ಹೆಚ್ಚು ನೀರು ಕುಡಿಯುವುದರಿಂದ ಮುಖದ ಹೊಳಪು ಹೆಚ್ಚುತ್ತದಾ?

ನೀವು ಸಾಕಷ್ಟು ನೀರು ಕುಡಿಯುವುದರಿಂದ ನಿಮ್ಮ ಚರ್ಮವನ್ನು ಹೈಡ್ರೀಕರಿಸಬಹುದು. ಇದು ಶುಷ್ಕತೆಯನ್ನು ಕಡಿಮೆ ಮಾಡುತ್ತದೆ ಮತ್ತು ಮೃದುತ್ವವನ್ನು ಹೆಚ್ಚಿಸುತ್ತದೆ. ಆದರೆ, ನೀರು ಜಾಸ್ತಿ ಕುಡಿದರೆ ಮುಖದ ಹೊಳಪು ಹೆಚ್ಚಾಗುತ್ತಾ? ಇಲ್ಲಿದೆ ಮಾಹಿತಿ.

ಹೆಚ್ಚು ನೀರು ಕುಡಿಯುವುದರಿಂದ ಮುಖದ ಹೊಳಪು ಹೆಚ್ಚುತ್ತದಾ?
ಮುಖದ ಸೌಂದರ್ಯImage Credit source: iStock
Follow us
ಸುಷ್ಮಾ ಚಕ್ರೆ
|

Updated on: Sep 19, 2023 | 1:21 PM

ನೀರು ನಮ್ಮ ದೇಹಕ್ಕೆ ಅತ್ಯಂತ ಅಗತ್ಯವಾಗಿರುವ ಅಂಶಗಳಲ್ಲಿ ಒಂದು. ಆರೋಗ್ಯದ ಜೊತೆ ನಮ್ಮ ಸೌಂದರ್ಯವನ್ನು ಕಾಪಾಡಿಕೊಳ್ಳಲು ಕೂಡ ಸಾಕಷ್ಟು ನೀರು ಕುಡಿಯುವುದು ಅಗತ್ಯ. ನಮ್ಮ ಮುಖದ ಸುಕ್ಕುಗಳು, ಸೂಕ್ಷ್ಮ ರೇಖೆಗಳು ಅಥವಾ ವಯಸ್ಸಾಗುವುದನ್ನು ಹಿಮ್ಮೆಟ್ಟಿಸುವುದರಲ್ಲಿ ನೀರು ಸಹಕಾರಿಯಾಗಿದೆ. ಸುಂದರವಾಗಿ ಕಾಣಲು ಯಾವ್ಯಾವುದೋ ಸೌಂದರ್ಯ ಉತ್ಪನ್ನಗಳನ್ನು ಬಳಸಬೇಕು ಎಂದೇನೂ ಇಲ್ಲ. ನಮ್ಮ ಸುತ್ತಲೂ ಯಥೇಚ್ಛವಾಗಿ ಲಭ್ಯವಿರುವ ನೀರನ್ನು ದಿನವೂ ಹೆಚ್ಚೆಚ್ಚು ಕುಡಿಯುವುದರಿಂದ ನಾವು ಇನ್ನಷ್ಟು ಆರೋಗ್ಯಯುತವಾಗಿ, ಸುಂದರವಾಗಿ ಕಾಣಬಹುದು.

ದಿನವಿಡೀ ನೀರು ಕುಡಿಯುತ್ತಿರುವುದರಿಂದ ನಾವು ತೂಕ ಇಳಿಸಬಹುದು. ಅದರಲ್ಲೂ ಊಟಕ್ಕೆ ಮೊದಲು ಮತ್ತು ಊಟದ ಸಮಯದಲ್ಲಿ ನೀರು ಕುಡಿಯುವುದರಿಂದ ನಿಮಗೆ ಬೇಗ ಹೊಟ್ಟೆ ತುಂಬಿದ ಅನುಭವವಾಗುತ್ತದೆ. ಇದು ನಿಮ್ಮ ಹಸಿವನ್ನು ಕಡಿಮೆ ಮಾಡುತ್ತದೆ. ಅತಿಯಾಗಿ ಊಟ ಮಾಡುವುದರಿಂದ ಮತ್ತು ತಿಂಡಿ ಸೇವಿಸುವುದರಿಂದ ನಿಮ್ಮನ್ನು ನಿಯಂತ್ರಿಸುತ್ತದೆ. ಆದ್ದರಿಂದ ನೀವು ಕಡಿಮೆ ಕ್ಯಾಲೊರಿಗಳನ್ನು ಸೇವಿಸಲು ಸಹಾಯ ಮಾಡುತ್ತದೆ. ಇದರಿಂದ ತೂಕ ಇಳಿಸಿಕೊಳ್ಳಬಹುದು. ತೂಕ ಇಳಿಕೆಯಾದರೆ ನಮ್ಮ ಮುಖದ ಸೌಂದರ್ಯವೂ ಹೆಚ್ಚುತ್ತದೆ.

ಇದನ್ನೂ ಓದಿ: ಟೊಮ್ಯಾಟೋ ಜ್ಯೂಸ್ ಸೇವಿಸುವುದರಿಂದ ಆಗುವ ಅಡ್ಡ ಪರಿಣಾಮಗಳೇನು?

ನೀವು ಸಾಕಷ್ಟು ನೀರು ಕುಡಿಯುವುದರಿಂದ ನಿಮ್ಮ ಚರ್ಮವನ್ನು ಹೈಡ್ರೀಕರಿಸಬಹುದು. ಇದು ಶುಷ್ಕತೆಯನ್ನು ಕಡಿಮೆ ಮಾಡುತ್ತದೆ ಮತ್ತು ಮೃದುತ್ವವನ್ನು ಹೆಚ್ಚಿಸುತ್ತದೆ. ನಿಮ್ಮ ಚರ್ಮದ ಹೊಳಪನ್ನು ಹೆಚ್ಚಿಸಲು ನೀವು ನೀರನ್ನು ಕುಡಿಯಬಹುದು. ರಂಧ್ರಗಳನ್ನು ತೆರೆಯಲು ಬೆಚ್ಚಗಿನ ನೀರು ಮತ್ತು ರಂಧ್ರಗಳನ್ನು ಮುಚ್ಚಲು ತಣ್ಣನೆಯ ನೀರನ್ನು ನಿಮ್ಮ ಮುಖದ ಮೇಲೆ ಚಿಮುಕಿಸುವುದರ ಜೊತೆಗೆ, ಸಾಕಷ್ಟು ನೀರು ಕುಡಿಯುವುದರಿಂದ ನಿಮ್ಮ ಚರ್ಮದ ಕೋಶಗಳಿಗೆ ಅಗತ್ಯವಾದ ಪೋಷಕಾಂಶಗಳನ್ನು ನೀಡುತ್ತದೆ.

ಬೆಳಗ್ಗೆ ನಿಮ್ಮ ಮುಖ ಊದಿಕೊಂಡಿರುವಂತೆ ನಿಮಗೆ ಅನಿಸಿದರೆ ಅದಕ್ಕೆ ನಿಮ್ಮ ದೇಹಕ್ಕೆ ನೀರಿನ ಕೊರತೆಯೂ ಒಂದು ಕಾರಣ. ಹೀಗಾಗಿ, ನೀರು ಹೆಚ್ಚು ಸೇವಿಸಿ. ನೀರನ್ನು ಜಾಸ್ತಿ ಕುಡಿಯುವುದರಿಂದ ಚಳಿಗಾಲದಲ್ಲಿ ಚರ್ಮ ಒಣಗಿದಂತಾಗಿ, ತುರಿಕೆಯಾಗುವುದನ್ನು ತಡೆಯಬಹುದು. ಚರ್ಮದ ಆರೋಗ್ಯಕ್ಕೂ ನೀರು ಅತ್ಯಗತ್ಯ. ನೀರು ಕುಡಿಯುವುದರಿಂದ ಮುಖದಲ್ಲಿರುವ ಮೊಡವೆಗಳನ್ನು ಕೂಡ ತೊಡೆದುಹಾಕಬಹುದು.

ಇದನ್ನೂ ಓದಿ: Amla juice: ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಈ ಎಲ್ಲ ಆರೋಗ್ಯ ಪ್ರಯೋಜನಗಳಿವೆ?

ನೀವು ಸಾಕಷ್ಟು ನೀರನ್ನು ಸೇವಿಸಿದಾಗ, ನಿಮ್ಮ ದೇಹದ ಪ್ರತಿಯೊಂದು ಭಾಗದ ಜೀವಕೋಶಗಳು ರಕ್ತದ ಮೂಲಕ ಹೈಡ್ರೀಕರಿಸಲ್ಪಡುತ್ತವೆ. ಸಾಕಷ್ಟು ನೀರು ಕುಡಿಯುವುದರಿಂದ ದೇಹವು ಟಾಕ್ಸಿನ್‌ಗಳನ್ನು ಹೊರಹಾಕಲು ಸಹಾಯ ಮಾಡುತ್ತದೆ ಮತ್ತು ನಿಮಗೆ ಆರೋಗ್ಯಕರ ಚರ್ಮವನ್ನು ನೀಡುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ