಬಾರದು ಇವೆಲ್ಲವೂ ಹೃದಯದ ಆರೋಗ್ಯಕ್ಕೆ ಒಳ್ಳೆಯದಲ್ಲ. ಅದರಲ್ಲಿಯೂ ಅತಿಯಾಗಿ ವ್ಯಾಯಾಮ ಮಾಡುವವರು ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ಯಾವುದೇ ಆಗಲಿ ಹಿತ, ಮಿತದಲ್ಲಿರಬೇಕು. ಈ ಕಾರಣಗಳಿಂದ ವ್ಯಾಯಾಮ ಮಾಡುವ ಮೊದಲು ವೈದ್ಯರ ಸಲಹೆ ಪಡೆಯಿರಿ. ಬಳಿಕ ನಿಮ್ಮ ದೇಹ ಪ್ರಕೃತಿಗೆ ಅನುಗುಣವಾಗಿ ವ್ಯಾಯಾಮ ಮಾಡಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ