ಶೀತ ಬಾರದಂತೆ ತಡೆಗಟ್ಟುವ 5 ಮುನ್ನೆಚ್ಚರಿಕಾ ಕ್ರಮಗಳಿವು

ಅನಾರೋಗ್ಯವಿರುವ ಜನರ ಸುತ್ತಲೂ ಇರುವ ಮೂಲಕ ಅಥವಾ ಕಲುಷಿತ ವಸ್ತುಗಳನ್ನು ಸ್ಪರ್ಶಿಸಿ, ಅದರಿಂದ ನಮ್ಮ ಮುಖವನ್ನು ಮುಟ್ಟಿಕೊಳ್ಳುವ ಮೂಲಕ ಶೀತ ಹರಡುತ್ತದೆ. ಶೀತವನ್ನು ತಡೆಗಟ್ಟುವುದು ತುಂಬಾ ಕಷ್ಟಕರವೇನಲ್ಲ. ನಿಮ್ಮನ್ನು ಆರೋಗ್ಯವಾಗಿಡಲು ಸಹಾಯ ಮಾಡುವ ಕೆಲವು ತಂತ್ರಗಳು ಇಲ್ಲಿವೆ.

ಶೀತ ಬಾರದಂತೆ ತಡೆಗಟ್ಟುವ 5 ಮುನ್ನೆಚ್ಚರಿಕಾ ಕ್ರಮಗಳಿವು
ಶೀತImage Credit source: iStock
Follow us
ಸುಷ್ಮಾ ಚಕ್ರೆ
|

Updated on: Oct 16, 2023 | 8:25 PM

ಶೀತವೆಂಬುದು ನೋಡಲು ಸಣ್ಣ ರೋಗ. ಆದರೆ, ಅದರಿಂದ ಆಗುವ ಕಿರಿಕಿರಿ ಅಷ್ಟಿಷ್ಟಲ್ಲ. ಶೀತದಿಂದ ಬಳಲುವುದು ಸಾಕಷ್ಟು ಅಹಿತಕರವಾಗಿರುತ್ತದೆ. ಉಸಿರಾಡಲು ಕಷ್ಟವಾಗುತ್ತದೆ, ಗಂಟಲು ನೋವು, ಕಣ್ಣು ಉರಿ, ಕೆಮ್ಮು, ನೆಗಡಿ ಹೀಗೆ ನಾನಾ ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ. ವೈರಸ್​ನಿಂದಲೂ ಶೀತ ಹರಡುತ್ತದೆ. ಯಾರಾದರೂ ಕೆಮ್ಮಿದಾಗ ಅಥವಾ ಸೀನಿದಾಗ ಸಣ್ಣ ಹನಿಗಳ ಮೂಲಕ ಶೀತ ಹರಡುತ್ತವೆ.

ಅನಾರೋಗ್ಯವಿರುವ ಜನರ ಸುತ್ತಲೂ ಇರುವ ಮೂಲಕ ಅಥವಾ ಕಲುಷಿತ ವಸ್ತುಗಳನ್ನು ಸ್ಪರ್ಶಿಸಿ, ಅದರಿಂದ ನಮ್ಮ ಮುಖವನ್ನು ಮುಟ್ಟಿಕೊಳ್ಳುವ ಮೂಲಕ ಶೀತ ಹರಡುತ್ತದೆ. ಋತುವಿನ ಬದಲಾವಣೆಯು ಶೀತದ ಅತಿರೇಕದ ಹರಡುವಿಕೆಯ ಮೇಲೆ ಪರಿಣಾಮ ಬೀರುತ್ತದೆ.

ಇದನ್ನೂ ಓದಿ: ಚಹಾವನ್ನು ಮತ್ತೆ ಮತ್ತೆ ಕುದಿಸಿ ಕುಡಿಯುವುದು ಒಳ್ಳೆಯದಲ್ಲ; ಯಾಕೆ ಗೊತ್ತಾ?

ಶೀತವನ್ನು ತಡೆಗಟ್ಟುವುದು ತುಂಬಾ ಕಷ್ಟಕರವೇನಲ್ಲ. ನಿಮ್ಮನ್ನು ಆರೋಗ್ಯವಾಗಿಡಲು ಸಹಾಯ ಮಾಡುವ ಕೆಲವು ತಂತ್ರಗಳು ಇಲ್ಲಿವೆ.

ನಿಮ್ಮ ಕೈಗಳನ್ನು ತೊಳೆಯಿರಿ:

ನಿಯಮಿತವಾಗಿ ಕೈ ತೊಳೆಯುವುದು ಬಹಳ ಮುಖ್ಯ. ವೈರಸ್‌ಗಳು ಯಾವುದಾದರೂ ವಸ್ತುವಿನ ಮೇಲೆ ಸ್ವಲ್ಪ ಸಮಯದವರೆಗೆ ಇರುತ್ತದೆ. ಹೀಗಾಗಿ, 20 ಸೆಕೆಂಡುಗಳ ಕಾಲ ಸೋಪ್ ಮತ್ತು ನೀರಿನಿಂದ ನಿಮ್ಮ ಕೈಗಳನ್ನು ತೊಳೆಯುವುದರಿಂದ ಸೋಂಕು ಹರಡುವುದನ್ನು ತಡೆಯಬಹುದಾಗಿದೆ.

ಯಾವಾಗಲೂ ಮುಟ್ಟುವ ವಸ್ತುಗಳನ್ನು ಸ್ವಚ್ಛವಾಗಿಡಿ:

ಡೋರ್‌ನ ಹಿಡಿಕೆ, ಮೊಬೈಲ್ ಫೋನ್‌ಗಳು ಮತ್ತು ಲೈಟ್ ಸ್ವಿಚ್‌ಗಳಂತಹ ಸಾಮಾನ್ಯವಾಗಿ ಯಾವಾಗಲೂ ಸ್ಪರ್ಶಿಸುವ ಪ್ರದೇಶಗಳನ್ನು ಸ್ವಚ್ಛವಾಗಿಡಿ. ಅನಾರೋಗ್ಯದಿಂದ ಬಳಲುತ್ತಿರುವವರು ಅದನ್ನು ಸ್ಪರ್ಶಿಸಿದರೆ ಅದರಿಂದ ಶೀತದ ವೈರಸ್‌ಗಳು ಮತ್ತೊಬ್ಬರಿಗೆ ಹರಡಬಹುದು.

ಇದನ್ನೂ ಓದಿ: Mulberry Benefits: ಹಿಪ್ಪುನೇರಳೆ ಸೇವನೆಯಿಂದ ಏನು ಪ್ರಯೋಜನ? ಈ ಹಣ್ಣಿನ ಬಗ್ಗೆ ನಿಮಗೆ ಗೊತ್ತಾ?

ಆರೋಗ್ಯಕರ ಅಭ್ಯಾಸಗಳನ್ನು ಬೆಳೆಸಿಕೊಳ್ಳಿ:

ನೀವು ಸಾಕಷ್ಟು ನಿದ್ರೆ ಮಾಡಲು ಮರೆಯಬೇಡಿ. ಸಮತೋಲಿತ ಆಹಾರವನ್ನು ಸೇವಿಸಿ. ದೀರ್ಘಕಾಲದ ಆರೋಗ್ಯ ಸಮಸ್ಯೆ ಎದುರಾಗದಂತೆ ಎಚ್ಚರ ವಹಿಸಿ. ಈ ಅಭ್ಯಾಸಗಳು ನಿಮ್ಮ ರೋಗನಿರೋಧಕ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಹಾಗೇ, ಶೀತದ ಹರಡುವಿಕೆಯನ್ನು ಕಡಿಮೆ ಮಾಡುತ್ತದೆ.

ಮಾಸ್ಕ್ ಧರಿಸಲು ಮರೆಯಬೇಡಿ:

N95 ಅಥವಾ KN95ನಂತಹ ಮಾಸ್ಕ್​ಗಳು ಕೊವಿಡ್ -19 ನಂತಹ ವೈರಸ್‌ಗಳ ಹರಡುವಿಕೆಯನ್ನು ತಡೆಯುವಲ್ಲಿ ಪರಿಣಾಮಕಾರಿಯಾಗಿದೆ. ಅವು ಸಾಮಾನ್ಯ ಶೀತದ ವಿರುದ್ಧ ರಕ್ಷಣೆ ನೀಡುತ್ತವೆ.

ಕಿಕ್ಕಿರಿದ ಸ್ಥಳಗಳಲ್ಲಿ ಓಡಾಡಬೇಡಿ:

ವಿಶೇಷ ಕಾರ್ಯಕ್ರಮ ಅಥವಾ ಪ್ರವಾಸಕ್ಕೂ ಮೊದಲು ಕಿಕ್ಕಿರಿದ ಒಳಾಂಗಣ ಪ್ರದೇಶಗಳಲ್ಲಿ ಓಡಾಡಬೇಡಿ. ಅನೇಕ ಜನರೊಂದಿಗೆ ನಿಕಟ ಸ್ಥಳಗಳಲ್ಲಿರುವುದರಿಂದ ನಿಮಗೆ ಶೀತ ಹರಡುವ ಅಪಾಯ ಹೆಚ್ಚಾಗಿರುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್