AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drinking Salt Water: ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಉಪ್ಪು ನೀರು ಕುಡಿಯುವುದರಿಂದ ಏನೆಲ್ಲ ಪ್ರಯೋಜನ ಇದೆ?

ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಚ್ಚಗಿನ ನೀರಿನಲ್ಲಿ ಸ್ವಲ್ಪ ಉಪ್ಪು ಹಾಕಿ ಕುಡಿಯುವುದರಿಂದ ದೇಹವು ದಿನವಿಡೀ ತೇವಾಂಶದಿಂದ ಕೂಡಿರುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ ಎಂಬುದನ್ನು ಟಿವಿ9 ತೆಲುಗು ವರದಿ ಮಾಡಿದೆ. ಇದು ಪೊಟ್ಯಾಸಿಯಮ್, ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್ನಂತಹ ಅಂಶಗಳಲ್ಲಿ ಸಮೃದ್ಧವಾಗಿದೆ. ಅನೇಕ ರೋಗಗಳಿಗೆ ರಾಮಬಾಣವಿದ್ದಂತೆ.

Drinking Salt Water: ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಉಪ್ಪು ನೀರು ಕುಡಿಯುವುದರಿಂದ ಏನೆಲ್ಲ ಪ್ರಯೋಜನ ಇದೆ?
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Dec 18, 2024 | 2:45 PM

Share

ಉಪ್ಪು ನಮ್ಮ ಆಹಾರದ ಪ್ರಮುಖ ಭಾಗವಾಗಿದೆ. ಉಪ್ಪು ಇಲ್ಲದೆ ಆಹಾರವನ್ನು ಸೇವಿಸುವುದು ತುಂಬಾ ಕಷ್ಟ. ಆದರೆ, ಆಹಾರಕ್ಕೆ ಉಪ್ಪನ್ನು ಸೇರಿಸಿ ತಿನ್ನುವುದಷ್ಟೇ ಅಲ್ಲ, ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಚ್ಚಗಿನ ನೀರಿನಲ್ಲಿ ಉಪ್ಪನ್ನು ಬೆರೆಸಿ ಕುಡಿಯುವುದರಿಂದ ಹಲವಾರು ಪ್ರಯೋಜನಗಳಿವೆ ಎನ್ನುತ್ತಾರೆ ಆರೋಗ್ಯ ತಜ್ಞರು. ಹಾಗಾದರೆ ಖಾಲಿ ಹೊಟ್ಟೆಯಲ್ಲಿ ಉಪ್ಪು ನೀರು ಕುಡಿಯುವುದರಿಂದ ಏನೆಲ್ಲ ಪ್ರಯೋನ ಇವೆ ತಿಳಿಯೋಣ.

ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಚ್ಚಗಿನ ನೀರಿನಲ್ಲಿ ಸ್ವಲ್ಪ ಉಪ್ಪು ಹಾಕಿ ಕುಡಿಯುವುದರಿಂದ ದೇಹವು ದಿನವಿಡೀ ತೇವಾಂಶದಿಂದ ಕೂಡಿರುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ ಎಂಬುದನ್ನು ಟಿವಿ9 ತೆಲುಗು ವರದಿ ಮಾಡಿದೆ. ಇದು ಪೊಟ್ಯಾಸಿಯಮ್, ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್ನಂತಹ ಅಂಶಗಳಲ್ಲಿ ಸಮೃದ್ಧವಾಗಿದೆ. ಇದನ್ನು ಪ್ರತಿದಿನ ಕುಡಿಯುವುದರಿಂದ ದೇಹದಲ್ಲಿ ಎಲೆಕ್ಟ್ರೋಲೈಟ್ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಚ್ಚಗಿನ ನೀರನ್ನು ಕುಡಿಯುವುದು ಅನೇಕ ರೋಗಗಳಿಗೆ ರಾಮಬಾಣವಿದ್ದಂತೆ. ಕೀಲು ನೋವಿನಿಂದ ಬಳಲುತ್ತಿರುವವರಿಗೆ ಉಪ್ಪು ನೀರು ವಿಶೇಷವಾಗಿ ಪರಿಣಾಮಕಾರಿಯಾಗಿದೆ. ಇದು ಕ್ಯಾಲ್ಸಿಯಂ ಅನ್ನು ಹೊಂದಿರುತ್ತದೆ. ಇದು ಮೂಳೆಯ ಆರೋಗ್ಯವನ್ನು ಸುಧಾರಿಸುತ್ತದೆ. ನಿತ್ಯವೂ ನೀರಿಗೆ ಉಪ್ಪನ್ನು ಹಾಕಿ ಕುಡಿದರೆ ಸ್ನಾಯುಗಳು ಆರೋಗ್ಯವಾಗಿರುತ್ತವೆ.

ಬೆಳಿಗ್ಗೆ ಉಪ್ಪು ನೀರು ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆಯಲ್ಲಿ ಆಮ್ಲವನ್ನು ಸಮತೋಲನಗೊಳಿಸುತ್ತದೆ. ಮಲಬದ್ಧತೆಯನ್ನು ನಿವಾರಿಸುತ್ತದೆ. ಇದಲ್ಲದೆ, ಉಪ್ಪು ನೀರು ದೇಹಕ್ಕೆ ಅಗತ್ಯವಾದ ಖನಿಜಗಳನ್ನು ಒದಗಿಸುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ, ಶೀತ, ಕೆಮ್ಮು ಮುಂತಾದ ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಉಪ್ಪು ನೀರನ್ನು ಸೇವಿಸುವುದರಿಂದ ಅಧಿಕ ತೂಕದ ಸಮಸ್ಯೆಗಳನ್ನು ಸಹ ಕಡಿಮೆ ಮಾಡಬಹುದು. ಉಪ್ಪು ನೀರು ಚರ್ಮಕ್ಕೆ ಕೂಡ ತುಂಬಾ ಒಳ್ಳೆಯದು. ಇದು ಮೊಡವೆ ಮತ್ತು ಚರ್ಮ ರೋಗಗಳನ್ನು ಕಡಿಮೆ ಮಾಡುತ್ತದೆ. ಇದನ್ನು ಬಳಸುವುದರಿಂದ ಕೂದಲು ಉದುರುವ ಸಮಸ್ಯೆ ಕಡಿಮೆಯಾಗುತ್ತದೆ. ಇದು ಡ್ಯಾಂಡ್ರಫ್ ಅನ್ನು ಸಹ ತೆಗೆದುಹಾಕುತ್ತದೆ. ಬೆಚ್ಚಗಿನ ನೀರನ್ನು ಉಪ್ಪಿನೊಂದಿಗೆ ಕುಡಿಯುವುದರಿಂದ ದೇಹದಿಂದ ವಿಷವನ್ನು ಹೊರಹಾಕುತ್ತದೆ. ಇದರಿಂದ ಅನೇಕ ರೋಗಗಳನ್ನು ದೂರವಿಡಬಹುದು.

ಇದನ್ನೂ ಓದಿ: ಕ್ಯಾನ್ಸರ್​ ಲಸಿಕೆ ಸಿದ್ಧ, ವೈದ್ಯಕೀಯ ವಿಜ್ಞಾನದಲ್ಲಿ ರಷ್ಯಾದ ಸಾಧನೆ, ಲಸಿಕೆ ಉಚಿತ

ಇದಲ್ಲದೆ, ಉಪ್ಪು ನೀರು ಮೂತ್ರಪಿಂಡ ಮತ್ತು ಯಕೃತ್ತನ್ನು ಆರೋಗ್ಯಕರವಾಗಿರಿಸುತ್ತದೆ. ದೇಹವನ್ನು ಅನೇಕ ರೋಗಗಳಿಂದ ರಕ್ಷಿಸಲು ನೀವು ಪ್ರತಿದಿನ ಉಪ್ಪು ನೀರನ್ನು ಕುಡಿಯಬಹುದು. ಉಪ್ಪು ನೀರನ್ನು ಸೇವಿಸುವುದರಿಂದ ಅಧಿಕ ತೂಕದ ಸಮಸ್ಯೆಗಳನ್ನು ಸಹ ಕಡಿಮೆ ಮಾಡಬಹುದು. ಹಾಗೆಂದು ಹೆಚ್ಚು ಉಪ್ಪನ್ನು ಸೇವಿಸುವುದರಿಂದ ಅಧಿಕ ರಕ್ತದೊತ್ತಡ ಮತ್ತು ಹೃದ್ರೋಗದಂತಹ ಸಮಸ್ಯೆಗಳು ಉಂಟಾಗಬಹುದು.

(ಸೂಚನೆ: ಇಲ್ಲಿರುವ ವಿಷಯಗಳು ಕೇವಲ ಮಾಹಿತಿಗಾಗಿ ಮಾತ್ರ. ನಿಮಗೆ ಯಾವುದೇ ರೀತಿಯ ಸಂದೇಹಗಳಿದ್ದರೂ ತಜ್ಞರನ್ನು ಸಂಪರ್ಕಿಸಿ.)

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ