ಹಾಲು ಹಾಕಿದ ಟೀ ಕುಡಿಯುತ್ತೀರಾ? ಈ ಅಪಾಯಗಳ ಬಗ್ಗೆಯೂ ತಿಳಿದಿರಲಿ

ಹಾಲು ಹಾಕಿದ ಟೀ ಸೇವನೆಯಿಂದ ನಿಮ್ಮ ಹಲ್ಲುಗಳ ಮೇಲೆ ಕಲೆ ಮೂಡಬಹುದು. ಸಿಹಿಯಾದ ಹಾಲಿನ ಚಹಾವು ಹೆಚ್ಚಿನ ಕ್ಯಾಲೋರಿಗಳು ಮತ್ತು ಸಕ್ಕರೆಯನ್ನು ಹೊಂದಿರುತ್ತದೆ. ಹಾಲು ಹಾಕಿದ ಟೀ ಕುಡಿಯುವುದರಿಂದ ಅನೇಕ ಅಡ್ಡಪರಿಣಾಮಗಳು ಕೂಡ ಉಂಟಾಗುತ್ತವೆ.

ಹಾಲು ಹಾಕಿದ ಟೀ ಕುಡಿಯುತ್ತೀರಾ? ಈ ಅಪಾಯಗಳ ಬಗ್ಗೆಯೂ ತಿಳಿದಿರಲಿ
ಹಾಲು ಹಾಕಿದ ಟೀ Image Credit source: iStock
Follow us
ಸುಷ್ಮಾ ಚಕ್ರೆ
|

Updated on: Jan 18, 2024 | 7:37 PM

ಟೀ ಎಂದರೆ ಊಟ- ತಿಂಡಿಯನ್ನು ಕೂಡ ಬಿಡುವಷ್ಟು ಚಹಾ ಪ್ರೇಮಿಗಳು ಸಾಕಷ್ಟು ಜನರಿದ್ದಾರೆ. ಗ್ರೀನ್ ಟೀ, ಬ್ಲಾಕ್ ಟೀ, ಲೆಮನ್ ಟೀ ಮುಂತಾದ ಟೀಗಳಿಗೂ ಬಹಳ ಮುಂಚೆಯೇ ಬಂದ ಹಾಲು ಹಾಕಿದ ಟೀ ರುಚಿಗೆ ಮಾರುಹೋಗದವರೇ ಇಲ್ಲ. ಆದರೆ, ಚಹಾಪುಡಿ ಮತ್ತು ಹಾಲಿನ ಸಂಯೋಜನೆಯು ಕೆಲವು ಜನರಲ್ಲಿ ಆಮ್ಲೀಯತೆಗೆ ಕಾರಣವಾಗಬಹುದು. ಇದು ಎದೆಯುರಿ ಮತ್ತು ಆಸಿಡ್ ರಿಫ್ಲಕ್ಸ್‌ನಂತಹ ರೋಗಲಕ್ಷಣಗಳಿಗೆ ಕಾರಣವಾಗುತ್ತದೆ.

ಹಾಲು ಹಾಕಿದ ಟೀ ಕುಡಿಯುವುದರಿಂದ ಅನೇಕ ಅಡ್ಡಪರಿಣಾಮಗಳು ಕೂಡ ಉಂಟಾಗುತ್ತವೆ. ಈ ಟೀ ಸೇವನೆಯಿಂದ ನಿಮ್ಮ ಹಲ್ಲುಗಳ ಮೇಲೆ ಕಲೆ ಮೂಡಬಹುದು. ಸಿಹಿಯಾದ ಹಾಲಿನ ಚಹಾವು ಹೆಚ್ಚಿನ ಕ್ಯಾಲೋರಿಗಳು ಮತ್ತು ಸಕ್ಕರೆಯನ್ನು ಹೊಂದಿರುತ್ತದೆ. ಇದನ್ನು ಅಧಿಕವಾಗಿ ಸೇವಿಸಿದರೆ ತೂಕ ಹೆಚ್ಚಾಗಲು ಕಾರಣವಾಗಬಹುದು.

ಇದನ್ನೂ ಓದಿ: ಲವಂಗದ ಟೀಯನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕಾ? ಊಟವಾದ ಮೇಲೆ ಕುಡಿಯಬೇಕಾ?

ನೀವು ಲ್ಯಾಕ್ಟೋಸ್ ಅಸಹಿಷ್ಣುತೆ ಹೊಂದಿದ್ದರೆ, ಹಾಲಿನ ಚಹಾ ಗ್ಯಾಸ್ ಮತ್ತು ಅತಿಸಾರದಂತಹ ಜೀರ್ಣಕಾರಿ ಸಮಸ್ಯೆಗಳನ್ನು ಉಂಟುಮಾಡಬಹುದು. ಅತಿಯಾದ ಚಹಾ ಸೇವನೆಯು ಕ್ಯಾಲ್ಸಿಯಂ ಹೀರಿಕೊಳ್ಳುವಿಕೆಗೆ ಅಡ್ಡಿಯುಂಟುಮಾಡುತ್ತದೆ. ಇದು ಮೂಳೆಯ ಆರೋಗ್ಯದ ಮೇಲೆ ಪ್ರಭಾವ ಬೀರಬಹುದು. ಚಹಾದಲ್ಲಿನ ಕೆಫೀನ್ ಸೇವನೆಯಿಂದ ಮೂತ್ರವರ್ಧಕ ಪರಿಣಾಮ ಕಡಿಮೆಯಾಗಬಹುದು. ಇದರಿಂದ ನಿರ್ಜಲೀಕರಣ ಉಂಟಾಗುತ್ತದೆ.

ಇದನ್ನೂ ಓದಿ: ಚಳಿಗಾಲದಲ್ಲಿ ಬೆಲ್ಲದ ಚಹಾ ಕುಡಿಯುವುದರಿಂದ ಆರೋಗ್ಯ ಲಾಭಗಳು ಅಧಿಕ!

ಕೆಲವು ಅಧ್ಯಯನಗಳು ಚಹಾದ ಅತಿಯಾದ ಸೇವನೆಯು ಇನ್ಸುಲಿನ್ ಸಂವೇದನೆಯ ಮೇಲೆ ಪರಿಣಾಮ ಬೀರಬಹುದು ಎಂದು ಸೂಚಿಸುತ್ತವೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಂಭಾವ್ಯವಾಗಿ ಪರಿಣಾಮ ಬೀರುತ್ತದೆ. ಆದರೂ ಈ ವಿಷಯದಲ್ಲಿ ಹೆಚ್ಚಿನ ಸಂಶೋಧನೆಯ ಅಗತ್ಯವಿದೆ. ಕೆಲವು ವ್ಯಕ್ತಿಗಳು ಚಹಾ ಅಥವಾ ಹಾಲಿನಲ್ಲಿರುವ ಘಟಕಗಳಿಗೆ ಅಲರ್ಜಿಯನ್ನು ಹೊಂದಿರಬಹುದು. ಇದು ತುರಿಕೆ ಅಥವಾ ಊತದಂತಹ ಅಲರ್ಜಿಯ ಪ್ರತಿಕ್ರಿಯೆಗಳಿಗೆ ಕಾರಣವಾಗುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ