ನಿದ್ರಾಹೀನತೆಯಿಂದ ಮಹಿಳೆಯರಲ್ಲಿ ಡಯಾಬಿಟಿಸ್ ಹೆಚ್ಚಳ; ಅಧ್ಯಯನದಲ್ಲಿ ಬಯಲು
ಮಹಿಳೆಯರು ಪುರುಷರಿಗಿಂತ ಕಡಿಮೆ ನಿದ್ರೆ ಮಾಡುತ್ತಾರೆ. ಆದ್ದರಿಂದ ನಿದ್ರಾಹೀನತೆ ಅವರ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ನಿರ್ಣಾಯಕವಾಗಿದೆ. ಅದರಲ್ಲೂ ವಿಶೇಷವಾಗಿ ಋತುಬಂಧಕ್ಕೊಳಗಾದ ಮಹಿಳೆಯರಿಗೆ ನಿದ್ರಾಹೀನತೆಯಿಂದ ಸಾಕಷ್ಟು ತೊಂದರೆಗಳು ಉಂಟಾಗುತ್ತವೆ.
ನಿದ್ರಾಹೀನತೆಯಿಂದ ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಅದರಲ್ಲೂ ವಿಶೇಷವಾಗಿ ಋತುಬಂಧಕ್ಕೊಳಗಾದ ಮಹಿಳೆಯರಲ್ಲಿ ದೀರ್ಘಕಾಲದ ನಿದ್ರಾಹೀನತೆಯಿಂದ ಡಯಾಬಿಟಿಸ್ ಉಂಟಾಗುವ ಸಾಧ್ಯತೆ ಇರುತ್ತದೆ ಎಂದು ಅಧ್ಯಯನವೊಂದು ತಿಳಿಸಿದೆ. ಡಯಾಬಿಟಿಸ್ ಕೇರ್‌ನಲ್ಲಿ ಪ್ರಕಟವಾದ ಅಧ್ಯಯನವು ಟೈಪ್ 2 ಡಯಾಬಿಟಿಸ್ ಅಪಾಯವನ್ನು ತಗ್ಗಿಸುವಲ್ಲಿ ಸಾಕಷ್ಟು ನಿದ್ರೆಯ ಪ್ರಮುಖ ಪಾತ್ರವನ್ನು ಒತ್ತಿಹೇಳಿದೆ.
ನ್ಯಾಶನಲ್ ಹಾರ್ಟ್, ಲಂಗ್ ಮತ್ತು ಬ್ಲಡ್ ಇನ್ಸ್ಟಿಟ್ಯೂಟ್ (ಎನ್‌ಎಚ್‌ಎಲ್‌ಬಿಐ)ನಲ್ಲಿರುವ ಸ್ಲೀಪ್ ಡಿಸಾರ್ಡರ್ ರಿಸರ್ಚ್‌ನ ರಾಷ್ಟ್ರೀಯ ಕೇಂದ್ರದ ನಿರ್ದೇಶಕ ಮರಿಷ್ಕಾ ಬ್ರೌನ್, ಮಹಿಳೆಯರು ಪುರುಷರಿಗಿಂತ ಕಡಿಮೆ ನಿದ್ರೆ ಮಾಡುತ್ತಾರೆ. ಆದ್ದರಿಂದ ನಿದ್ರಾಹೀನತೆ ಅವರ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ನಿರ್ಣಾಯಕವಾಗಿದೆ. ಅದರಲ್ಲೂ ವಿಶೇಷವಾಗಿ ಋತುಬಂಧಕ್ಕೊಳಗಾದ ಮಹಿಳೆಯರಿಗೆ ನಿದ್ರಾಹೀನತೆಯಿಂದ ಸಾಕಷ್ಟು ತೊಂದರೆಗಳು ಉಂಟಾಗುತ್ತವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಡಯಾಬಿಟಿಸ್ ಇರುವವರು ದಿನಕ್ಕೆ ಎಷ್ಟು ಹೊತ್ತು ನಡೆಯಬೇಕು?
ಹಿಂದಿನ ಅಧ್ಯಯನಗಳು ನಿದ್ರೆಯ ಸಮಸ್ಯೆ, ಹೃದಯರಕ್ತನಾಳದ ಕಾಯಿಲೆ ಮತ್ತು ಅಧಿಕ ರಕ್ತದೊತ್ತಡದಂತಹ ಸಮಸ್ಯೆಗಳ ನಡುವಿನ ಸಂಪರ್ಕವನ್ನು ಪರಿಶೋಧಿಸಿದ್ದರೂ ಈ ಸಂಶೋಧನೆಯು ನಿರ್ದಿಷ್ಟವಾಗಿ ಮಹಿಳೆಯರ ಮೇಲೆ ಕೇಂದ್ರೀಕರಿಸುತ್ತದೆ. ಅಧಿಕ ತೂಕ, ಸ್ಥೂಲಕಾಯತೆ, ಕುಟುಂಬದಲ್ಲಿ ಯಾರಿಗಾದರೂ ಡಯಾಬಿಟಿಸ್ ಇದ್ದರೆ, ಹೆಚ್ಚಿದ ಲಿಪಿಡ್ ಮಟ್ಟಗಳು ಅಥವಾ ಹೃದಯರಕ್ತನಾಳದ ಕಾಯಿಲೆಯಂತಹ ಅಂಶಗಳಿಂದಾಗಿ ಕಾರ್ಡಿಯೋಮೆಟಬಾಲಿಕ್ ಕಾಯಿಲೆಗಳ ಅಪಾಯ ಮಹಿಳೆಯರಲ್ಲಿ ಹೆಚ್ಚಾಗುತ್ತಿದೆ ಎಂಬ ಅಂಶವನ್ನು ಅಧ್ಯಯನದಲ್ಲಿ ಕಂಡುಕೊಳ್ಳಲಾಗಿದೆ.
ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ