Health Tips: ಒಣ ಬಾದಾಮಿಗಿಂತ ನೀರಲ್ಲಿ ನೆನೆಸಿದ ಬಾದಾಮಿ ಸೇವನೆಯು ಆರೋಗ್ಯಕ್ಕೆ ಉತ್ತಮ

ಕೆಲವರು ಬಾದಾಮಿಯನ್ನು ಹುರಿದು ತಿನ್ನುತ್ತಾರೆ, ಇನ್ನು ಕೆಲವರು ನೀರಿನಲ್ಲಿ ನೆನೆಸಿ ಸೇವಿಸುತ್ತಾರೆ. ಇವುಗಳಲ್ಲಿ ಯಾವುದೇ ದೇಹಕ್ಕೆ ಉತ್ತಮ ಎಂಬುದು ತಿಳಿದಿದೆಯೇ?

Health Tips: ಒಣ ಬಾದಾಮಿಗಿಂತ ನೀರಲ್ಲಿ ನೆನೆಸಿದ ಬಾದಾಮಿ ಸೇವನೆಯು ಆರೋಗ್ಯಕ್ಕೆ ಉತ್ತಮ
ಸಾಂದರ್ಭಿಕ ಚಿತ್ರ
Follow us
TV9 Web
| Updated By: shruti hegde

Updated on: Sep 06, 2021 | 12:32 PM

ಬಾದಾಮಿ ಸೇವನೆಯಿಂದ ಆರೋಗ್ಯಕ್ಕೆ ತುಂಬಾ ಪ್ರಯೋಜವಿದೆ ಎಂಬುದು ಈಗಾಗಲೇ ಗೊತ್ತಿರುವ ಸಂಗತಿ. ಆದರೆ ಕೆಲವರು ಬಾದಾಮಿಯನ್ನು ಹುರಿದು ತಿನ್ನುತ್ತಾರೆ, ಇನ್ನು ಕೆಲವರು ನೀರಿನಲ್ಲಿ ನೆನೆಸಿ ಸೇವಿಸುತ್ತಾರೆ. ಇವುಗಳಲ್ಲಿ ಯಾವುದೇ ದೇಹಕ್ಕೆ ಉತ್ತಮ ಎಂಬುದು ತಿಳಿದಿದೆಯೇ? ಬಾದಾಮಿಯು ಪೋಷಕಾಂಶಗಳಿಂದ ತುಂಬಿರುತ್ತದೆ. ಫೈಬರ್, ಪ್ರೋಟೀನ್, ವಿಟಮಿನ್ ಇ, ಮೆಗ್ನೀಶಿಯಂ, ಮ್ಯಾಂಗನೀಸ್, ತಾಮ್ರ, ರಂಜಕದ ಮೂಲವಾಗಿದೆ. ದೇಹದಲ್ಲಿ ಮೂಳೆ ಆರೋಗ್ಯ ಹಾಗೂ ಹೃದಯದ ಅನಾರೋಗ್ಯ ಅಪಾಯವನ್ನು ತಡೆಗಟ್ಟಲು ಸಹಾಯಕವಾಗಿದೆ.

ಬಾದಾಮಿ ಸೆವನೆಯು ರಕ್ತದಲ್ಲಿನ ಆ್ಯಂಟಿ ಆ್ಯಕ್ಸಿಡೆಂಟ್​ಗಳ ಮಟ್ಟವನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ. ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯಕವಾಗಿದೆ. ಟೈಪ್ 2 ಡಯಾಬಿಟಿಸ್ ತೊಂದರೆ ಇರುವವರು ಬಾದಾಮಿ ಸೇವನೆಯಿಂದ ಪ್ರಯೋಜನ ಪಡೆಯುತ್ತಾರೆ. ಏಕೆಂದರೆ ಇದರಲ್ಲಿರುವ ಮೆಗ್ನೀಶಿಯಂ ಅಂಶ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯಕವಾಗಿದೆ. ಬಾದಾಮಿಯನ್ನು ನೆನೆಸಿ ತಿನ್ನುವುದು ಆರೋಗ್ಯಕ್ಕೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ. ಉತ್ತಮ ಪೋಷಕಾಂಶಗಳು ಮತ್ತು ಅತ್ಯುತ್ತಮ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುವ ಮೂಲಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.

ನೆನೆಸಿದ ಬಾದಾಮಿಯನ್ನು ಸೇವಿಸುವುದರಿಂದ ಆರೋಗ್ಯ ಪ್ರಯೋಜನಗಳು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ ಒಣ ಬಾದಾಮಿ ಹಾಗೂ ಹುರಿದ ಬಾದಾಮಿಗಿಂತ ನೆನೆಸಿದ ಬಾದಾಮಿ ಜೀರ್ಣಕ್ರಿಯೆಗೆ ಹೆಚ್ಚು ಪ್ರಯೋಜನವನ್ನು ನೀಡುತ್ತದೆ. ಬಾದಾಮಿಯೇ ಆಗಿರಲಿ ಅಥವಾ ಇನ್ನಿತರ ಯಾವುದೇ ಆಹಾರ ಪದಾರ್ಥವಾಗಲಿ ಚೆನ್ನಾಗಿ ಅಗಿದು ಬಳಿಕ ಸೇವಿಸುವುದರಿಂದ ಜೀರ್ಣ ಕ್ರಿಯೆ ಸರಿಯಾದ ರೀತಿಯಲ್ಲಿ ನಡೆಯುತ್ತದೆ. ಬಾದಾಮಿ ಉತ್ಕರ್ಷಣ ನಿರೋಧಕಗಳ ಮೂಲವಾಗಿದೆ ಮತ್ತು ಅವುಗಳನ್ನು ನೆನೆಸಿ ಸೇವಿಸುವುದರಿಂದ ಆರೋಗ್ಯ ಪ್ರಯೋಜನಗಳು ಹೆಚ್ಚಿವೆ.

ಹೆಚ್ಚು ಪೌಷ್ಟಿಕಾಂಶ ನೀರಿನಲ್ಲಿ ನೆನೆಸಿದ ಬಾದಾಮಿಯನ್ನು ಸೇವಿಸುವುದರಿಂದ ಆ್ಯಂಟಿಆ್ಯಕ್ಸಿಡೆಂಟ್​ಗಳು ಮತ್ತು ಫೈಬರ್​ ಅಂಶವನ್ನು ಪಡೆಯಬಹುದು. ನೀರಿನಲ್ಲಿ ನೆನೆಸುವ ಪ್ರಕ್ರಿಯೆಯಿಂದ ಕಲ್ಮಶಗಳನ್ನು ತೆಗೆದುಹಾಕಲು ಸಹಾಯಕವಾಗಿದೆ.

ತೂಕ ನಷ್ಟಕ್ಕೆ ಸಹಾಯಕ ಬಾದಾಮಿಯನ್ನು ನೀರಿನಲ್ಲಿ ನೆನೆಸಿ ಸೇವಿಸುವುದರಿಂದ ಚಯಾಪಚಯವನ್ನು ಹೆಚ್ಚಿಸಲು ಮತ್ತು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಜತೆಗೆ ತೂಕ ಇಳಿಸಿಕೊಳ್ಳಲು ಬೇಕಾದ ಲಿಪೇಸ್​ನಂತಹ ಕಿಣ್ವಗಳನ್ನು ಬಿಡುಗಡೆ ಮಾಡುತ್ತದೆ.

ವಿಶೇಷವಾಗಿ ವೃದ್ಧಾಪ್ಯದಲ್ಲಿ ನೆನೆಸಿದ ಬಾದಾಮಿಯನ್ನು ಸೇವಿಸುವುದು ಉತ್ತಮ. ಏಕೆಂದರೆ ಜೀರ್ಣಕ್ರಿಯೆಗೆ ಯಾವುದೇ ಅಡ್ಡಿ ಉಂಟಾಗುವುದಿಲ್ಲ. ನೀರಲ್ಲಿ ಬಾದಾಮಿಯನ್ನು ನೆನೆಸುವ ಪ್ರಕ್ರಿಯೆಯು ಸುಲಭವಾಗಿ ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಜತೆಗೆ ಮೃದುವಾಗಿರುವುದರಿಂದ ವಯಸ್ಸಾದವರಿಗೆ ಅಗಿಯಲೂ ಸಹ ಸುಲಭ.

ಇದನ್ನೂ ಓದಿ:

Health Tips: ದಿನಕ್ಕೆ ಎರಡು ಬಾರಿ ಬಾದಾಮಿ ಸೇವಿಸುವುದರಿಂದಾಗುವ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯಿರಿ

Health Tips: ಪ್ರತಿದಿನ ಬಾದಾಮಿ ಹಾಲು ಕುಡಿದ್ರೆ ಸಿಗುತ್ತೆ ಹಲವು ಪ್ರಯೋಜನಗಳು

(Health Tips know about health benefits Of almonds check in Kannada)

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ