ಡಯಾಬಿಟಿಸ್ ಇರುವವರು ಬಾಳೆಹಣ್ಣು ತಿನ್ನಬಹುದಾ?

ಬಾಳೆಹಣ್ಣಿನಲ್ಲಿ ಸಕ್ಕರೆ ಅಂಶ ಇರುತ್ತದೆ. ನೀವು ಬಹಳಷ್ಟು ಬಾಳೆಹಣ್ಣುಗಳನ್ನು ಸೇವಿಸಿದರೆ, ಅದು ನಿಮ್ಮ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಹೆಚ್ಚಿಸಬಹುದು. ಮಧುಮೇಹ ಹೊಂದಿರುವ ರೋಗಿಗಳು ಬಾಳೆಹಣ್ಣು ಮತ್ತು ಇತರ ಆಹಾರಗಳ ಸಕ್ಕರೆ ಸೇವನೆಯನ್ನು ನಿಯಂತ್ರಣದಲ್ಲಿಡಬೇಕು.

ಡಯಾಬಿಟಿಸ್ ಇರುವವರು ಬಾಳೆಹಣ್ಣು ತಿನ್ನಬಹುದಾ?
ಬಾಳೆಹಣ್ಣುImage Credit source: iStock
Follow us
ಸುಷ್ಮಾ ಚಕ್ರೆ
|

Updated on: Oct 19, 2023 | 6:06 PM

ಬಾಳೆಹಣ್ಣುಗಳು ಬಹಳ ಪೌಷ್ಟಿಕವಾದ ಹಣ್ಣುಗಳಾಗಿವೆ. ಇವುಗಳು ಕಾರ್ಬೋಹೈಡ್ರೇಟ್, ಸಕ್ಕರೆ, ಫೈಬರ್, ವಿಟಮಿನ್ ಮತ್ತು ಖನಿಜಗಳನ್ನು ಹೊಂದಿರುತ್ತವೆ. ಬಾಳೆಹಣ್ಣಿನ ಗ್ಲೈಸೆಮಿಕ್ ಸೂಚ್ಯಂಕ ಮತ್ತು ಗ್ಲೈಸೆಮಿಕ್ ಲೋಡ್ ಗಾತ್ರ ರಕ್ತದಲ್ಲಿನ ಸಕ್ಕರೆ ಮಟ್ಟದ ಮೇಲೆ ಪರಿಣಾಮ ಬೀರಬಹುದು. ಬಾಳೆ ಕಾಯಿಗಳು ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಮಧುಮೇಹದ ಸಮಸ್ಯೆ ಇರುವ ಜನರು ಬಾಳೆಹಣ್ಣುಗಳನ್ನು ಸೇವಿಸುವಾಗ ತಮ್ಮ ಕಾರ್ಬೋಹೈಡ್ರೇಟ್ ಸೇವನೆ ಮತ್ತು ದೇಹದ ಸಕ್ಕರೆ ಪ್ರಮಾಣದ ಬಗ್ಗೆ ಎಚ್ಚರ ವಹಿಸಬೇಕು. ಬಾಳೆಹಣ್ಣಿನಲ್ಲಿರುವ ವಿವಿಧ ಪೋಷಕಾಂಶಗಳು ರಕ್ತದಲ್ಲಿನ ಸಕ್ಕರೆಯ ಮೇಲೆ ವಿಭಿನ್ನ ಪರಿಣಾಮಗಳನ್ನು ಬೀರುತ್ತವೆ. ಬಾಳೆಹಣ್ಣಿನಲ್ಲಿರುವ ಕಾರ್ಬೋಹೈಡ್ರೇಟ್‌ಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತವೆ. ಮಧ್ಯಮ ಗಾತ್ರದ ಬಾಳೆಹಣ್ಣು 29 ಗ್ರಾಂ ಕಾರ್ಬೋಹೈಡ್ರೇಟ್‌ಗಳನ್ನು ಒದಗಿಸುತ್ತದೆ. ಕಾರ್ಬೋಹೈಡ್ರೇಟ್‌ಗಳನ್ನು ಸೇವಿಸುವುದರಿಂದ ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸಬಹುದು.

ಬಾಳೆಹಣ್ಣಿನಲ್ಲಿರುವ ಫೈಬರ್ ಅಂಶ ಕಾರ್ಬೋಹೈಡ್ರೇಟ್‌ಗಳ ಜೀರ್ಣಕ್ರಿಯೆ ಮತ್ತು ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸಲು ಸಹಾಯ ಮಾಡುತ್ತದೆ. ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ. ಮಧ್ಯಮ ಬಾಳೆಹಣ್ಣು 3 ಗ್ರಾಂ ಫೈಬರ್ ಅನ್ನು ನೀಡುತ್ತದೆ. ಬಾಳೆಕಾಯಿ ಹಣ್ಣಾಗುತ್ತಿದ್ದಂತೆ ಅದರ ಸಕ್ಕರೆ ಅಂಶವು ಹೆಚ್ಚಾಗುತ್ತದೆ ಮತ್ತು ನಿರೋಧಕ ಪಿಷ್ಟವು ಕಡಿಮೆಯಾಗುತ್ತದೆ. ಸಂಪೂರ್ಣವಾಗಿ ಮಾಗಿದ ಬಾಳೆಹಣ್ಣುಗಳು ಹೆಚ್ಚಿನ ಜಿಐ ಅನ್ನು ಹೊಂದಿರುತ್ತವೆ. ಇದು ಹಸಿರು, ಕಡಿಮೆ ಮಾಗಿದ ಬಾಳೆಹಣ್ಣುಗಳಿಗಿಂತ ವೇಗವಾಗಿ ರಕ್ತದಲ್ಲಿನ ಸಕ್ಕರೆಯನ್ನು ಹೆಚ್ಚಿಸುತ್ತದೆ. ಹೀಗಾಗಿ, ಮಧುಮೇಹ ಹೊಂದಿರುವ ರೋಗಿಗಳು ಸಂಪೂರ್ಣವಾಗಿ ಮಾಗಿದ ಬಾಳೆಹಣ್ಣುಗಳಿಗಿಂತ ಹಸಿರು ಅಥವಾ ಸ್ವಲ್ಪ ಮಾಗಿದ ಬಾಳೆಹಣ್ಣುಗಳನ್ನು ಸೇವಿಸಬಹುದು.

ಇದನ್ನೂ ಓದಿ: ನವರಾತ್ರಿಗೆ ಮಧುಮೇಹಿಗಳು ಉಪವಾಸ ಮಾಡಬಹುದೇ?

ಮಧುಮೇಹ ಹೊಂದಿರುವ ರೋಗಿಗಳಿಗೆ ಬಾಳೆ ಹಣ್ಣನ್ನು ತಿನ್ನಲೇ ಬೇಕೆಂಬ ಆಸೆಯಾದರೆ ಸಣ್ಣ ಬಾಳೆ ಹಣ್ಣು ಸೇವಿಸಬಹುದು. ದೊಡ್ಡ ಬಾಳೆಹಣ್ಣುಗಳನ್ನು ತಿನ್ನುವುದು ಎಂದರೆ ಹೆಚ್ಚು ಕಾರ್ಬೋಹೈಡ್ರೇಟ್​ಗಳು ಮತ್ತು ಸಕ್ಕರೆಯನ್ನು ಸೇವಿಸುವುದು. ಇದು ರಕ್ತದಲ್ಲಿನ ಸಕ್ಕರೆಯ ಮಟ್ಟಗಳ ಮೇಲೆ ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆಯಿದೆ. ಆದ್ದರಿಂದ, ಚಿಕ್ಕ ಬಾಳೆಹಣ್ಣುಗಳನ್ನು ತಿನ್ನುವುದು ಬುದ್ಧಿವಂತಿಕೆಯ ಲಕ್ಷಣ.

ಮಧುಮೇಹ ಇರುವವರಿಗೆ ಬಾಳೆಹಣ್ಣು ಸುರಕ್ಷಿತವೇ?:

ಇದರ ಜೊತೆಗೆ ಬಾಳೆಹಣ್ಣಿನ ಸೇವನೆಯು ಮಧುಮೇಹ ರೋಗಿಗಳಿಗೆ ಕೆಲವು ಪ್ರಯೋಜನಗಳನ್ನು ಕೂಡ ನೀಡುತ್ತದೆ. ಬಾಳೆಹಣ್ಣಿನಲ್ಲಿ ಪೊಟ್ಯಾಸಿಯಮ್ ಮತ್ತು ಫೈಬರ್ ನಂತಹ ಹೃದಯ ಸ್ನೇಹಿ ಪೋಷಕಾಂಶಗಳು ಹೇರಳವಾಗಿವೆ. ಪೊಟ್ಯಾಸಿಯಮ್ ದ್ರವ ಸಮತೋಲನ ಮತ್ತು ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಫೈಬರ್ (ವಿಶೇಷವಾಗಿ ಹಸಿರು ಬಾಳೆಹಣ್ಣುಗಳು) ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ.

ಹಸಿರು ಬಾಳೆಹಣ್ಣಿನಲ್ಲಿರುವ ನಿರೋಧಕ ಪಿಷ್ಟವು ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸುತ್ತದೆ. ಇದು ಟೈಪ್ 2 ಡಯಾಬಿಟಿಸ್ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆಯ ನಿರ್ವಹಣೆಗೆ ಸಹಾಯ ಮಾಡುತ್ತದೆ.

ಇದನ್ನೂ ಓದಿ: ರಾತ್ರಿ ತಡವಾಗಿ ಮಲಗುವುದರಿಂದ ಡಯಾಬಿಟಿಸ್ ಬರಬಹುದು ಎಚ್ಚರ!

ಬಾಳೆಹಣ್ಣಿನಲ್ಲಿರುವ ಫೈಬರ್ ಕಾರ್ಬೋಹೈಡ್ರೇಟ್‌ಗಳ ಜೀರ್ಣಕ್ರಿಯೆ ಮತ್ತು ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸಲು ಸಹಾಯ ಮಾಡುತ್ತದೆ. ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಬಾಳೆಹಣ್ಣುಗಳನ್ನು ತಿನ್ನುವುದರಿಂದ ಮಧುಮೇಹದ ರೋಗಿಗಳಿಗೆ ಕೆಲವು ಅಪಾಯಗಳು ಕೂಡ ಉಂಟಾಗಬಹುದು. ಅವುಗಳು ಈ ಕೆಳಗಿನಂತಿವೆ:

ಬಾಳೆಹಣ್ಣಿನಲ್ಲಿ ಸಕ್ಕರೆ ಅಂಶ ಇರುತ್ತದೆ. ನೀವು ಬಹಳಷ್ಟು ಬಾಳೆಹಣ್ಣುಗಳನ್ನು ಸೇವಿಸಿದರೆ, ಅದು ನಿಮ್ಮ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಹೆಚ್ಚಿಸಬಹುದು. ಮಧುಮೇಹ ಹೊಂದಿರುವ ರೋಗಿಗಳು ಬಾಳೆಹಣ್ಣು ಮತ್ತು ಇತರ ಆಹಾರಗಳ ಸಕ್ಕರೆ ಸೇವನೆಯನ್ನು ನಿಯಂತ್ರಣದಲ್ಲಿಡಬೇಕು.

ಬಾಳೆಹಣ್ಣುಗಳು ಕಾರ್ಬೋಹೈಡ್ರೇಟ್‌ಗಳನ್ನು ಹೊಂದಿರುತ್ತವೆ, ಅದರ ಭಾಗವು ಸಕ್ಕರೆಯಾಗಿದೆ. ಹೀಗಾಗಿ, ಮಧುಮೇಹ ಹೊಂದಿರುವ ರೋಗಿಗಳು ತಮ್ಮ ಒಟ್ಟು ಕಾರ್ಬೋಹೈಡ್ರೇಟ್ ಸೇವನೆಯ ಬಗ್ಗೆ ನಿಗಾ ಇಡುವುದು ಬಹಳ ಮುಖ್ಯ.

ಬಾಳೆಹಣ್ಣಿನ ಅಲರ್ಜಿಯು ಅಪರೂಪವಾಗಿದ್ದರೂ ಕೆಲವರಿಗೆ ಅದರಿಂದ ಅಲರ್ಜಿ ಉಂಟಾಗುತ್ತದೆ. ಅಸ್ತಮಾ, ಅಟೊಪಿಕ್ ಡರ್ಮಟೈಟಿಸ್, ಇತ್ಯಾದಿ ಅಲರ್ಜಿಗಳಿಂದ ಬಳಲುತ್ತಿರುವ ವ್ಯಕ್ತಿಗಳಲ್ಲಿ ಬಾಳೆಹಣ್ಣಿನ ಸೇವನೆಯಿಂದ ತುರಿಕೆ, ಊತ ಮತ್ತು ಉಸಿರಾಟದ ತೊಂದರೆಗಳು ಉಂಟಾಗಬಹುದು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ