ಉತ್ತಮ ಆರೋಗ್ಯಕ್ಕೆ ತಂಪು ಪಾನೀಯಗಳ ಬದಲು ಇದನ್ನು ಸೇವಿಸಿ

ಬೊಜ್ಜು, ಟೈಪ್ 2 ಡಯಾಬಿಟಿಸ್ ಮತ್ತು ಹೃದ್ರೋಗಗಳ ಅಪಾಯವನ್ನು ಕಡಿಮೆ ಮಾಡಲು ಜನರು ಸಕ್ಕರೆ ಅಂಶ ಹೆಚ್ಚಾಗಿರುವ ಪಾನೀಯಗಳ ಸೇವನೆಯನ್ನು ಕಡಿಮೆ ಮಾಡುವುದು ಉತ್ತಮ. ಹಾಗಾದರೆ, ತಂಪು ಪಾನೀಯಗಳ ಬದಲು ಏನು ಸೇವಿಸಬಹುದು? ಇದರಿಂದ ನಮ್ಮ ಆರೋಗ್ಯಕ್ಕೆ ಯಾವ ರೀತಿಯ ಪ್ರಯೋಜನಗಳಿವೆ?

ಉತ್ತಮ ಆರೋಗ್ಯಕ್ಕೆ ತಂಪು ಪಾನೀಯಗಳ ಬದಲು ಇದನ್ನು ಸೇವಿಸಿ
ಹಣ್ಣಿನ ಜ್ಯೂಸ್Image Credit source: iStock
Follow us
ಸುಷ್ಮಾ ಚಕ್ರೆ
|

Updated on: Feb 01, 2024 | 12:53 PM

ಕೋಲ್ಡ್ ಡ್ರಿಂಕ್ಸ್ (Cold Drinks) ಕುಡಿಯದಿರುವವರು ಯಾರಿದ್ದಾರೆ? ಅಂಗಡಿಗಳಲ್ಲಿ, ಬೇಕರಿಗಳಲ್ಲಿ ನಾನಾ ಬ್ರಾಂಡ್​ಗಳ, ಹಲವು ಬಣ್ಣಗಳ, ವಿವಿಧ ರೀತಿಯ ಫ್ಲೇವರ್​ನ ಸಾಫ್ಟ್​ ಡ್ರಿಂಕ್​ಗಳು (Soft Drinks) ಸಿಗುತ್ತವೆ. ಆದರೆ, ಈ ತಂಪು ಪಾನೀಯಗಳು ಅಧಿಕ ಸಕ್ಕರೆ ಅಂಶ, ಸೋಡಾ, ಸಂರಕ್ಷಕಗಳನ್ನು ಹೊಂದಿರುತ್ತದೆ. ಇವು ಮಧುಮೇಹ, ರಕ್ತದೊತ್ತಡ, ಹೃದ್ರೋಗ (Heart Problems) ಮುಂತಾದ ಗಂಭೀರ ಆರೋಗ್ಯ ಸಮಸ್ಯೆಗೂ ಕಾರಣವಾಗಬಹುದು. ಹಾಗಾಗಿ, ನೀವು ತಂಪು ಪಾನೀಯಗಳ ಬದಲು ನಿಮ್ಮ ದಿನನಿತ್ಯದ ಆಹಾರದಲ್ಲಿ ಈ ಆರೋಗ್ಯಕರ ಪಾನೀಯಗಳನ್ನು ಸೇರಿಸಿಕೊಳ್ಳಬಹುದು.

ದ್ರಾಕ್ಷಿ ಜ್ಯೂಸ್:

ಅಧಿಕ ಸಕ್ಕರೆಯ ಅಂಶವಿರುವ ತಂಪು ಪಾನೀಯಗಳನ್ನು ಸೇವಿಸುವ ಬದಲು ದ್ರಾಕ್ಷಿ ಜ್ಯೂಸ್ ಸೇವಿಸಬಹುದು. ದ್ರಾಕ್ಷಿ ಹಣ್ಣಿನಲ್ಲಿ 2 ಪ್ರಾಥಮಿಕ ಉತ್ಕರ್ಷಣ ನಿರೋಧಕಗಳಾದ ನರಿಂಗಿನ್ ಮತ್ತು ನರಿಂಗೆನಿನ್ ಇದೆ. ಇವು ಉರಿಯೂತವನ್ನು ಕಡಿಮೆ ಮಾಡುವ ಮೂಲಕ ಮತ್ತು ಲಿವರ್​ನ ಕೋಶಗಳನ್ನು ರಕ್ಷಿಸುವ ಮೂಲಕ ನಿಮ್ಮ ಲಿವರ್ ಅನ್ನು ಆರೋಗ್ಯಕರವಾಗಿರಿಸುತ್ತದೆ.

ಇದನ್ನೂ ಓದಿ: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನುಗ್ಗೆ ಸೊಪ್ಪಿನ ಜ್ಯೂಸ್ ಯಾಕೆ ಕುಡಿಯಬೇಕು?

ಬೀಟ್ರೂಟ್ ಜ್ಯೂಸ್:

ಬೀಟ್ರೂಟ್ ಜ್ಯೂಸ್ ಸೇವನೆಯು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದರಲ್ಲಿರುವ ನೈಟ್ರೇಟ್ ಮತ್ತು ಉತ್ಕರ್ಷಣ ನಿರೋಧಕಗಳು ಲಿವರ್​ನ ಆಕ್ಸಿಡೇಟಿವ್ ಹಾನಿ ಮತ್ತು ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ನಿಂಬೆ ಜ್ಯೂಸ್:

ನಿಂಬೆ ನೀರನ್ನು ಕುಡಿಯುವುದರಿಂದ ನಿಂಬೆಯಲ್ಲಿ ಕಂಡುಬರುವ ಹೆಚ್ಚಿನ ಪ್ರಮಾಣದ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ಲಿವರ್​ಗೆ ಸಂಬಂಧಿಸಿದ ಅನೇಕ ಕಾಯಿಲೆಗಳನ್ನು ತಡೆಯಲು ಸಹಾಯ ಮಾಡುತ್ತದೆ. ಇದು ಲಿವರ್​ನಿಂದ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ.

ಗ್ರೀನ್ ಟೀ:

ಗ್ರೀನ್ ಟೀಯಲ್ಲಿರುವ ಆ್ಯಂಟಿಆಕ್ಸಿಡೆಂಟ್‌ಗಳು ಆಲ್ಕೊಹಾಲ್​ಯುಕ್ತವಲ್ಲದ ಕೊಬ್ಬಿನ ಪಿತ್ತಜನಕಾಂಗದ ಕಾಯಿಲೆ (NAFLD)ಯಿಂದ ಬಳಲುತ್ತಿರುವ ರೋಗಿಗಳಲ್ಲಿ ಲಿವರ್​ನ ಕಿಣ್ವದ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಹಣ್ಣಿನ ಜ್ಯೂಸ್:

ಹಣ್ಣಿನ ಜ್ಯೂಸ್​ಗಳಲ್ಲಿ ಖನಿಜಗಳು ಮತ್ತು ವಿಟಮಿನ್‌ ಸಮೃದ್ಧವಾಗಿವೆ. ಇದು ನಿರ್ಜಲೀಕರಣವನ್ನು ತಡೆಯುತ್ತದೆ.

ಇದನ್ನೂ ಓದಿ: ಟೈಫಾಯ್ಡ್​ನಿಂದ ಪಾರಾಗಲು ಟೊಮ್ಯಾಟೋ ಜ್ಯೂಸ್ ಸೇವಿಸಿ; ಇಲ್ಲಿದೆ ಅಚ್ಚರಿಯ ಸಂಗತಿ

ಹಾಲು:

ನಿಮಗೆ ಲ್ಯಾಕ್ಟೋಸ್ ಅಸಹಿಷ್ಣುತೆ ಇಲ್ಲದಿದ್ದರೆ ಹಾಲು ನಿಮಗೆ ಪ್ರೋಟೀನ್ ಮತ್ತು ಕ್ಯಾಲ್ಸಿಯಂನ ಉತ್ತಮ ಮೂಲವಾಗಿದೆ.

ಎಳನೀರು:

ಎಳನೀರಿನಲ್ಲಿ ಕ್ಯಾಲೋರಿ ಕಡಿಮೆಯಾಗಿರುತ್ತದೆ. ಇದರಲ್ಲಿ ಕ್ಯಾಲ್ಸಿಯಂ ಅಂಶ ಸಮೃದ್ಧವಾಗಿದೆ. ತೂಕ ಇಳಿಸಿಕೊಳ್ಳಲು ಬಯಸುವ ಮಹಿಳೆಯರಿಗೆ ಎಳನೀರು ಉತ್ತಮವಾಗಿದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು