ಸ್ಥೂಲಕಾಯತೆ  ಕೂಡ ಒಂದು ರೋಗ; ಮಕ್ಕಳಲ್ಲಿ ಬೊಜ್ಜು ಹೆಚ್ಚಾಗಲು ಕಾರಣವೇನು?

ಭಾರತದಲ್ಲಿ ಈಗ ಸ್ಥೂಲಕಾಯತೆಯನ್ನು ರೋಗ ಎಂದು ಕರೆಯಲಾಗುತ್ತದೆ. ಈ ವ್ಯಾಖ್ಯಾನವು ವಯಸ್ಕರಿಗೂ ಅನ್ವಯಿಸುತ್ತದೆ. ಆದರೆ, ಮುಖ್ಯವಾಗಿ ಮಕ್ಕಳನ್ನು ಗಮನದಲ್ಲಿಟ್ಟುಕೊಂಡು ಬೊಜ್ಜನ್ನು ರೋಗ ಎಂದು ಪರಿಗಣಿಸಲಾಗಿದೆ.

ಸ್ಥೂಲಕಾಯತೆ  ಕೂಡ ಒಂದು ರೋಗ; ಮಕ್ಕಳಲ್ಲಿ ಬೊಜ್ಜು ಹೆಚ್ಚಾಗಲು ಕಾರಣವೇನು?
ಬೊಜ್ಜು
Follow us
ಸುಷ್ಮಾ ಚಕ್ರೆ
|

Updated on: Dec 28, 2023 | 2:45 PM

ರಸ್ತೆಬದಿಯ ಜಂಕ್ ಫುಡ್‌ ಸೇವಿಸುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಜಂಕ್​ಫುಡ್​ನ ರುಚಿಗೆ ಸೋಲದವರೇ ಇಲ್ಲ. ಆದರೆ, ಈ ಜಂಕ್​ಫುಡ್​ ನಮ್ಮ ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಿಸಲು ಪ್ರಮುಖ ಪಾತ್ರ ವಹಿಸುತ್ತದೆ. ದೇಹದಲ್ಲಿ ಬೊಜ್ಜು ಶೇಖರವಾಗುವುದನ್ನು ನಾರ್ಮಲ್ ಎಂದು ನೀವು ಭಾವಿಸಿದ್ದರೆ ಅದು ತಪ್ಪು. ಇಂಡಿಯನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ಸ್‌ನ ಇತ್ತೀಚಿನ ಅಧ್ಯಯನ ಮಕ್ಕಳಲ್ಲಿ ಸ್ಥೂಲಕಾಯತೆ ಉಲ್ಬಣಗೊಳ್ಳುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಬೊಜ್ಜು ಕೂಡ ಒಂದು ರೋಗ ಎಂದು ಹೇಳಿದೆ.

2020ರ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ-5 ಪ್ರಕಾರ, ಭಾರತದಲ್ಲಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಶೇ.3.5ಕ್ಕಿಂತ ಹೆಚ್ಚು ಮಕ್ಕಳನ್ನು ಅಧಿಕ ತೂಕ ಹೊಂದಿದವರು ಎಂದು ವರ್ಗೀಕರಿಸಲಾಗಿದೆ. 2015ರ ಡೇಟಾದ ಪ್ರಕಾರ ಇದು ಶೇ. 50ರಷ್ಟು ಹೆಚ್ಚಳವನ್ನು ಕಂಡಿದೆ. ಹದಿಹರೆಯದವರ ಪೈಕಿ ಶೇ. 16ರಷ್ಟು ಜನ ಸ್ಥೂಲಕಾಯತೆಯ ವರ್ಗಕ್ಕೆ ಸೇರಿದ್ದಾರೆ. ಸ್ಥೂಲಕಾಯತೆಯ ಆತಂಕಕಾರಿ ಏರಿಕೆಯಿಂದಾಗಿ ಈಗ ಇದನ್ನು ರೋಗವೆಂದು ಪರಿಗಣಿಸಲಾಗಿದೆ. ಇದು ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಹೃದ್ರೋಗದ ಅಪಾಯಕ್ಕೆ ಕಾರಣವಾಗುತ್ತದೆ.

ಇದನ್ನೂ ಓದಿ: Belly Fat: ಸುಲಭವಾಗಿ ನಿಮ್ಮ ಹೊಟ್ಟೆಯ ಬೊಜ್ಜು ಕರಗಿಸುವ 7 ಆಹಾರಗಳಿವು

ಭಾರತದಲ್ಲಿ ಈಗ ಸ್ಥೂಲಕಾಯತೆಯನ್ನು ರೋಗ ಎಂದು ಕರೆಯಲಾಗುತ್ತದೆ. ಈ ವ್ಯಾಖ್ಯಾನವು ವಯಸ್ಕರಿಗೂ ಅನ್ವಯಿಸುತ್ತದೆ. ಆದರೆ, ಮುಖ್ಯವಾಗಿ ಮಕ್ಕಳನ್ನು ಗಮನದಲ್ಲಿಟ್ಟುಕೊಂಡು ಬೊಜ್ಜನ್ನು ರೋಗ ಎಂದು ಪರಿಗಣಿಸಲಾಗಿದೆ. ಮಕ್ಕಳಲ್ಲಿ ಸ್ಥೂಲಕಾಯತೆ ಗಣನೀಯವಾಗಿ ಹೆಚ್ಚುತ್ತಿದೆ. ಅಚ್ಚರಿಯ ಸಂಗತಿಯೆಂದರೆ, ಪಾಶ್ಚಿಮಾತ್ಯ ದೇಶಗಳಿಗಿಂತ ಏಷ್ಯಾದ ದೇಶಗಳಲ್ಲಿ ವಾಸಿಸುವ ಜನರು ಸ್ಥೂಲಕಾಯಕ್ಕೆ ಹೆಚ್ಚು ಒಳಗಾಗುತ್ತಾರೆ. ಆದ್ದರಿಂದ ಚಿಕ್ಕ ಮಕ್ಕಳಲ್ಲಿ ಸ್ಥೂಲಕಾಯತೆಯನ್ನು ಗುರುತಿಸುವುದು ಮುಖ್ಯವಾಗಿದೆ. ಕಡಿಮೆ ಕೊಬ್ಬು ಮತ್ತು ಕಾರ್ಬೋಹೈಡ್ರೇಟ್ ಆಹಾರವನ್ನು ಸೇವಿಸುವ ಮೂಲಕ ಸ್ಥೂಲಕಾಯತೆಯನ್ನು ಕಡಿಮೆ ಮಾಡಬಹುದು. ಆರಂಭಿಕ ಹಂತದಲ್ಲೇ ಸ್ಥೂಲಕಾಯತೆಯನ್ನು ನಿಯಂತ್ರಿಸದಿದ್ದರೆ ಕ್ರಮೇಣ ಆಪರೇಷನ್ ಮಾಡಬೇಕಾದ ಅಗತ್ಯ ಉಂಟಾಗಬಹುದು ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಚಳಿಗಾಲದಲ್ಲಿ ಹೃದಯಾಘಾತದಿಂದ ಸಾಯುವವರ ಸಂಖ್ಯೆ ಹೆಚ್ಚಾಗಲು ಕಾರಣವೇನು?

ಜಂಕ್ ಫುಡ್ ಅನ್ನು ಮಕ್ಕಳಲ್ಲಿ ಸ್ಥೂಲಕಾಯತೆಗೆ ದೊಡ್ಡ ಕಾರಣವೆಂದು ಪರಿಗಣಿಸಲಾಗಿದೆ. ಭಾರತದಲ್ಲಿ ಬದಲಾಗುತ್ತಿರುವ ಆಹಾರ ಪದ್ಧತಿಯು ವಯಸ್ಕರು ಮತ್ತು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಇದರ ಜೊತೆಗೆ ಕ್ರೀಡೆಯಿಂದ ದೂರವಿರುವುದು ಮತ್ತು ಕಡಿಮೆ ವ್ಯಾಯಾಮ ಮಾಡುವುದು ಕೂಡ ಸ್ಥೂಲಕಾಯತೆಗೆ ಮತ್ತೊಂದು ಕಾರಣ. ಹಾಗೇ, ನಿರಂತರವಾಗಿ ಟಿವಿ ಅಥವಾ ಮೊಬೈಲ್ ಫೋನ್ ನೋಡುತ್ತಾ ಆಹಾರ ತಿನ್ನುವ ಮಕ್ಕಳು ತಮ್ಮ ಅಗತ್ಯಕ್ಕಿಂತಲೂ ಹೆಚ್ಚಾಗಿ ತಿನ್ನುತ್ತಾರೆ. ಇದು ಬೊಜ್ಜು ಉಂಟಾಗಲು ಕಾರಣವಾಗುತ್ತದೆ ಎಂದು ಅಧ್ಯಯನಗಳು ತಿಳಿಸಿವೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್