ಆಯುರ್ವೇದದ ಪ್ರಕಾರ, ಕರಿಬೇವಿನ ಎಲೆಗಳು ಅನೇಕ ಪ್ರಯೋಜನಕಾರಿ ಗುಣಗಳನ್ನು ಹೊಂದಿದೆ. ಇದು ರಕ್ತದೊತ್ತಡವನ್ನು ಕಡಿಮೆ ಮಾಡುವ ಪರಿಣಾಮವನ್ನು ಹೊಂದಿದೆ. ಕರಿಬೇವಿನ ಎಲೆಗಳಲ್ಲಿ ತಾಮ್ರ, ಖನಿಜಗಳು, ಕ್ಯಾಲ್ಸಿಯಂ, ರಂಜಕ, ಫೈಬರ್, ಕಾರ್ಬೋಹೈಡ್ರೇಟ್‌ಗಳು, ಮೆಗ್ನೀಸಿಯಮ್ ಮತ್ತು ಕಬ್ಬಿಣದ ಅಂಶಗಳು ಸಮೃದ್ಧವಾಗಿವೆ. ಇದಲ್ಲದೆ, ಕರಿಬೇವಿನ ಎಲೆಗಳು ಸಾಮಾನ್ಯವಾಗಿ ವಿವಿಧ ರೀತಿಯ ಜೀವಸತ್ವಗಳು ಮತ್ತು ಅಮೈನೋ ಆಮ್ಲಗಳನ್ನು ಹೊಂದಿರುತ್ತವೆ.
ಕರಿಬೇವಿನ ಎಲೆಗಳು ವಿಟಮಿನ್ ಎ, ವಿಟಮಿನ್ ಬಿ, ವಿಟಮಿನ್ ಸಿ, ವಿಟಮಿನ್ ಬಿ 2, ಕ್ಯಾಲ್ಸಿಯಂ ಮತ್ತು ಕಬ್ಬಿಣದ ಸಮೃದ್ಧ ಮೂಲವಾಗಿದೆ. ಇದು ಭಾರೀ ವಿಶಿಷ್ಟವಾದ ಪರಿಮಳ ಮತ್ತು ಕಟುವಾದ ರುಚಿಯನ್ನು ಹೊಂದಿದೆ. ನಿಮ್ಮ ಊಟಕ್ಕೆ ಕರಿಬೇವಿನ ಎಲೆಗಳನ್ನು ಸೇರಿಸುವ ಮೂಲಕ ಭೇದಿ, ಮಧುಮೇಹ, ವಾಕರಿಕೆ ಸಮಸ್ಯೆಗಳನ್ನು ಪರಿಹರಿಸಬಹುದು. ಸಾಮಾನ್ಯವಾಗಿ, ಕರಿಬೇವಿನ ಎಲೆಗಳು ವಿಷ ಮತ್ತು ದೇಹದ ಕೊಬ್ಬಿನಂಶವನ್ನು ಹೊರಹಾಕಲು ಸಹಾಯ ಮಾಡುತ್ತದೆ.
ಇದನ್ನೂ ಓದಿ: Heart Health: ನಿಮ್ಮ ಹೃದಯದ ಆರೋಗ್ಯಕ್ಕೆ ದಿನಕ್ಕೆ 50 ಮೆಟ್ಟಿಲು ಹತ್ತಿ
ಕರಿಬೇವಿನ ಎಲೆಗಳು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕರಿಬೇವಿನ ಎಲೆಗಳು ರಕ್ತದ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುವ ಗುಣಗಳನ್ನು ಹೊಂದಿವೆ. ಕರಿಬೇವು ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ. ಹಿಂದಿನ ಕಾಲದಿಂದಲೂ ಕರಿಬೇವಿನ ಎಲೆಗಳ ಒಂದು ಪ್ರಯೋಜನವೆಂದರೆ ಅದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ
ಕರಿಬೇವು ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸುತ್ತದೆ. ಹಾನಿಗೊಳಗಾದ ಕೂದಲಿಗೆ ಚಿಕಿತ್ಸೆ ನೀಡಲು ಕರಿಬೇವಿನ ಎಲೆಗಳು ಸಹಕಾರಿ. ಕಣ್ಣಿನ ಆರೋಗ್ಯಕ್ಕೆ ಕೂಡ ಕರಿಬೇವು ಉಪಯುಕ್ತವಾಗಿದೆ. ಕರಿಬೇವಿನ ಎಲೆಗಳಲ್ಲಿ ವಿಟಮಿನ್ ಎ ಸಮೃದ್ಧವಾಗಿದೆ. ಇದರಿಂದಾಗಿ ಕಾರ್ನಿಯಾಕ್ಕೆ ಹಾನಿಯಾಗುವ ಸಾಧ್ಯತೆ ಕಡಿಮೆ.
ಇದನ್ನೂ ಓದಿ: ನಿಮ್ಮ ದೇಹಕ್ಕಷ್ಟೇ ಅಲ್ಲ ಹೃದಯಕ್ಕೂ ಬೇಕು ಸೂರ್ಯನ ಬೆಳಕು!
ಕರಿಬೇವು ಬ್ಯಾಕ್ಟೀರಿಯಾವನ್ನು ನಿರ್ಮೂಲನೆ ಮಾಡುತ್ತದೆ. ಕರಿಬೇವು ತೂಕ ಇಳಿಸಲು ಸಹಕಾರಿಯಾಗಿದೆ. ದೇಹದಲ್ಲಿ ಒಟ್ಟುಗೂಡಿದ ಕೊಬ್ಬನ್ನು ತೊಡೆದುಹಾಕಲು ಇದು ಅತ್ಯುತ್ತಮ ಪರಿಹಾರಗಳಲ್ಲಿ ಒಂದಾಗಿದೆ. ಕರಿಬೇವಿನ ಎಲೆಗಳು ಟ್ರೈಗ್ಲಿಸರೈಡ್‌ಗಳು ಮತ್ತು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಬೊಜ್ಜು ತಡೆಯಲು ಸಹಾಯ ಮಾಡುತ್ತದೆ ಎಂದು ಅಧ್ಯಯನಗಳು ತಿಳಿಸಿವೆ.
ಕರಿಬೇವಿನ ಎಲೆಯ ಸೇವನೆಯು ಕೀಮೋಥೆರಪಿ ಮತ್ತು ರೇಡಿಯೊಥೆರಪಿಯ ಪರಿಣಾಮಗಳನ್ನು ಕಡಿಮೆ ಮಾಡುತ್ತದೆ. ಕರಿಬೇವಿನ ಎಲೆಗಳ ಅತ್ಯುತ್ತಮ ಆರೋಗ್ಯ ಪ್ರಯೋಜನವೆಂದರೆ ಅದು ಮಧುಮೇಹವನ್ನು ನಿಯಂತ್ರಿಸುವ ಸಾಮರ್ಥ್ಯವನ್ನು ಹೊಂದಿದೆ. ಆಹಾರದಲ್ಲಿ ಕರಿಬೇವಿನ ಎಲೆಗಳನ್ನು ಬಳಸುವುದರ ಮೂಲಕ, ಇನ್ಸುಲಿನ್ ಉತ್ಪಾದಿಸುವ ಮೇದೋಜ್ಜೀರಕ ಗ್ರಂಥಿಯ ಕೋಶಗಳನ್ನು ಹೆಚ್ಚಿಸಬಹುದು.
ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ