Health Tips: ಈ ಹಣ್ಣುಗಳನ್ನು ಸಿಪ್ಪೆಯೊಂದಿಗೆ ತಿನ್ನುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಿಸಬಹುದು

|

Updated on: Jun 05, 2024 | 8:27 PM

ಕೊಲೆಸ್ಟ್ರಾಲ್‌ನಲ್ಲಿ ಎರಡು ವಿಧಗಳಿವೆ. ಒಂದು ಒಳ್ಳೆಯ ಕೊಲೆಸ್ಟ್ರಾಲ್ (ಎಚ್‌ಡಿಎಲ್) ಮತ್ತು ಮತ್ತೊಂದು ಕೆಟ್ಟ ಕೊಲೆಸ್ಟ್ರಾಲ್ (ಎಲ್‌ಡಿಎಲ್). ಯಾರಿಗಾದರೂ ಅಧಿಕ ಕೊಲೆಸ್ಟ್ರಾಲ್ ಸಮಸ್ಯೆ ಇದ್ದರೆ, ಅವರು ಔಷಧಿಗಳನ್ನು ತೆಗೆದುಕೊಳ್ಳುವ ಬದಲು, ಸಿಪ್ಪೆಯೊಂದಿಗೆ ಈ ಕೆಲವು ಹಣ್ಣುಗಳನ್ನು ತಿನ್ನಬೇಕು.

Health Tips: ಈ ಹಣ್ಣುಗಳನ್ನು ಸಿಪ್ಪೆಯೊಂದಿಗೆ ತಿನ್ನುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಿಸಬಹುದು
Bad Cholesterol
Follow us on

ಒತ್ತಡದ ಜೀವನಶೈಲಿ ಹಾಗೂ ಕಳಪೆ ಆಹಾರ ಕ್ರಮದಿಂದಾಗಿ ಜನರಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಮಸ್ಯೆ ಹೆಚ್ಚುತ್ತಿದೆ.ಕೆಟ್ಟ ಕೊಲೆಸ್ಟ್ರಾಲ್ ಹೃದ್ರೋಗ ಮತ್ತು ಪಾರ್ಶ್ವವಾಯು ಮುಂತಾದ ಸಮಸ್ಯೆಗಳನ್ನು ಉಂಟುಮಾಡಬಹುದು. ನಿಮ್ಮ ಜೀವನಶೈಲಿಯಲ್ಲಿ ಸಣ್ಣ ಬದಲಾವಣೆಗಳನ್ನು ಮಾಡಿಕೊಳ್ಳುವ ಮೂಲಕ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಬಹುದು. ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಮಿತವಾಗಿ ಪರಿಶೀಲಿಸಬೇಕು ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ.

ಕೊಲೆಸ್ಟ್ರಾಲ್‌ನಲ್ಲಿ ಎರಡು ವಿಧಗಳಿವೆ. ಒಂದು ಒಳ್ಳೆಯ ಕೊಲೆಸ್ಟ್ರಾಲ್ (ಎಚ್‌ಡಿಎಲ್) ಮತ್ತು ಮತ್ತೊಂದು ಕೆಟ್ಟ ಕೊಲೆಸ್ಟ್ರಾಲ್ (ಎಲ್‌ಡಿಎಲ್). ಯಾರಿಗಾದರೂ ಅಧಿಕ ಕೊಲೆಸ್ಟ್ರಾಲ್ ಸಮಸ್ಯೆ ಇದ್ದರೆ, ಅವರು ಔಷಧಿಗಳನ್ನು ತೆಗೆದುಕೊಳ್ಳುವ ಬದಲು, ಸಿಪ್ಪೆಯೊಂದಿಗೆ ಈ ಕೆಲವು ಹಣ್ಣುಗಳನ್ನು ತಿನ್ನಬೇಕು. ಈ ಹಣ್ಣುಗಳ ಸಿಪ್ಪೆಗಳು ಹೆಚ್ಚಿನ ಪ್ರಮಾಣದ ಫೈಬರ್ ಅನ್ನು ಹೊಂದಿರುತ್ತವೆ, ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಸಿಪ್ಪೆಯೊಂದಿಗೆ ತಿನ್ನಬೇಕಾದ ಹಣ್ಣುಗಳು:

ಪಿಯರ್ ಅಥವಾ ಮರಸೇಬು:

ಅಧಿಕ ಕೊಲೆಸ್ಟ್ರಾಲ್ ಸಮಸ್ಯೆ ಇರುವವರಿಗೆ ಮರಸೇಬು ತಿನ್ನುವುದು ತುಂಬಾ ಪ್ರಯೋಜನಕಾರಿ. ಎಲ್ಲಾ ರೀತಿಯ ಅಗತ್ಯ ಪೋಷಕಾಂಶಗಳು ಇದರ ಸಿಪ್ಪೆಯಲ್ಲಿ ಕಂಡುಬರುತ್ತವೆ. ಪ್ರತಿದಿನ ನಿಮ್ಮ ಆಹಾರದಲ್ಲಿ ಮರಸೇಬು ಸೇರಿಸುವುದು ಕೊಲೆಸ್ಟ್ರಾಲ್ ಅಪಾಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ ನಿಮ್ಮ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.

ಚಿಕ್ಕು:

ಹೆಚ್ಚಿನವರು ಸಪೋಟಾ ತಿನ್ನಲು ಇಷ್ಟಪಡುವುದಿಲ್ಲ. ಆದರೆ ಅಧಿಕ ಕೊಲೆಸ್ಟ್ರಾಲ್ ಸಮಸ್ಯೆಯಲ್ಲಿ ಬಳಲುತ್ತಿರುವವರಿಗೆ ಇದು ತುಂಬಾ ಪ್ರಯೋಜನಕಾರಿ. ಸಪೋಟಾ ಎಷ್ಟು ಆರೋಗ್ಯಕರವೋ, ಅದರ ಸಿಪ್ಪೆಯೂ ಅಷ್ಟೇ ಆರೋಗ್ಯಕರ. ಸಪೋಟಾ ಸಿಪ್ಪೆಯಲ್ಲಿ ಕಬ್ಬಿಣ ಮತ್ತು ಪೊಟ್ಯಾಶಿಯಂ ಸೇರಿದಂತೆ ಹಲವು ಪೋಷಕಾಂಶಗಳಿವೆ.

ಇದನ್ನೂ ಓದಿ: ಡಯಾಬಿಟಿಸ್ ಇರುವವರು ಬಾಳೆಹಣ್ಣು ತಿನ್ನಬಹುದಾ?

ಸೇಬು:

ಸಾಮಾನ್ಯವಾಗಿ ಕೆಲವು ಜನರು ಸೇಬು ಹಣ್ಣಿನ ಸಿಪ್ಪೆ ತೆಗೆದು ತಿನ್ನುತ್ತಾರೆ. ಆದರೆ ಸೇಬಿನ ಸಿಪ್ಪೆಯಲ್ಲಿ ವಿಟಮಿನ್ ಎ, ಸಿ ಮತ್ತು ಕೆ ಕೂಡ ಸಮೃದ್ಧವಾಗಿದೆ. ಪ್ರತಿದಿನ ಸೇಬನ್ನು ತಿನ್ನುವುದರಿಂದ ಹೃದಯ ಸಂಬಂಧಿ ಕಾಯಿಲೆಗಳಿಂದ ದೂರವಿರುವುದಲ್ಲದೆ ಕೊಲೆಸ್ಟ್ರಾಲ್ ಸಮಸ್ಯೆ ದೂರವಾಗುತ್ತದೆ.

ಕಿವಿ ಹಣ್ಣು:

ಕಿವಿ ಹಣ್ಣಿನ ಸಿಪ್ಪೆ ಇನ್ನಷ್ಟು ಆರೋಗ್ಯಕರ. ಸಾಮಾನ್ಯವಾಗಿ ಜನರು ಕಿವಿ ಹಣ್ಣನ್ನು ಸಿಪ್ಪೆ ತೆಗೆದ ನಂತರ ತಿನ್ನಲು ಇಷ್ಟಪಡುತ್ತಾರೆ, ಆದರೆ ಅದರ ಸಿಪ್ಪೆಯಲ್ಲಿ ಉತ್ಕರ್ಷಣ ನಿರೋಧಕಗಳು ಕಂಡುಬರುತ್ತವೆ. ಎಲ್ ಡಿಎಲ್ ಅಂದರೆ ಕೆಟ್ಟ ಕೊಲೆಸ್ಟ್ರಾಲ್ ನಿಂದ ಬಳಲುತ್ತಿರುವವರು ದಿನವೂ ಕಿವಿ ಹಣ್ಣನ್ನು ಸಿಪ್ಪೆಯೊಂದಿಗೆ ತಿನ್ನಬೇಕು.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: