Diabetes care: ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುವ 5 ಪದಾರ್ಥಗಳು

| Updated By: ಆಯೇಷಾ ಬಾನು

Updated on: Aug 27, 2021 | 7:50 AM

ಇತ್ತೀಚಿನ ದಿನಗಳನ್ನು ಹೆಚ್ಚು ಮಧುಮೇಹ ಸಮಸ್ಯೆ ಜನರಲ್ಲಿ ಕಂಡು ಬರುತ್ತಿದೆ. ಇದನ್ನು ನಿಯಂತ್ರಿಸಲು ನಮ್ಮ ಆಹಾರ ವ್ಯವಸ್ಥೆ ಸರಿಯಾಗಿರಬೇಕು.

Diabetes care: ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುವ 5 ಪದಾರ್ಥಗಳು
ಸಾಂದರ್ಭಿಕ ಚಿತ್ರ
Follow us on

ಆರೋಗ್ಯವೊಂದಿದ್ದರೆ ಜೀವನದಲ್ಲಿ ಏನನ್ನು ಬೇಕಾದರೂ ಸಾಧಿಸಬಹುದು ಎಂಬ ಮಾತಿದೆ. ಹಾಗಾಗಿ ನಾವು ಆರೋಗ್ಯವಂತರಾಗಿರುವುದು ಮುಖ್ಯ. ನಮ್ಮ ಆರೋಗ್ಯ ಮತ್ತು ನಾವು ಸೇವಿಸುವ ಆಹಾರ ಒಂದಕ್ಕೊಂದು ಸಂಬಂಧ ಹೊಂದಿದೆ. ಸೇವಿಸುವ ಆಹಾರ ಪೌಷ್ಟಿಕವಾಗಿದ್ದರೆ ಆರೋಗ್ಯ ಸುಧಾರಿಸುತ್ತದೆ. ಇತ್ತೀಚಿನ ದಿನಗಳನ್ನು ಹೆಚ್ಚು ಮಧುಮೇಹ ಸಮಸ್ಯೆ ಜನರಲ್ಲಿ ಕಂಡು ಬರುತ್ತಿದೆ. ಇದನ್ನು ನಿಯಂತ್ರಿಸಲು ನಮ್ಮ ಆಹಾರ ವ್ಯವಸ್ಥೆ ಸರಿಯಾಗಿರಬೇಕು. ಈ ಕೆಳಗೆ ಹೇಳಿರುವಂತಹ ಆಹಾರ ಪದಾರ್ಥಗಳನ್ನು ಸೇವಿಸುವ ಮೂಲಕ ಮಧುಮೇಹ ಸಮಸ್ಯೆಯನ್ನು ನಿಯಂತ್ರಿಸಬಹುದು.

ಅರಿಶಿಣದಲ್ಲಿರುವ ಕರ್ಕ್ಯುಮಿನ್​ ಪ್ರಬಲವಾದ ಉತ್ಕರ್ಷಣ ನಿರೋಧಕವಾಗಿದೆ. ಇದು ಮಧುಮೇಹ ಚಿಕಿತ್ಸೆಯಲ್ಲಿ ಸಹಾಯ ಮಾಡುತ್ತದೆ. ಅರೀಶಿಣವು ದೇಹಕ್ಕೆ ಅನೇಕ ಪ್ರಯೋಜನಗಳನ್ನು ತರಬಹುದು. ಅರಿಶಿಣವು ಉರಿಯೂತ ನಿವಾರಕ ಗುಣಗಳಿಂದ ಕೂಡಿದೆ. ನಿಮ್ಮ ಆಹಾರದಲ್ಲಿ ಅರಿಶಿಣವನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳಿ.

ಮೆಂತ್ಯೆ ಬೀಜಗಳು ಕಾರ್ಬೊಹೈಡ್ರೇಟ್​ಗಳ ಜೀರ್ಣಕ್ರಿಯೆ ಮತ್ತು ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸುಧಾರಿಸುತ್ತದೆ. ಮೆಂತ್ಯೆ ಬೀಜಗಳು ನಿಮ್ಮ ಹೃದಯಕ್ಕೂ ಒಳ್ಳೆಯದು ಏಕೆಂದರೆ ಅವು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಮತ್ತು ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ.

ತುಳಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ತುಳಸಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ತುಳಸಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡಬಹುದು. ತುಳಸಿಯು ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ.

ದಾಲ್ಚಿನ್ನಿಯು ವೈರಸ್ ವಿರೋಧಿ, ಬ್ಯಾಕ್ಟೀರಿಯಾ ವಿರೋಧಿ ಮತ್ತು ಶಿಲೀಂದ್ರ ವಿರೋಧಿ ಗುಣಗಳನ್ನು ಹೊಂದಿದೆ. ಇದು ಉತ್ಕರ್ಷಣ ನಿರೋಧಕ ಮತ್ತು ಉರಿಯೂತದ ಗುಣಗಳನ್ನು ಹೊಂದಿದೆ. ದಾಲ್ಚಿನ್ನಿ ಟೈಪ್ 2 ಮಧುಮೇಹದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ:

Health Tips: ಅರಿಶಿಣ ನೀರು ಸೇವಿಸುವುದರಿಂದ ಆರೋಗ್ಯ ಪ್ರಯೋಜನಗಳು ಎಷ್ಟಿವೆ ತಿಳಿಯಿರಿ

ದ್ರಾಕ್ಷಿ ಹಣ್ಣಿನ ಬೀಜದ ಆರೋಗ್ಯ ಪ್ರಯೋಜನಗಳು; ಚರ್ಮದ ಕಾಂತಿ ಹೆಚ್ಚಿಸಿಕೊಳ್ಳಲು ಒಳ್ಳೆಯ ಔಷಧ

(Health Tips Know about these remedies for diabetes care check in kannada)