Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಲಿ ಹೊಟ್ಟೆಯಲ್ಲಿ ನೆನೆಸಿದ ಒಣದ್ರಾಕ್ಷಿಯ ಸೇವನೆಯಿಂದಾಗುವ ಅದ್ಭುತ ಪ್ರಯೋಜನಗಳು

ಆಯುರ್ವೇದದ ಪ್ರಕಾರ ಪ್ರತಿದಿನ ಒಣದ್ರಾಕ್ಷಿಗಳನ್ನು ರಾತ್ರಿ ನೀರಿನಲ್ಲಿ ನೆನೆಸಿ ಮರುದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಕಾಣಬಹುದು. ಇನ್ನಷ್ಟು ವಿವರ ಇಲ್ಲಿದೆ.

ಖಾಲಿ ಹೊಟ್ಟೆಯಲ್ಲಿ ನೆನೆಸಿದ ಒಣದ್ರಾಕ್ಷಿಯ ಸೇವನೆಯಿಂದಾಗುವ ಅದ್ಭುತ ಪ್ರಯೋಜನಗಳು
ನೆನೆಸಿದ ಒಣದ್ರಾಕ್ಷಿಯ ಸೇವನೆ
Follow us
ಅಕ್ಷತಾ ವರ್ಕಾಡಿ
|

Updated on: Jul 20, 2023 | 12:24 PM

ರಾತ್ರಿಯಿಡೀ ನೀರಿನಲ್ಲಿ ನೆನೆಸಿಟ್ಟ ಒಣದ್ರಾಕ್ಷಿಯನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ನಿಮ್ಮ ಆರೋಗ್ಯದಲ್ಲಿ ಸಾಕಷ್ಟು ಬದಲಾವಣೆಗಳನ್ನು ನೀವು ತಿಳಿದುಕೊಳ್ಳಬಹುದು. ಒಣದ್ರಾಕ್ಷಿಯಲ್ಲಿ ಫೈಬರ್, ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮುಂತಾದ ಸಾಕಷ್ಟು ಪೌಷ್ಟಿಕಾಂಶಗಳು ಹೇರಳವಾಗಿವೆ. ಆಯುರ್ವೇದದ ಪ್ರಕಾರ ಪ್ರತಿದಿನ ಒಣದ್ರಾಕ್ಷಿಗಳನ್ನು ನೀರಿನಲ್ಲಿ ನೆನೆಸಿ ಖಾಲಿ ಹೊಟ್ಟೆಯಲ್ಲಿ ಸೇವಿಸುವುದು ಉತ್ತಮ ಮಾರ್ಗವಾಗಿದೆ. ನೆನೆಸಿದ ಒಣದ್ರಾಕ್ಷಿಯ ಅದ್ಭುತ ಆರೋಗ್ಯ ಪ್ರಯೋಜನಗಳು ಇಲ್ಲಿವೆ.

ನೆನೆಸಿದ ಒಣದ್ರಾಕ್ಷಿಯ ಆರೋಗ್ಯ ಪ್ರಯೋಜನಗಳು:

ಖಾಲಿ ಹೊಟ್ಟೆಯಲ್ಲಿ ಪ್ರತಿದಿನ ಒಣದ್ರಾಕ್ಷಿ ನೀರನ್ನು ಕುಡಿಯುವುದರಿಂದ ನಿಮ್ಮ ಆರೋಗ್ಯವನ್ನು ಹಲವು ರೀತಿಯಲ್ಲಿ ಹೆಚ್ಚಿಸಬಹುದು. ಪ್ರತಿದಿನ ಒಂದು ಲೋಟ ನೀರಿನಲ್ಲಿ ಒಂದು ಚಮಚ ಒಣದ್ರಾಕ್ಷಿಯನ್ನು ನೆನೆಸಿಡಿ.

ಯಕೃತ್ತಿನ ಆರೋಗ್ಯ:

ರಾತ್ರಿಯಿಡೀ ನೀರಿನಲ್ಲಿ ನೆನೆಸಿದ ಒಣದ್ರಾಕ್ಷಿ ಅಶುದ್ಧ ರಕ್ತವನ್ನು ಪರಿಣಾಮಕಾರಿಯಾಗಿ ಶುದ್ಧೀಕರಿಸುತ್ತದೆ, ಯಕೃತ್ತಿನ ಜೀವರಾಸಾಯನಿಕ ಕ್ರಿಯೆಗಳನ್ನು ಉತ್ತೇಜಿಸುತ್ತದೆ ಮತ್ತು ದೇಹದಿಂದ ವಿಷವನ್ನು ಹೊರಹಾಕುತ್ತದೆ. ಆದ್ದರಿಂದ ಸರಿಯಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ.

ಹೊಟ್ಟೆಯ ಆರೋಗ್ಯ:

ಒಣದ್ರಾಕ್ಷಿ ನೀರಿನಲ್ಲಿ ಹೇರಳವಾಗಿರುವ ಕರಗದ ಫೈಬರ್ ಮತ್ತು ನೈಸರ್ಗಿಕ ದ್ರವಗಳು, ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಕರುಳಿನ ಆರೋಗ್ಯವನ್ನು ಉತ್ತೇಜಿಸುವುದರ ಜೊತೆಗೆ ಮಲಬದ್ಧತೆಯನ್ನು ತಡೆಯುತ್ತದೆ.

ಅಸಿಡೋಸಿಸ್ ನಿವಾರಿಸುತ್ತದೆ:

ಆಸಿಡೋಸಿಸ್ ಎನ್ನುವುದು ರಕ್ತದ ಆಮ್ಲೀಯತೆಯ ಹಠಾತ್ ಏರಿಕೆ ಮತ್ತು ಉಸಿರಾಟದ ವ್ಯವಸ್ಥೆಯಲ್ಲಿ ರಕ್ತದ ಅನಿಲಗಳ ಉಪಸ್ಥಿತಿಯಿಂದ ಉಂಟಾಗುವ ಅಸ್ವಸ್ಥತೆಯಾಗಿದೆ. ಕಪ್ಪು ಒಣದ್ರಾಕ್ಷಿ ನೀರಿನಲ್ಲಿ ಆಂಟಾಸಿಡ್‌ಗಳು, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಹೇರಳವಾಗಿದ್ದು, ಇವೆಲ್ಲವೂ ವಿಶೇಷವಾಗಿ ಹೊಟ್ಟೆಯ ಆಮ್ಲ ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ದೇಹಕ್ಕೆ ಯಾವ ರೀತಿಯ ಓಟ್ಸ್ ಉತ್ತಮ? ಅದರ ವಿಧಗಳಾವುವು? ಇಲ್ಲಿದೆ ಮಾಹಿತಿ

ರಕ್ತಹೀನತೆಯ ವಿರುದ್ಧ ಹೋರಾಡುತ್ತದೆ:

ಒಣದ್ರಾಕ್ಷಿಗಳಲ್ಲಿ ಕಬ್ಬಿಣ, ಬಿ-ಕಾಂಪ್ಲೆಕ್ಸ್ ಜೀವಸತ್ವಗಳು ಮತ್ತು ತಾಮ್ರವು ಹೇರಳವಾಗಿದೆ. ಬಿ-ಕಾಂಪ್ಲೆಕ್ಸ್ ಜೀವಸತ್ವಗಳು ಮತ್ತು ಕಬ್ಬಿಣವು ಹೊಸ ರಕ್ತ ಕಣಗಳ ಉತ್ಪಾದನೆಗೆ ಸಹಾಯ ಮಾಡುತ್ತದೆ. ಇದಕ್ಕೆ ವಿರುದ್ಧವಾಗಿ, ತಾಮ್ರವು ಕಬ್ಬಿಣವನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ.

ರಕ್ತದ ಕೊಲೆಸ್ಟ್ರಾಲ್ ಸಮತೋಲನಗೊಳಿಸುತ್ತದೆ:

ಖಾಲಿ ಹೊಟ್ಟೆಯಲ್ಲಿ ನೆನೆಸಿದ ಒಣದ್ರಾಕ್ಷಿ ನೀರು ರಕ್ತ ಶುದ್ಧೀಕರಣಕ್ಕೆ ಸಹಾಯ ಮಾಡುತ್ತದೆ ಮತ್ತು ಆರೋಗ್ಯಕರ ಕರುಳು ಮತ್ತು ಹೃದಯವನ್ನು ಉತ್ತೇಜಿಸುತ್ತದೆ. ಇದು ದೇಹದ ಕೆಟ್ಟ ಕೊಲೆಸ್ಟ್ರಾಲ್ ಮತ್ತು ಟ್ರೈಗ್ಲಿಸರೈಡ್‌ಗಳ ಮಟ್ಟವನ್ನು ಕಡಿಮೆ ಮಾಡಲು ಪರಿಣಾಮಕಾರಿಯಾಗಿ ಸಹಾಯ ಮಾಡುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್