Health Tips: ಹಠಾತ್ತಾಗಿ ತೂಕ ಕಳೆದುಕೊಳ್ಳುತ್ತಿದ್ದೀರಾ?; ಈ ಕಾರಣಗಳ ಕುರಿತು ಗಮನವಿರಲಿ

ಯಾವುದೇ ಕಾರಣವಿಲ್ಲದೆ ವೇಗವಾಗಿ ತೂಕವನ್ನು ಕಳೆದುಕೊಳ್ಳುತ್ತಿದ್ದರೆ, ಅದು ಆತಂಕಪಡುವ ವಿಷಯವಾಗಿದೆ. ಸಾಮಾನ್ಯವಾಗಿ ಯಾವೆಲ್ಲಾ ಕಾರಣಗಳಿಂದ ತೂಕದಲ್ಲಿ ಹಠಾತ್ ಇಳಿಕೆಯಾಗುವ ಸಾಧ್ಯತೆ ಇದೆ ಎಂಬುದನ್ನು ಇಲ್ಲಿ ನೀಡಲಾಗಿದೆ.

Health Tips: ಹಠಾತ್ತಾಗಿ ತೂಕ ಕಳೆದುಕೊಳ್ಳುತ್ತಿದ್ದೀರಾ?; ಈ ಕಾರಣಗಳ ಕುರಿತು ಗಮನವಿರಲಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: shruti hegde

Updated on: Sep 10, 2021 | 8:48 AM

ಹೆಚ್ಚಿನ ಜನರು ಅಧಿಕ ತೂಕದ ಸಮಸ್ಯೆಯಿಂದ ತೊಂದರೆಗೊಳಗಾಗುತ್ತಾರೆ ಮತ್ತು ದೇಹದಲ್ಲಿ ಹೆಚ್ಚುವರಿ ಕೊಬ್ಬನ್ನು ಕಡಿಮೆ ಮಾಡಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳುತ್ತಾರೆ. ಉತ್ತಮ ಆಹಾರ ಸೇವನೆ ಮತ್ತು ನಿಯಮಿತವಾಗಿ ವ್ಯಾಯಾಮ ಮಾಡುವುದರಿಂದ ಬೊಜ್ಜು ಕಡಿಮೆ ಮಾಡಲು ಸಾಧ್ಯವಿದೆ. ಆದರೆ ಯಾವುದೇ ಕಾರಣವಿಲ್ಲದೆ ವೇಗವಾಗಿ ತೂಕವನ್ನು ಕಳೆದುಕೊಳ್ಳುತ್ತಿದ್ದರೆ, ಅದು ಆತಂಕಪಡುವ ವಿಷಯವಾಗಿದೆ. ಒಂದು ವೇಳೆ ಅಂತಹ ಸಂದರ್ಭ ನಿಮಗೆದುರಾದಲ್ಲಿ, ಅದಕ್ಕೆ ಆದಷ್ಟು ಬೇಗ ಕಾರಣವನ್ನು ಕಂಡುಕೊಳ್ಳುವುದು ಬಹು ಮುಖ್ಯ. ಅಂತಹ ಪರಿಸ್ಥಿತಿಯಲ್ಲಿ, ತಕ್ಷಣ ವೈದ್ಯರನ್ನು ಕಂಡು ಅದರ ಹಿಂದಿನ ಕಾರಣವನ್ನು ತಿಳಿಯಲು ಪ್ರಯತ್ನಿಸಿ. ತ್ವರಿತ ತೂಕ ನಷ್ಟಕ್ಕೆ ಕಾರಣವಾಗುವ ಕೆಲವು ಅಂಶಗಳನ್ನು ಇಲ್ಲಿ ನೀಡಲಾಗಿದೆ.

ಮಧುಮೇಹ: ದೇಹದಲ್ಲಿ ರಕ್ತದಲ್ಲಿನ ಸಕ್ಕರೆಯ ಹೆಚ್ಚಳದಿಂದ ಮಧುಮೇಹ ಉಂಟಾಗುತ್ತದೆ. ಈ ರೋಗದಲ್ಲಿ ಸಕ್ಕರೆಯ ನಿಯಂತ್ರಣವಿಲ್ಲದಿದ್ದರೆ, ನಿಮ್ಮ ತೂಕವು ವೇಗವಾಗಿ ಕಡಿಮೆಯಾಗಲು ಆರಂಭವಾಗುತ್ತದೆ. ಆದ್ದರಿಂದ, ರಕ್ತದಲ್ಲಿನ ಸಕ್ಕರೆಯನ್ನು ಕಾಲ ಕಾಲಕ್ಕೆ ಪರೀಕ್ಷಿಸಬೇಕು.

ಗಂಭೀರ ರೋಗ: ಒಬ್ಬ ವ್ಯಕ್ತಿಯು ದೀರ್ಘಕಾಲದ ಕಾಯಿಲೆಯಿಂದ ಅಥವಾ ಕ್ಯಾನ್ಸರ್ ನಂತಹ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವಾಗ ಯಾವುದೇ ಕಾರಣವಿಲ್ಲದೆ ಹಠಾತ್ ತೂಕ ನಷ್ಟ ಸಂಭವಿಸುತ್ತದೆ. ಒಬ್ಬ ವ್ಯಕ್ತಿಯು ಯಾವುದೇ ಕಾಯಿಲೆಯಿಂದ ಬಳಲುತ್ತಿರುವಾಗ, ಆತನ ದೇಹವು ಹದಗೆಡಬಹುದು, ಇದು ತೂಕ ನಷ್ಟಕ್ಕೆ ಕಾರಣವಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ತಕ್ಷಣ ವೈದ್ಯರನ್ನು ಭೇಟಿ ಮಾಡಬೇಕಾಗುತ್ತದೆ.

ದುರ್ಬಲ ಜೀರ್ಣಾಂಗ ವ್ಯವಸ್ಥೆ: ನಿಮ್ಮ ಜೀರ್ಣಾಂಗ ವ್ಯವಸ್ಥೆಯು ದುರ್ಬಲವಾಗಿದ್ದರೆ ಅಥವಾ ಸರಿಯಾಗಿ ಕೆಲಸ ಮಾಡದಿದ್ದರೆ ಆಹಾರವು ದೇಹದಲ್ಲಿ ಜೀರ್ಣವಾಗುವುದಿಲ್ಲ. ಅದಕ್ಕಾಗಿಯೇ ನಿಮ್ಮ ತೂಕ ವೇಗವಾಗಿ ಕಡಿಮೆಯಾಗಲು ಆರಂಭವಾಗುತ್ತದೆ. ಆಹಾರ ಜೀರ್ಣವಾಗದ ಕಾರಣ, ದೇಹಕ್ಕೆ ಅಗತ್ಯವಾದ ಪೋಷಕಾಂಶಗಳು ಸಿಗುವುದಿಲ್ಲ, ಇದರಿಂದಾಗಿ ಇತರ ರೋಗಗಳ ಅಪಾಯ ಹೆಚ್ಚಾಗುತ್ತದೆ.

ಥೈರಾಯ್ಡ್: ಥೈರಾಯ್ಡ್ ಗ್ರಂಥಿಯು ಸರಿಯಾಗಿ ಕಾರ್ಯನಿರ್ವಹಿಸದಿದ್ದಾಗ, ತೂಕ ನಷ್ಟವು ತ್ವರಿತವಾಗಿ ಸಂಭವಿಸುತ್ತದೆ. ಇದರ ಹೊರತಾಗಿ, ಥೈರಾಯ್ಡ್ ಗ್ರಂಥಿಯು ದುರ್ಬಲವಾದಾಗ, ಆರೋಗ್ಯವು ಹದಗೆಡುತ್ತದೆ ಮತ್ತು ಚಯಾಪಚಯ ಕ್ರಿಯೆ ಕೂಡ ನಿಧಾನವಾಗುತ್ತದೆ.

ಒತ್ತಡ: ಒತ್ತಡವು ತೂಕ ನಷ್ಟಕ್ಕೂ ಕಾರಣವಾಗುತ್ತದೆ. ಇದು ವ್ಯಕ್ತಿಯ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ನೀವು ಮಾನಸಿಕವಾಗಿ ಆರೋಗ್ಯವಾಗಿರದಿದ್ದರೆ, ಹಸಿವಾಗದಿರುವುದು ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಆದ್ದರಿಂದ ಮಾನಸಿಕ ಆರೋಗ್ಯವೂ ಆರೋಗ್ಯಕರ ದೇಹಕ್ಕೆ ಅತ್ಯಗತ್ಯವಾಗಿದೆ.

ಸ್ನಾಯು ದೌರ್ಬಲ್ಯ: ದುರ್ಬಲ ಸ್ನಾಯುಗಳು ಅಥವಾ ಸ್ನಾಯುವಿನ ದ್ರವ್ಯರಾಶಿಯ ಕೊರತೆಯು ತ್ವರಿತ ತೂಕ ಇಳಿಕೆಗೆ ಕಾರಣವಾಗುತ್ತದೆ. ಸ್ನಾಯುಗಳು ದುರ್ಬಲಗೊಳ್ಳುವುದರ ಹಿಂದೆ ಹಲವು ಕಾರಣಗಳಿರಬಹುದು. ಇದರ ಹಿಂದಿನ ನಿಖರವಾದ ಕಾರಣ ತಿಳಿಯಲು ವೈದ್ಯಕೀಯ ಪರೀಕ್ಷೆ ಅನಿವಾರ್ಯವಾಗಿದೆ.

ಇದನ್ನೂ ಓದಿ:

Tomato Benefits: ಟೊಮೆಟೊ ಈ ನಾಲ್ಕು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ

ನಿಮಗೆ ಕೆಂಪು ಬೆಂಡೆ ಗೊತ್ತಾ?-ಆರೋಗ್ಯಕ್ಕೆ ತುಂಬ ಒಳ್ಳೆಯದಾದ ಈ ತರಕಾರಿ ಬೆಲೆ ಕಡಿಮೆ ಅಲ್ಲ !

(Health Tips: Reason for abrupt weight loss)

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ