AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Men Health: ವೀರ್ಯದ ಗುಣಮಟ್ಟ ಹೆಚ್ಚಿಸಲು ಪುರುಷರು ಕುಂಬಳಕಾಯಿ ಬೀಜ ಸೇವಿಸಿ

ಪುರುಷರಲ್ಲಿ ಸತುವಿನ ಕೊರತೆಯು ವೀರ್ಯದ ಗುಣಮಟ್ಟವನ್ನು ಕಡಿಮೆ ಮಾಡುತ್ತದೆ ಮತ್ತು ಬಂಜೆತನಕ್ಕೆ ಕಾರಣವಾಗುತ್ತದೆ. ಆದ್ದರಿಂದ, ದೇಹದಲ್ಲಿನ ಸತುವಿನ ಕೊರತೆಯನ್ನು ಪರಿಹರಿಸಲು ನಿಯಮಿತವಾಗಿ ಕುಂಬಳಕಾಯಿ ಬೀಜಗಳನ್ನು ತಿನ್ನಬೇಕು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.

Men Health: ವೀರ್ಯದ ಗುಣಮಟ್ಟ ಹೆಚ್ಚಿಸಲು ಪುರುಷರು ಕುಂಬಳಕಾಯಿ ಬೀಜ ಸೇವಿಸಿ
Pumpkin Seed
ಅಕ್ಷತಾ ವರ್ಕಾಡಿ
|

Updated on: Jul 28, 2024 | 8:19 PM

Share

ಮನೆಯಲ್ಲಿ ಕುಂಬಳಕಾಯಿಯನ್ನು ಬಳಸಿದ ಬಳಿಕ ಅದರ ಬೀಜಗಳನ್ನು ಎಸೆಯುತ್ತೇವೆ. ಆದರೆ ಆ ಕುಂಬಳಕಾಯಿ ಬೀಜಗಳ ಪ್ರಯೋಜನಗಳ ಬಗ್ಗೆ ನಿಮಗೆ ತಿಳಿದಿದ್ದರೆ, ನೀವು ಅವುಗಳನ್ನು ಇನ್ನು ಮುಂದೆ ಎಸೆಯುವುದಿಲ್ಲ. ಅಕುಂಬಳಕಾಯಿ ಬೀಜಗಳು ಪುರುಷರ ಆರೋಗ್ಯಕ್ಕೆ ಪ್ರಯೋಜನಕಾರಿಯಾದ ಅನೇಕ ಪೋಷಕಾಂಶಗಳನ್ನು ಹೊಂದಿರುತ್ತವೆ. ಇಂದಿನ ಒತ್ತಡದ ಜೀವನಶೈಲಿ ಮತ್ತು ಕಳಪೆ ಆಹಾರ ಪದ್ಧತಿಯಿಂದಾಗಿ, ಪುರುಷರು 50 ವರ್ಷ ವಯಸ್ಸಿನ ನಂತರವೂ ಪ್ರಾಸ್ಟೇಟ್ ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಾರೆ. ಇದನ್ನು ತಡೆಗಟ್ಟಲು, ಪುರುಷರು ತಮ್ಮ ಆಹಾರದಲ್ಲಿ ಕುಂಬಳಕಾಯಿ ಬೀಜಗಳನ್ನು ಸೇರಿಸಿಕೊಳ್ಳಬೇಕು. ಇದರಲ್ಲಿರುವ ಫೈಟೊಕೆಮಿಕಲ್ಸ್ ಪ್ರಾಸ್ಟೇಟ್ ಆರೋಗ್ಯವನ್ನು ಸುಧಾರಿಸುತ್ತದೆ ಮತ್ತು ಪ್ರಾಸ್ಟೇಟ್ ಕ್ಯಾನ್ಸರ್ ಬೆಳವಣಿಗೆಯನ್ನು ಕಡಿಮೆ ಮಾಡುತ್ತದೆ.

ವೀರ್ಯದ ಗುಣಮಟ್ಟವನ್ನು ಸುಧಾರಿಸುತ್ತದೆ:

ಪುರುಷರಲ್ಲಿ ಸತುವಿನ ಕೊರತೆಯು ವೀರ್ಯದ ಗುಣಮಟ್ಟವನ್ನು ಕಡಿಮೆ ಮಾಡುತ್ತದೆ ಮತ್ತು ಬಂಜೆತನವನ್ನು ಹೆಚ್ಚಿಸುತ್ತದೆ. ಆದ್ದರಿಂದ, ದೇಹದಲ್ಲಿನ ಸತುವಿನ ಕೊರತೆಯನ್ನು ಪರಿಹರಿಸಲು ನಿಯಮಿತವಾಗಿ ಕುಂಬಳಕಾಯಿ ಬೀಜಗಳನ್ನು ತಿನ್ನಬೇಕು. ಏಕೆಂದರೆ ಕುಂಬಳಕಾಯಿ ಬೀಜಗಳಲ್ಲಿ ಸತುವು ಸಮೃದ್ಧವಾಗಿದೆ. ಇದು ಒಟ್ಟಾರೆ ವೀರ್ಯ ಗುಣಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದಲ್ಲದೆ, ಇದು ಪುರುಷರ ಸಂತಾನೋತ್ಪತ್ತಿ ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: ಏನಿದು ಹೆಪಟೈಟಿಸ್ ಕಾಯಿಲೆ? ಈ ರೋಗ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ?

ಇತರ ಆರೋಗ್ಯ ಪ್ರಯೋಜನಗಳು:

ಕುಂಬಳಕಾಯಿ ಬೀಜಗಳಲ್ಲಿ ಮೆಗ್ನೀಸಿಯಮ್ ಅಧಿಕವಾಗಿದೆ, ಇದು ಪುರುಷರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಕುಂಬಳಕಾಯಿ ಬೀಜಗಳ ನಿಯಮಿತ ಸೇವನೆಯು ಉತ್ತಮ ನಿದ್ರೆಗೆ ಸಹಾಯ ಮಾಡುತ್ತದೆ. ಅಲ್ಲದೆ, ಕುಂಬಳಕಾಯಿ ಬೀಜಗಳಲ್ಲಿನ ಮೊನೊಸಾಚುರೇಟೆಡ್ ಕೊಬ್ಬಿನಾಮ್ಲಗಳು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕರಗಿಸಲು ಮತ್ತು ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಗಮನಿಸಿ: ಕುಂಬಳಕಾಯಿ ಬೀಜಗಳು ಆರೋಗ್ಯಕರವಾಗಿದ್ದರೂ, ಹೆಚ್ಚು ತಿನ್ನುವುದು ಅಪಾಯಕಾರಿ. ಆದ್ದರಿಂದ, ಪ್ರತಿದಿನ 1-2 ಚಮಚಕ್ಕಿಂತ ಹೆಚ್ಚು ಕುಂಬಳಕಾಯಿ ಬೀಜಗಳನ್ನು ತೆಗೆದುಕೊಳ್ಳಬಾರದು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು