Health Tips : ಚಳಿಗಾಲದಲ್ಲಿ ಹಾಲಿಗೆ ಈ ಪದಾರ್ಥಗಳನ್ನು ಬೆರೆಸಿ ಕುಡಿದ್ರೆ ಆರೋಗ್ಯ ಸಮಸ್ಯೆ ಹತ್ತಿರ ಸುಳಿಯಲ್ಲ

ಚಳಿಗಾಲದಲ್ಲಿ ವಾತಾವರಣವು ತಂಪಾಗಿರುವ ಕಾರಣ ಶೀತ ನೆಗಡಿಯಂತಹ ಸಮಸ್ಯೆಗಳು ಸರ್ವೆ ಸಾಮಾನ್ಯ. ಈ ಋತುವಿನಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಿರುವುದರಿಂದ ಒಂದಲ್ಲ ಒಂದು ಆರೋಗ್ಯ ಸಮಸ್ಯೆಗಳು ಕಾಡುತ್ತದೆ. ಹೀಗಾಗಿ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಪೌಷ್ಟಿಕಾಂಶಯುಕ್ತ ಆಹಾರ ಸೇವಿಸುವುದು ಅತ್ಯಗತ್ಯ. ಹೀಗಾಗಿ ಹಾಲಿಗೆ ಈ ಪದಾರ್ಥಗಳನ್ನು ಬೆರೆಸಿ ಕುಡಿಯುವುದು ಕೂಡ ಆರೋಗ್ಯ ಸಮಸ್ಯೆಗಳ ವಿರುದ್ಧ ಹೋರಾಡಲು ಬೇಕಾಗುವ ಶಕ್ತಿಯನ್ನು ದೇಹಕ್ಕೆ ನೀಡುತ್ತವೆ.

Health Tips : ಚಳಿಗಾಲದಲ್ಲಿ ಹಾಲಿಗೆ ಈ ಪದಾರ್ಥಗಳನ್ನು ಬೆರೆಸಿ ಕುಡಿದ್ರೆ ಆರೋಗ್ಯ ಸಮಸ್ಯೆ ಹತ್ತಿರ ಸುಳಿಯಲ್ಲ
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Dec 17, 2024 | 2:01 PM

ಚಳಿಗಾಲದಲ್ಲಿ ಧರಿಸುವ ಉಡುಪು ಸೇರಿದಂತೆ ಸೇವಿಸುವ ಆಹಾರಗಳ ಬಗ್ಗೆ ಹೆಚ್ಚು ಕಾಳಜಿವಹಿಸಬೇಕು. ಸ್ವಲ್ಪ ಆಹಾರದಲ್ಲಿ ವ್ಯತ್ಯಾಸವಾದರೂ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ಹೀಗಾಗಿ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಿ ರೋಗ ನಿರೋಧಕ ಶಕ್ತಿಯನ್ನು ಆಹಾರವನ್ನು ಹೆಚ್ಚೆಚ್ಚು ಸೇವಿಸಬೇಕು. ಈ ಹಾಲನ್ನು ಅತ್ಯುತ್ತಮ ಆಹಾರವೆಂದು ಪರಿಗಣಿಸಲಾಗಿದ್ದು , ಇದು ಕ್ಯಾಲ್ಸಿಯಂ ಹಾಗೂ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ. ಪ್ರತಿದಿನವು ಹಾಲಿಗೆ ಈ ಪದಾರ್ಥಗಳನ್ನು ಬೆರೆಸಿ ಸೇವಿಸುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಾಧ್ಯ.

  • ಅರಶಿಣ ಹಾಲು : ರಾತ್ರಿ ಮಲಗುವುದಕ್ಕಿಂತ ಮುಂಚೆ ಬೆಚ್ಚಗಿನ ಹಾಲಿನಲ್ಲಿ ಅರ್ಧ ಚಮಚ ಅರಿಶಿನವನ್ನು ಮಿಶ್ರಣ ಮಾಡಿ ಕುಡಿಯುವುದು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಇದರ ನಿಯಮಿತ ಸೇವನೆಯೂ ಸ್ನಾಯುಗಳು, ಕೀಲುಗಳಲ್ಲಿನ ನೋವು ಹಾಗೂ ಉರಿಯೂತವನ್ನು ನಿವಾರಿಸುತ್ತದೆ. ನಿದ್ರೆಯನ್ನು ಸುಧಾರಿಸುವುದಲ್ಲದೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಕಾರಿಯಾಗಿದೆ.
  • ಕೇಸರಿ ಹಾಲು : ಚಳಿಗಾಲದಲ್ಲಿ ಒಂದು ಲೋಟ ಹಾಲಿಗೆ ಎರಡು ಎಳೆ ಕೇಸರಿಗಳನ್ನು ಬೆರೆಸಿ 15 ನಿಮಿಷಗಳ ನಂತರ ಕುಡಿಯುವುದರಿಂದ ದೇಹವನ್ನು ಬೆಚ್ಚಗಿರಿಸಲು ಸಹಕಾರಿಯಾಗಿದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ, ಶೀತ ಕೆಮ್ಮಿನಂತಹ ಆರೋಗ್ಯ ಸಮಸ್ಯೆಯಿಂದ ರಕ್ಷಿಸುತ್ತದೆ. ಅದಲ್ಲದೇ, ಆಯಾಸ, ಒತ್ತಡ, ನಿದ್ರಾಹೀನತೆ, ಕಣ್ಣುಗಳ ದೌರ್ಬಲ್ಯ ಸೇರಿದಂತೆ ಇನ್ನಿತ್ತರ ಸಮಸ್ಯೆಗಳನ್ನು ದೂರ ಮಾಡುತ್ತದೆ. ಚರ್ಮದ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ.
  • ಶುಂಠಿ ಮತ್ತು ಕರಿಮೆಣಸು ಮಿಶ್ರಿತ ಹಾಲು : ಚಳಿಗಾಲದಲ್ಲಿ ನೆಗಡಿ ಮತ್ತು ಕೆಮ್ಮು ತುಂಬಾ ಬಾಧಿಸುತ್ತಿದ್ದರೆ, ಪ್ರತಿದಿನ ಶುಂಠಿ ಮತ್ತು ಕರಿಮೆಣಸು ಮಿಶ್ರಿತ ಹಾಲು ಕುಡಿಯುವುದರಿಂದ ಈ ಸಮಸ್ಯೆಯಿಂದ ದೂರವಿರಬಹುದು. ಸ್ವಲ್ಪ ಶುಂಠಿ ಹಾಗೂ ಕರಿಮೆಣಸಿನ ಪುಡಿ ಬೆರೆಸಿ ಚೆನ್ನಾಗಿ ಕುದಿಸಿಕೊಳ್ಳಬೇಕು. ಈ ಹಾಲನ್ನು ಸೋಸಿದ ಬಳಿಕ ಒಂದು ಚಿಟಿಕೆ ಅರಿಶಿನ ಹಾಗೂ ಜೇನುತುಪ್ಪವನ್ನು ಬೆರೆಸಿ ಸೇವಿಸಬಹುದು. ಇದು ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ, ಆರೋಗ್ಯ ಸಮಸ್ಯೆಗಳು ಬಾರದಂತೆ ನೋಡಿಕೊಳ್ಳುತ್ತದೆ.
  • ಒಣಹಣ್ಣು ಮಿಶ್ರಿತ ಹಾಲು : ಬಾದಾಮಿ, ವಾಲ್ ನಟ್ಸ್ , ಗೋಡಂಬಿಗಳನ್ನು ಸಣ್ಣ ತುಂಡುಗಳಾಗಿ ಪುಡಿಮಾಡಿ ಹಾಲಿಗೆ ಬೆರೆಸಿ ಕುಡಿಯುವುದರಿಂದ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳಿವೆ. ಮಕ್ಕಳಿಗೆ ಈ ಹಾಲನ್ನು ನೀಡುವುದರಿಂದ ಅಗತ್ಯವಿರುವ ಪೋಷಕಾಂಶಗಳು ದೇಹಕ್ಕೆ ಸೇರುವುದಲ್ಲದೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ ಆರೋಗ್ಯವನ್ನು ಕಾಪಾಡಲು ಸಹಕಾರಿಯಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ