Salt: ಹೆಚ್ಚು ಉಪ್ಪು ಸೇವಿಸುವ ಅಭ್ಯಾಸವಿದೆಯೇ? ಹಾಗಿದ್ದರೆ ಈ ರೋಗಲಕ್ಷಣಗಳ ಬಗ್ಗೆ ಎಚ್ಚರವಹಿಸಿ

ಹೆಚ್ಚು ಉಪ್ಪು ತಿನ್ನುವುದರಿಂದ ರಕ್ತದೊತ್ತಡ, ಹೃದಯ ಸಂಬಂಧಿ ಸಮಸ್ಯೆ, ಕಿಡ್ನಿಗೆ ಸಂಬಂಧಿಸಿದ ಕಾಯಿಲೆ ಸೇರಿದಂತೆ ಈ ರೀತಿಯ ಹಲವು ಸಮಸ್ಯೆಗಳು ಉಂಟಾಗಬಹುದು. ಹೀಗಾಗಿ ಇವುಗಳ ಬಗ್ಗೆ ಎಚ್ಚರಿಕೆ ವಹಿಸುವುದು ಸೂಕ್ತ.

Salt: ಹೆಚ್ಚು ಉಪ್ಪು ಸೇವಿಸುವ ಅಭ್ಯಾಸವಿದೆಯೇ? ಹಾಗಿದ್ದರೆ ಈ ರೋಗಲಕ್ಷಣಗಳ ಬಗ್ಗೆ ಎಚ್ಚರವಹಿಸಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: preethi shettigar

Updated on: Jun 13, 2021 | 12:43 PM

ಹೆಚ್ಚು ಉಪ್ಪು ತಿನ್ನುವುದು: ಉಪ್ಪಿಗಿಂತ ರುಚಿ ಇಲ್ಲ ತಾಯಿಗಿಂತ ಬಂಧುವಿಲ್ಲ ಎನ್ನುವ ಮಾತಿದೆ. ಅದರಂತೆ ಸಿಹಿ ತಿನಿಸುಗಳನ್ನು ಹೊರತುಪಡಿಸಿ, ಬೇರೆ ಎಲ್ಲಾ ಅಡುಗೆಗೂ ಉಪ್ಪು ಅತ್ಯಾವಶ್ಯಕವಾಗಿದೆ. ಯಾವುದೇ ಮಸಾಲೆ, ಸಾಂಬಾರ್ ಪುಡಿ ಅಥವಾ ಇನ್ನಿತರ ಆಹಾರದಲ್ಲಿ ಉಪ್ಪು ಬೇಕೇ ಬೇಕು. ಆದರೆ ಉಪ್ಪು ಸೇವನೆ ಹೇಗೆ ಎನ್ನುವುದರ ಬಗ್ಗೆ ಇನ್ನು ಕೂಡ ಹಲವರಲ್ಲಿ ಗೊಂದಲಗಳಿವೆ. ರುಚಿಗಾಗಿ ಮಾತ್ರ ಉಪ್ಪು ಅಲ್ಲ. ಆರೋಗ್ಯದ ಹಿತದೃಷ್ಟಿಯಿಂದಲೂ ಉಪ್ಪು ಸೇವನೆಯ ಬಗ್ಗೆ ಗಮನಹರಿಸುವುದು ಸೂಕ್ತ. ಮಿತ ಪ್ರಮಾಣದಲ್ಲಿ ಉಪ್ಪು ಸೇವಿಸುವುದರಿಂದ ಆರೋಗ್ಯಕ್ಕೆ ಯಾವುದೇ ರೀತಿಯ ಅಡ್ಡ ಪರಿಣಾಮಗಳಾಗುವುದಿಲ್ಲ. ಆದರೆ ಹೆಚ್ಚು ಉಪ್ಪು ತಿನ್ನುವುದರಿಂದ ರಕ್ತದೊತ್ತಡ, ಹೃದಯ ಸಂಬಂಧಿ ಸಮಸ್ಯೆ, ಕಿಡ್ನಿಗೆ ಸಂಬಂಧಿಸಿದ ಕಾಯಿಲೆ ಸೇರಿದಂತೆ ಈ ರೀತಿಯ ಹಲವು ಸಮಸ್ಯೆಗಳು ಉಂಟಾಗಬಹುದು. ದೇಹದಲ್ಲಿ ಉಪ್ಪಿನ ಪ್ರಮಾಣ ಮೀರಿದರೆ ಆರೋಗ್ಯದಲ್ಲಿ ಹಲವು ಏರುಪೇರುಗಳಾಗುತ್ತದೆ. ಹೀಗಾಗಿ ಇವುಗಳ ಬಗ್ಗೆ ಎಚ್ಚರಿಕೆ ವಹಿಸುವುದು ಸೂಕ್ತ.

ಹೆಚ್ಚು ಉಪ್ಪು ತಿನ್ನುವ ಅಭ್ಯಾಸ ಅನಿಯಮಿತ ಮೂತ್ರ ವಿಸರ್ಜನೆಗೆ ಕಾರಣವಾಗಬಹುದು ಮತ್ತು ಹೆಚ್ಚು ಬಾಯಾರಿಕೆಯಾಗುವ ಸಾಧ್ಯತೆ ಇರುತ್ತದೆ. ಮಧುಮೇಹವಿಲ್ಲದಿದ್ದರೂ ಮೂತ್ರ ವಿಸರ್ಜನೆ ಹೆಚ್ಚಾದರೆ, ನೀವು ಹೆಚ್ಚು ಉಪ್ಪು ತಿನ್ನುತ್ತಿದ್ದೀರಿ ಎಂದು ಅರ್ಥ. ಹೀಗಾಗಿ ಮಿತವಾಗಿ ಉಪ್ಪು ಸೇವಿಸಿ.

ಉಪ್ಪು ಹೆಚ್ಚು ಸೇವಿಸುತ್ತಿರುವವರ ಶರೀರದಲ್ಲಿ ಊತ ಕಾಣಿಸಿಕೊಳ್ಳುತ್ತದೆ. ಅದರಲ್ಲೂ ಮುಖ್ಯವಾಗಿ ಕಾಲಿನ ಹಿಮ್ಮಡಿ ಭಾಗದಲ್ಲಿ ಊದಿಕೊಳ್ಳುತ್ತದೆ. ಈ ಪ್ರದೇಶದಲ್ಲಿ ಹೆಚ್ಚು ನೀರಿನಾಂಶ ಇರುವುದು ಇದಕ್ಕೆ ಕಾರಣ. ಇಂತಹ ಸಮಸ್ಯೆಯನ್ನು ಎಡಿಮಾ ಎಂದು ಕರೆಯಲಾಗುತ್ತದೆ.

ಉಪ್ಪನ್ನು ಹೆಚ್ಚಾಗಿ ತಿನ್ನುವ ನಾಲಿಗೆಯು ಇತರ ರುಚಿಗಳನ್ನು ಗುರುತಿಸುವುದಿಲ್ಲ. ಪರಿಣಾಮವಾಗಿ, ಏನನ್ನು ತಿಂದರೂ ರುಚಿ ಎನಿಸುವುದಿಲ್ಲ. ಈ ಸಮಸ್ಯೆ ಇದ್ದರೆ ನೀವು ಹೆಚ್ಚು ಉಪ್ಪು ತಿನ್ನುತ್ತಿದ್ದೀರಿ ಎಂದು ಅರ್ಥಮಾಡಿಕೊಳ್ಳಬಹುದು.

ಉಪ್ಪನ್ನು ಹೆಚ್ಚಾಗಿ ತಿನ್ನುವ ವ್ಯಕ್ತಿಯ ದೇಹದಲ್ಲಿನ ಶೇಕಡಾವಾರು ನೀರು ಬೇಗನೆ ಹೊರಹೋಗುತ್ತದೆ. ಪರಿಣಾಮವಾಗಿ, ನಿರ್ಜಲೀಕರಣ, ತಲೆನೋವು ಮತ್ತು ಆಲಸ್ಯಕ್ಕೆ ಕಾರಣವಾಗಬಹುದು. ಆದ್ದರಿಂದ ನಿಮ್ಮ ಆರೋಗ್ಯದಲ್ಲಿನ ಏರುಪೇರನ್ನು ಸರಿಪಡಿಸಿಕೊಳ್ಳಲು, ಉಪ್ಪು ಸೇವಿಸುವ ಪ್ರಮಾಣದಲ್ಲಿ ಸಮತೋಲವನ್ನು ಕಾಯ್ದುಕೊಳ್ಳಿ.

ಇದನ್ನೂ ಓದಿ:

ಬಿಳಿ ಜಂಬೂ ಅಥವಾ ಪನ್ನೇರಳೆ ಹಣ್ಣು ರುಚಿಯಷ್ಟೇ ಆರೋಗ್ಯಕರ; ರೋಗನಿರೋಧಕ ಶಕ್ತಿ ಹೆಚ್ಚಿಸುವ ಈ ಹಣ್ಣನ್ನು ಒಮ್ಮೆ ತಿಂದು ನೋಡಿ

Weight loss Tips: ತೂಕವನ್ನು ಇಳಿಸಲು ದೇಹದಂಡನೆ ಮಾಡುವುದನ್ನು ಬಿಡಿ; ಈ ಸರಳ ಆಹಾರ ಪದ್ಧತಿಯನ್ನು ಅನುಸರಿಸಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್