AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಹೃದ್ರೋಗಿಗಳು ಚಳಿಗಾಲದಲ್ಲಿ ಯಾವ ಆಹಾರ ಪದಾರ್ಥಗಳನ್ನು ತಿನ್ನಬಾರದು?

ಚಳಿಗಾಲದಲ್ಲಿ ಆಹಾರ ಮತ್ತು ಜೀವನಶೈಲಿ ಎರಡರಲ್ಲೂ ಬದಲಾವಣೆ ಅಗತ್ಯ ಎಂದು ದೆಹಲಿಯ ಆರ್ ಎಂಎಲ್ ಆಸ್ಪತ್ರೆಯ ಕಾರ್ಡಿಯಾಲಜಿ ವಿಭಾಗದ ಪ್ರಾಧ್ಯಾಪಕ ಡಾ. ತರುಣ್ ಕುಮಾರ್ ಹೇಳಿದ್ದಾರೆ. ಈ ಋತುವಿನಲ್ಲಿ, ಹೃದ್ರೋಗಿಗಳು ಬರ್ಗರ್ ಮತ್ತು ಪಿಜ್ಜಾದಂತಹ ಕರಿದ ಆಹಾರಗಳನ್ನು ತಿನ್ನುವುದನ್ನು ತಪ್ಪಿಸಬೇಕು. ಹೆಚ್ಚಿನ ಪ್ರಮಾಣದ ಸಿಹಿತಿಂಡಿಗಳನ್ನು ಕೂಡ ಸೇವಿಸಬಾರದು ಎನ್ನುತ್ತಾರೆ.

Health Tips: ಹೃದ್ರೋಗಿಗಳು ಚಳಿಗಾಲದಲ್ಲಿ ಯಾವ ಆಹಾರ ಪದಾರ್ಥಗಳನ್ನು ತಿನ್ನಬಾರದು?
ಸಾಂದರ್ಭಿಕ ಚಿತ್ರ
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on: Dec 27, 2024 | 5:35 PM

Share

ಚಳಿಗಾಲ ಬಂತೆಂದರೆ ಅನೇಕ ರೋಗಗಳು ಕೂಡ ನಮ್ಮನ್ನು ಅಂಟಿಗೊಳ್ಳುತ್ತವೆ. ಮುಖ್ಯವಾಗಿ ಈ ಸಂದರ್ಭ ಹೃದ್ರೋಗದ ಅಪಾಯವು ಹೆಚ್ಚಾಗುತ್ತದೆ. ಅದರಲ್ಲೂ ಈ ಋತುವಿನಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಅಧಿಕ. ಬೇಸಿಗೆಗೆ ಹೋಲಿಸಿದರೆ ಚಳಿಗಾಲದಲ್ಲಿ ಹೃದಯಾಘಾತದ ಅಪಾಯವು ಶೇಕಡಾ 25 ರಷ್ಟು ಹೆಚ್ಚಾಗುತ್ತದೆ. ಹೀಗಾಗಿ ಈಗಾಗಲೇ ಹೃದ್ರೋಗ ಹೊಂದಿರುವ ಜನರು ಹೃದಯಾಘಾತದ ಅಪಾಯವನ್ನು ತಡೆಯಲು ಮುನ್ನಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಈ ಋತುವಿನಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಂದ ದೂರವಿರಲು ಆಹಾರದ ಬಗ್ಗೆ ಕಾಳಜಿ ವಹಿಸುವುದು ಮುಖ್ಯ ಎನ್ನುತ್ತಾರೆ ತಜ್ಞರು.

ಹೃದ್ರೋಗಿಗಳು ಚಳಿಗಾಲದಲ್ಲಿ ಆಹಾರ ಕ್ರಮದಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಳ್ಳಬೇಕು ಎನ್ನುತ್ತಾರೆ ತಜ್ಞರು. ಚಳಿಗಾಲದಲ್ಲಿ ಆಹಾರ ಮತ್ತು ಜೀವನಶೈಲಿ ಎರಡರಲ್ಲೂ ಬದಲಾವಣೆ ಅಗತ್ಯ ಎಂದು ದೆಹಲಿಯ ಆರ್ ಎಂಎಲ್ ಆಸ್ಪತ್ರೆಯ ಕಾರ್ಡಿಯಾಲಜಿ ವಿಭಾಗದ ಪ್ರಾಧ್ಯಾಪಕ ಡಾ. ತರುಣ್ ಕುಮಾರ್ ಹೇಳಿದ್ದಾರೆ. ಈ ಋತುವಿನಲ್ಲಿ, ಹೃದ್ರೋಗಿಗಳು ಬರ್ಗರ್ ಮತ್ತು ಪಿಜ್ಜಾದಂತಹ ಕರಿದ ಆಹಾರಗಳನ್ನು ತಿನ್ನುವುದನ್ನು ತಪ್ಪಿಸಬೇಕು. ಹೆಚ್ಚಿನ ಪ್ರಮಾಣದ ಸಿಹಿತಿಂಡಿಗಳನ್ನು ಕೂಡ ಸೇವಿಸಬಾರದು ಎನ್ನುತ್ತಾರೆ.

ಕೋಲ್ಡ್ ವಾಟರ್ ಕುಡಿಯಬೇಡಿ:

ತಂಪು ಪಾನೀಯಗಳು ಸಕ್ಕರೆಯ ಪ್ರಮಾಣವನ್ನು ಬಹುಬೇಗ ಹೆಚ್ಚಿಸುತ್ತವೆ ಎನ್ನುತ್ತಾರೆ ಡಾ. ತರುಣ್. ಇವುಗಳು ಕೆಫೀನ್ ಮತ್ತು ಸಕ್ಕರೆಯನ್ನು ಹೊಂದಿರುತ್ತವೆ, ಇದು ಹೃದ್ರೋಗಿಗಳಿಗೆ ಹಾನಿಕಾರಕವಾಗಿದೆ. ಯಾವುದೇ ರೂಪದಲ್ಲಿ (ಜ್ಯೂಸ್) ತಂಪು ಪಾನೀಯಗಳನ್ನು ಕುಡಿಯುವುದನ್ನು ತಪ್ಪಿಸಬೇಕು. ಹೃದ್ರೋಗಿಗಳು ಈ ಋತುವಿನಲ್ಲಿ ಬೆಣ್ಣೆ, ತುಪ್ಪ ಮತ್ತು ಎಣ್ಣೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದನ್ನು ತಪ್ಪಿಸುವುದು ಸಹ ಮುಖ್ಯವಾಗಿದೆ. ಈ ಎಲ್ಲಾ ವಸ್ತುಗಳು ಕೊಲೆಸ್ಟ್ರಾಲ್ ಅನ್ನು ತ್ವರಿತವಾಗಿ ಹೆಚ್ಚಿಸಬಹುದು, ಇದು ಹೃದಯಾಘಾತಕ್ಕೆ ಕಾರಣವಾಗುತ್ತದೆ.

ಹೃದ್ರೋಗಿಗಳು ತಮ್ಮ ಬಿಪಿ ಮತ್ತು ಶುಗರ್ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಸಹ ಮುಖ್ಯವಾಗಿದೆ. ಏಕೆಂದರೆ ಬಿಪಿ ಹೆಚ್ಚಾದರೆ ಹೃದ್ರೋಗಿಗಳಿಗೆ ಅಪಾಯಕಾರಿಯಾಗಬಹುದು. ಪ್ರತಿ ಎರಡು ದಿನಗಳಿಗೊಮ್ಮೆ ನಿಮ್ಮ ರಕ್ತದೊತ್ತಡವನ್ನು ಪರೀಕ್ಷಿಸಿ.

ಯಾವ ವಸ್ತುಗಳನ್ನು ತಿನ್ನಬೇಕು:

ತಾಜಾ ಹಣ್ಣುಗಳು ಮತ್ತು ತರಕಾರಿಗಳು

ಬ್ರೌನ್ ರೈಸ್, ಕ್ವಿನೋವಾ, ಓಟ್ಸ್

ಬೀಜಗಳು ಮತ್ತು ಆವಕಾಡೊ

ಪ್ರೋಟೀನ್‌ಗಾಗಿ ಬೇಳೆಕಾಳುಗಳನ್ನು ಸೇವಿಸಿ

ಇದನ್ನೂ ಓದಿ: ಮೊಟ್ಟೆಯೊಂದಿಗೆ ತಪ್ಪಿಯೂ ಇವುಗಳನ್ನು ತಿನ್ನಬೇಡಿ

ವ್ಯಾಯಾಮವೂ ಮುಖ್ಯ:

ಚಳಿಗಾಲದಲ್ಲಿಯೂ ವ್ಯಾಯಾಮವು ಮುಖ್ಯವಾಗಿದೆ. ಚಳಿಗಾಲದಲ್ಲಿ ಸಾಕಷ್ಟು ಚಳಿ ಇರುವುದರಿಂದ ಬೆಳಗ್ಗೆ ಬೇಗ ಎದ್ದು ಯೋಗ ವ್ಯಾಯಾಮ, ವಾಕಿಂಗ್​ ಮಾಡುವವರು ಸಂಖ್ಯೆ ತೀರಾ ಕಡಿಮೆ ಎಂದು ತಜ್ಞರು ಹೇಳುತ್ತಾರೆ. ಆದರೆ ಬೆಳಿಗ್ಗೆ ಕಡಿಮೆ ತಾಪಮಾನದಲ್ಲಿ ಹೊರಗೆ ಹೋಗುವುದನ್ನು ಮತ್ತು ವ್ಯಾಯಾಮ ಮಾಡುವುದನ್ನು ತಪ್ಪಿಸಿ ಎಂಬುದನ್ನು ನೆನಪಿನಲ್ಲಿಡಿ. ಮನೆಯಲ್ಲಿ ಲಘು ವ್ಯಾಯಾಮ ಮಾಡಿ.

ಚಳಿಗಾಲದಲ್ಲಿ ಹೃದಯಾಘಾತದ ಅಪಾಯ ಏಕೆ ಹೆಚ್ಚು?:

ವಾಸ್ತವವಾಗಿ, ಚಳಿಗೆ ಅಪಧಮನಿಗಳು ಕುಗ್ಗುತ್ತವೆ, ಇದು ರಕ್ತದೊತ್ತಡವನ್ನು ಹೆಚ್ಚಿಸುತ್ತದೆ ಮತ್ತು ಹೃದಯದ ಮೇಲೆ ಒತ್ತಡವನ್ನು ಉಂಟುಮಾಡುತ್ತದೆ. ಇದಲ್ಲದೇ ಚಳಿಗಾಲದಲ್ಲಿ ವಾಯುಮಾಲಿನ್ಯ ಹೆಚ್ಚಾಗಿರುತ್ತದೆ, ಇದರಿಂದ ಮಾಲಿನ್ಯದ ಕಣಗಳು ಉಸಿರಾಟದ ಮೂಲಕ ಶ್ವಾಸಕೋಶವನ್ನು ಪ್ರವೇಶಿಸುತ್ತವೆ ಮತ್ತು ರಕ್ತದಲ್ಲಿ ಸಂಗ್ರಹವಾಗುತ್ತವೆ ಮತ್ತು ರಕ್ತನಾಳಗಳಲ್ಲಿ ಅಡಚಣೆಯನ್ನು ಉಂಟುಮಾಡುತ್ತವೆ. ಈ ಕಾರಣಗಳಿಂದ ಹೃದಯಾಘಾತದ ಅಪಾಯವು ಹೆಚ್ಚಾಗುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ