AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿದಿನ ಈ ಸೊಪ್ಪನ್ನು ಸೇವಿಸಿದರೆ ನಿಮಗೆ ಯಾವ ರೋಗವು ಬರುವುದಿಲ್ಲ

ಸೊಪ್ಪು, ತರಕಾರಿಗಳಲ್ಲಿ ಹಲವಾರು ವಿಧಗಳಿದ್ದು ಇದರಲ್ಲಿ ಗೊಂಗುರಾ ಅಥವಾ ಪುಂಡಿ ಸೊಪ್ಪಿನ ಬಗ್ಗೆ ನೀವು ಕೇಳಿರಬಹುದು. ಇದನ್ನು ಪುಂಟಿಕುರ ಎಂದೂ ಕೂಡ ಕರೆಯುತ್ತಾರೆ. ಇದರಿಂದ ಅನೇಕ ರೀತಿಯ ಭಕ್ಷ್ಯಗಳನ್ನು ತಯಾರಿಸಲಾಗುತ್ತದೆ. ಇದು ಆಹಾರದ ರುಚಿ ಹೆಚ್ಚಿಸುವುದು ಮಾತ್ರವಲ್ಲ, ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ ಎಂಬುದರ ಬಗ್ಗೆ ನಿಮಗೆ ತಿಳಿದಿದೆಯೇ? ಪುಂಡಿ ಸೊಪ್ಪನ್ನು ನಿಯಮಿತವಾಗಿ ತಿನ್ನುವುದರಿಂದ ಹಲವಾರು ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ಪ್ರತಿದಿನ ಈ ಸೊಪ್ಪನ್ನು ಸೇವಿಸಿದರೆ ನಿಮಗೆ ಯಾವ ರೋಗವು ಬರುವುದಿಲ್ಲ
ಪುಂಡಿ ಸೊಪ್ಪು
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Aug 12, 2024 | 5:11 PM

Share

ಹಸಿರು ತರಕಾರಿಗಳು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ನಮಗೆಲ್ಲರಿಗೂ ತಿಳಿದಿದೆ. ಇದನ್ನು ತಜ್ಞರು ಕೂಡ ಪದೇ ಪದೇ ಹೇಳುತ್ತಾರೆ. ಸೊಪ್ಪು, ತರಕಾರಿಗಳಲ್ಲಿ ಹಲವಾರು ವಿಧಗಳಿದ್ದು ಇದರಲ್ಲಿ ಗೊಂಗುರಾ ಅಥವಾ ಪುಂಡಿ ಸೊಪ್ಪಿನ ಬಗ್ಗೆ ನೀವು ಕೇಳಿರಬಹುದು. ಇದನ್ನು ಪುಂಟಿಕುರ ಎಂದೂ ಕೂಡ ಕರೆಯುತ್ತಾರೆ. ಇದರಿಂದ ಅನೇಕ ರೀತಿಯ ಭಕ್ಷ್ಯಗಳನ್ನು ತಯಾರಿಸಲಾಗುತ್ತದೆ. ಇದು ಆಹಾರದ ರುಚಿ ಹೆಚ್ಚಿಸುವುದು ಮಾತ್ರವಲ್ಲ, ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ ಎಂಬುದರ ಬಗ್ಗೆ ನಿಮಗೆ ತಿಳಿದಿದೆಯೇ? ಪುಂಡಿ ಸೊಪ್ಪನ್ನು ನಿಯಮಿತವಾಗಿ ತಿನ್ನುವುದರಿಂದ ಹಲವಾರು ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ನೋವನ್ನು ನಿವಾರಿಸುತ್ತದೆ

ವೈದ್ಯರು ಹೇಳುವ ಪ್ರಕಾರ, ಪುಂಡಿ ಸೊಪ್ಪಿನಲ್ಲಿ ಅನೇಕ ರೀತಿಯ ಔಷಧೀಯ ಗುಣಗಳಿವೆ. ಇದನ್ನು ಸೇವನೆ ಮಾಡುವುದರಿಂದ ದೇಹಕ್ಕೆ ಪೋಷಕಾಂಶಗಳನ್ನು ಒದಗಿಸುತ್ತವೆ ಮತ್ತು ಆರೋಗ್ಯವನ್ನು ಸುಧಾರಿಸುತ್ತವೆ. ಪುಂಡಿ ಸೊಪ್ಪಿನ ಎಲೆಗಳನ್ನು ತೆಗೆದುಕೊಂಡು ಅವುಗಳ ಮೇಲೆ ಸ್ವಲ್ಪ ಹರಳೆಣ್ಣೆಯನ್ನು ಹಚ್ಚಿ, ಅದನ್ನು ಬಿಸಿ ಮಾಡಿ, ಊತ ಮತ್ತು ವಿವಿಧ ರೀತಿಯ ಹಳೆ ನೋವು ಇರುವಲ್ಲಿ ಎಲೆಗಳನ್ನು ಇಡಬೇಕು. ಇದು ನೋವು ಮತ್ತು ಉರಿಯೂತವನ್ನು ತಕ್ಷಣ ಕಡಿಮೆ ಮಾಡುತ್ತದೆ.

ಕಣ್ಣುಗಳ ದೃಷ್ಟಿ ಚೆನ್ನಾಗಿರುತ್ತೆ

ಗೊಂಗುರಾದಲ್ಲಿ ವಿಟಮಿನ್ ಸಿ ಜೊತೆಗೆ ವಿಟಮಿನ್ ಎ, ಬಿ 1, ಬಿ 2, ಬಿ 9 ಕೂಡ ಇದೆ. ಇದಲ್ಲದೆ ಪುಂಡಿ ಸೊಪ್ಪಿನಲ್ಲಿ ಕ್ಯಾಲ್ಸಿಯಂ, ರಂಜಕ, ಪೊಟ್ಯಾಸಿಯಮ್, ಸೋಡಿಯಂ ಮತ್ತು ಕಬ್ಬಿಣದಂತಹ ಇತರ ಖನಿಜಗಳಿವೆ. ಇದು ಉತ್ಕರ್ಷಣ ನಿರೋಧಕಗಳು ಮತ್ತು ಇತರ ಅನೇಕ ಪೋಷಕಾಂಶಗಳನ್ನು ಸಹ ಹೊಂದಿರುತ್ತದೆ. ನೀವು ಈ ಸೊಪ್ಪಿನ ರಸ ತೆಗೆದು ಸೋಸಿ ಅದಕ್ಕೆ ಅರ್ಧ ಕಪ್ ಹಾಲನ್ನು ಸೇರಿಸಿ ಬೆಳಿಗ್ಗೆ ಮತ್ತು ಸಂಜೆ ಎರಡು ಬಾರಿ ಕುಡಿಯುವುದರಿಂದ ನಿಮ್ಮ ಕಣ್ಣುಗಳ ದೃಷ್ಟಿ ಚೆನ್ನಾಗಿರುತ್ತದೆ. ಅಲ್ಲದೆ ಇದು ನಿಮ್ಮ ಆರೋಗ್ಯಕ್ಕೂ ತುಂಬಾ ಒಳ್ಳೆಯದು.

ಇದನ್ನೂ ಓದಿ: ಹೃದಯದ ಆರೋಗ್ಯ ಕಾಪಾಡಲು ಎಷ್ಟು ಹೊತ್ತು ವ್ಯಾಯಾಮ ಮಾಡುವುದು ಒಳ್ಳೆಯದು?

ಕೂದಲು ಉದುರುವುದನ್ನು ತಡೆಯುತ್ತದೆ

ಅನ್ನಕ್ಕೆ ಪುಂಡಿ ಸೊಪ್ಪಿನ ಉಪ್ಪಿನಕಾಯಿಯನ್ನು ಸ್ವಲ್ಪ ಬೆರೆಸಿ ಸೇವನೆ ಮಾಡುವುದರಿಂದ ಅತಿಸಾರವನ್ನು ತಡೆಯಬಹುದು. ದೇಹದಲ್ಲಿ ರೋಗನಿರೋಧಕ ಶಕ್ತಿ ಮತ್ತು ಜೀರ್ಣಕಾರಿ ಶಕ್ತಿಯನ್ನು ಹೆಚ್ಚಿಸಲು ಈ ಸೊಪ್ಪು ತುಂಬಾ ಸಹಾಯಕವಾಗಿದೆ. ರಕ್ತಹೀನತೆ ಸಮಸ್ಯೆಯಿಂದ ಬಳಲುತ್ತಿರುವವರು ಇದರಿಂದ ತಯಾರಿಸಿದ ಆಹಾರಗಳನ್ನು ಹೆಚ್ಚು ಹೆಚ್ಚು ಸೇವನೆ ಮಾಡಬೇಕು. ಅದಲ್ಲದೆ ಈ ಎಲೆಗಳ ಪೇಸ್ಟ್ ಅನ್ನು ತಲೆಗೆ ಹಚ್ಚಿ ಸ್ವಲ್ಪ ಸಮಯದ ನಂತರ ಸ್ನಾನ ಮಾಡುವುದರಿಂದ ಕೂದಲು ಉದುರುವಿಕೆ ಮತ್ತು ತಲೆಹೊಟ್ಟು ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಈ ಸೊಪ್ಪಿನಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಅವು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತವೆ. ಕೆಮ್ಮು, ಆಯಾಸ ಮತ್ತು ಸೀನುವಿಕೆಯಿಂದ ಬಳಲುತ್ತಿರುವವರಿಗೆ ಈ ಸೊಪ್ಪಿನಿಂದ ಮಾಡಿದ ಕಷಾಯದಿಂದ ಪರಿಹಾರ ಸಿಗುತ್ತದೆ.

(ಸೂಚನೆ: ವಿವಿಧ ರೀತಿಯ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದರೆ ಈ ಸೊಪ್ಪನ್ನು ನಿಮ್ಮ ಆಹಾರದಲ್ಲಿ ಸೇರಿಸುವುದಕ್ಕಿಂತ ಮೊದಲು ನಿಮ್ಮ ವೈದ್ಯರ ಸಲಹೆ ಪಡೆಯಿರಿ.)

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ