Health Tips: ದೇಹದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಈ ಸರಳ ವಿಧಾನವನ್ನು ಅನುಸರಿಸಿ

| Updated By: preethi shettigar

Updated on: Sep 04, 2021 | 7:32 AM

ತಜ್ಞರ ಪ್ರಕಾರ, ಕೆಲವು ಮಸಾಲೆ ಪದಾರ್ಥ ಮತ್ತು ಗಿಡಮೂಲಿಕೆಗಳನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು.

Health Tips: ದೇಹದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಈ ಸರಳ ವಿಧಾನವನ್ನು ಅನುಸರಿಸಿ
ಸಾಂದರ್ಭಿಕ ಚಿತ್ರ
Follow us on

ಸಕ್ಕರೆ ಮಟ್ಟವನ್ನು ಸಮತೋಲನಗೊಳಿಸುವುದು ಮಧುಮೇಹಿಗಳಿಗೆ ದೊಡ್ಡ ಸವಾಲಾಗಿದೆ. ಅನಿಯಂತ್ರಿತ ಸಕ್ಕರೆ ಮಟ್ಟ ಅನೇಕ ಸಮಸ್ಯೆಗಳನ್ನು ಉಂಟುಮಾಡುತ್ತವೆ. ಅದಕ್ಕಾಗಿಯೇ ನಾವು ದೇಹದಲ್ಲಿ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಲು ದಿನನಿತ್ಯ ಸೇವಿಸುವ ಆಹಾರ ಮತ್ತು ಜೀವನಶೈಲಿಯ ಬಗ್ಗೆ ವಿಶೇಷ ಗಮನ ಹರಿಸಬೇಕು. ತಜ್ಞರ ಪ್ರಕಾರ, ಕೆಲವು ಮಸಾಲೆ ಪದಾರ್ಥ ಮತ್ತು ಗಿಡಮೂಲಿಕೆಗಳನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು.

ಅರಿಶಿಣ
ಸಕ್ಕರೆ ನಿಯಂತ್ರಣದಲ್ಲಿಡಲು ಅರಿಶಿಣ ವಿಶೇಷವಾಗಿ ಕೆಲಸ ಮಾಡುತ್ತದೆ. ಅರಿಶಿಣದಲ್ಲಿ ಕರ್ಕ್ಯುಮಿನ್ ಎಂಬ ಉತ್ಕರ್ಷಣ ನಿರೋಧಕವಿದೆ. ಇದು ಮಧುಮೇಹದಿಂದ ಉಂಟಾಗುವ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಲ್ಲದೆ ಇದು ಉರಿಯೂತದ ಗುಣಗಳನ್ನು ಕಡಿಮೆ ಮಾಡುವ ಅಂಶ ಹೊಂದಿದೆ.

ಸೊಂಪು
ಸೊಂಪು ಮಧುಮೇಹಿಗಳಿಗೆ ತುಂಬಾ ಒಳ್ಳೆಯದು. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಇದು ಜೀರ್ಣಕ್ರಿಯೆ ಮತ್ತು ಕಾರ್ಬೋಹೈಡ್ರೇಟ್‌ಗಳನ್ನು ಹೀರಿಕೊಳ್ಳುವ ಸಾಮರ್ಥ್ಯವನ್ನು ನಿಧಾನಗೊಳಿಸುತ್ತದೆ. ಆ ಮೂಲಕ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಇದರ ಹೊರತಾಗಿ, ಹೃದಯ ಸಂಬಂಧಿ ರೋಗಿಗಳಿಗೆ ಸೊಂಪು ತುಂಬಾ ಪ್ರಯೋಜನಕಾರಿ. ಇದು ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ದಾಲ್ಚಿನ್ನಿ
ದಾಲ್ಚಿನ್ನಿ ಸೋಂಕು ವಿರೋಧಿ, ಬ್ಯಾಕ್ಟೀರಿಯಾ ವಿರೋಧಿ ಮತ್ತು ಶಿಲೀಂಧ್ರ ವಿರೋಧಿ ಗುಣಗಳನ್ನು ಹೊಂದಿದೆ. ಇದು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದೆ. ಇವು ಉರಿಯೂತದ ಪರಿಣಾಮವನ್ನು ಕಡಿಮೆ ಮಾಡುವ ಶಕ್ತಿ ಹೊಂದಿವೆ. ಒಂದು ಅಧ್ಯಯನದ ಪ್ರಕಾರ ದಾಲ್ಚಿನ್ನಿ ಟೈಪ್ -2 ಮಧುಮೇಹದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ದಾಲ್ಚಿನ್ನಿ ಎಲ್ಲಾ ಪದಾರ್ಥಗಳಲ್ಲಿ ಅತ್ಯಂತ ಶಕ್ತಿಶಾಲಿಯಾಗಿದೆ. ಇದು ಗ್ಲೂಕೋಸ್ ಹೀರಿಕೊಳ್ಳುವಿಕೆಯನ್ನು ನಿಯಂತ್ರಿಸುತ್ತದೆ.

ತುಳಸಿ ಎಲೆ
ತುಳಸಿ ಎಲೆಗಳನ್ನು ತಿನ್ನುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಸುಧಾರಿಸುತ್ತದೆ. ದೇಹವನ್ನು ಸದೃಢವಾಗಿಡಲು ಇದು ಸಹಾಯ ಮಾಡುತ್ತದೆ. ತಜ್ಞರ ಪ್ರಕಾರ, ತುಳಸಿ ದೇಹದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ಉತ್ಕರ್ಷಣ ನಿರೋಧಕಗಳನ್ನು ಹೊಂದಿದ್ದು, ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ:
Health Tips: ಉತ್ತಮ ಆರೋಗ್ಯಕ್ಕಾಗಿ ಈ ಸಲಹೆಗಳು; ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಸುಲಭ ಮಾರ್ಗಗಳು

Health Tips: ಮನೆಯ ಹಿತ್ತಲಲ್ಲಿ ಬೆಳೆಯುವ ಈ ಸಸ್ಯಗಳಲ್ಲಿ ಅಡಗಿದೆ ಅನೇಕ ಆರೋಗ್ಯಕರ ಗುಣ

(Health tips these herbs and plants helps to control sugar level in blood)